ಉಡುಪಿ: ಮಹಿಳೆಯ ಬರ್ಬರ ಕೊಲೆ, ಪತಿಯೇ ಕೃತ್ಯ ನಡೆಸಿರುವ ಶಂಕೆ

ಉಡುಪಿ;8 ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೋರ್ವರು ದಾರುಣವಾಗಿ ಕೊಲೆಗೀಡಾದ ಘಟನೆ ಸಾಲಿಗ್ರಾಮದಲ್ಲಿ ಸಂಭವಿಸಿದೆ. ಮೂಲತಃ ಕೊಪ್ಪಳದ ನಿವಾಸಿ ಜಯಶ್ರೀ ಹತ್ಯೆಗೀಡಾದವರು. ಜಯಶ್ರೀಗೆ ಗುಂಡ್ಮಿ ಗ್ರಾಮದ ಕಿರಣ್ ಉಪಾಧ್ಯ ಅವರೊಂದಿಗೆ 8 ತಿಂಗಳ ಹಿಂದೆ ವಿವಾಹವಾಗಿತ್ತು. ವಿವಾಹದ ನಂತರ ಇವರಿಬ್ಬರು ಕಾರ್ಕಡದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆದರೆ ಇಂದು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಜಯಶ್ರಿಗೆ ಕೌಟುಂಬಿಕ ಕಲಹದಿಂದ ಪತಿ ಕಿರಣ್ ಹತ್ಯೆ ನಡೆಸಿದ್ದಾನೆ ಎನ್ನಲಾಗಿದ್ದು, ಕೋಟ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಕಾಸರಗೋಡು; ಅಪಘಾತದಲ್ಲಿ ಯುವಕ ಮೃತ್ಯು

ಅಹಮ್ಮದ್ ಕಬೀರ್ ಮೃತ ಯುವಕ ಕಾಸರಗೋಡು;ಬೈಕ್ ಮತ್ತು ಕಾರು ನಡುವೆ ಉಂಟಾದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಚೆರ್ಕಳ ಕೆ.ಕೆ ಪುರದಲ್ಲಿ ನಡೆದಿದೆ. ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ (30)ಮೃತಪಟ್ಟವರು. ಸಂಬಂಧಿಕರೊಬ್ಬರ ವಿವಾಹ ಆಮಂತ್ರಣಕ್ಕೆ ತೆರಳಿ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ ಗಂಭೀರ ಗಾಯಗೊಂಡ ಕಬೀರ್ ರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿತ್ತು. ಮಂಗಳೂರಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಈ ಕುರಿತು ವಿದ್ಯಾನಗರ ಠಾಣಾ ಪೊಲೀಸರು […]
ಮಂಗಳೂರು; ಬೀದಿ ಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ನಡುವೆ ಜಗಳ; ದೂರು, ಪ್ರತಿದೂರು

ಮಂಗಳೂರು:ಬೀದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಮಧ್ಯೆ ಗುರುವಾರ ಹೊಡೆದಾಟ ನಡೆದಿದ್ದು, ಈ ಕುರಿತುಬಂದರು ಠಾಣೆಗೆ ದೂರು ನೀಡಲಾಗಿದೆ. ದ.ಕ.ಜಿಲ್ಲಾ ಬೀದಿ ವ್ಯಾಪಾರಿಗಳ ಶ್ರೇಯಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮತ್ತಿತರರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಸಂಘದ ಕೋಶಾಧಿಕಾರಿ ಆಸೀಫ್ ಬಾವ ಉರುಮಣೆ ಮತ್ತು ಉಪಾಧ್ಯಕ್ಷ ರಹ್ಮಾನ್ ಅಡ್ಯಾರ್ ಎಂಬವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮಧ್ಯೆ ಸಂಘದ ಕೋಶಾಧಿಕಾರಿ ಆಸೀಫ್ ಬಾವ ಉರುಮಣೆ, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ, ನವಾಝ್ ಕಣ್ಣೂರು, ಆನಂದ ಮತ್ತಿತರರ ವಿರುದ್ಧ […]
ಬೆಳ್ತಂಗಡಿ; ಪೊಲೀಸರಿಗೆ ಸವಾಲಾದ ಬೆಳಾಲು ಗ್ರಾಮದಲ್ಲಿ ನಡೆದ ನಿವೃತ್ತ ಶಿಕ್ಷಕನ ಕೊಲೆ ಕೇಸ್

ಬೆಳ್ತಂಗಡಿಯ ಬೆಳಾಲು ಗ್ರಾಮದ ಎಸ್.ಪಿ.ಬಿ. ಕೌಂಪೌಂಡ್ ನಿವಾಸಿ ನಿವೃತ್ತ ಶಾಲಾ ಮುಖ್ಯೋ ಪಾಧ್ಯಾಯ ಎಸ್.ಪಿ. ಬಾಲಕೃಷ್ಣ ಬಡೆಕ್ಕಿಲ್ಲಾಯ ಕೊಲೆ ಪ್ರಕರಣ ಪೊಲೀಸರಿಗೆ ತಲೆನೋವಾಗಿದ್ದು, ಈವರೆಗೆ ಆರೋಪಿಗಳ ಬಂಧನ ನಡೆದಿಲ್ಲ. ಬಾಲಕೃಷ್ಣ ಅವರು ಮನೆಯಲ್ಲಿ ಒಬ್ಬರೇ ಇದ್ದು, ಕೃತ್ಯ ನಡೆಸಿದ ಬಳಿಕ ಮನೆಯಿಂದ ಯಾವುದೇ ಸೊತ್ತುಗಳು ಕಳ್ಳತನ ನಡೆದಿಲ್ಲ. ಮೃತರ ಕೈಯಲ್ಲಿದ್ದ ಚಿನ್ನದ ಉಂಗುರ ಹಾಗೆಯೇ ಇದೆ ಎಂಬುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಇದರಿಂದ ದರೋಡೆ ಉದ್ದೇಶದಿಂದ ಕೊಲೆ ನಡೆದಿಲ್ಲ ಎಂದು ಅಂದಾಜಿಸಲಾಗಿದೆ. ಯಾವುದೋ ಮಾರಾಕಾಸ್ತ್ರದಿಂದ ಕೊಲೆ […]
ಸುಳ್ಯ; ಮಗನನ್ನು ಏರ್ ಪೋರ್ಟ್ ಗೆ ಬಿಟ್ಟು ಬರುವಾಗ ಕಾರು ಪಲ್ಟಿ; ತಂದೆ ದುರ್ಮರಣ

ಸುಳ್ಯ; ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ನಡೆದಿದೆ. ವಿರಾಜಪೇಟೆಯ ಗಣೇಶ್(64)ಮೃತಪಟ್ಟವರು. ಇವರು ತಮ್ಮ ಮಗನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ತಕ್ಷಣ ಅವರನ್ನು ಸುಳ್ಯದ ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರೆಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಮಗಳು,ಅಳಿಯ ಮತ್ತು ಇನ್ನೋರ್ವ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
BREAKING ಬಂಟ್ವಾಳ ಪುರಸಭೆ ಅಧ್ಯಕ್ಷ ಸ್ಥಾನ ಕಾಂಗ್ರೆಸ್, ಉಪಾಧ್ಯಕ್ಷ ಸ್ಥಾನ ಎಸ್ ಡಿಪಿಐ ತೆಕ್ಕೆಗೆ

ಬಂಟ್ವಾಳ: ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆಯು ಇಂದು ನಡೆದಿದ್ದು, ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ವಾಸು ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಎಸ್‌ಡಿಪಿಐ ಪಕ್ಷದ ಮೂನಿಶ್ ಅಲಿ ಆಯ್ಕೆಯಾಗಿದ್ದಾರೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಎ.ಗೋವಿಂದ ಪ್ರಭು, ಕಾಂಗ್ರೆಸ್ ನಿಂದ ವಾಸು ಪೂಜಾರಿ ಲೊರೆಟ್ಟೊ ಹಾಗೂ ಎಸ್.ಡಿ.ಪಿ.ಪಕ್ಷದ ಮಹಮ್ಮದ್ ಇದ್ರೀಶ್ ಪಿ.ಜೆ ನಾಮಪತ್ರ ಸಲ್ಲಿಸಿದ್ದರು. ಕೊನೇ ಕ್ಷಣದಲ್ಲಿ ಇದ್ರೀಶ್ ನಾಮಪತ್ರ ವಾಪಾಸ್ ಪಡೆದರು. ಅಧ್ಯಕ್ಷ ಚುನಾವಣೆಯಲ್ಲಿ ಎಸ್‌ಡಿಪಿಐ ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಹರಿಪ್ರಸಾದ್ […]
ಬೆಳ್ತಂಗಡಿ; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳ್ತಂಗಡಿ; ಅವಿವಾಹಿತ ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ನಿಟ್ಟಡೆ ಗ್ರಾಮದಲ್ಲಿ ನಡೆದಿದೆ. ದಿ| ಎಲ್ಲಪ್ಪ ಪೂಜಾರಿ ಪುತ್ರ ಸತೀಶ್ ಪೂಜಾರಿ (36) ಅವರು ಆ. 21ರಂದು ಬೆಳಗ್ಗೆ ಯಾರೂ ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು; ಐವನ್ ಡಿಸೋಜಾ ಮನೆಗೆ ಕಲ್ಲೆಸೆತ

ಮಂಗಳೂರು: ವಿಧಾನಪರಿಷತ್ ಶಾಸಕ ಐವನ್ ಡಿಸೋಜಾರ ಮನೆ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬುಧವಾರ ರಾತ್ರಿ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಐವನ್ ಡಿಸೋಜಾ ಅವರ ವೆಲೆನ್ಸಿಯಾದಲ್ಲಿದ್ದ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಕಲ್ಲು ತೂರಾಟದಿಂದ ಅವರ ಮನೆಯ ಕಿಟಕಿಯ ಗಾಜಿಗೆ ಹಾನಿಯಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು; ನವಜಾತ ಶಿಶುವಿಗೆ ಅನ್ಯಾಯ; ಕುಟುಂಬದ ಆರೋಪ, ಡಿಸಿಗೆ ದೂರು

ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ನವಜಾತ ಶಿಶುವಿಗೆ ಅನ್ಯಾಯವಾಗಿದೆ ಎಂದು ಮಗುವಿನ ಪೋಷಕರು ಪೊಲೀಸರಿಗೆ ಹಾಗೂ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ. ಪಾಣೆಮಂಗಳೂರಿನ ನಿವಾಸಿ ಹಾಗೂ ಸಂತ್ರಸ್ತೆ ಭವ್ಯ ಎಂಬವರು ತಮಗೆ ಅನ್ಯಾಯ ಆಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಇದಲ್ಲದೆ ತುಳುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಸೂಕ್ತ ತನಿಖೆಗೆ ಆಗ್ರಹಿಸಲಾಗಿದೆ. ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಭವ್ಯ ಅವರು ತಮ್ಮ ಎರಡನೆ ಹೆರಿಗೆಗಾಗಿ ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ಆ. 17ರಂದು ತೆರಳಿದ್ದರು. […]
ವಿಟ್ಲ; ಅಪಘಾತದ ಗಾಯಾಳು ಯುವಕ ಮೃತ್ಯು

ವಿಟ್ಲ; ಅಪಘಾತದ ಗಾಯಾಳು ಯುವಕ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಮುಝಂಬಿಲ್ ಮೃತ ಯುವಕ. ಆ.12ರಂದು ವಿಟ್ಲ- ಸಾಲೆತ್ತೂರು ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ಮುಝಂಬಿಲ್ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ ಹೊಡೆದಿತ್ತು. ಅವರನ್ನು ಬಳಿಕ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ವಿಟ್ಲದಿಂದ ಮುಡಿಪು ಕಡೆ ತೆರಳುತ್ತಿದ್ದ ಬಸ್ ಮುಝಂಬಿಲ್ ತೆರಳುತ್ತಿದ್ದ ಆಕ್ಟಿವಾಗೆ ಢಿಕ್ಕಿ ಹೊಡೆದಿತ್ತು.