ಬಂಟ್ವಾಳ; ಪೆಂಡಾಲ್ ಹಾಕುವಾಗ ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು, ನಾಲ್ವರಿಗೆ ಗಾಯ

ಬಂಟ್ವಾಳ: ಪೆಂಡಾಲ್ ಹಾಕುವಾಗ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ತಗುಲಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಮದ್ಯಾಹ್ನ ನಡೆದಿದೆ. ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂಬಾತ ಮೃತಪಟ್ಟಿದ್ದು, ಕಡೇಶ್ವಾಲ್ಯ ಗ್ರಾಮದ ಪ್ರಸನ್ನ , ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ನೇಜಾರು ತಾಯಿ & ಮಕ್ಕಳ ಹತ್ಯೆ ಪ್ರಕರಣ: ವಿಚಾರಣೆ ಮುಂದೂಡಿಕೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಆ.24ಕ್ಕೆ ಮುಂದೂಡಿದೆ. ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ, ತನಗೆ ಹಾಗೂ ತನ್ನ ವಕೀಲರಿಗೆ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಉಡುಪಿ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್‌ಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಧೀಶರು, ಮುಂದಿನ ವಿಚಾರಣೆವರೆಗೆ […]
ಪುತ್ತೂರು ನದಿ ಬಳಿ ಬೈಕ್ ಪತ್ತೆ: ಯುವಕನೋರ್ವ ನದಿಗೆ ಹಾರಿರುವ ಶಂಕೆ

ಪುತ್ತೂರು; ಯುವಕನೋರ್ವ ಬೈಕ್ ನಿಲ್ಲಿಸಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಯುವಕ ಸರ್ವೆ ಗೌರಿ ಸೇತುವೆ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದು, ಗೌರಿ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಬೈಕ್ ಪತ್ತೆ ಹಿನ್ನೆಲೆ ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಯುವಕ ಹೊಳೆಗೆ ಹಾರಿದ್ದಾನೆಯೇ ಅಥವಾ ಬೇರೆಯೆಲ್ಲಾದರೂ ಹೋಗಿದ್ದಾನೆಯೇ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.
ಮಂಗಳೂರು: ವಿದ್ಯುತ್ ತಗುಲಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು

ಮಂಗಳೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಆಘಾತಕಾರಿ ಘಟನೆ ಮಂಗಳೂರು ಹೊರವಲಯದ ಗುರುಪುರ ಕಲ್ಲಕಲೆಂಬಿ ಎಂಬಲ್ಲಿ ಘಟನೆ ನಡೆದಿದೆ. ಆಶ್ಮಿ ಶೆಟ್ಟಿ (19)ಮೃತ ವಿದ್ಯಾರ್ಥಿನಿ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಸಿಎ ಕಲಿಯುತ್ತಿದ್ದ ಆಶ್ಮಿ ಶೆಟ್ಟಿ, ದನಗಳನ್ನು ಮೇಯಿಸಿಲು ಗದ್ದೆಗೆ ತೆರಳಿದ್ದಳು. ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಗಂಭೀರ ಗಾಯಗೊಂಡಿದ್ದ ಆಶ್ಮಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಆಶ್ಮಿ ಜತೆ ಬಂದಿದ್ದ ಎರಡು […]
ಭಾರೀ ಮಳೆ ಹಿನ್ನೆಲೆ: ಐದು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ
ಬಂಟ್ವಾಳ: ಮುಂದುವರಿದ ಮಳೆ, ವಿವಿಧೆಡೆ ಹಾನಿ
ಕೂರತ್ ತಂಙಳ್ ನಿಧನ

ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿಯವ ನಿಧನಕ್ಕೆ ರಾಜ್ಯ ಆರೋಗ್ಯ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಂತಾಪ ಸೂಚಿಸಿದ್ದಾರೆ. ಎಕ್ಸ್’ ನಲ್ಲಿ ಪೋಸ್ಟ್ ವೊಂದನ್ನು ಮಾಡಿರುವ ಸಚಿವರು, ‘ಕೂರತ್ ತಂಙಳ್’ ಎಂದೇ ಪ್ರಸಿದ್ಧಿ ಪಡೆದಿದ್ದ ಉಳ್ಳಾಲ ಖಾಝಿ, ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರು ನಿಧನರಾಗಿರುವಸುದ್ದಿ ತಿಳಿದು ಅತೀವ ದುಃಖವಾಯಿತು. ಸರ್ವಧರ್ಮಗಳ ಪ್ರತಿಪಾದಕರಾಗಿದ್ದ ತಂಙಳ್ ಅವರ ನಿಧನವು ಇಡೀ ಕರಾವಳಿ ಭಾಗದ ಜನತೆಗೆ ಅಪಾರ […]