ಪುತ್ತೂರು: ಅಪಘಾತದ ಗಾಯಾಳು ಉಪನ್ಯಾಸಕಿ ಮೃತ್ಯು; ಜೀವಕ್ಕೆ ಕುತ್ತು ತಂದಿದ್ದ ಕೊಡೆ

ಪುತ್ತೂರು; ಬೈಕಿನಿಂದ ಬಿದ್ದು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕಿಯೋರ್ವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮಾಡಾವು ಜ್ಯೂನಿಯರ್ ಕಾಲೇಜಿನ ಅತಿಥಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದ ಸಂದರ್ಭದಲ್ಲಿ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದ […]
ಮಂಗಳೂರು: ಹಸುವೊಂದಕ್ಕೆ ದಯಾಮರಣ; ಏನಿದು ಅಪರೂಪದ ಸುದ್ದಿ?

ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆಯ ವ್ಯಾಪ್ತಿಗೆ ಸೇರಿರುವ ಕೊಲ್ಯ ಎನ್ನುವ ಪ್ರದೇಶದಲ್ಲಿ ಹಸುವೊಂದಕ್ಕೆ ಬುಧವಾರ ದಯಾಮರಣ ನೀಡಿರುವ ಬಗ್ಗೆ ವರದಿಯಾಗಿದೆ. ಈ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಹಸು ಸಾರ್ವಜನಿಕರಿಗೆ ಸಮಸ್ಯೆಯನ್ನು ಉಂಟು ಮಾಡುತ್ತಿತ್ತು. ಅನವಶ್ಯಕವಾಗಿ ಜರನ್ನು ತಿವಿಯಲು ಹೋಗುತ್ತಿತ್ತು. ವಿಚಿತ್ರವಾಗಿ ವರ್ತನೆ ಮಾಡುತ್ತಿದ್ದ ಹಸುವಿನ ಬಗ್ಗೆ ದೂರುಗಳು ಕೇಳಿಬಂದಿದ್ದವು. ಕಳೆದ ಎರಡು ದಿನಗಳಿಂದಲೂ ಇದೇ ವರ್ತನೆ ತೋರಿಸಿದ್ದ ಹಸುವನ್ನು ಸ್ಥಳೀಯರೇ ಸೇರಿ ಕಟ್ಟಿ ಹಾಕಿದ್ದರು. ಇತ್ತೀಚೆಗೆ ಮಹಿಳೆಯೊಬ್ಬರ ಮೇಲೂ ದಾಳಿ ನಡೆಸಿತ್ತು. ಇನ್ನು ಹಸು […]
ನೇಜಾರು ತಾಯಿ- ಮಕ್ಕಳ ಕೊಲೆ ಪ್ರಕರಣ; ಜೈಲಿನಲ್ಲಿ ಉಪವಾಸ ಕುಳಿತ ಆರೋಪಿ ಪ್ರವೀಣ್ ಚೌಗಲೆ

ಉಡುಪಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಅನ್ನ, ನೀರು ಸ್ವೀಕರಿಸದೆ ಉಪವಾಸ ಮುಷ್ಕರ ಹೂಡಿದ್ದಾನೆ ಎಂದು ವರದಿಯಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪ್ರವೀಣ್, ಆಹಾರ ಸೇವಿಸದೆ ಉಪವಾಸ ಮುಷ್ಕರ ಮಾಡುತ್ತಿದ್ದು, ಪ್ರತ್ಯೇಕ ಸೆಲ್‌ನಿಂದ ಪ್ರಧಾನ ಸೆಲ್‌ಗೆ ಶಿಫ್ಟ್ ಮಾಡಲು ಬೇಡಿಕೆ ಇಟ್ಟಿದ್ದಾನೆ. 2023ರ ನವೆಂಬರ್ 12ರಂದು ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ನಡೆದಿತ್ತು. ಏರ್ ಇಂಡಿಯಾ […]
ಬಂಟ್ವಾಳ: ಭೀಕರ ಕಾರು ಅಪಘಾತ; ನವವಿವಾಹಿತೆ ಸಾವು

ಬಂಟ್ವಾಳ: ಭೀಕರ ಕಾರು ಅಪಘಾತದಲ್ಲಿ ನವ ವಿವಾಹಿತೆ ಸಾವನ್ನಪ್ಪಿದ್ದು, ಪತಿಗೆ ಗಂಭೀರ ಗಾಯವಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತರು. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರಿಗೆ ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಆಲ್ಟೋ ಕಾರಿನಲ್ಲಿ ನವದಂಪತಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಗುದ್ದಿ ಹಾರಿ […]
ಮಂಗಳೂರು; ಏರ್ ಪೋರ್ಟ್ ರಸ್ತೆಯಲ್ಲಿ ಅಪಘಾತ; ಇಬ್ಬರು ಯುವಕರು ಮೃತ್ಯು

ಮಂಗಳೂರು: ಯೆಯ್ಯಾಡಿ ಏರ್ ರ್ಪೋರ್ಟ್ ರೋಡಲ್ಲಿ ತಡ ರಾತ್ರಿ ಬೈಕೊಂದು ಸ್ಕಿಡ್ ಆಗಿ ಇಬ್ಬರು ಸವಾರರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಯೆಯ್ಯಾಡಿ ಸಮೀಪದ ಹರಿಪದವು ಎಂಬಲ್ಲಿ ಈ ಅವಘಡ ಸಂಭವಿಸಿದ್ದು ಕೋಡಿಕಲ್ ನಿವಾಸಿ ಕಾಶೀನಾಥ್(17) ಮತ್ತು ಉಪ್ಪಿನಂಗಡಿಯ ಚೇತನ್(24) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರಿದ್ದ ಬೈಕ್ ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಉರುಳಿಬಿದ್ದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಮಂಗಳೂರು ಸಂಚಾರಿ ಪೊಲೀಸರು ಪ್ರಕರಣ […]
ಮಂಗಳೂರು: ಅಪಘಾತದಲ್ಲಿ ಯುವಕ ಮೃತ್ಯು

ಮಂಗಳೂರು: ಭೀಕರ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ(27) ಮೃತ ದುರ್ದೈವಿ. ಗಣೇಶ ಅವರು ಪಣಂಬೂರಿಗೆ ಕೆಲಸಕ್ಕೆ ಹೋಗುವಾಗ ಮುಕ್ಕ ಜಂಕ್ಷನ್ ನಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಬಳಿ ಸ್ಕೂಟರ್ ಗೆ ವಾಹನವೊಂದು ಢಿಕ್ಕಿ ಹೊಡೆದಿದೆ. ಗಂಭೀರವಾಗಿದ್ದ ಅವರನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ. ಈ ವೇಳೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ […]
ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ; ಯುವಕ ಮೃತ್ಯು

ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಗುತ್ತಿಹಳ್ಳ ಬಳಿ ನಡೆದಿದೆ. ಶಿವಮೊಗ್ಗ ತಾಲೂಕಿನ ಸಂಪಿಗೆಹಳ್ಳ ನಿವಾಸಿಯಾಗಿರುವ ಮಂಜುನಾಥ್ ಗದ್ದೆಮನೆ(27) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಆಯನೂರಿನಿಂದ ಬೆಜ್ಜವಳ್ಳಿ ಕಡೆಗೆ ಹೋಗುತ್ತಿದ್ದ ಬೈಕ್ ಡೈರಿಗೆ ಹಾಲು ಹಾಕಿ ಸಂಪಿಗೆಹಳ್ಳದ ಮನೆಗೆ ಬರುತ್ತಿದ್ದ ಮಂಜುನಾಥ್ ಬೈಕಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಇಬ್ಬರೂ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಇಬ್ಬರು ಗಾಯಾಳುಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಪಘಾತದಲ್ಲಿ […]
ಹಿಜಾಬ್ ವಿವಾದ: ಕುಂದಾಪುರ ಕಾಲೇಜಿನ ಪ್ರಾಂಶುಪಾಲರನ್ನು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಯಿಂದ ಕೈಬಿಟ್ಟ ಸರಕಾರ

ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಟೀಕೆಗೆ ಗುರಿಯಾಗಿದ್ದ ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಜಿ.ರಾಮಕೃಷ್ಣ ಅವರನ್ನು ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪಟ್ಟಿಯಿಂದ ಕೊನೆಯ ಕ್ಷಣದಲ್ಲಿ ರಾಜ್ಯ ಸರಕಾರ ಕೈಬಿಟ್ಟಿದೆ. ಬಿಜೆಪಿ ಸರಕಾರದ ಅವಧಿಯಲ್ಲಿ ಹಿಜಾಬ್ ವಿವಾದ ಸೃಷ್ಟಿಯಾಗಿದ್ದಾಗ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಆವರಣದಲ್ಲೇ ತಡೆದು ಪ್ರವೇಶ ನಿರಾಕರಿಸಿದ್ದರು. ಇದೀಗ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅವರಿಗೆ ರಾಜ್ಯ ಪ್ರಶಸ್ತಿ ಪ್ರಕಟಗೊಂಡಿದ್ದರ ಬಗ್ಗೆ ಒಂದು ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಆಕ್ರೋಶಕ್ಕೆ ಮಣಿದ […]
ಮಂಗಳೂರು; ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕ ಹೃದಯಾಘಾತದಿಂದ ಮೃತ್ಯು

ಮಂಗಳೂರು:ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ರಿಕ್ಷಾ ಚಾಲಕರೊಬ್ಬರು ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಮಂಗಳವಾರ ವರದಿಯಾಗಿದೆ. ಬಜಾಲ್ ವಿದ್ಯಾ ನಗರದ ನಿವಾಸಿ ಇಕ್ಬಾಲ್ (47)ಮೃತ ಚಾಲಕ. ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ಅವರು ವಾಸವಾಗಿದ್ದರು. ರಿಕ್ಷಾ ಪಾರ್ಕ್ ನಲ್ಲಿ ಕ್ಯೂ ನಲ್ಲಿರುವಾಗಲೇ ಇಕ್ಬಾಲ್ ರವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣವೇ ಇತರ ರಿಕ್ಷಾ ಚಾಲಕರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಮೂರು ಮಕ್ಕಳು ಮತ್ತು […]
ಮಂಗಳೂರು: ಕ್ರಿಕೆಟ್ ಆಡುವಾಗ ಹೃದಯಾಘಾತದಿಂದ ಯುವಕ ಮೃತ್ಯು

ಮಂಗಳೂರು: ಕ್ರಿಕೆಟ್ ಆಡುತ್ತಿದ್ದಾಗ ಹೃದಯಾಘಾತಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವಕನೋರ್ವ ಸಾವನ್ನಪ್ಪಿದ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ. ಮೂಡುಪೆರಾರ ಕಾಯರಾಣೆ ನಿವಾಸಿ ಪ್ರದೀಪ್ ಪೂಜಾರಿ(31)ಮೃತ ದುರ್ದೈವಿ. ಭಾನುವಾರ ಸಂಜೆ ಮೂಡುಪೆರಾರ ಕಾಯಾರಣೆಯಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಪ್ರದೀಪ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಮೊದಲಿಗೆ ಕೈಕಂಬದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ನಂತರ ಬಜ್ಪೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಪ್ರದೀಪ್ ಪಡುಪೆರಾರ ಗ್ರಾಮ ಪಂಚಾಯತ್ […]