ಬಂಟ್ವಾಳ: ಎಸ್ಸೆಸೆಲ್ಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಜನಪದವು ಬಳಿ ನಡೆದಿದೆ.
ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಬಡಕಬೈಲಿನ ಖಾಸಗಿ ಶಾಲೆಯಲ್ಲಿ ಈತ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ನಿನ್ನೆ ರಾತ್ರಿ ಸ್ನಾನ ಮಾಡಲೆಂದು ಬಾತ್ ರೂಂಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







