ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ

ಜನವಾಹಿನಿ News ಮಡಿಕೇರಿ : ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಡಿಸೆಂಬರ್, 01 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜಾಥಾ ಪ್ರಾರಂಭವಾಗಲಿದೆ. ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಪ್ರಾರಂಭವಾಗಿ ಚೌಕಿ ವೃತ್ತದ ಮುಖಾಂತರ ಸರ್ಕಾರಿ ಪದವಿ ಪೂರ್ವ ಕಾಲೇಜು ವರೆಗೆ ತಲುಪುವುದು. ನಂತರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ […]
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ರಕ್ತದಾನ ಅತ್ಯಗತ್ಯ : ವಿಜು ಸುಬ್ರಮಣಿ

ಜನವಾಹಿನಿ News ಸಿದ್ದಾಪುರ : ತುರ್ತು ಸಂದರ್ಭದಲ್ಲಿ ಅತ್ಯವಶ್ಯಕವಾಗಿರುವ ರಕ್ತದಾನಕ್ಕೆ ಬೆಲೆ ಕಟ್ಟಲಾಗದು ಮನುಷ್ಯನ ಪ್ರಾಣ ಉಳಿಸಲು ನೀಡುವ ರಕ್ತದಾನವೇ ಶ್ರೇಷ್ಠವಾಗಿದ್ದು, ಅಮೂಲ್ಯ ಜೀವಗಳನ್ನು ಉಳಿಸಲು ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕೆಂದು ಜಿಲ್ಲಾ ಪಂಚಾಯತಿ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ಕರೆ ನೀಡಿದರು. ಅಕ್ಷಯ ಚಾರಿಟೇಬಲ್ ಟ್ರಸ್ಟ್ ಮತ್ತು ಸಂಜೀವಿನಿ ಒಕ್ಕೂಟ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಹಕಾರದೊಂದಿಗೆ ಸಿದ್ದಾಪುರ ಗುಹ್ಯ ಅಗಸ್ಥೇಶ್ವರ ಸಹಕಾರ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಾಕ್ರಮ […]
ಗಾಳಿಬೀಡು; ಕುಷ್ಠರೋಗ ಪತ್ತೆ ಆಂದೋಲನಕ್ಕೆ ಚಾಲನೆ

ಜನವಾಹಿನಿ News ಮಡಿಕೇರಿ : ಗಾಳಿಬೀಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಗಾಳಿಬೀಡು ಗ್ರಾಮದಲ್ಲಿ ಕುಷ್ಟರೋಗ ಪತ್ತೆ ಹಚ್ಚುವ ಆಂದೋಲನದಡಿಯಲ್ಲಿ ನವೆಂಬರ್, 24 ರಿಂದ ಡಿಸೆಂಬರ್, 09 ರವರೆಗಿನ 14 ದಿನಗಳು ಆಶಾ ಕಾರ್ಯಕರ್ತರು ಮತ್ತು ಸ್ವಯಂ ಸೇವಕರು ಮನೆ ಮನೆಗಳಿಗೆ ಭೇಟಿ ನೀಡಿ ರೋಗದ ಚಿಹ್ನೆಗಳನ್ನು ಪರೀಕ್ಷಿಸಿ ಆರೋಗ್ಯ ಶಿಕ್ಷಣ ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಶಿ ಕಿರಣ್ ಅವರು ಚಾಲನೆ ನೀಡಿದರು. ಸಭೆಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ […]
ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಠಾಣಾಧಿಕಾರಿ ಮಂಜುನಾಥ್ ಕಿವಿ ಮಾತು

ಜನವಾಹಿನಿ NEWS ಸಿದ್ದಾಪುರ : ಜೀವನದಲ್ಲಿ ಸಾಧನೆ ಮಾಡಲು ಹೊರಟಿರುವ ನೀವು ದುಶ್ಚಟಕ್ಕೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ & ಜೀವನೋಪಾಯ ಇಲಾಖೆ ಕೊಡಗು ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ವಿರಾಜಪೇಟೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಿದ್ದಾಪುರ ಪಟ್ಟಣದಲ್ಲಿ […]
ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ : ಅರೋಗ್ಯವಂತ ಮಗು ದೇಶದ ಸಂಪತ್ತು – ತನ್ಮಯಿ ಪ್ರವೀಣ್

ಜನವಾಹಿನಿ NEWS ಸೋಮವಾರಪೇಟೆ : ಇನ್ನರ್‌ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಅಂಗವಾಗಿ ಹಾನಗಲ್ಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸೀಮಂತ ಹಾಗು ಬಾಣಂತಿಯರಿಗೆ ಪೌಷ್ಠಿಕ ಆಹಾರದ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಇನ್ನರ್‌ವೀಲ್ ಅಧ್ಯಕ್ಷೆ ತನ್ಮಯಿ ಪ್ರವೀಣ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅರೋಗ್ಯವಂತ ಮಗು ದೇಶದ ಸಂಪತ್ತು. ಗರ್ಭಿಣಿಯರು ಪೌಷ್ಠಿಕಾಂಶಯುಕ್ತ ಆಹಾರ ಸೇವಿಸಬೇಕು. ಒತ್ತಡ ಮುಕ್ತವಾಗಿ ಜೀವನ ಶೈಲಿ ಬೆಳೆಸಿಕೊಳ್ಳುವ ಮೂಲಕ ಅರೋಗ್ಯವಂತ ಮಗು ಜನನಕ್ಕೆ ತಮ್ಮ […]
ಸಿದ್ದಾಪುರ ಆಸ್ಪತ್ರೆಗೆ ನುರಿತ ವೈದ್ಯರ ನೇಮಕಕ್ಕೆ ಸಿ.ಪಿ.ಐ.ಎಂ ಪಕ್ಷದ ಸಂಚಾಲನ ಸಮಿತಿ ಒತ್ತಾಯ

ಜನವಾಹಿನಿ NEWS ಸಿದ್ದಾಪುರ : ವೈದ್ಯರ ಕೊರತೆ ಎದುರಿಸುತ್ತಿರುವ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ನುರಿತ ತಜ್ಞ ವೈದ್ಯರುಗಳ ನೇಮಕದ ಜತೆ ಮೂಲಭೂತ ಸೌಕರ್ಯಗಳನ್ನು ಕೂಡಲೇ ಒದಗಿಸಬೇಕೆಂದು ಸಿಪಿಐಎಂ ಪಕ್ಷದ ಸಿದ್ದಾಪುರ ಸಂಚಾಲನ ಸಮಿತಿ ಆಗ್ರಹಿಸಿದೆ. ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಸಮಿತಿಯ ಕಾರ್ಯದರ್ಶಿ ಎನ್.ಡಿ.ಕುಟ್ಟಪ್ಪ, ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸುಮಾರು 30,000 ಕಿಂತಲು ಹೆಚ್ಚು ಜನರು ವಾಸವಿದ್ದು, ಅನಾರೋಗ್ಯ, ತುರ್ತು ಸಂದರ್ಭಗಳಲ್ಲಿ ಇದೇ ಆಸ್ಪತ್ರೆಯನ್ನು ಅವಲಂಬಿತರಾಗಿದ್ದಾರೆ. […]
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ ಕಾಮಗಾರಿಗೆ ನಾಳೆ ಶಿಲಾನ್ಯಾಸ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ ಕಾಮಗಾರಿಗೆ ನಾಳೆ ಶಿಲಾನ್ಯಾಸ ಅನುದಾನ ಒದಗಿಸಿದ ಸರಕಾರಕ್ಕೆ ಧನ್ಯವಾದ ಸಲ್ಲಿಸಿದ ಮಂತರ್ ಗೌಡ ಮಡಿಕೇರಿ : ವೈದ್ಯಕೀಯ ಶಿಕ್ಷಣ ಇಲಾಖೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಹಯೋಗದೊಂದಿಗೆ 450 ಹಾಸಿಗೆ ಸಾಮಥ್ರ್ಯದ ಬೋಧಕ ಆಸ್ಪತ್ರೆ ಕಟ್ಟಡದ ಉಳಿಕೆ ಮತ್ತು ಹೆಚ್ಚುವರಿ (ಎರಡನೇ ಹಂತ) ಕಾಮಗಾರಿಯ ಶಿಲಾನ್ಯಾಸ ಸಮಾರಂಭವು ಆಗಸ್ಟ್, 15 ರಂದು ಮಧ್ಯಾಹ್ನ 1 ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನಗಳ […]
ಎದೆ ಹಾಲಿನ ಮಹತ್ವ ಮತ್ತು ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮ

ಎದೆ ಹಾಲಿನ ಮಹತ್ವ ಮತ್ತು ಯೋಜನೆಗಳ ಬಗ್ಗೆ ಅರಿವು ಕಾರ್ಯಕ್ರಮ ಮಡಿಕೇರಿ : ಮಕ್ಕಂದೂರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಎದೆ ಹಾಲಿನ ಮಹತ್ವ ಕುರಿತು ಅರಿವು ಕಾರ್ಯಕ್ರಮವು ಇಂದು ನಡೆಯಿತು. ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೇಪಾಡಂಡ ಸವಿತಾ ಕೀರ್ತನ್ ಅವರು ಎದೆ ಹಾಲಿನ ಮಹತ್ವದ ಬಗ್ಗೆ ವಿವರವಾಗಿ ಮಾಹಿತಿ ನೀಡಿ ಪೌಷ್ಟಿಕ ಆಹಾರ ಸೇವನೆ, ವಾಯು ವಿಹಾರ, ಹೆಚ್ಚು ನೀರು ಸೇವನೆ, ಸ್ಥಳೀಯವಾಗಿ ಸಿಗುವ […]
ಜನ ಸುರಕ್ಷಾ ಅಭಿಯಾನಕ್ಕೆ ಚಾಲನೆ

ಜನ ಸುರಕ್ಷಾ ಅಭಿಯಾನಕ್ಕೆ ಚಾಲನೆ ಮಡಿಕೇರಿ : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಬ್ಯಾಂಕ್ ಆಫ್ ಬರೋಡ ಮರಗೋಡು ಶಾಖೆ ಇವರ ಸಹಯೋಗದೊಂದಿಗೆ ತಾಲ್ಲೂಕಿನ ಹೊಸ್ಕೇರಿ ಗ್ರಾಮದಲ್ಲಿ, ಹೊಸ್ಕೇರಿ ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ, ಕೇಂದ್ರ ಸರಕಾರದ ಆದೇಶದಂತೆ ಆಯಾಯ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತೀ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್ ಅವರು ಮಾತನಾಡಿ ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ […]
ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಪುನೀತ ರಾಜ್‍ಕುಮಾರ ಹೃದಯಜ್ಯೋತಿ ಯೋಜನೆ ವಿಸ್ತರಣೆ : ಆರೋಗ್ಯ ಸಚಿವ ದಿನೇಶ ಗುಂಡೂರಾವ್

ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ಪುನೀತ ರಾಜ್‍ಕುಮಾರ ಹೃದಯಜ್ಯೋತಿ ಯೋಜನೆ ವಿಸ್ತರಣೆ : ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಬೆಂಗಳೂರು : ರಾಜ್ಯದಲ್ಲಿ ಹೃದಯ ಖಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಿಲ್ಲ. ಆರೋಗ್ಯ ಇಲಾಖೆಯ ಯಶಸ್ವಿ ಕಾರ್ಯಕ್ರಮಗಳಲ್ಲಿ ಒಂದಾಗಿರುವ ಪುನೀತ ರಾಜ್‍ಕುಮಾರ ಹೃದಯಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ವಿಭಾಗ ಮಟ್ಟದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯೋಜನೆಗಳ […]