Breaking News :

ಶಿವಮೊಗ್ಗ: ಯುವಕನ ಮೇಲೆ ಹಲ್ಲೆ ನಡೆಸಿದ ತಂಡ; ಯುವಕ ಆಸ್ಪತ್ರೆಗೆ ದಾಖಲು

-ತಬ್ರೀಜ್ ಅಹ್ಮದ್ ಹಲ್ಲೆಗೊಳಗಾದ ಯುವಕ ಶಿವಮೊಗ್ಗ; ಯುವಕನೋರ್ವನಿಗೆ ಮೂವರ ಗುಂಪೊಂದು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಟೌನ್ ಶಿಶುಹಾರ ರಸ್ತೆಯಲ್ಲಿ ನಡೆದಿದೆ. ತಬ್ರೀಜ್ ಅಹಮ್ಮದ್ ಹಲ್ಲೆಗೊಳಗಾದ ಯುವಕ. ಇವರ ಮೇಲೆ ಪ್ರಕಾಶ್, ಮಾರುತಿ, ಮನು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಶಿಶುವಿಹಾರ ರಸ್ತೆಯಲ್ಲಿರುವ ಪಂಚಮಿ ಹೊಟೇಲ್ ಗೆ ಬಂದು ಮತ್ತೆ ವಾಪಾಸ್ಸಾಗಲು ಬೈಕ್ ಸ್ಟಾರ್ಟ್ ಮಾಡುವಾಗ ಬಂದ ಪ್ರಕಾಶ್, ಮಾರುತಿ, ಮನು, ತಬ್ರೀಜ್ ಗೆ 500 ರೂ. ಹಣ ಕೊಡುವಂತೆ ಕೇಳಿದ್ದಾರೆ. ಈ […]

ಮಂಗಳೂರು: ಮನಪಾ ಕಚೇರಿಗೆ ಮುತ್ತಿಗೆಗೆ ಯತ್ನ; ಸಿಪಿಐಎಂ ಮುಖಂಡರ ಬಂಧನ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ಮುತ್ತಿಗೆಗೆ ಯತ್ನಿಸಿದ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರನ್ನು ವಜಾಗೊಳಿಸಲು ಒತ್ತಾಯಿಸಿ ಮನಪಾ ಕಚೇರಿ ಮುಂದೆ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನೆ ನಡೆಸಿದ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  

ಕಾಸರಗೋಡು: ಗ್ರೈಂಡರ್ ಗೆ ಶಾಲು ಸಿಲುಕಿ ಮಹಿಳೆ ಮೃತ್ಯು

ಕಾಸರಗೋಡು: ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದಾಗ ಶಾಲು ಸಿಲುಕಿ ಗೃಹಿಣಿ ಮೃತಪಟ್ಟ ದಾರುಣ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ನಡೆದಿದೆ. ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( 52) ಮೃತಪಟ್ಟವರು. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ನಫೀಸಾ ಅವರ ಜೀವ ಉಳಿಸಲಾಗಲಿಲ್ಲ . ಈ ಕುರಿತು ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. […]

ಪುತ್ತೂರು: ಲಾರಿಯ ಟಯರ್ ಬದಲಿಸುವಾಗ ಅವಘಡ; ವ್ಯಕ್ತಿಗೆ ಗಂಭೀರ ಗಾಯ

ಪುತ್ತೂರು: ಲಾರಿಯ ಟಯರ್‌ ಬದಲಿಸುವಾಗ ಡಿಸ್ಕ್ ಚಿಮ್ಮಿ ಟಯರ್‌ ಸಮೇತ ಎಸೆಯಲ್ಪಟ್ಟು, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ  ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ರಾತ್ರಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ. ಲಾರಿಯ ಟಯರ್‌ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಪಂಚರ್ ತೆಗಿಸಿ ರಶೀದ್ ಆಟೋ ರಿಕ್ಷಾದಲ್ಲಿ ಟಯರ್‌  ತಂದಿದ್ದರು. ಟಯರ್‌ ಬದಲಿಸುವ ವೇಳೆ ಒಮ್ಮೆಲೇ ಟಯರ್‌ನ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ […]

ಮಂಗಳೂರಿನಲ್ಲಿ ಕಳ್ಳರ ಹಾವಳಿ; ಎರಡು ಕಡೆ ಕಳ್ಳತನಕ್ಕೆ ಯತ್ನ

ಮಂಗಳೂರು: ಪದವಿನಂಗಡಿ ಬಳಿ ಎರಡು ಕಡೆ ಕಳ್ಳರು ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ಪದವಿನಂಗಡಿ ಸಮೀಪದ ಮಹಾತ್ಮನಗರ ಬಡಾವಣೆಯ ಮನೆಯೊಂದರ ಮುಖ್ಯಗೇಟ್ ತೆಗೆದು ಒಳನುಗ್ಗಿರುವ ಕಳ್ಳರು ಬಾಗಿಲಿನ ಬಳಿ ಇದ್ದ ಇನ್ನೊಂದು ಸ್ಟೀಲ್ ಗೇಟ್‌ನ್ನು ತೆರೆದು ಮನೆಯ ಬಾಗಿಲನ್ನು ರಾಡ್‌ನಿಂದ ಒಡೆಯಲು ಯತ್ನಿಸಿದ್ದಾರೆ. ರಾತ್ರಿ 1.45ರ ವೇಳೆಗೆ ಈ ಘಟನೆ ನಡೆದಿದ್ದು, ಈ ವೇಳೆ ಎಚ್ಚರಗೊಂಡು ಎಲ್ಲ ಲೈಟ್ ಹಾಕಿ ಮನೆ ಮಂದಿ ಕೂಗಿಕೊಂಡಾಗ ಕಳ್ಳರು ಓಡಿ ಹೋಗಿದ್ದಾರೆ. ತಕ್ಷಣ ಮನೆಯವರು ಪೊಲೀಸರು ಹಾಗೂ ನೆರೆಮನೆಯವರಿಗೆ ಮಾಹಿತಿ […]

ಕಲ್ಲಡ್ಕ: ಯುವಕನೋರ್ವ ನಾಪತ್ತೆ; ಪತ್ತೆಗೆ ಮನವಿ

ಕಲ್ಲಡ್ಕ: ಯುವಕನೋರ್ವ ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ಮಾಣಿಮಜಲು ಎಂಬಲ್ಲಿ ನಡೆದಿದೆ. ಸಮದ್ ನಾಪತ್ತೆಯಾದ ಯುವಕನಾಗಿದ್ದಾನೆ. ಇವರು ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಇತ್ತೀಚೆಗೆ ಮಳೆಯಿಂದ ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಧವಸ ದಾನ್ಯಗಳಿಗೆ ಹಾನಿಯಾಗಿತ್ತು. ಇದರಿಂದ ನೊಂದು ಕೊಂಡಿದ್ದರು ಎಂದು ಕಟುಂಬ ಮೂಲಗಳು ಹೇಳುತ್ತಿದೆ. ಸಮದ್ ವಿವಾಹಿತರಾಗಿದ್ದು, ಅವರಿಗೆ ಮೂವರು ಮಕ್ಕಳಿದ್ದಾರೆ‌. ತಂದೆ ನಾಪತ್ತೆ ಬಳಿಕ ಕುಟುಂಬ ಕಂಗಾಲಾಗಿದೆ. ಸಮದ್ ಅವರನ್ನು ಎಲ್ಲಿಯಾದರೂ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಅವರ ಕುಟುಂಬ ವರ್ಗವು […]

ಉಳ್ಳಾಲ ಖಾಝಿಯಾಗಿ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

ಉಳ್ಳಾಲ; ಉಳ್ಳಾಲ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ , ಸುಲ್ತಾನುಲ್ ಉಲಮಾ ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಅಂಗೀಕಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಉಳ್ಳಾಲ ಖಾಝಿಯಾಗಿದ್ದ ಕುರ್ರತ್ ಸಾದಾತ್ ಕೂರ ತಂಙಳದ ನಿಧನದಿಂದ ತೆರವಾದ ಸ್ಥಾನಕ್ಕೆ ಎಪಿ ಉಸ್ತಾದ್ ಅವರನ್ನು ನೇಮಕ ಮಾಡಲಾಗಿದೆ.      

BREAKING ಪುತ್ತೂರು: ಹೊಳೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಪುತ್ತೂರು; ಬೈಕ್ ನಿಲ್ಲಿಸಿ ಯುವಕನೋರ್ವ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಟ್ವಿಸ್ ಸಿಕ್ಕಿದ್ದು, ಸರ್ವೆ ಹೊಳೆಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಕುದ್ಮಾರು ಗ್ರಾಮದ ಕೆಕ್ಕಿತ್ತಾಡಿಯ ಸನ್ಮಿತ್( 21) ಮೃತದೇಹ ಹೊಳೆಯಲ್ಲಿ ಪತ್ತೆಯಾಗಿದೆ. ನಿರಂತರವಾಗಿ ಹುಡುಕಾಟದ ಬಳಿಕ ಇದೀಗ ಸನ್ಮಿತ್ ಮೃತದೇಹವನ್ನು ಅಗ್ನಿಶಾಮಕದಳದ ಸಿಬ್ಬಂದಿಗಳು ಹೊಳೆಯಿಂದ ಹೊರಕ್ಕೆ ತೆಗೆದಿದ್ದಾರೆ.    

ಉಪ್ಪಿನಂಗಡಿ: ಬೈಕ್ ಗಳು ಮುಖಾಮುಖಿ ಢಿಕ್ಕಿ; ಓರ್ವ ಮೃತ್ಯು

ಉಪ್ಪಿನಂಗಡಿ:  ಬೈಕ್ ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ತುರ್ಕಳಿಕೆ ಎಂಬಲ್ಲಿ  ನಿನ್ನೆ ರಾತ್ರಿ ಸಂಭವಿಸಿದೆ. ಬೈಕ್ ಸವಾರ ಬಾರ್ಯ ನಿವಾಸಿ ಶಿವಾನಂದ ಮೃತ ದುರ್ದೈವಿ. ಶಿವಾನಂದ ಅವರು ಸಹೋದರನ ಜೊತೆ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರುಗಡೆಯಿಂದ ಬಂದ ಕರೀಂ ಎಂಬವರ ಬೈಕ್ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಶಿವಾನಂದ ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಧನಂಜಯ, […]

ಕಡಬ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ:  ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ  ರಾತ್ರಿ ಕಡಬದಲ್ಲಿ ನಡೆದಿದೆ. ಕಡಬ ತಿಮರಡ್ಡ ನಿವಾಸಿ ಅಝರ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಝರ್ ಶನಿವಾರ ರಾತ್ರಿ ಮನೆಯ ಕೋಣೆಯಲ್ಲಿ ಸೀರೆಯಿಂದ‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಝರ್ ವಿವಾಹಿತರಾಗಿದ್ದು, ಒಂದು ಮಗು ಕೂಡ ಇದೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.