Breaking News :

ಮಂಗಳೂರು; ಪ್ರತಿಭಟನೆ ವೇಳೆ ಬಸ್ಸಿಗೆ ಕಲ್ಲೆಸೆತ, ಮೂವರ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ ಗೆ ರಾಜ್ಯಪಾಲರ ಅನುಮತಿ ವಿರೋಧಿಸಿ ಕಾಂಗ್ರೆಸ್ ಕರೆ ಕೊಟ್ಟಿದ್ದ ಪ್ರತಿಭಟನೆಯಲ್ಲಿ ಬಸ್ಸಿಗೆ ಕಲ್ಲು ಹೊಡೆದ ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶಾಹುಲ್ ಹಮಿದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತ ಆರೋಪಿಗಳು. ಇನ್ನುಳಿದ ಆರೋಪಿಗಳನ್ನು ಪತ್ತೆಗೆ ಕ್ರಮ‌ ವಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಪಾದಯಾತ್ರೆ ಬಳಿಕ ರಸ್ತೆಗಿಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಖಾಸಗಿ ಸಿಟಿ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ ನ ಎದುರಿನ […]

ರಾಜ್ಯಪಾಲರ ವಿರುದ್ಧ ತೀವ್ರಗೊಂಡ ಕಾಂಗ್ರೆಸ್ ಪ್ರತಿಭಟನೆ; ಟೈರ್ ಗೆ ಬೆಂಕಿ, ಕೈ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಸಿಎಂ ಸಿದ್ದರಾಮಯ್ಯ’ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರು, ಮಂಗಳೂರು , ಚಿಕ್ಕಬಳ್ಳಾಪುರ, ಹಾವೇರಿ, ದಾವಣಗೆರೆ, ಮೈಸೂರು ಸೇರಿ ರಾಜ್ಯದ ವಿವಿಧೆಡೆ ಪ್ರತಿಭಟನೆ ತೀವ್ರಗೊಂಡಿದೆ. ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಂಗಳೂರಿನಲ್ಲಿ ಖಾಸಗಿ ಬಸ್ ಗೆ ಕಲ್ಲು ತೂರಾಟ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹಲವು ಕಡೆ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಇನ್ನೂ ಬೆಂಗಳೂರಿನ […]

ಮಂಗಳೂರು; ರಾಜ್ಯಪಾಲರ ವಿರುದ್ಧದ ಪ್ರತಿಭಟನೆ ವೇಳೆ ಬಸ್ ಗೆ ಕಲ್ಲು ತೂರಾಟ; ಮಹಿಳೆಗೆ ಗಾಯ

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕೆಲವು ಕಿಡಿಗೇಡಿಗಳು ಮಂಗಳೂರು ನಗರದ ಸ್ಟೇಟ್ ಬ್ಯಾಂಕ್ ನಿಂದ ಜೋಕಟ್ಟೆಗೆ ಹೋಗುವ ಸಿಟಿ ಬಸ್ ಗೆ ಲಾಲ್ ಬಾಗ್ ನಲ್ಲಿ  ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪ್ರಯಾಣಿಕ ಮಹಿಳೆಯೊಬ್ಬರಿಗೆ ಗಾಯವಾಗಿದೆ. ಬಸ್ನಲ್ಲಿ ಹತ್ತು ಮಂದಿ ಪ್ರಯಾಣಿಕರಿದ್ದರು. ಚಾಲಕನ ಸೀಟಿನ ಹಿಂದೆ ಕುಳಿತಿದ್ದ ಮಹಿಳೆಗೆ ಗಾಯವಾಗಿದೆ. ಈ ಬಸ್ ನೌಫಾಲ್ ಎಂಬ ಬಿಜೆಪಿ ನಾಯಕರಿಗೆ ಸೇರಿದ್ದಾಗಿದೆ ಎಂದು ತಿಳಿದು ಬಂದಿದೆ.

ಉಡುಪಿ; ಗಾಂಜಾ ನಶೆಯಲ್ಲಿ ತಳವಾರು ಝಳಪಿಸಿದ ಗ್ಯಾಂಗ್; ಇಬ್ಬರಿಗೆ ಗಾಯ

ಗಾಂಜಾ ನಶೆಯಲ್ಲಿ ಬಂದ ಹತ್ತಾರು ಯುವಕರ ಗ್ಯಾಂಗ್‌ವೊಂದು ತಲ್ವಾರ್‌ ಝಳಪಿಸಿದ ಘಟನೆ ಉಡುಪಿಯ ಕುಂದಾಪುರ ಸಮೀಪದ ವಕ್ವಾಡಿಯಲ್ಲಿ ನಡೆದಿದೆ. ನಿನ್ನೆ ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ನಾಲ್ಕೈದು ಜನರಿಗೆ ಗಂಭೀರವಾಗಿ ಗಾಯವಾಗಿದೆ. ಘಟನೆಗೆ ಸಂಬಂಧಿಸಿ ವಕ್ವಾಡಿಯ ಆದರ್ಶ(33), ಎಡ್ವರ್ಡ್(35), ಗಣೇಶ್ ಕುಂಭಾಶಿ(28), ಗೋವರ್ಧನ್(32) ಎಂಬವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಉಳಿದ ಆರೋಪಿಗಳು ಪರಾರಿ ಆಗಿದ್ದು, ಪೊಲೀಸ್‌ರು ಹುಡುಕಾಟ ನಡೆಸಿದ್ದಾರೆ. ವಕ್ವಾಡಿಯಲ್ಲಿ ಗಾಂಜಾ ನಶೆಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ ದಾಂಧಲೆ ಮಾಡಿದ್ದಾರೆ. ಬಳಿಕ ಪಕ್ಕದಲ್ಲಿದ್ದ ಆಟೋ, ಬೈಕ್ ಮೇಲು […]

ವಿಟ್ಲ; ಉರಿಮಜಲು ಬಳಿ ಆಟೋ ಚಾಲಕನಿಗೆ ಚೂರಿ ಇರಿತ ಪ್ರಕರಣ; ತನಿಖೆಯ ವೇಳೆ ಕಾರಣ ಬಯಲು

ವಿಟ್ಲದ ಉರಿಮಜಲು ಎಂಬಲ್ಲಿ ಹಾಡಹಗಲೇ ರಿಕ್ಷಾ ಚಾಲಕನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ಮಾಹಿತಿ ಲಭ್ಯವಾಗಿದೆ. ಎಂಎಂಎಸ್ ಆಟೋ ಚಾಲಕ ಶರೀಫ್ ಗೆ ಕಾರ್ಯಡಿ ನಿವಾಸಿ ಆಪೀ ಚೂರಿಯಿಂದ ಇರಿದಿದ್ದ. ಹುಡುಗಿ ವಿಚಾರಕ್ಕೆ ಸಂಬಂಧಿಸಿ ಶರೀಫ್ ಜೊತೆ ತಗಾದೆಯನ್ನು ತೆಗೆದ ಆಫೀ ಬಳಿಕ ಚೂರಿಯಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ. ಇಡ್ಕಿದು ಪಂಚಾಯತ್ ಎದುರಲ್ಲಿ ಈ ಘಟನೆ ಸಂಭವಿಸಿತ್ತು. ಗಾಯಗೊಂಡಿರುವ ಶರೀಫ್ ನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ […]

ವಿಟ್ಲ; ಆಟೋ ಚಾಲಕನಿಗೆ ಚೂರಿ ಇರಿತ

ವಿಟ್ಲ; ಆಟೋ ರಿಕ್ಷಾ ಚಾಲಕನಿಗೆ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೋರ್ವ ಚೂರಿಯಿಂದು ಇರಿದು ಗಾಯಗೊಳಿಸಿದ ಘಟನೆ ಉರಿಮಜಲು ಜಂಕ್ಷನ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ. ಎಂಎಂಎಸ್ ಆಟೋ ಚಾಲಕ ಶರೀಫ್ ಗಾಯಗೊಂಡವರು. ಕಾರ್ಯಡಿ ನಿವಾಸಿ ಆಪೀ ಚೂರಿ ಇರಿತದ ಆರೋಪಿಯಾಗಿದ್ದಾನೆ. ಇಡ್ಕಿದು ಪಂಚಾಯತ್ ಎದುರಲ್ಲಿ ಈ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಶರೀಫ್ ನ್ನು ಸ್ಥಳೀಯರು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಉಪ್ಪಿನಂಗಡಿ; ತಂಡದಿಂದ ಹಲ್ಲೆ, ದೂರು ದಾಖಲು

ಉಪ್ಪಿನಂಗಡಿ: ನಾಲ್ವರ ತಂಡವೊಂದು ಯುವಕನಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆ ಬಗ್ಗೆ ತಣ್ಣೀರುಪಂಥ ಗ್ರಾಮದ ಬೋವು ನಿವಾಸಿ ಮಹಮ್ಮದ್ ಶಮ್ಮಾಝ್ ಎಂಬವರು ದೂರು ನೀಡಿದ್ದಾರೆ. ದಕ್ಷಿಣಕಾಶಿ ಅಂಬುಲೆನ್ಸ್‌ ಚಾಲಕ ಸೇರಿ 4 ಮಂದಿ “ಮುಖಕ್ಕೆ, ಬೆನ್ನಿಗೆ ಹೊಡೆದು, ಕಾಲಿನಿಂದ ತುಳಿದು, ಕೊಲ್ಲುವ ಬೆದರಿಕೆ ಒಡ್ಡಿದ್ದಾರೆ” ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಅದರಂತೆ ಉಪ್ಪಿನಂಗಡಿ ಪೊಲೀಸರು 4 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಉಪ್ಪಿನಂಗಡಿ; ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು

ಉಪ್ಪಿನಂಗಡಿ; ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ತುರ್ಕಳಿಕೆ ಎಂಬಲ್ಲಿ ನಡೆದಿದೆ. ಮುಸ್ತಫಾ ಎಂಬವರ ಮಗ ಮೊಹಮ್ಮದ್ ತಂಝೀರ್(14) ಮೃತ ಬಾಲಕ. ಮಧ್ಯಾಹ್ನ ಶಾಲೆಯಿಂದ ಸ್ನೇಹಿತರ ಜೊತೆ ಈಜಲು ತೆರಳಿ ಬಾಲಕ ಅವಘಢಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಮುಸ್ತಫಾ ಅವರ ತಾಯಿ ಇತ್ತೀಚೆಗೆ ನಿಧನ ಹೊಂದಿದ್ದರು. ಆ ಬಳಿಕ‌ ಮುಸ್ತಫಾ ಅವರ ಸಹೋದರನ ಪತ್ನಿ ಅನಾರೋಗ್ಯದಿಂದ ನಿಧನರಾಗಿದ್ದರು. ಇದರ ಬೆನ್ನಲ್ಲೇ ತಂಝೀರ್ ಆಕಸ್ಮಿಕವಾಗಿ ನಿಧನರಾಗಿದ್ದು, ಕುಟುಂಬ ಮತ್ತಷ್ಟು ಆಘಾತಕ್ಕೆ ಒಳಗಾಗಿದೆ.      

ಕಾಸರಗೋಡಿನಲ್ಲಿ ಭೀಕರ ಅಪಘಾತ; ಮಂಗಳೂರು ಕಾಲೇಜು ವಿದ್ಯಾರ್ಥಿ ಮೃತ್ಯು

ನಿಯಂತ್ರಣ ತಪ್ಪಿ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡು ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ ಸುರತ್ಕಲ್ ಎನ್ ಐ ಟಿ ಕೆ ಯ ವಿದ್ಯಾರ್ಥಿ ರಾಯಚೂರು ನಿವಾಸಿ ಆರಿಬುದ್ದೀನ್ (21) ಮೃತರು. ಇನ್ನು ಗಾಯಗೊಂಡವರನ್ನು ಪೂಡಂಕಲ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರವಾಸಿ ಕೇಂದ್ರವಾದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ […]

ಶಾಸಕ ಹರೀಶ್ ಪೂಂಜಾಗೆ ತರಾಟೆಗೆ ತೆಗೆದುಕೊಂಡ ಕ್ಷೇತ್ರದ ಜನ; ವಿಡಿಯೋ ವೈರಲ್

ಮಳೆ ಹಾನಿ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ತಡವಾಗಿ ಭೇಟಿ ನೀಡಿದ್ದು, ಜನರು ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಸವಾಣಾಲಿನಲ್ಲಿ ನಡೆದಿದೆ. ಸ್ವಕ್ಷೇತ್ರದ ಜನರೊಂದಿಗೆಯೇ ಶಾಸಕ ಹರೀಶ್ ಪೂಂಜ ಕಿರಿಕ್ ಮಾಡಿದ್ದಾರೆ. ಎಂಎಲ್‌ಎ ಗೆ ಯಾಕೆ ತಡವಾಗಿ ಬಂದೆ ಎಂದು ಪ್ರಶ್ನೆ ಮಾಡುವ ಹಕ್ಕು ನಿಮಗಿಲ್ಲ, ಆ ತರ ಪ್ರಶ್ನೆ ಮಾಡಿದ್ರೆ ದೇವರ ಮೇಲೆ ಇಡುತ್ತೇನೆ ಎಂದು ಹರೀಶ್ ಪೂಂಜ ಹೇಳಿದ್ದಾರೆ. ತೀವ್ರ ಮಳೆ ಹಾನಿ ಆದ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ […]