Breaking News :

ಭಾರೀ ಮಳೆ ಹಿನ್ನೆಲೆ; ಆ.1ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯಲ್ಲಿ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶವನ್ನು ನೀಡಿದ್ದಾರೆ.    

ಉಡುಪಿ; ಖಾಸಗಿ ಬಸ್ ಗಳೆರಡರ ನಡುವೆ ಅಪಘಾತ; ಹಲವರಿಗೆ ಗಾಯ

ಉಡುಪಿ: ಖಾಸಗಿ ಬಸ್‌ಗಳೆರಡರ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಮುಂಜಾನೆ ಇಂದ್ರಾಳಿಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ದುರ್ಗಾಂಬ ಬಸ್‌ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ(ಜು.31)ರಂದು ರಜೆ ಘೋಷಣೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜು.31) ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ.  

ವಿಟ್ಲ; ನೆಲ್ಲಿಗುಡ್ಡೆಯಲ್ಲಿ ಭಾರೀ ಮಳೆಗೆ ಕಂಪೌಂಡ್ ಕುಸಿತ; ಮನೆಗೆ ಹಾನಿ

ವಿಟ್ಲ: ಭಾರೀ ಮಳೆಗೆ ಕಂಪೌಂಡು ಕುಸಿದು ಮನೆಗೆ ಹಾನಿಯಾದ ಘಟನೆ ವಿಟ್ಲದ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ. ಹಮೀದ್ ಎಂಬವರ ಮನೆಯ ಕಂಪೌಂಡು ಕುಸಿದು ಮನೆಗೆ ಹಾನಿಯಾಗಿದ್ದು, ಮಳೆ ನೀರು ಮನೆ ಒಳಗೆ ನುಗ್ಗಿ ಅಪಾರ ಹಾನಿಯಾಗಿದೆ. ಸ್ಥಳಕ್ಕೆ ಪ.ಪಂ ಮುಖ್ಯಧಿಕಾರಿ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ.ಪಂ ಸದಸ್ಯ ಕರುಣಾಕರ ನಾಯ್ತೊಟ್ಟು, ಹಸೈನಾರ್ ಸೇರಿದಂತೆ ಹಲವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.        

ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ‌. ಶಿವಾನಂದ ಮೃತಪಟ್ಟ ಸ್ಕೂಟರ್ ಸವಾರ. ಶಿವಾನಂದ ಅವರು ಸ್ಕೂಟರ್ ನಲ್ಲಿ ಕೆಪಿಟಿಯಿಂದ ನಂತೂರು ಜಂಕ್ಷನ್ ಕಡೆಗೆ ಹೋಗುತ್ತಿದ್ದರು. ಈ ವೇಳೆ ನಂತೂರಿನಿಂದ ಕೆಪಿಟಿ ಕಡೆಗೆ ನಿರ್ಲಕ್ಷ್ಯತನದಿಂದ ಟ್ಯಾಂಕರನ್ನು ಚಲಾಯಿಸಿಕೊಂಡು ಬಂದ ಚಾಲಕ ಸ್ಕೂಟರ್ ನ ಬಲಭಾಗಕ್ಕೆ ಢಿಕ್ಕಿ ಹೊಡೆದಿದ್ದಾನೆ. ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಕೂಟರ್ ಸಮೇತ ರಾಷ್ಟ್ರೀಯ ಹೆದ್ದಾರಿಗೆ ಎಸೆಯಲ್ಪಟ್ಟಿದ್ದಾನೆ. ಇದಲ್ಲದೆ ಟ್ಯಾಂಕರ್ […]

ಪುತ್ತೂರು; ಪೊಲೀಸರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ; ಯುವಕನಿಂದ ಆರೋಪ

ಪುತ್ತೂರು; ಮನೆಗೆ ನುಗ್ಗಿ ಪೊಲೀಸರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಯುವಕನೋರ್ವ ಆರೋಪಿಸಿದ್ದಾರೆ.  ಈಶ್ವರಮಂಗಲ ಪಂಚೋಡಿ ನಿವಾಸಿ, ಪುತ್ತೂರು ಕಂಪೆನಿಯೊಂದರಲ್ಲಿ ಎಸಿ ಟೆಕ್ನೀಷಿಯನ್‌ ಆಗಿರುವ ಭ್ರಮೀಷ್‌ ಅವರಿಗೆ ಮನೆಗೆ ನುಗ್ಗಿ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಭ್ರಮೀಷ್‌ ಹಲ್ಲೆ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಾನು ರಾತ್ರಿ ಗಂಟೆ 11ಕ್ಕೆ ಮನೆಯಲ್ಲಿ ಮಲಗಿದ್ದೆ. ಈ ವೇಳೆ ಬಾಗಿಲು ಬಡಿದ ಶಬ್ದ ಆಯಿತು. ಬಾಗಿಲು ತೆರೆದಾಗ ಲೈಟ್‌ ಹಾಕಿ ಮನೆಯಲ್ಲಿ ಯಾರು ಇಲ್ಲವಾ ಎಂದು […]

ಉಪ್ಪಿನಂಗಡಿ; ಪತ್ನಿಗೆ ಚೂರಿಯಿಂದ ಇರಿದು ಪತಿ ಪರಾರಿ; ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಉಪ್ಪಿನಂಗಡಿ: ಪತ್ನಿಗೆ ಚೂರಿಯಿಂದ ಇರಿದು ಆರೋಪಿಯೋರ್ವ ಪರಾರಿಯಾಗಿದ್ಸು, ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಜೋರು ಕಟ್ಟೆಯ ನಿವಾಸಿ ಮುಹಮ್ಮದ್‌ ಅವರ ಪುತ್ರಿ ಸಜರಾ (40) ಇರಿತಕ್ಕೊಳಗಾದವರು. ಈಕೆಯ ಪತಿ ಮಡಂತ್ಯಾರು ಸಮೀಪದ ಕೊಲತ್ತಬೈಲು ಮಾಲಾಡಿ ನಿವಾಸಿ ಹಕೀಂ ಹಲ್ಲೆ ಆರೋಪಿ. ಹಕೀಂ ಮತ್ತು ಸಜರಾ ವಿವಾಹ 15 ವರ್ಷಗಳ ಹಿಂದೆ ನಡೆದಿದ್ದು, ಮದುವೆಯಾದ ಕೆಲವು ವರ್ಷಗಳ ಬಳಿಕ ಹಕೀಂ ಪತ್ನಿಗೆ ಹಿಂಸೆ ನೀಡಲು ಆರಂಭಿಸಿದ್ದ. ಈ ಹಿನ್ನೆಲೆಯಲ್ಲಿ ಸಜರಾ ಮೂರು ವರ್ಷದಿಂದ […]

ಬಜ್ಪೆ; ಅಕ್ರಮವಾಗಿ ಗೋವಿನ ಮಾಂಸ ಸಾಗಾಟ; ಇಬ್ಬರ ಬಂಧನ

ಬಜ್ಪೆ: ಅಕ್ರಮವಾಗಿ ಗೋವಿ‌ನ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ಮೂಡುಬಿದ್ರೆಯ ಹಂಡೇಲು ನಿವಾಸಿಗಳಾದ ಆರೀಫ್ (24) ಹಾಗೂ ಸುಲ್ತಾನ್ (19) ಎಂದು ಗುರುತಿಸಲಾಗಿದೆ. ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಬಂಧಿತರಿಂದ ದನದ ಮಾಂಸ ಹಾಗು ಕಾರ‌ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಜ್ಪೆ ಪೊಲೀಸ್ ಠಾಣೆಯ ಪಿ.ಎಸ್.ಐ ರೇವಣಸಿದ್ದಪ್ಪ ಅವರು ಸಿಬ್ಬಂದಿಯೊಂದಿಗೆ ಬಡಗ ಎಡಪದವು ಗ್ರಾಮದ ಬೈತಾರಿ ಎಂಬಲ್ಲಿ ಗೋಪಾಲಕೃಷ್ಣ ಭಜನಾ ಮಂದಿರದ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಆರೋಪಿಗಳನ್ನು […]

ಪುತ್ತೂರು; ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ; ಇಬ್ಬರ ಬಂಧನ

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ  ಹೊಡೆದಾಡಿಕೊಂಡು ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಪಂಚೋಡಿ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಸಂಪ್ಯ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಭಾನುವಾರ ರಾತ್ರಿ ವೇಳೆ ಪಂಚೋಡಿ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ರಾಜೇಶ್ ಪಂಚೋಡಿ, ಪ್ರವೀಶ್ ನಾಯರ್, ರಾಕೇಶ್ ಪಂಚೋಡಿ, ಜಯರಾಜ್, ಪ್ರಜ್ವಲ್ ಮಡ್ಯಳಮಜಲು, ಸಂಜನ್ ರೈ ಹೊಡೆದಾಡಿಕೊಂಡಿದ್ದಾರೆ. ಈ ಪೈಕಿ ರಾಕೇಶ್ ಪಂಚೋಡಿ ಎಂಬಾತ ತಲ್ವಾರ್ ಹಿಡಿದುಕೊಂಡು ಹಲ್ಲೆಗೆ ಯತ್ನಿಸಿರುವುದಾಗಿ ತಿಳಿದು ಬಂದಿದೆ. ಸಂಪ್ಯ ಠಾಣೆ ಎಸ್‌ಐ ಜಂಬೂರಾಜ್ ಬಿ.ಮಹಾಜನ್ ನೇತೃತ್ವದ ಪೊಲೀಸರು […]

ಕಡಬ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

-ಮುಸ್ತಫಾ ಆತ್ಮಹತ್ಯೆ ಮಾಡಿಕೊಂಡ ಯುವಕ ಕಡಬ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದ ಕಳಾರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಳಾರ ನಿವಾಸಿ ಮುಸ್ತಫಾ( 33) ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಮುಸ್ತಫಾ ಅವರನ್ನು ಹುಡುಕಾಟ ನಡೆಸಿದಾಗ ಹಳೆಯ ಮನೆಯೊಂದರಲ್ಲಿ ಮೊಬೈಲ್ ರಿಂಗ್ ಆಗುತ್ತಿತ್ತು. ಸ್ಥಳಕ್ಕೆ ಹೋಗಿ ನೋಡಿದಾಗ ಮುಸ್ತಫಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮುಸ್ತಫಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.   […]