ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆ

ಮಂಗಳೂರು: ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯು ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅದ್ಯಕ್ಷತೆಯಲ್ಲಿ ಬಿ ಸಿ ರೋಡ್ ನಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಪಕ್ಷದ ಆಂತರಿಕ ಚುನಾವಣೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಲತೀಫ್ ಪುತ್ತೂರು, ಅಬ್ದುಲ್ ಮಜೀದ್ ತುಂಬೆ, ರಾಜ್ಯ ಸಮಿತಿ ಸದಸ್ಯರಾದ […]
ಮಂಗಳೂರು; ಆಟೋ ಚಲಾಯಿಸುತ್ತಿದ್ದಾಗ ಹೃದಯಾಘಾತವಾಗಿ ರಿಕ್ಷದಿಂದ ಬಿದ್ದು ಮೃತಪಟ್ಟ ಚಾಲಕ

ಮಂಗಳೂರು; ರಿಕ್ಷಾ ಚಲಾಯಿಸುತ್ತಿದ್ದಾಗ ಚಾಲಕ ಹೃದಯಾಘಾತದಿಂದ ರಸ್ತೆಗೆ ಬಿದ್ದಿದ್ದು, ಚಾಲಕ ಮೃತಪಟ್ಟು ಮಹಿಳೆಯೋರ್ವರು ಪವಾಡ ಸದೃಶ್ಯವಾಗಿ ಬದುಕುಳಿದ ಘಟನೆ ಕೋಟೆಕಾರಿನಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44)ಹೃದಯಾಘಾತದಿಂದ ಮೃತಪಟ್ಟ ರಿಕ್ಷಾ ಚಾಲಕ. ಮಜೀದ್ ಮಂಗಳವಾರ ಮಧ್ಯಾಹ್ನ 12 ಗಂಟೆಯ ವೇಳೆ ಧರ್ಮನಗರದಿಂದ ಸಂಬಂಧಿಕರಾದ ಮಹಿಳೆಯರಿಬ್ಬರನ್ನು ತನ್ನ ಆಟೋ ರಿಕ್ಷಾದಲ್ಲಿ ಕುಳ್ಳಿರಿಸಿ ಸೋಮೇಶ್ವರ ಮಾರ್ಗವಾಗಿ ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿ ರಸ್ತೆಗೆ ಬಿದ್ದಿದ್ದಾರೆ. ಚಾಲಕನಿಲ್ಲದೆ ಮುಂದೆ ಚಲಿಸಿದ […]
ಮಂಗಳೂರು; NSUIಗೆ ವಿದ್ಯಾರ್ಥಿಗಳ ಸೇರ್ಪಡೆ ಕಾರ್ಯಕ್ರಮ

NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯೆನೆಪೋಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಸೇರ್ಪಡೆ ಕಾರ್ಯಕ್ರಮವು NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ನಡೆಯಿತು. ವಿದ್ಯಾರ್ಥಿಗಳನ್ನುದ್ದೇಶಿಸಿ NSUI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಝಾಕೀರ್ ಹುಸೇನ್ ಮಾತನಾಡಿದರು. ದ.ಕ ಜಿಲ್ಲಾ ಕಾಂಗ್ರೆಸ್ ವಕ್ತಾರ ಮೌಸೀರ್ ಸಾಮಣಿಗೆ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ದ.ಕ ಜಿಲ್ಲಾ ಕಾಂಗ್ರೆಸ್ NSUI ರಾಜ್ಯ ಪ್ರಧಾನ ಕಾರ್ಯದರ್ಶಿ ಬಾತೀಷ್ ಅಳಕೆಮಜಲು, NSUI ಮುಖಂಡರಾದ ತನುಷ್ […]
ಕಲ್ಲಾಪು: ಸಮೀರ್ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ವಶಕ್ಕೆ

ಉಳ್ಳಾಲದಲ್ಲಿ ಕಡಪ್ಪರ ಸಮೀರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಮೊಹಮ್ಮದ್ ನೌಷದ್ ಈ ಕೊಲೆಯ ಪ್ರಮುಖ ರೂವಾರಿಯಾಗಿದ್ದು, ಆತನ ತಂಡ ಈ ಕೃತ್ಯ ಎಸಗಿದೆ ಎನ್ನಲಾಗಿದೆ. ಈ ಕೊಲೆಯಲ್ಲಿ ನೌಷದ್‌ನೊಂದಿಗೆ ನಾಟೇಕಲ್‌ನ ನಿಯಾಝ್, ಬಜಾಲ್‌ನ ತನ್ವೀರ್, ಪಡುಬಿದ್ರೆಯ ಇಕ್ಬಾಲ್ ಸಹಕರಿಸಿರುವ ಬಗ್ಗೆ ಮಾಹಿತಿಯಿದ್ದು, ಅವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕವಾಗಿ ಇಲ್ಯಾಸ್ ಕೊಲೆಗೆ ಪ್ರತಿಕಾರವಾಗಿ ಕೊಲೆ ನಡೆದಿರುವುದು ದೃಡಪಟ್ಟಿದೆ. ಈ ಕುರಿತು ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. […]
ಮಂಗಳೂರಿನ ಯುವಕ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತ್ಯು

ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮೃತಪಟ್ಟ ಯುವಕನನ್ನು ಉಮ್ಮರ್ ಎಂಬವರ ಪುತ್ರ ನೌಫಲ್(25) ಎಂದು ಗುರುತಿಸಲಾಗಿದೆ. ಅಬುಧಾಬಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಕೆಲಸಮಾಡುತ್ತಿದ್ದ ನೌಫಲ್ ಕಟ್ಟಡವೊಂದರಲ್ಲಿ ಕೆಲಸ ಮಾಡುವಾಗ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮೂಡಬಿದ್ರೆ; ಕಾಲೇಜಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಲ್ಲಿ ಇರಿತ ಪ್ರಕರಣ; ಆರೋಪಿ ಅರೆಸ್ಟ್, ತನಿಖೆಯ ವೇಳೆ ಮಹತ್ವದ ಅಂಶಗಳು ಬಯಲು

ಪ್ರೇಮ ಪೈಫಲ್ಯದಿಂದ ವಿದ್ಯಾರ್ಥಿನಿಗೆ ಕತ್ತರಿಯಿಂದ ಯುವಕ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ನಡೆದಿದೆ. ನಿನ್ನೆ ಮುಂಜಾನೆ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಘಟನೆ ನಡೆದಿದ್ದು, ತುಮಕೂರು ಮೂಲದ ಮಂಜುನಾಥ್‌ನನ್ನು ಮೂಡಬಿದಿರೆ ಪೋಲೀಸರು ಬಂಧಿಸಿದ್ದಾರೆ. ಆಳ್ವಾಸ್‌ನಲ್ಲಿ ಪಿಯುಸಿ ಓದುತ್ತಿರುವ ತುಮಕೂರು ಮೂಲದ ವಿದ್ಯಾರ್ಥಿನಿಗೆ ಕತ್ತರಿಯಿಂದ ಮಂಜುನಾಥ್ ಇರಿದಿದ್ದಾನೆ. ಮಂಜುನಾಥ್ ಹಾಗು ಯುವತಿ ಪಿಯುಸಿ ತನಕ ಜೊತೆಯಲ್ಲೇ ವಿದ್ಯಾಭ್ಯಾಸ ನಡೆಸಿದ್ದರು. ವಿದ್ಯಾರ್ಥಿನಿ ಮೆಸೇಜ್‌ಗೆ ಉತ್ತರಿಸುತ್ತಿಲ್ಲ ಎಂದು ಕುಪಿತಗೊಂಡಿದ್ದ ಯುವಕ ಮಂಜುನಾಥ್, ತುಮಕೂರಿನಿಂದ ಮೂಡಬಿದರೆಗೆ ಬಂದಿದ್ದ. ಜೊತೆಗೆ ಯುವತಿಯ ಭೇಟಿಗೆ […]
ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾಗೆ ಕೆಂಪುಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ಆಹ್ವಾನ

ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ದ.ಕ.ಜಿಲ್ಲೆಯ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಅವರನ್ನು ಆಹ್ವಾನಿಸಲಾಗಿದ್ದು ವಿಶೇಷ ಅತಿಥಿಯಾಗಿ ಅವರು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಳೆದ ಒಂದು ವರ್ಷದಿಂದ ಸೇವೆ ಸಲ್ಲಿಸುತ್ತಿರುವ ನಫೀಸಾ ಅವರು ಹಿಂದಿನ ಅವಧಿಯಲ್ಲಿ ಎರಡೂವರೆ ವರ್ಷ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಗ್ರಾ.ಪಂ ಉಪಾಧ್ಯಕ್ಷರಾಗಿದ್ದ ಸಂದರ್ಭದಲ್ಲಿ ತ್ಯಾಜ್ಯ ವಿಲೇವಾರಿ ವಾಹನವನ್ನು ಸ್ವತಃ ಚಲಾಯಿಸಿ ತ್ಯಾಜ್ಯ ಸಂಗ್ರಹಿಸಿ ಗಮನ ಸೆಳೆದಿದ್ದ ಅವರು ಅನೇಕ ಗೌರವಗಳನ್ನು ಸ್ವೀಕರಿಸಿದರು. […]
ಕಡಪ್ಪರ ಸಮೀರ್ ಕೊಲೆ ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ, ಸಮೀರ್ ಪತ್ನಿ ನೀಡಿದ ದೂರಿನಲ್ಲಿ ಏನೇನಿದೆ ಗೊತ್ತಾ?

ಮಂಗಳೂರು: ರೌಡಿ ಶೀಟರ್ ಕಡಪ್ಪರ ಸಮೀರ್ (33)ನನ್ನು ದುಷ್ಕರ್ಮಿಗಳ ತಂಡವೊಂದು ಕಲ್ಲಾಪು ಬಳಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆಗೈದಿತ್ತು. ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸಮೀರ್ ಕೊಲೆ ಪ್ರಕರಣದ ಆರೋಪಿಗಳ ಪತ್ತೆಗಾಗಿ ಇದೀಗ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ರೌಡಿ ಶೀಟರ್ ಆಗಿರುವ ಸಮೀರ್ ವಿರುದ್ಧ ಉಳ್ಳಾಲ ಸಹಿತ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 9 ಪ್ರಕರಣಗಳು ದಾಖಲಾಗಿವೆ. ದರೋಡೆ ಪ್ರಕರಣವೊಂದರಲ್ಲಿ ಸಮೀರ್ ಇತ್ತೀಚೆಗೆ ಜೈಲು ಪಾಲಾಗಿದ್ದ. ಜು.1ರಂದು ಮಂಗಳೂರಿನ ಜೈಲಿನಲ್ಲಿ ನಡೆದ […]
ಒರಿಯರ್ದೊರಿ ಅಸಲ್ ಖ್ಯಾತಿಯ ತುಳು ರಂಗಭೂಮಿ ಕಲಾವಿದ ಅಶೋಕ್ ಶೆಟ್ಟಿ ಇನ್ನಿಲ್ಲ

ಮಂಗಳೂರು; ಖ್ಯಾತ ತುಳು ರಂಗಭೂಮಿ ಕಲಾವಿದ, ಒರಿಯರ್ದೊರಿ ಅಸಲ್ ತುಳು ಸಿನಿಮಾದ ಖ್ಯಾತಿಯ ಅಶೋಕ್ ಶೆಟ್ಟಿ ಅಂಬ್ಲಮೊಗರು ಅವರು ಇಂದು ನಿಧನರಾಗಿದ್ದಾರೆ. ಅಂಬ್ಲಮೊಗರುವಿನ ಮನೆಯಲ್ಲಿ ಅಸ್ವಸ್ಥರಾಗಿದ್ದ ಅಶೋಕ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತ ಪಟ್ಟಿದ್ದಾರೆ. ವೃತ್ತಿಪರ ಕಲಾವಿದರಾದ ಅಶೋಕ್ ಅವರು ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರ ಕಲಾಸಂಗಮ ನಾಟಕ ತಂಡದಲ್ಲಿ ಕಲಾ ಸೇವೆ ಸಲ್ಲಿಸಿದ್ದರು. ಇವರ ಅಗಲಿಕೆಗೆ ತುಳು ಸಿನಿಮಾರಂಗದ ಗಣ್ಯರು ಸೇರಿದಂತೆ ಹಲವರು ಸಂತಾಪವನ್ನು ಸೂಚಿಸಿದ್ದಾರೆ.
ವಿಟ್ಲ; ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಠಾಣೆಗೆ ಹಿಂಜಾವೇ ಮುಖಂಡರು ಭೇಟಿ

ವಿಟ್ಲ : ಜನರಲ್ ಸ್ಟೋರ್ ಗೆ ತೆರಳಿದ ಬಾಲಕಿ ಮೇಲೆ ಅಂಗಡಿ ಮಾಲಕನೋರ್ವ ಲೈಂಗಿಕ ದೌರ್ಜನ್ಯ ವೆಸಗಿರುವ ಆರೋಪ ವಿಟ್ಲ ಸಮೀಪದ ಕುದ್ದು ಪದವಿನಿಂದ ಕೇಳಿ ಬಂದಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಿಂದೂ ಜಾಗರಣ ವೇದಿಕೆ ಮುಖಂಡರು ವಿಟ್ಲ ಠಾಣೆಗೆ ಭೇಟಿ ನೀಡಿದ್ದಾರೆ. ವಿಟ್ಲ ಸಮೀಪದ ಕುದ್ದು ಪದವಿನಲ್ಲಿ ಜನರಲ್ ಸ್ಟೋರ್ ಅಂಗಡಿಗೆ ತೆರಳಿದ್ದ ಅಪ್ರಾಪ್ತ ಬಾಲಕಿಗೆ ಅಂಗಡಿ ಮಾಲಕ ಲೈಂಗಿಕ ದೌರ್ಜನ್ಯ ವೆಸಗಿರುವ ಆರೋಪ ಕೇಳಿ ಬಂದಿದೆ. ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ […]