Breaking News :

ಮಾಣಿ; ಜ್ವರದಿಂದ 22 ವರ್ಷದ ಯುವಕ ಮೃತ್ಯು

ಯುವಕನೋರ್ವ ಅನಾರೋಗ್ಯದಿಂದ ನಿಧನರಾದ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಪಂತಡ್ಕದಲ್ಲಿ ನಡೆದಿದೆ. ನೇರಳಕಟ್ಟೆ ಪಂತಡ್ಕದ ಹನೀಫ್ ಎಂಬವರ ಪುತ್ರ ಬಾತಿಷಾ(22) ಮೃತಪಟ್ಟ ಯುವಕ. ಇವರು ಮಂಗಳೂರಿನಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇಂದು ಮೃತಪಟ್ಟಿದ್ದಾರೆ. ಯುವಕ ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಮೃತದೇಹ ಮಂಗಳೂರಿನ ಆಸ್ಪತ್ರೆಯಲ್ಲಿದ್ದು, ಮನೆಗೆ ತರಲು ಸಿದ್ಧತೆ ನಡೆಯುತ್ತಿದೆ            

ವಿಟ್ಲ; ಕಾಡಿನಲ್ಲಿ ರೊಮ್ಯಾನ್ಸ್ ಮೂಡಿನಲ್ಲಿ ಸಿಕ್ಕಿಬಿದ್ದ ಜೋಡಿ

ಜೋಡಿಯೊಂದು ಕಾಡಿನಲ್ಲಿ ರೊಮ್ಯಾನ್ಸ್ ಮೂಡಿನಲ್ಲಿದ್ದ ವೇಳೆ ಸಾರ್ವಜನಿಕರಿಗೆ ಸಿಕ್ಕಿಬಿದ್ದ ಘಟನೆ ವಿಟ್ಲ ಸಮೀಪದ ಕಳೆಂಜಿಮಲೆಯಲ್ಲಿ ನಡೆದಿದೆ. ನಿನ್ನೆ ಸಂಜೆ ಜೋಡಿಯೊಂದು ಕಳೆಂಜಿಮಲೆ ಕಾಡಿಗೆ ಬಂದಿರುವುದು ಸಾರ್ವಜನಿಕರ ಗಮನಕ್ಕೆ ಬಂದಿದೆ. ಹಾಗಾಗಿ ಅವರನ್ನು ಪತ್ತೆಹಚ್ಚಲು ಹೊರಟಾಗ ಜೋಡಿ ರೊಮ್ಯಾನ್ಸ್ ಮೂಡಿನಲ್ಲಿರುವುದು ಕಂಡುಬಂದಿದೆ. ತಕ್ಷಣ ಎಚ್ಚೆತ್ತ ಜೋಡಿ ಸಾರ್ವಜನಿಕರನ್ನು ಕಂಡು ಅರೆಬರೆ ಬಟ್ಟೆಯಲ್ಲೇ ಓಡಿ ಹೋಗಿದ್ದಾರೆ. ಬಳಿಕ ಅಲ್ಲಿನ ಸ್ಥಳೀಯರು ವಿಟ್ಲ ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾಡಿನಲ್ಲಿದ್ದ ಬೈಕ್, ಯುವತಿಯ ಬ್ಯಾಗ್, ಮಾತ್ರೆ, ಕಾಂಡೋಮ್, ಚಪ್ಪಲಿಗಳನ್ನು […]

ಮಂಗಳೂರು ಜೈಲಿನ ಮೇಲೆ 150ಕ್ಕೂ ಅಧಿಕ ಪೊಲೀಸರು ದಾಳಿ

ಮಂಗಳೂರು: ಬೆಳ್ಳಂ ಬೆಳಗ್ಗೆ ಮಂಗಳೂರು ಪೊಲೀಸರು  ಜೈಲಿನ ಮೇಲೆ ದಾಳಿ ಮಾಡಿದ್ದು, ಈ ವೇಳೆ ಗಾಂಜಾ, ಡ್ರಗ್ಸ್ , ಮೊಬೈಲ್​ ಫೋನ್​ಗಳು, ಡಿವೈಸ್​ಗಳು ಪತ್ತೆಯಾಗಿವೆ. ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಜೈಲು ಖೈದಿಗಳ ಜೊತೆಗಿದ್ದ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೇಟ್​ಗಳನ್ನು ಕೂಡಾ ವಶಕ್ಕೆ ಪಡೆಯಲಾಗಿದೆ. […]

ಸುರತ್ಕಲ್: ಜೋಕಟ್ಟೆಯಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ಬಾಲಕ ಮೃತ್ಯು

ಸುರತ್ಕಲ್; ಭಾರೀ ಗಾಳಿ-ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು ಅಪ್ರಾಪ್ತ ಬಾಲಕ‌ನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಸುರತ್ಕಲ್ ಸಮೀಪವಿರುವ ಜೋಕಟ್ಟೆಯಲ್ಲಿ ನಡೆದಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಮೃತ ಬಾಲಕ. ಭಾರೀ ಗಾಳಿ ಮಳೆಗೆ ಬೆಳಿಗ್ಗೆ ಅವಘಡ ನಡೆದಿದೆ. ಬಾಲಕ ಆ ಮನೆಗೆ ಅತಿಥಿಯಾಗಿ ಬಂದಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಮೂವರು ಆತ್ಮಹತ್ಯೆ

ಕಾಸರಗೋಡು: ಪ್ರತ್ಯೇಕ ಘಟನೆಗಳಲ್ಲಿ ಮೂವರು ಯುವಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಜೇಶ್ವರ ಹೊಸಬೆಟ್ಟು ಸಸಿಹಿತ್ಲುವಿನ ಗೌತಮ್ ರಾಜ್ (23) , ಕುಂಜತ್ತೂರು ಮರಿಯಾಶ್ರಮ ಚರ್ಚ್ ಕಾಂಪೌಡ್ ನ ಬ್ರಾಯನ್ ಪಿಂಟೊ (20) ಮತ್ತು ಮೊರತ್ತಣೆ ಕಜೆಕೋಡಿಯ ಬಿ.ರಾಜೇಶ್ (40) ಆತ್ಮಹತ್ಯೆ ಮಾಡಿಕೊಂಡವರು. ಮಂಜೇಶ್ವರ ಹೊಸ ಬೆಟ್ಟು ನಲ್ಲಿ ಗೌತಮ್ ರಾಜ್ ಚಿಕ್ಕಮ್ಮನ ಮನೆಯಲ್ಲಿ  ವಾಸವಾಗಿದ್ದರು. ಮಂಗಳವಾರ ಮಧ್ಯಾಹ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಇನ್ನು ಮಂಜೇಶ್ವರ ಮೊರತ್ತಣೆಯ ರಾಜೇಶ್ […]

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುತ್ತೂರು ತಾಲೂಕಿನ ಬಲ್ನಾಡು ನಿವಾಸಿ ಪ್ರಸಾದ್(42) ಬಂಧಿತ ಆರೋಪಿ. ಈತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರಿನ ಹಿನ್ನಲೆಯಲ್ಲಿ ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.    

ಬಂಟ್ವಾಳ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಂಟ್ವಾಳ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಬೆಳಿಗ್ಗೆ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25)ಎಂಬಾತ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದರು. ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ವಿಟ್ಲ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಮಂಗಳೂರು; ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನದಿಗೆ ಬಿದ್ದು ಯುವಕ ದುರ್ಮರಣ

ಮಂಗಳೂರು: ನಗರದ ಹಳೆ ಬಂದರ್‌ನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಆಯ ತಪ್ಪಿ ಬಿದ್ದು ಮೀನುಗಾರರೊಬ್ಬರು  ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ. ಬೆಂಗರೆಯ ಅಶ್ಫಾನ್ (30) ಮೃತ ಯುವಕ. ಇವರು ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ನಾಪತ್ತೆಯಾಗಿದ್ದರು. ಬಳಿಕ ಅಶ್ಫಾನ್ ಗಾಗಿ ಹುಡುಕಾಟ ನಡೆದಿತ್ತು. ರಾತ್ರಿ ವೇಳೆ ಆತನ ಮೃತದೇಹ ಪತ್ತೆಯಾಗಿದೆ. ಈ ಕುರಿತು ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಉಡುಪಿ; ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ಪಿಯುಸಿ ವಿಧ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಪೆರ್ಡೂರು ಪ್ರಥಮ ದರ್ಜೆ ಸರಕಾರಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಹಿರಿಯಡ್ಕ ನಿವಾಸಿ ನಯನಾ(17) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಒಬ್ಬಂಟಿ ಇದ್ದಾಗ ಯುವತಿ ಈ ಕೃತ್ಯ ಎಸಗಿದ್ದಾಳೆ. ಆಕೆಯ ತಾಯಿ ಶೋಭಾ ಈ ಬಗ್ಗೆ ಹಿರಿಯಡ್ಕ ಠಾಣೆಗೆ ದೂರು ನೀಡಿದ್ದಾರೆ. ನಯನಾ ತನ್ನದೇ ಚೂಡಿದಾರ್ ಶಾಲನ್ನು ಬಳಸಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾಳೆ. ಘಟನೆಗೆ ಕಾರಣ ಏನೆಂದು […]

ಪುತ್ತೂರು; ಸ್ಕೂಟರ್ ಗೆ ಟ್ಯಾಂಕರ್ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು

ಪುತ್ತೂರು; ಸ್ಕೂಟರ್ ಗೆ ಟ್ಯಾಂಕರ್ ಢಿಕ್ಕಿಯಾದ ಪರಿಣಾಮ ವಿಕಲ ಚೇತನ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿ‌ನ ಮಂಜಲಪಡ್ಪು ಬಳಿ ನಡೆದಿದೆ. ಮಿತ್ತೂರು ಏಮಾಜೆಯ ಶಿವರಾಮ ನಾಯ್ಕ ಎಂಬವರು ಮೃತರು. ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಶಿವರಾಮ ನಾಯ್ಕ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡ್ ಸ್ಕೂಟರ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಶಿವರಾಮ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.