Breaking News :

ಬೆಳಾಲು ನಿವೃತ್ತ ಶಿಕ್ಷಕನ ಕೊಲೆ ಪ್ರಕರಣ; ಅಳಿಯ, ಮೊಮ್ಮಗನ ಬಂಧನ; ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ ಗೊತ್ತಾ?

ಬೆಳ್ತಂಗಡಿಯ ಬೆಳಾಲು ಗ್ರಾಮಾದಲ್ಲಿ ನಿವೃತ್ತ ಶಿಕ್ಷಕ ಎಸ್ ಪಿ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ನಿವಾಸಿ ಜ್ಯೋತಿಷಿಯಾಗಿರುವ, ಮೃತರ ಅಳಿಯ ರಾಘವೇಂದ್ರ ಕೆದಿಲಾಯ (53) ಹಾಗೂ ಮೊಮ್ಮಗ ಮುರಳೀಕೃಷ್ಣ (20) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದ್ದು,
ಧರ್ಮಸ್ಥಳ ಪೊಲೀಸರು ಸಿ.ಸಿ ಕ್ಯಾಮೆರಾಗಳು, ಮೊಬೈಲ್ ಲೊಕೇಶನ್ ಸೇರಿದಂತೆ ವಿವಿಧ ಆಯಾಮಗಳಲ್ಲಿ ನಡೆಸಿದ ತನಿಖೆಯಲ್ಲಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ಇದೀಗ ಇಬ್ಬರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

ಬೆಳಾಲಿನಲ್ಲಿ ಆ.20ರಂದು ಮಧ್ಯಾಹ್ನ ಸುಮಾರಿಗೆ ನಿವೃತ್ತ ಶಿಕ್ಷಕ ಎಸ್.ಪಿ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರನ್ನು ಅವರ ಮನೆಯ ಅಂಗಳದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಕೊಲೆ ನಡೆದ ರೀತಿ ಹಾಗೂ ಮನೆಯಲ್ಲಿ ಯಾವುದೇ ಕಳ್ಳತನ‌ ನಡೆಯದಿರುವುದನ್ನು ಗಮನಿಸಿದ ಪೊಲೀಸರು ಇದು ಪರಿಚಿತರಿಂದಲೇ ನಡೆದ ಕೃತ್ಯ ಎಂದು ತಿಳಿದುಕೊಂಡಿದ್ದಾರೆ. ಅದಕ್ಕೆ ಪೂರಕವಾಗಿ ಊಟ ಮಾಡಿ ಎಸೆದಿದ್ದ ಎರಡು ಎಲೆಗಳು ಅಲ್ಲಿ ಕಂಡು ಬಂದಿದ್ದವು. ಈ ಹಿನ್ನಲೆಯಲ್ಲಿ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರ ಸಂಬಂಧಿಕರನ್ನು ಕೇಂದ್ರೀಕರಿಸಿ ತನಿಖೆ ನಡೆಸಲಾಗಿತ್ತು.



Share this article

ಟಾಪ್ ನ್ಯೂಸ್

More News