Breaking News :

ಸುರತ್ಕಲ್‌ –ಬಿ.ಸಿ. ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸುವಂತೆ ಕೇಂದ್ರ ಸಚಿವರಿಗೆ ಬ್ರಿಜೇಶ್ ಚೌಟ ಮನವಿ

ನವದೆಹಲಿ : ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್‌ -ಬಿ.ಸಿ. ರೋಡ್ ನಡುವಿನ ಹೆದ್ದಾರಿಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ತಂದು ಅದರ ಸಮರ್ಪಕ ನಿರ್ವಹಣೆ, ವಾಹನಗಳ ಸುಗಮ ಸಂಚಾರಕ್ಕೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸಚಿವರನ್ನು ಭೇಟಿಯಾದ ಸಂಸದರು, ಮಂಗಳೂರಿನ ಬಂದರು ಸಂಪರ್ಕ ಹೆದ್ದಾರಿ […]

ಗುಡ್ಡ ಜರಿದು ಮನೆಗೆ ಹಾನಿ

ಪುತ್ತೂರು :  ಬಾರೀ ಮಳೆಯಿಂದಾಗಿ ದ.ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಡೆಮ್ಮಂಗಾರ ಎಂಬಲ್ಲಿ ಗುರುವಾರ ಸಂಜೆ ಮನೆಯ ಪಕ್ಕದ ಗುಡ್ಡ ಜರಿದು ಮನೆಗೆ ಭಾಗಶಃ ಹಾನಿಯಾಗಿದೆ. ಇಲ್ಲಿನ ನಿವಾಸಿ ವಿಶ್ವನಾಥ ಎಂಬವರ ಪುತ್ರ ಕೃಷ್ಣಪ್ರಸಾದ್ ಎಂಬವರ ವಾಸದ ಮೆನೆಗೆ ಧರೆ ಜರಿದು ಹಾನಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ : ಎಸ್ಐಟಿಗೆ ವಹಿಸಿದ ಸರ್ಕಾರ 

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ ತನಿಖೆ ಎಸ್ಐಟಿಗೆ ವಹಿಸಿದ ಸರ್ಕಾರ  ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿರುವುದಾಗಿ ಆರೋಪಿಸಲಾದ ಸರಣಿ ಹತ್ಯೆಗಳು ಮತ್ತು ಶವಗಳನ್ನು ಹೂತಿಡುವ ಪ್ರಕರಣದ ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರವು 4 ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ SIT ತಂಡವನ್ನು ರಚಿಸಿದೆ. ಈ ತಂಡವನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಮಹಾನಿರ್ದೇಶಕ ಡಾ. ಪ್ರಣವ್ ಮೊಹಾಂತಿ ಅವರ ನೇತೃತ್ವದಲ್ಲಿ ರಚಿಸಲಾಗಿದ್ದು, ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಅವರನ್ನು ಎಸ್ಐಟಿ ಸದಸ್ಯರಾಗಿ ನಿಯೋಜಿಸಲಾಗಿದೆ. ಮಹಿಳಾ […]

ಹವಾಮಾನ ಇಲಾಖೆಯಿಂದ ಮಳೆ ಅಬ್ಬರದ ಮುನ್ಸೂಚನೆ : ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ 

ಹವಾಮಾನ ಇಲಾಖೆಯಿಂದ ಮಳೆ ಅಬ್ಬರದ ಮುನ್ಸೂಚನೆ : ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ  ಕೊಡಗು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಇದೀಗ ಮತ್ತೆ ಶುರುವಾಗಿದ್ದು, ಹವಾಮಾನ ಇಲಾಖೆ (IMD) ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಿಂದ ರೆಡ್ ಅಲರ್ಟ್ ಘೋಷಿಸಿದೆ.  ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಗಾಳಿಯೂ 40-50ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ […]

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಹಿನ್ನೆಲೆ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು

ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ‌ಸೆ.16 ರಂದು ನಡೆದಿದೆ. ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ. ‌ಸೆ.16ರ ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ‌ಹಬ್ಬದ ಪ್ರಯುಕ್ತ ಮಕ್ಕಳ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ. ರಾತ್ರಿ […]

ಉಡುಪಿ; ಸಂಬಂಧಿ ಮಹಿಳೆಯ ಪ್ರಾಣ ರಕ್ಷಿಸಿ ಜೀವ ಕಳೆದುಕೊಂಡ ಉಪನ್ಯಾಸಕಿ

ಉಪನ್ಯಾಸಕಿಯೊಬ್ಬರು ಸಂಬಂಧಿಯೊಬ್ಬರ ಜೀವ ಉಳಿಸಿಲು ಹೋಗಿ ತಮ್ಮದೇ ಪ್ರಾಣ ಕಳೆದಕೊಂಡ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ ನಡೆದಿದೆ‌. ಕುಂದಾಪುರ ತಾಲ್ಲೂಕಿನ ಕೋಟೇಶ್ವರದಲ್ಲಿ ಉಪನ್ಯಾಸಕಿಯಾಗಿ ಕೆಲ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಅರ್ಚನಾ ಕಾಮತ್‌(34) ಜೀವ ಕಳೆದುಕೊಂಡವರು. ಮೃತರು ಪತಿ ಚಾರ್ಟರ್ಡ್‌ ಅಕೌಂಟೆಂಟ್‌ ಚೇತನ ಕಾಮತ್, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ 69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಅರ್ಚನಾ ಬಯಸಿದ್ದರು. ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ […]

ಕಾಟಿಪಳ್ಳ ಮಸೀದಿಗೆ ಕಲ್ಲೆಸೆತ ಪ್ರಕರಣ; ಐವರು ಆರೋಪಿಗಳ ಬಂಧನ

ಸುರತ್ಕಲ್: ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಆಶ್ರಯ ಕಾಲನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಜಿತ್ ಎಂಬವರು ಬಂಧಿತ ಆರೋಪಿಗಳು. ನಿನ್ನೆ ರಾತ್ರಿ ಬೈಕಿನಲ್ಲಿ ಬಂದ ಆರೋಪಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದರು.

ಬಿಜೆಪಿ ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ!

ಕೋಲಾರ: ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಜೆಪಿ ಶಾಸಕ ಮುನಿರತ್ನ ವಿರುದ್ದ ಎರಡು FIR ದಾಖಲು ಮಾಡಲಾಗಿದೆ. ಒಂದು ಗುತ್ತಿಗೆದಾರ ಚೆಲುವರಾಜ್‌ಗೆ ಜೀವ ಬೆದರಿಕೆ ಹಾಕಿರುವುದು ಮತ್ತು ಇನ್ನೊಂದು ಜಾತಿ ನಿಂದನೆ ಅಡಿಯಲ್ಲಿ ದೂರನ್ನು ಬೆಂಗಳೂರಿನ ವೈಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿರುವ ಚೆಲುವರಾಜು, ಶಾಸಕ ಮುನಿರತ್ನ ವಿರುದ್ಧ […]

ಉಪ್ಪಿನಂಗಡಿ: ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

ಉಪ್ಪಿನಂಗಡಿ:  ಅಪ್ರಾಪ್ತ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಆರೋಪದ ಮೇಲೆ ಆರೋಪಿಯೋರ್ವನ ಮೇಲೆ ಪ್ರಕರಣ ದಾಖಲಾಗಿದೆ‌. ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಜೂನ್ 14 ರಂದು ಸ್ಥಳೀಯ ಕಾಲೇಜೊಂದರ ವಿಧ್ಯಾರ್ಥಿನಿಯನ್ನು ಆರೋಪಿ ಪರಿಚಯಮಾಡಿಕೊಂಡಿದ್ದ, ಬಳಿಕ ಮೊಬೈಲ್ ಪೋನ್ ನಂಬರ ಪಡೆದು ಆತ್ಮೀಯತೆ ಬೆಳೆಸಿದ್ದಾನೆ. ಈ ನಡುವೆ ಜುಲೈ 21 ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿ, ನೆಲ್ಯಾಡಿಗೆ ಬಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು […]

ಉಳ್ಳಾಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಳ್ಳಾಲ:ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ಈ ಘಟನೆ ನಡೆದಿದೆ ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕನಾಗಿದ್ದಾನೆ. ವೃತ್ತಿಯಲ್ಲಿ ಎಲೆಕ್ಟ್ರೀಶಿಯನ್ ಆಗಿದ್ದ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದಾನೆ. ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ ಮುಗಿಸಿ ಮನೆಗೆ ಬಂದಾಗ ಶ್ರವಣ್ ಬೆಡ್ […]