Breaking News :

ಬಂಟ್ವಾಳ: ಭೀಕರ ಕಾರು ಅಪಘಾತ; ನವವಿವಾಹಿತೆ ಸಾವು

ಬಂಟ್ವಾಳ: ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ.

ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತರು. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರಿಗೆ ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಿ.ಸಿ.ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ನವದಂಪತಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್​ಗೆ ಗುದ್ದಿ ಹಾರಿ ಕೆಎಸ್‌ಆರ್‌ಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಇನ್ನು ಇದೇ ಸೆ.5ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು. ವಾಪಾಸ್​ ಮನೆಗೆ ಹೋಗುವ ವೇಳೆ ದುರ್ಘಟನೆ ನಡೆದಿದೆ.

ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this article

ಟಾಪ್ ನ್ಯೂಸ್

More News