Breaking News :

ಬಂಟ್ವಾಳ: ಹಫ್ತಕ್ಕಾಗಿ ಬೆದರಿಕೆ ಆರೋಪ, ಮೂವರ ವಿರುದ್ಧ ದೂರು ದಾಖಲು

ಬಂಟ್ವಾಳ: ಮೂವರು ವ್ಯಕ್ತಿಗಳು ಹಫ್ತಾಕ್ಕಾಗಿ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಉದ್ಯಮಿಗಳು ನ್ಯಾಯಾಲಯದ ಮೂಲಕ ಖಾಸಗಿ ದೂರು ದಾಖಲಿಸಿರುವ ಬಗ್ಗೆ ವರದಿಯಾಗಿದೆ.

ಖಾಲಿದ್ ನಂದಾವರ, ಇಕ್ಬಾಲ್ ಮತ್ತು ಮತ್ತೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ಉದ್ಯಮಿಗಳು ಗಣಿ ಇಲಾಖೆಯ ಪರವಾನಿಗೆ ಪಡೆದು ಕಾನೂನು ಬದ್ಧವಾಗಿ ಗಣಿಗಾರಿಕೆ ನಡೆಸುತ್ತಿರುವ ಸ್ಥಳಕ್ಕೆ ಆಗಮಿಸಿದ ಆರೋಪಿಗಳು ಲಾರಿ ಚಾಲಕ, ಹಿಟಾಚಿ ಚಾಲಕ, ಮಾಲಕರಿಗೆ ಪ್ರತೀ ಟ್ರಿಪ್ ಲಾರಿಗೆ 500 ರೂ. ಇಲ್ಲವೇ ಒಂದು ಸಾವಿರ ರೂ. ಕೊಡಬೇಕು, ಇಲ್ಲದಿದ್ದಲ್ಲಿ ಗಣಿ ಇಲಾಖೆ, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಇಡೀ ಉದ್ಯಮವನ್ನೇ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ್ದಾರೆಂದು ದೂರು ನೀಡಲಾಗಿದೆ.

ಇದಲ್ಲದೆ  ಮೊಬೈಲ್‌ನಲ್ಲಿ ವಾಯ್ಸ್ ಮೆಸೇಜ್ ಮೂಲಕವೂ ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎಂದು ಗಣಿ ಉದ್ಯಮಿ ದೂರಿನಲ್ಲಿ ತಿಳಿಸಿದ್ದಾರೆ.

Share this article

ಟಾಪ್ ನ್ಯೂಸ್

More News