Breaking News :

ನೇಜಾರು ತಾಯಿ & ಮಕ್ಕಳ ಕೊಲೆ ಪ್ರಕರಣ: ವಿಚಾರಣೆ ಮತ್ತೆ ಮುಂದೂಡಿಕೆ

ಉಡುಪಿ: ನೇಜಾರಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ. ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿ ಆದೇಶ ನೀಡಿದೆ. ಕಳೆದ ಬಾರಿ ಮುಂದಿನ ವಿಚಾರಣೆಯನ್ನು ಆ.24ಕ್ಕೆ ನಿಗದಿ ಪಡಿಸಿದ್ದ ಹಿನ್ನೆಲೆಯಲ್ಲಿ ಅಂದು ಆರೋಪಿ ಪ್ರವೀಣ್ ಚೌಗುಲೆ ಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಈ ವೇಳೆ ಆರೋಪಿ ಪರ ವಕೀಲ […]

ಕಡಬ; ಕೊಂತೂರು ಶಾಲಾ ಮೇಲ್ಛಾವಣಿ ಕುಸಿದು ಮಕ್ಕಳಿಗೆ ಗಾಯ ಪ್ರಕರಣ; ಮುಖ್ಯ ಶಿಕ್ಷಕಿ ಸೇರಿ ಇಬ್ಬರನ್ನು ಅಮಾನತು ಮಾಡಿದ ಡಿಸಿ ಮುಲ್ಲೈ ಮುಗಿಲನ್

ಕಡಬ ತಾಲೂಕಿನ ಕುಂತೂರು ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಘಟನೆ ನಡೆದ ಬೆನ್ನಲ್ಲೇ ಪುತ್ತೂರು ಬಿಇಒ ಲೋಕೇಶ್‌ ಎಸ್‌.ಆರ್‌.ಅವರು ಶಾಲೆಗೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದ ಸಂದರ್ಭದಲ್ಲಿ ಅನೇಕ ಮಕ್ಕಳು ಶಾಲೆಯ ಹೊರಗೆ ಇದ್ದರು. ಒಳಗೆ ಕೆಲವೇ ಮಕ್ಕಳಿದ್ದರು. ಅದರಲ್ಲಿ ನಾಲ್ವರು ಹೆಣ್ಣುಮಕ್ಕಳಿಗೆ ಗಾಯಗಳಾಗಿವೆ ಎಂದು ಬಿಇಒ ತಿಳಿಸಿದ್ದಾರೆ. ಅಷ್ಟೇ ಅಲ್ಲ ಈ ಸರ್ಕಾರಿ […]

ವಿಟ್ಲ: ಕೆರೆಗೆ ಜಾರಿ ಬಿದ್ದು ಯುವಕ ಮೃತ್ಯು

ವಿಟ್ಲ; ತೆಂಗಿನಕಾಯಿ ತರಲು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೇಪು ಗ್ರಾಮದಲ್ಲಿ ಆ.27ರ ಮಂಗಳವಾರ ನಡೆದಿದೆ. ಕೇಪು ಗ್ರಾಮದ ಗುತ್ತುದಡ್ಕ ನಿವಾಸಿ ಕೊರಗಪ್ಪ ನಾಯ್ಕ ಅವರ ಪುತ್ರ ನವೀನ್‌ ನಾಯ್ಕ(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ನವೀನ್‌ ನಾಯ್ಕ ಅವರು ತೆಂಗಿನಕಾಯಿ ತರಲು ತೋಟಕ್ಕೆ ತೆರಳಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಕಾರ್ಕಳ ಯುವತಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಕಾರ್ಕಳದ ಅಭಯ್(23) ಎಂದು ಗುರುತಿಸಲಾಗಿದೆ. ಅಭಯ್, ಅಲ್ತಾಫ್‌ಗೆ ಮಾದಕ ವಸ್ತು ನೀಡಿರುವುದು ತನಿಖೆಯ ವೇಳೆ ಬಯಲಾಗಿದೆ. ಕೃತ್ಯ ಎಸಗಿದ ಮೇಲೆ ಅಲ್ತಾಫ್ ತಪ್ಪಿಸಿ ಕೊಳ್ಳಲು ಅಭಯ್ ಸಹಕಾರ ನೀಡಲು ಪ್ರಯತ್ನಿಸಿರುವುದು ಕೂಡ ತನಿಖೆ ವೇಳೆ ತಿಳಿದು ಬಂದಿದೆ. ಬಂಧಿತ ಅಭಯ್‌ನನ್ನು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ತಿಳಿಸಿದ್ದಾರೆ.

ಉಡುಪಿ; ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕೆರೆಗೆ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಉಡುಪಿಯ ಕರಂಬಳಿಯಲ್ಲಿ ನಡೆದಿದೆ. ಮೃತನನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತ ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದ. ಸಿದ್ದಾರ್ಥ್ ನಿನ್ನೆ ಇಬ್ಬರು ಸ್ನೇಹಿತರೊಂದಿಗೆ ಉಡುಪಿಯ ಕರಂಬಳಿ ಕೆರೆಗೆ ಈಜಲು ತೆರಳಿದ್ದನು. ಈ ವೇಳೆ ಈಜಲು ನೀರಿಗಿಳಿದಿದ್ದು, ಈಜಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಇನ್ನಿಬ್ಬರು ಸ್ನೇಹಿತರು ನೀರಿಗೆ ಇಳಿದಿರಲಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ.

ಕಡಬ; ಭೀಕರ ಅಪಘಾತ; ಬೈಕ್ ಸವಾರ ಮೃತ್ಯು

ಖಾಸಗಿ ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್(22) ಎಂದು ಗುರುತಿಸಲಾಗಿದೆ. ದೇವರಾಜ್ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌ ಕಾಲೇಜಿನ ಮುಂಭಾಗದಲ್ಲಿ ಎದುರಿನಿಂದ ತೆರಳುತ್ತಿದ್ದ ಖಾಸಗಿ ಬಸ್ಸನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ […]

ವಿಟ್ಲ; ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ನಡೆದಿದೆ. ರಮೇಶ್ ಶಿವಾಜಿನಗರ(40) ಮೃತ ವ್ಯಕ್ತಿ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಮೇಶ್ ಆಟೋ ಚಾಲಕರಾಗಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಕಾರ್ಕಳ ಅತ್ಯಾಚಾರ ಪ್ರಕರಣ; ಸಂತ್ರಸ್ತೆಯ ವೈದ್ಯಕೀಯ ವರದಿಯಲ್ಲೇನಿದೆ?

ಕಾರ್ಕಳದಲ್ಲಿ ಅತ್ಯಾಚಾರಕ್ಕೆ ಒಳಗಾದ ಯುವತಿಯ ರಕ್ತ ಪರೀಕ್ಷೆಯ ವರದಿ ಬಂದಿದ್ದು, ಆಕೆಯ ರಕ್ತದ ಮಾದರಿಯಲ್ಲಿ ಡ್ರಗ್ಸ್‌ ಅಂಶ ಪತ್ತೆಯಾಗಿದೆ. ಮೊದಲ ಆರೋಪಿ ಅಲ್ತಾಫ್‌ನ ರಕ್ತಪರೀಕ್ಷೆಯ ವರದಿ ಹಾಗೂ ಬಿಯರ್ ಬಾಟಲ್ ತಂದುಕೊಟ್ಟ ಎರಡನೇ ಆರೋಪಿ ಕ್ಸೇವಿಯರ್ ರಿಚರ್ಡ್‌ನ ರಕ್ತ ಪರೀಕ್ಷೆಯ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ತಿಳಿಸಿದ್ಸಾರೆ. ಯುವತಿಯ ರಕ್ತದ ಮಾದರಿ ಪರೀಕ್ಷೆಯಲ್ಲಿ ಡ್ರಗ್ಸ್‌ ಅಂಶ ಪತ್ತೆಯಾಗಿರುವ ಕಾರಣ ಆರೋಪಿ ಅಲ್ತಾಫ್‌ನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದಾಗ, ಆತ ಕಾರಿನಲ್ಲಿದ್ದ […]

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋ ವೈರಲ್

ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ. ಈ ಹಿಂದೆ ವಿಧಾನಸಭಾ ಚುನಾವಣೆ ವೇಳೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯ ಅಭ್ಯರ್ಥಿಯಾಗಿ ಅರುಣ್ ಪುತ್ತಿಲ ಭಾರಿ ಸದ್ದು ಮಾಡಿದ್ದರು. ಆದರೆ, ಈಗ ಬಿಜೆಪಿ ನಾಯಕಿಯೊಬ್ಬರ ಬಳಿ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗುತ್ತಿದೆ. ನೀವು ಬಿಜೆಪಿಗೆ ಸೇರಿದ್ದು ನಾಚಿಕೆ ಆಗಲಿಲ್ವ ಎಂದು ಮಹಿಳೆ ಕೇಳಿದ್ದಾಳೆ. ಆದರೆ, ಇದಕ್ಕೆ ಉತ್ತರಿಸಿದ ಅರುಣ್ ಪುತ್ತಿಲ ಅವರದ್ದೆನ್ನಲಾದ ಧ್ವನಿ […]

ಆ.30 ರಂದು SDPI ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ ಸಭೆ

ಉಳ್ಳಾಲ:ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು (ಉಳ್ಳಾಲ) ವಿಧಾನ ಸಭಾ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ ಆಗಸ್ಟ್ 30 ರಂದು ಶುಕ್ರವಾರ ಕಲ್ಲಾಪು ಯುನಿಟಿ ಹಾಲ್ ಸಭಾಂಗಣದಲ್ಲಿ ಮಧ್ಯಾಹ್ನ 2:30ಕ್ಕೆ ನಡೆಯಲಿದೆ. SDPI ಪಕ್ಷದ ಆಂತರಿಕ ಚುನಾವಣೆಯು ದೇಶದೆಲ್ಲೆಡೆ ನಡೆಯುತ್ತಿದ್ದು ಇದರ ಭಾಗವಾಗಿ ಕ್ಷೇತ್ರ ಸಮಿತಿಯ ಪ್ರತಿನಿಧಿ ಸಭೆ ಕಲ್ಲಾಪು ಯುನಿಟಿ ಹಾಲ್ ನಲ್ಲಿ ಆಯೋಜಿಸಲಾಗಿದೆ. ಕ್ಷೇತ್ರ ಅಧ್ಯಕ್ಷರಾದ ಬಶೀರ್ ಎಸ್.ಎಂ.ರವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಈ ಸಭೆಯಲ್ಲಿ ಕ್ಷೇತ್ರ ಸಮಿತಿಯ 2024 – […]