Breaking News :

ಕೊಳವೆ ಬಾವಿ ನಿರ್ಮಿಸಿಕೊಡಲು ಲಂಚದ ಬೇಡಿಕೆ : ಪಂಚಾಯತಿ ಅಧ್ಯಕ್ಷೆ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

  ಜನವಾಹಿನಿ NEWS ಕರಾವಳಿ: ಕೃಷಿ ಜಮೀನಿಗೆ ಕೊಳವೆ ಬಾವಿ ನಿರ್ಮಿಸಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಬಂಟ್ವಾಳ ತಾಲ್ಲೂಕು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸಾ, ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ. ‘ನಮ್ಮ ಮಾವನಿಗೆ ಪೆರುವಾಯಿ ಗ್ರಾಮದಲ್ಲಿ ಒಂದು ಎಕರೆ ಕೃಷಿ ಜಮೀನು ಇದ್ದು, ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕೊಳವೆ ಬಾವಿ ಮಂಜೂರು ಮಾಡಲು ಅರ್ಜಿ ಸಲ್ಲಿಸಿದ್ದರು. ಮಾವನಿಗೆ […]

ದೂರು ನೀಡಲು ಬಂದಿದ್ದ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿ ಅಮಾನತು

  ಜನವಾಹಿನಿ NEWS ಮೂಡುಬಿದಿರೆ : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೊಬ್ಬ ಕರೆ ಮಾಡಿ ಅಶ್ಲೀಲ‌ವಾಗಿ ಮಾತನಾಡಿ ಕಿರುಕುಳ ನೀಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಕುರಿತು ಆ.23ರಂದು‌ಮೂಡುಬಿದಿರೆ ಪೊಲೀಸ್‌ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಮತ್ತು ಪತ್ನಿಯನ್ನು […]

ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ – ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ

  ಜನವಾಹಿನಿ NEWS  : ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿಯನ್ನು […]

ಧರ್ಮಸ್ಥಳ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ : ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ SIT – 10 ದಿನಗಳ ಕಾಲ ಕಸ್ಟಡಿಗೆ 

  ಬೆಳ್ತಂಗಡಿ : ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನೇ ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್‌ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ […]

ಅಂತರಾಜ್ಯ ಅಪರಾಧಿಯ ಬಂಧನ

ಅಂತರಾಜ್ಯ ಅಪರಾಧಿಯ ಬಂಧನ ಪುತ್ತೂರು: ಪುತ್ತೂರು ಉಪವಿಭಾಗದ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಪೊಲೀಸ್‌ ಉಪನಿರೀಕ್ಷಕ ಕೌಶಿಕ್ ನೇತೃತ್ವದಲ್ಲಿ ರಚಿಸಿದ ವಿಶೇಷ ತಂಡವು ಕೇರಳ ಹಾಗೂ ಕರ್ನಾಟಕಕ್ಕೆ ಬೇಕಾಗಿದ್ದ ಅಂತರರಾಜ್ಯ ಅಪರಾಧಿ ಇಲಿಯಾಸ್ ಪಿ.ಎ. ಎಂಬಾತನನ್ನು ಬಂಧಿಸಿದ ಪೊಲೀಸ್ ತಂಡವು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದತ್ರಿಶೂರ್ ಜಿಲ್ಲೆಯ ವಿಯ್ಯುರು ಮೂಲದವನು ಎನ್ನಲಾಗಿದೆ. ಇಲಿಯಾಸ್ ಪಿ.ಎ. ವಿರುದ್ಧ ಪುತ್ತೂರು ನಗರ ಠಾಣೆ, ಉಪ್ಪಿನಂಗಡಿ ಹಾಗೂ ಧರ್ಮಸ್ಥಳ ಠಾಣೆಗಳಲ್ಲಿ ಹಲವು ಪ್ರಕರಣಗಳಿದ್ದು, ಕೇರಳದ ತ್ರಿಶೂರ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ […]

ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ : ಅಪಪ್ರಚಾರ ಮಾಡುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ : ಅಪಪ್ರಚಾರ ಮಾಡುವವರ ವಿರುದ್ಧ  ಕ್ರಮಕ್ಕೆ ಒತ್ತಾಯ   ಮಡಿಕೇರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮತ್ತು ಭಕ್ತರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿ ಸಮಾಜದಲ್ಲಿ ಅಶಾಂತಿಯನ್ನುಂಟು ಮಾಡುತ್ತಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶ್ರೀ ಧರ್ಮಸ್ಥಳ ಭಕ್ತಾಭಿಮಾನಿಗಳ ವೇದಿಕೆ ಮಡಿಕೇರಿಯಲ್ಲಿ ಪ್ರತಿಭಟನಾ ಜಾಥ ನಡೆಸಿತು. ವೇದಿಕೆಯ ಸಂಚಾಲಕ ಅಗೋಳಿಕಜೆ ಧನಂಜಯ ಜಾಥಾದ […]

ಮದ್ದೂರು ಕ್ಷೇತ್ರದಲ್ಲಿ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ : ರಾಜ್ಯದಲ್ಲಿ ಅಭಿವೃದ್ಧಿಗೆ ಹಣವಿಲ್ಲವೆನ್ನುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿದ್ದರಾಮಯ್ಯ

ಮದ್ದೂರು ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ : ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು : ಸಿಎಂ ಸಿದ್ದರಾಮಯ್ಯ  ಮಂಡ್ಯ  : ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ದಿನ 1,146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಸಿಎಂ ಸಿದ್ದರಾಮಯ್ಯ […]

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ 

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆ..! ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ ನವದೆಹಲಿ : ಶ್ರೀನಗರದ ನಗರದ ಹೊರವಲಯದ ಮಹಾದೇವ ಬೆಟ್ಟ ಶ್ರೇಣಿಯ ದಾಚೀಗಾಮ್‌ನಲ್ಲಿ ‘ಆಪರೇಷನ್‌ ಮಹಾದೇವ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿಗಳು, ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ. ಮೃತ ಉಗ್ರರನ್ನು ಹಸೀಮ್ ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್ […]

ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ : ಹವಾಮಾನ ಇಲಾಖೆಯಿಂದ ಭಾರಿ ಮಳೆ ಬೀಳುವ ಮುನ್ಸೂಚನೆ

ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ : ಹವಾಮಾನ ಇಲಾಖೆಯಿಂದ ಭಾರಿ ಮಳೆ ಬೀಳುವ ಮುನ್ಸೂಚನೆ ಮಡಿಕೇರಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್ ಮತ್ತು ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕೊಡಗು ಜಿಲ್ಲೆಗೆ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆಯು ಜುಲೈ 26ರ ಬೆಳಿಗ್ಗೆ 8.30ರವರೆಗೂ ಆರೆಂಜ್ ಅಲರ್ಟ್ ಘೋಷಿಸಿದ್ದು, ಮುನ್ನಚ್ಚರಿಕೆಯನ್ನೂ […]

ದೇವರಕೊಲ್ಲಿ ಬಳಿ ಭೀಕರ ಅಪಘಾತ ನಾಲ್ವರು ದಾರುಣ ಸಾವು 

ದೇವರಕೊಲ್ಲಿ ಬಳಿ ಭೀಕರ ಅಪಘಾತ ನಾಲ್ವರು ದಾರುಣ ಸಾವು  ಮಡಿಕೇರಿ : ಮಡಿಕೇರಿ ಸಮೀಪದ ದೇವರ ಕೊಲ್ಲಿ ಬಳಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಮತ್ತಿಬ್ಬರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ ಮೂಲದ್ದೆಂದು ತಿಳಿದು ಬಂದಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. […]