ಯುವನಿಧಿ ಭಿತ್ತಿ ಪತ್ರ ಬಿಡುಗಡೆ

ಜನವಾಹಿನಿ NEWS ಮಡಿಕೇರಿ : ಮಡಿಕೇರಿ ತಾಲ್ಲೂಕು ಪಂಚಾಯತ್‍ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಅನಾವರಣ ಮಾಡಲಾಯಿತು. ಉದ್ಯೋಗಾಧಿಕಾರಿ ಮಂಜುನಾಥ್ ಸಿ. ಬಿ ಅವರು ಮಾತಾನಾಡಿ 2023, 2024 ಮತ್ತು 25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಯುವನಿಧಿ ಯೋಜನೆಯಡಿ […]
ಆ.18 ರಂದು ಉದ್ಯೋಗ ಮೇಳ

ಆ.18 ರಂದು ಉದ್ಯೋಗ ಮೇಳ ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್, 18 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ವುಡ್‍ಸ್ಟಾಕ್ ರೆಸಾರ್ಟ್ ಮಡಿಕೇರಿ, ತಾಜ್ ರೆಸಾಟ್ರ್ಸ್, ಮಡಿಕೇರಿ, ಎಚ್‍ಡಿಎಫ್‍ಸಿ ಲೈಪ್ ಇನ್ಸೂರೆನ್ಸ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಪ್ಯಾಲೇಶ್ ಟೊಯೋಟ ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. […]
ಅಲ್ಪಸಂಖ್ಯಾತ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ ಮಡಿಕೇರಿ : 2025-26 ನೇ ಸಾಲಿನ ಬಿ.ಎಸ್ಸಿ ಹಾಗೂ ಜಿಎನ್‍ಎಮ್ ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಮೂಲಕ ಪ್ರೋತ್ಸಾಹಧನಕ್ಕಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. 2025-26 ನೇ ಸಾಲಿಗೆ ಬಿಎಸ್ಸಿ ಹಾಗೂ ಜಿಎನ್‍ಎಮ್ ನರ್ಸಿಂಗ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಅರ್ಹ […]
ಮಡಿಕೇರಿ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮಡಿಕೇರಿ : ಮಾಸಿಕ ಕನಿಷ್ಠ ರೂ.೧೦ ಸಾವಿರ ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ರಾಜ್ಯದಾದ್ಯಂತ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಗಾಂಧಿಮೈದಾನದಲ್ಲಿ ಜಮಾಯಿಸಿದ ಪತ್ರಿಭಟನಾ ನಿರತರು ಮಂಗೇರಿರ ಮುತ್ತಣ್ಣ ವೃತ್ತ, ನಗರ ಪೊಲೀಸ್ ಠಾಣೆ, ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತವಾಗಿ ನಗರದ ಬಾಲಭವನ ತಲುಪಿದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಕರ್ನಾಟಕ ಸಂಯುಕ್ತ ಆಶಾ […]
ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ ಹುದ್ದೆಗೆ ಅರ್ಜಿ ಆಹ್ವಾನ

ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಕಿರಿಯರ ಕ್ರೀಡಾ ವಸತಿ ನಿಲಯಕ್ಕೆ ಮಹಿಳಾ ಕ್ಷೇಮಪಾಲಕರ (ಕೇರ್‍ಟೇಕರ್) ಹುದ್ದೆಗೆ (ಹೊರಗುತ್ತಿಗೆ ಆಧಾರದ ಮೇಲೆ) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಗಲು ಮತ್ತು ರಾತ್ರಿಯ ವೇಳೆಯಲ್ಲಿ ಕ್ಷೇಮಪಾಲಕರು ಕಿರಿಯರ ಕ್ರೀಡಾ ನಿಲಯದಲ್ಲಿಯೇ ಇರಬೇಕು. ಮಹಿಳಾ ಅಭ್ಯರ್ಥಿಯಾಗಿರಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 08272-220986 ಅಥವಾ 9480032712 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ […]
ಯುವನಿಧಿ ಪೋಸ್ಟರ್ ಬಿಡುಗಡೆ : ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಸಲಹೆ

ಯುವನಿಧಿ ಪೋಸ್ಟರ್ ಬಿಡುಗಡೆ : ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಸಲಹೆ ಮಡಿಕೇರಿ : ಪೊನ್ನಂಪೇಟೆಯ ತಾಲ್ಲೂಕು ಪಂಚಾಯತ್‍ನಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ 2025 ನೇ ಸಾಲಿನ ಯುವನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭಗೊಂಡ ಪ್ರಯುಕ್ತ ಯುವನಿಧಿ ಪೋಸ್ಟರ್ ಮತ್ತು ಬ್ಯಾನರ್‍ಗಳನ್ನು ಅನಾವರಣ ಮಾಡಲಾಯಿತು. ಉದ್ಯೋಗಾಧಿಕಾರಿ ಸಿ.ಬಿ.ಮಂಜುನಾಥ ಅವರು ಮಾತನಾಡಿ 2023, 2024 ಮತ್ತು 2025 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ ಪಡೆದು ಯುವನಿಧಿ ಯೋಜನೆಯಡಿ ಅರ್ಜಿ ಸಲ್ಲಿಸದ ಅರ್ಹರು […]
ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿ ಉತ್ತೇಜಿಸುವ ಯೋಜನೆ

ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿ ಉತ್ತೇಜಿಸುವ ಯೋಜನೆ ಮಡಿಕೇರಿ : ಕಾರ್ಮಿಕರ ರಾಜ್ಯ ವಿಮಾ ನಿಗಮವು (ಇಎಸ್‍ಐಸಿ) SPREE 2025 (Scheme for promotion of Registration of employers and employees ಉದ್ಯೋಗದಾತರು ಮತ್ತು ಉದ್ಯೋಗಿಗಳ ನೋಂದಣಿ ಉತ್ತೇಜಿಸುವ ಯೋಜನೆ 2025) ಎಂಬ ನವೀಕೃತ ಯೋಜನೆಯನ್ನು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ಮತ್ತು ಕ್ರೀಡಾ ಸಚಿವರಾದ ಡಾ.ಮನ್ಸುಖ್ ಮಾಂಡವೀಯ ಅವರ ಅಧ್ಯಕ್ಷತೆಯಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದ ಕಾರ್ಮಿಕರ ರಾಜ್ಯ ವಿಮಾ ನಿಗಮದ […]
ನಾಳೆ ದಿ.ಕೊಕ್ಕಲೆರ ಚಂಗಪ್ಪ ಅವರ ಜ್ಞಾಪಕಾರ್ಥ ದತ್ತಿನಿಧಿ ಸ್ವೀಕಾರ : ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರ ಪುಸ್ತಕ ಬಿಡುಗಡೆ

ನಾಳೆ ದಿ.ಕೊಕ್ಕಲೆರ ಚಂಗಪ್ಪ ಅವರ ಜ್ಞಾಪಕಾರ್ಥ ದತ್ತಿನಿಧಿ ಸ್ವೀಕಾರ : ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರ ಪುಸ್ತಕ ಬಿಡುಗಡೆ ಮಡಿಕೇರಿ : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂರ್ನಾಡು ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಮೂರ್ನಾಡು ಪಿಎಂ.ಶ್ರೀ ಮಾದರಿ ಪ್ರಾಥಮಿಕ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ದಿ.ಕೊಕ್ಕಲೆರ ಚಂಗಪ್ಪ ಅವರ ಜ್ಞಾಪಕಾರ್ಥವಾಗಿ ದತ್ತಿನಿಧಿ ಸ್ವೀಕಾರ, ಜಿಲ್ಲೆಯ ಹಿರಿಯ ಸಾಹಿತಿ ಕಿಗ್ಗಾಲು ಎಸ್.ಗಿರೀಶ್ ಅವರ ಪುಸ್ತಕ ಬಿಡುಗಡೆ […]
ಕಂಪ್ಯೂಟರೈಸ್ಡ್ ಅಕೌಂಟಿಂಗ್(ಟ್ಯಾಲಿ) ಕುರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಕಂಪ್ಯೂಟರೈಸ್ಡ್ ಅಕೌಂಟಿಂಗ್(ಟ್ಯಾಲಿ) ಕುರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ ಮಡಿಕೇರಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಕಂಪ್ಯೂಟರೈಸ್ಡ್ ಅಕೌಂಟಿಂಗ್(ಟ್ಯಾಲಿ) ಕುರಿತ 38 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್, 23 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ಅರ್ಜಿ ಸಲ್ಲಿಸಬಹುದು. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾμÉ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ […]
ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ ಮಡಿಕೇರಿ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ, ಕರಿಕೆ, ಮಡಿಕೇರಿ ತಾಲ್ಲೂಕು ಇಲ್ಲಿಗೆ 8ನೇ ತರಗತಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳನ್ನು ಬೋಧಿಸಲು ಗೌರವಧನ ಆಧಾರದ ಮೇಲೆ ಶಿಕ್ಷಕರ ಸೇವೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್,್ಟ 14 ಕೊನೆಯ ದಿನಾಂಕವಾಗಿದ್ದು, ಗಣಿತ ಮತ್ತು ವಿಜ್ಞಾನ ವಿಷಯ ಬೋಧಿಸಲು ಬಿಎಸ್ಸಿ, ಬಿಇಡಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ […]