Breaking News :

ಪೆರ್ನೆ ಬಳಿ ಖಾಸಗಿ ಬಸ್ಸಿಗೆ ಲಾರಿ ಢಿಕ್ಕಿ; ಲಾರಿ ಚಾಲಕ ಮೃತ್ಯು

ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ ಹಲವರಿಗೆ ಗಾಯಗಳಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬಾ ಸಂಸ್ಥೆಯ ಖಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಕ್ಯಾಂಟರ್ ವಾಹನ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಲಾರಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಸ್ಸಿನಲ್ಲಿದ್ದ […]

ಮೂಡಬಿದ್ರೆ; ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ; ಮೂವರು ಪೊಲೀಸ್ ವಶಕ್ಕೆ

ಮೂಡಬಿದಿರೆ: ಪೊಲೀಸ್‌ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಜಾತಿ ನಿಂದನೆಗೈದ ಆರೋಪದಲ್ಲಿ ಮೂವರನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಒಂಟಿಕಟ್ಟೆ ನಿವಾಸಿಗಳಾದ ಮುಡಾ ಸದಸ್ಯ ಪ್ರಕಾಶ್‌, ಅಬ್ದುಲ್‌ ಸತ್ತಾರ್‌ ಮತ್ತು ವಿಜೇತ್‌ ಎಂದು ತಿಳಿದು ಬಂದಿದೆ. ಮೂಡಬಿದಿರೆ ಪೊಲೀಸ್‌ ಠಾಣೆಯ ಪಿಎಸ್‌ ಐ ಕೃಷ್ಣಪ್ಪ ಎಂಬವರು ಬಸ್‌ ನಿಲ್ದಾಣದ ಬಳಿಯ ರಸ್ತೆಯಲ್ಲಿ ವಾಹನಗಳ ಹೈಮಾಸ್ಟ್‌ ದೀಪಗಳ ಪರಿಶೀಲನೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್‌ ಧರಿಸದೆ ತ್ರಿಪಲ್‌ ರೈಡ್‌ನಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸವಾರರಿಗೆ ಪಿಎಸ್‌ಐ ಬೈದಿದ್ದಾರೆ […]

ಮಣಿಪಾಲ; ಕಾರಿನಲ್ಲಿ ಮಲಗಿದ್ದ ವ್ಯಕ್ತಿ ಉಸಿರುಗಟ್ಟಿ ಮೃತ್ಯು

ಮಣಿಪಾಲ; ಕಾರಿನ ಗ್ಲಾಸ್ ಹಾಕಿ ಕಾರಿನಲ್ಲಿ ಮಲಗಿದ್ದ ಚಾಲಕರೊಬ್ಬರು ಉಸಿರುಗಟ್ಟಿ ಮೃತಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ. ಮೃತಪಟ್ಟವರನ್ನು ಚಿಕ್ಕಮಗಳೂರಿನ ಆನಂದ(37) ಎಂದು ಗುರುತಿಸಲಾಗಿದೆ. ಆನಂದರವರು ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದು, ರೋಗಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ರಾತ್ರಿ ಉಳಿದುಕೊಳ್ಳಲು ಯಾವುದೇ ರೂಮ್ ಸಿಗದ ಕಾರಣ ಚಾಲಕ ಆನಂದರವರು ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರಿನಲ್ಲಿಯೇ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಇವರು, ಒಳಗಡೆ ಉಸಿರುಗಟ್ಟಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. […]

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಬೆಳ್ತಂಗಡಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ, ಮಹಾತ್ಮ ಗಾಂಧೀಜಿಯ ಕುರಿತು ಅವಮಾನದ ರೀತಿಯಲ್ಲಿ ಭಾಷಣ ಮಾಡಿದ್ದು, ಸಮಾಜದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಲ್ಲಿ ಕಂದಕವನ್ನು ಸೃಷ್ಟಿ ಮಾಡಿ ಸಮಾಜದ ನೆಮ್ಮದಿ ಮತ್ತು ಶಾಂತಿಯನ್ನು ಕದಡಲು ಪ್ರೇರಣೆ ನೀಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಅವರ ನೇತೃತ್ವದ ನಿಯೋಗ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದೆ. ಬೆಳ್ತಂಗಡಿಯ ಆಡಳಿತ ಸೌಧದ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.  ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ […]

ಮತ್ತೆ ಭೂಕುಸಿತ; ಮಂಗಳೂರು- ಬೆಂಗಳೂರು ರೈಲು ಸಂಚಾರ ಬಂದ್

ಹಾಸನ; ಸಕಲೇಶಪುರ ತಾಲೂಕಿನ ಆಚಂಗಿ-ದೊಡ್ಡನಾಗರ ಬಳಿ ರೈಲ್ವೆ ಹಳಿ ಮೇಲೆ ಮತ್ತೆ ಭೂಕುಸಿತವಾಗಿದೆ. ಹೀಗಾಗಿ ಬೆಂಗಳೂರು-ಮಂಗಳೂರು ನಡುವಿನ ರೈಲುಗಳ ಸಂಚಾರ ಸ್ಥಗಿತವಾಗಿದೆ. ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿತ್ತು. ಬಳಿಕ ಮಣ್ಣು ತೆರವು ಮಾಡಿ ರೈಲು ಸಂಚಾರ ಆರಂಭ ಮಾಡಲಾಗಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ಮಣ್ಣು ಕುಸಿತವಾಗಿದೆ. ಭೂಕುಸಿತದಿಂದಾಗಿ ಮಾರ್ಗಮಧ್ಯೆ ಯಶವಂತಪುರ-ಕಾರವಾರ ಎಕ್ಸ್‌ಪ್ರೆಸ್‌ ರೈಲು ಬಾಳ್ಳುಪೇಟೆ ಬಳಿ ನಿಂತುಕೊಂಡಿದೆ. ಘಟನಾ ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದು ಪರಿಶೀಲನೆ ಮಾಡಿದ್ದಾರೆ.

ಮಂಗಳೂರು; ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಶಾಲಾ ಶಿಕ್ಷಕಿ ಶಾಹಿದಾ ಮೃತ್ಯು

ಮಂಗಳೂರು ಬಂದರ್ ನಲ್ಲಿ  ನಡೆದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೋರ್ವರು ಮೃತಪಟ್ಟಿರುವ ಘಟನೆ ನಡೆದಿದೆ. ನಗರದ ಬೆಂಗರೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಶಾಹಿದಾ ಮೃತಪಟ್ಟವರು. ಇವರ ಪತಿ ಪೊಲೀಸ್‌ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ಶಾಲೆಗೆ ಹೋಗಿದ್ದ ಶಾಹಿದಾ ಅವರು, ಅನಾರೋಗ್ಯದ ಹಿನ್ನಲೆಯಲ್ಲಿ ಮರಳಿ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಕಾರೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಫರಂಗಿಪೇಟೆಯಲ್ಲಿ ಬೆಂಗಳೂರಿನಿಂದ ಬರುತ್ತಿದ್ದ ಬಸ್ ಪಲ್ಟಿ; ಹಲವರಿಗೆ ಗಾಯ

ಬಂಟ್ವಾಳ: ಬೆಂಗಳೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 10ಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಬಳಿ ನಡೆದಿದೆ. ಘಟನೆಯಿಂದ ಗಾಯಗೊಂಡವರ ಹೆಸರು ವಿಳಾಸದ ಮಾಹಿತಿ ಯಾವುದು ಕೂಡಾ ‌ಲಭ್ಯವಾಗಿಲ್ಲ. ಗಾಯಗೊಂಡ ಎಲ್ಲರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯ ಯುವಕರು ಗಾಯಗೊಂಡವರನ್ನು ಬಸ್ಸಿನಿಂದ ಹೊರತೆಗೆದು ರಸ್ತೆಯಲ್ಲಿ ಸಾಗುತ್ತಿದ್ದ ವಾಹನಗಳಲ್ಲಿ ಆಸ್ಪತ್ರೆಗೆ ಸೇರಿಸಲಾಯಿತು. ಸ್ಥಳಕ್ಕೆ ಬಂಟ್ವಾಳ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಟ್ಲ; ನಿಯಂತ್ರಣ ಕಳೆದುಕೊಂಡು ಅಂಗಡಿಗೆ ಢಿಕ್ಕಿ ಹೊಡೆದ ಕಾರು; ಓರ್ವನಿಗೆ ಗಾಯ

ವಿಟ್ಲ:  ಚಾಲಕನ ನಿಯಂತ್ರಣ ಕಳೆದುಕೊಂಡು ಕಾರೊಂದು ಅಂಗಡಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಾಯಗೊಂಡು ಅಂಗಡಿ ಸಂಪೂರ್ಣವಾಗಿ ಧ್ವಂಸಗೊಂಡ ಘಟನೆ ವಿಟ್ಲ-ಕಾಸರಗೋಡು ರಸ್ತೆಯ ಕಾಶಿಮಠ ಎಂಬಲ್ಲಿ ನಡೆದಿದೆ. ಉಕ್ಕುಡ ಕಡೆಯಿಂದ ಬಂದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಯೋಗೀಶ ಕಾಶಿಮಠ ಎಂಬವರಿಗೆ ಸೇರಿದ ಅಂಗಡಿಗೆ ಢಿಕ್ಕಿ ಹೊಡೆದಿದೆ. ಕಾರು ಚಾಲಕ ಮದ್ಯ ಸೇವಿಸಿ ಕಾರು ಚಲಾಯಿಸಿದ ಪರಿಣಾಮ ಕಾರು ರಸ್ತೆಯಿಂದ ಬದಿಗೆ ಸರಿದು ಅಂಗಡಿಗೆ ಢಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಬಂಟ್ವಾಳ; ಡ್ರಾಪ್ ಕೊಡುವ ನೆಪದಲ್ಲಿ ನಗ, ನಗದು ದೋಚಿ ಪರಾರಿಯಾದ ಗ್ಯಾಂಗ್

ಡ್ರಾಪ್ ಕೊಡುವ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಕಾರಿನಲ್ಲಿ ಕುಳ್ಳಿರಿಸಿ ತಂಡವೊಂದು ನಗದು ದೋಚಿ ಕಾರಿನಿಂದ ತಳ್ಳಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಕೊಡಗಿನ ವಿರಾಜಪೇಟೆ ನಿವಾಸಿಯಾಗಿರುವ ಎಂ. ಗಂಗಾಧರ ಅವರು ನಗ ನಗದು ಕಳೆದು ಕೊಂಡ ವ್ಯಕ್ತಿಯಾಗಿದ್ದು, ಇವರು ಕಳೆದ ಶುಕ್ರವಾರ ವಿರಾಜಪೇಟೆಯಿಂದ ಬಿಸಿ ರೋಡ್‌ ಗೆ ರಾತ್ರಿ ಸುಮಾರು ಒಂಬತ್ತು ಗಂಟೆಯ ವೇಳೆಗೆ ಬಂದಿದ್ದರು. ಬಂಟ್ವಾಳದ ನರಿಕೊಂಬಿನಲ್ಲಿರುವ ಅಣ್ಣನ ಮನೆಗೆ ತೆರಳಲು ಬಿ.ಸಿ.ರೋಡ್ ನಲ್ಲಿ ವಾಹನಕ್ಕಾಗಿ ಕಾಯುತ್ತಿದ್ದರು. ಈ ವೇಳೆ ಅದೇ ದಾರಿಯಲ್ಲಿ ಅಪರಿಚಿತ ಕಾರೊಂದು […]

ಮಂಗಳೂರು: ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ; ಇಬ್ಬರ ಬಂಧನ

ಮಂಗಳೂರು: ವಿದೇಶದಲ್ಲಿರುವ ಸೈಬರ್‌ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ನಗರ ಸೆನ್‌ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಏರ್‌ಟೆಲ್‌ ಕಂಪೆನಿಯ 86 ಸಿಮ್‌ಕಾರ್ಡಗಳು, 2 ಮೊಬೈಲ್‌ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ.ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬೆಳ್ತಂಗಡಿಯ ಶಮದ್‌ ಮಹಮ್ಮದ್‌ ಸಮರ್‌ (26) ಮತ್ತು ಮಹಮ್ಮದ್‌ ಅಜೀಂ(19) ಬಂಧಿತರು. ಶಮದ್‌ ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ಬಾಡಿಗೆ ಮನೆಯಲ್ಲಿದ್ದ. ಮಹಮ್ಮದ್‌ ಅಜೀಂ ಕೂಡ ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದ ಎಂದು ವರದಿಯಾಗಿದೆ. ಇವರು […]