ಉಡುಪಿ; ಮೆಹಂದಿ ಕಾರ್ಯಕ್ರಮದ ದಿನ ಮದುಮಗ ನಾಪತ್ತೆ

ಮೆಹಂದಿ ಕಾರ್ಯಕ್ರಮದಂದೇ ಮದುಮಗ ನಿಗೂಢವಾಗಿ ನಾಪತ್ತೆಯಾದ ಘಟನೆ ಕುಂದಾಪುರದ ಅಳಿವೆಕೋಡಿ ಗ್ರಾಮದಲ್ಲಿ ನಡೆದಿದೆ. ಆ.19ರ ಸೋಮವಾರ ತಾಳಿ ಕಟ್ಟಲು ಸಿದ್ಧವಾಗಬೇಕಾಗಿದ್ದ ವರ, ಮದುವೆಯ ಮುಂಚಿನ ದಿನ ಇದ್ದಕ್ಕಿದಂತೆ ನಾಪತ್ತೆಯಾಗಿದ್ದಾನೆ. ಮದುವೆ ಹಿಂದಿನ ದಿನ ನಡೆಯಬೇಕಿದ್ದ ಮೆಹಂದಿ ಕಾರ್ಯಕ್ರಮದಂದೇ ಮದುಮಗ ಕಣ್ಮರೆಯಾಗಿದ್ದು, ಮನೆಯವರು ಶಾಕ್ ಗೆ ಒಳಗಾಗಿದ್ದಾರೆ. ಹುಡುಗ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಎರಡು ಕಡೆಯ ಮನೆಯವರು ಸೇರಿ ಮದುವೆ ನಿಶ್ಚಯಿಸಿದ್ದರು. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಡೆಯಬೇಕಾಗಿತ್ತು. ಆ.18 […]
ಪುತ್ತೂರು; ಕೊಂಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿನಿಗೆ ಚೂರಿ ಇರಿತ; ಸುಳ್ಳು ಹೇಳಿ ಪ್ರಾಂಶುಪಾಲರಿಂದ ಪ್ರಕರಣ ಮುಚ್ಚಿ ಹಾಕಲು ಯತ್ನ; ಆರೋಪ

ಪುತ್ತೂರು; ಕೊಂಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿನಿಗೆ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಕೈಯಿಂದ ರಕ್ತ ಸೋರುವುದನ್ನು ಗಮನಿಸಿದ ಪ್ರಾಂಶುಪಾಲರು ಪ್ರಥಮ ಚಿಕಿತ್ಸೆ ನೀಡಿ ಕೈಗೆ ಗ್ಲಾಸ್ ಬಿದ್ದಿದೆ ಎಂದು ಸುಳ್ಳು ಹೇಳಿ ಕಳುಹಿಸಿದ್ದಾರೆ. ಇದೀಗ ನೈಜ ಘಟನೆ ಬಯಲಾಗುತ್ತಿದ್ದಂತೆ ಪ್ರಾಂಶುಪಾಲರ ವಿರುದ್ಧ ವ್ಯಾಪಕ ಆಕ್ರೋಶ ಕೇಳಿ ಬಂದಿದೆ. ಚೂರಿ ಇರಿತಕ್ಕೊಳಗಾದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಚೂರಿಯಿಂದ ಇರಿದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ.
ಮಂಚಿ-ಕೈಯ್ಯೂರ್ ರಸ್ತೆ ಸರಿಪಡಿಸಲು SDPIಯಿಂದ ಮನವಿ ಸಲ್ಲಿಕೆ

SDPI ಮಂಚಿ ಬೂತ್ ಸಮಿತಿ ವತಿಯಿಂದ ಹಲವಾರು ವರ್ಷಗಳಿಂದ ಹದಗೆಟ್ಟ ರಸ್ತೆ ಸರಿಪಡಿಸಲು ಮಂಚಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಿ ಚರ್ಚೆ ನಡೆಸಲಾಗಿದೆ. ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕೈಯ್ಯುರು ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ ಇದರ ಬಗ್ಗೆ ಊರಿನ ನಾಗರಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ದಿನಗಳಿಂದ ಆಕ್ರೋಶ ವ್ಯಕ್ತಪಡಿಸಿದ್ದರು. ಇತ್ತೀಚೆಗೆ ನಡೆದ ಗ್ರಾಮ ಸಭೆಯಲ್ಲಿ ಕೈಯ್ಯುರಿನ ಯುವಕರು ಈ ಬಗ್ಗೆ ಪ್ರಸ್ತಾಪ ಮಾಡಿದ್ದರು. ರಸ್ತೆ ವಿಚಾರವಾಗಿ ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ GM […]
ಮಂಗಳೂರು: ಪುಟ್ಬಾಲ್ ಆಟದ ವಿಚಾರದಲ್ಲಿ ಕಿಡ್ನಾಪ್ ಮಾಡಿ ವಿದ್ಯಾರ್ಥಿಗಳ ಮೇಲೆ ಹಲ್ಲೆ

ಮಂಗಳೂರು: ಫುಟ್ಬಾಲ್ ಆಟದ ವೇಳೆ ವಿದ್ಯಾರ್ಥಿಗಳ ನಡುವೆ ಜಗಳ ನಡೆದು, ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಎರಡು ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದೆ. ಘಟನೆಯಲ್ಲಿ ಮಹಮ್ಮದ್ ಶುರೈ, ಮಹಮ್ಮದ್ ಅಫ್ರಾನ್, ಇಬ್ರಾಹಿಂ ಖಲೀಲ್ ಮತ್ತು ಮಹಮ್ಮದ್ ಜನ್ಮದ್ ಎಂಬ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದ ದಿಯಾನ್, ಅನ್ನೈ, ತಸ್ಮಿನ್, ಸಲ್ಮಾನ್, ಅನಾಸ್ ಎಂಬ ವಿದ್ಯಾರ್ಥಿಗಳನ್ನು ಪೊಲೀಸರು […]
ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು

ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರದ ಹೊಸ ಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಯಶವಂತ(21) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ತೆಂಗಿನ ಗರಿಯನ್ನು ತೆಗೆಯಲು ತೆರಳಿದ್ದಾಗ ಅಲ್ಲೇ ಹತ್ತಿರದಲ್ಲಿ ಹಾದು ಹೋಗಿದ್ದ ಹೈಟೆನ್ಶನ್ ವಿದ್ಯುತ್ ತಂತಿಗೆ ತಗುಲಿದ್ದು, ಯಶವಂತ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದ್ದಾರೆ. ಬಹಳ ಹೊತ್ತು ಕಳೆದರೂ ಯಶವಂತ ಕೆಳಗೆ ಬಾರದ ಕಾರಣ ಅವರ ಸಹೋದರಿ ಟೆರೇಸ್ ಗೆ ಮೇಲೇರಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ […]
ಪುತ್ತೂರು; ದ್ವಿಚಕ್ರ ವಾಹನ ಸವಾರನ ಮೇಲೆ ಕಾಡು ಹಂದಿ ದಾಳಿ

ಪುತ್ತೂರು: ದ್ವಿಚಕ್ರ ವಾಹನ ಸವಾರನೋರ್ವನ ಮೇಲೆ ಕಾಡು ಹಂದಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಅರಿಯಡ್ಕ ಗ್ರಾಮದ ಕೌಡಿಚ್ಚಾರು ಸಮೀಪ ನಡೆದಿದೆ. ಸ್ಥಳೀಯ ನಿವಾಸಿ ಧನುಷ್(30) ಗಾಯಗೊಂಡವರು. ಕುಂಬ್ರ ಪೆಟ್ರೋಲ್ ಬಂಕ್ ನಲ್ಲಿ ಮ್ಯಾನೇಜರ್ ಆಗಿರುವ ಧನುಷ್ ಎಂದಿನಂತೆ ಇಂದು ಬೆಳಗ್ಗೆ ಸ್ಕೂಟರ್ ನಲ್ಲಿ ಪೆಟ್ರೋಲ್ ಬಂಕ್ ಗೆ ತೆರಳುತ್ತಿದ್ದಾಗ ಕುರುಂಜ ಮಣ್ಣಾಪು ಬಳಿ ಏಕಾಏಕಿ ಕಾಡು ಹಂದಿಯೊಂದು ಧನುಷ್ ಚಲಾಯಿಸುತ್ತಿದ್ದ ಸ್ಕೂಟರ್ ಮೇಲೆ ದಾಳಿ ನಡೆಸಿದೆ. ಈ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಧನುಷ್ […]
ಉಪ್ಪಿನಂಗಡಿ; ಮೊಬೈಲ್ ಕಸಿದುಕೊಂಡ ತಾಯಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ

ಉಪ್ಪಿನಂಗಡಿ: 14ರ ಹರೆಯದ ಬಾಲಕಿ ತಾಯಿಯ ಮೇಲೆ ಮುನಿಸಿಕೊಂಡು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ರಾತ್ರಿ ಸಂಭವಿಸಿದೆ. ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ ಬಾಲಕಿ ನೀಲಮ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಜಾರ್ಖಂಡ್ ನ ಸರ್ಜು ಬುಯ್ಯಾನ್ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಜಗದೀಶ್ ಸರಳಾಯ ಅವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ರವಿವಾರ ರಾತ್ರಿ 7.30ರ ಸುಮಾರಿಗೆ ತೋಟದ ಮಾಲಕರು […]
ಬೆಳ್ತಂಗಡಿ; ನದಿಯಲ್ಲಿ ದಿಡೀರ್ ಹರಿದು ಬಂದ ಮಣ್ಣು ಮಿಶ್ರಿತ ನೀರು, ಆತಂಕಗೊಂಡ ಜನ

ಸೋಮವಾರ ಸಂಜೆ ಬೆಳ್ತಂಗಡಿ ತಾಲೂಕಿನ ಹಲವೆಡೆ ನದಿಯಲ್ಲಿ ಏಕಾಏಕಿ ಮಣ್ಣುಮಿಶ್ರಿತ ನೀರಿನ ಪ್ರವಾಹ ಬಂದಿದ್ದು ಜನರು ಆತಂಕಕ್ಕೆ ಒಳಗಾಗಿದ್ದರು. ಒಂದು ವಾರದಿಂದ ಮಳೆ ಕಡಿಮೆಯಾಗಿ ಶಾಂತವಾಗಿದ್ದ ನೇತ್ರಾವತಿ ಮತ್ತು ಮೃತ್ಯುಂಜಯ ನದಿಗಳಲ್ಲಿ ಪ್ರವಾಹದ ಪರಿಸ್ಥಿತಿ ಸೋಮವಾರ ಸಂಜೆ ಕಂಡುಬಂದಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಮಧ್ಯಾಹ್ನ ಸಾಮಾನ್ಯ ಮಳೆಯಾಗಿತ್ತು. ಆದರೆ ಸಂಜೆ 5ರ ವೇಳೆಗೆ ನದಿಗಳು ಏಕಾಏಕಿ ತುಂಬಿ ಹರಿಯ ತೊಡಗಿದವು. ಮುಂಡಾಜೆ, ಕಲ್ಮಂಜ, ಕಡಿರುದ್ಯಾವರ, ಮಿತ್ತಬಾಗಿಲು ಮೊದಲಾದ ಗ್ರಾಮಗಳ ಕಡೆ ಹೆಚ್ಚಿನ ತೋಟಗಳಿಗೆ ಪ್ರವಾಹದ ನೀರು ನುಗ್ಗಿ […]
ಬಾಂಗ್ಲಾ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ; ರಾಜ್ಯಪಾಲರಿಗೆ ಎಚ್ಚರಿಸಿದ ಐವನ್ ಡಿಸೋಜಾ, ಬಿಜೆಪಿಯಿಂದ ಆಕ್ಷೇಪ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ವಿರುದ್ಧ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಮಂಗಳೂರಿನಲ್ಲಿ ಕಾಂಗ್ರೆಸ್ MLC ಐವನ್ ಡಿಸೋಜಾ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆ ವೇಳೆ ಮಾತನಾಡಿದ ಐವನ್ ಡಿಸೋಜಾ, ಬಾಂಗ್ಲಾದೇಶದ ಹಿಂದಿನ ಪ್ರಧಾನಿಗೆ ಆದ ಗತಿಯೇ ನಿಮಗೂ ಆಗುತ್ತದೆ. ನೀವು ರಾಜ್ಯ ಬಿಟ್ಟು ಪಲಾಯನ ಮಾಡಬೇಕಾಗುತ್ತದೆ ಎಂದು ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರಿಗೆ ಎಚ್ಚರಿಸಿದ್ದಾರೆ. ರಾಜಭವನ ಚಲೋ ಆಂದೋಲನ ನಡೆಸುವುದು ನಮ್ಮ […]
ಮಂಗಳೂರಿನಲ್ಲಿ ಸಕ್ರಿಯವಾಗಿದ್ದ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಗ್ಯಾಂಗ್; ಕರಾವಳಿಗರಿಗೆ ಶಾಕಿಂಗ್ ಸುದ್ದಿ

ಖೋಟಾ ನೋಟು ಮುದ್ರಿಸಿ ಮಂಗಳೂರಿನಲ್ಲಿ ಚಲಾವಣೆ ಮಾಡುತ್ತಿದ್ದ ತಂಡವನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡಿನ ಕೊಳತ್ತೂರು ನಿವಾಸಿ ಪ್ರಿಯೇಶ್(38), ಮುಳಿಯಾರು ವಿನೋದ್ ಕುಮಾರ್ (33), ಕುನಿಯಾ ಅಬ್ದುಲ್ ಖಾದರ್ (58), ಬೆಳಿಯೂರು ಕಟ್ಟೆಯ ಅಯೂಬ್ ಖಾನ್(51) ಬಂಧಿತ ಆರೋಪಿಗಳು. ಕಾಸರಗೋಡು ಜಿಲ್ಲೆಯಲ್ಲಿ 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಮುದ್ರಿಸಿ ಮಂಗಳೂರು ನಗರದ ಕ್ಲಾಕ್ ಟವರ್ ಪರಿಸರದ ಲಾಡ್ಜ್ ವೊಂದರ ಪರಿಸರದಲ್ಲಿ ಚಲಾವಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ […]