ವಿಟ್ಲ ಜಮಾಅತ್ ಯೂತ್ ವಿಂಗ್ ವತಿಯಿಂದ ಆ.25ಕ್ಕೆ ಮಜ್ಲಿಸ್‌ನ್ನೂರ್ ಕಾರ್ಯಕ್ರಮ

ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ವಿಟ್ಲ ಜಮಾಅತ್ ಯೂತ್ ವಿಂಗ್ ವತಿಯಿಂದ ನಡೆಸಲ್ಪಡುತ್ತಿರುವ ಮಜ್ಲಿಸ್‌ನ್ನೂರ್ ಕಾರ್ಯಕ್ರಮವು 25-8-2024 ನೇ ಆದಿತ್ಯವಾರ ಇಶಾ ನಮಾಝ್ ನ ಬಳಿಕ ಖತೀಬರಾದ ದಾವೂದ್ ಹನೀಫಿಯವರ ನೇತೃತ್ವದಲ್ಲಿ ನಡೆಯಲಿದೆ. ಮಸೀದಿ ಅಧ್ಯಕ್ಷರಾದ ಅಶ್ರಫ್ ಮಹಮ್ಮದ್ ಪೊನ್ನೋಟು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಸಂಘಟಕರು ವಿನಂತಿ ಮಾಡಿಕೊಂಡಿದ್ದಾರೆ.
ಕಾರ್ಕಳ: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜು ವಿದ್ಯಾರ್ಥಿ ಮೃತ್ಯು

ಕಾರ್ಕಳ: ಬಸ್ಸಿನಿಂದ ಎಸೆಯಲ್ಪಟ್ಟು ಕಾಲೇಜ್ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಬುಧವಾರ ಬೆಳಗ್ಗೆ ಕಾರ್ಕಳದ ನಿಟ್ಟೆಯಲ್ಲಿ ಸಂಭವಿಸಿದೆ. ಮಾಳ ಗ್ರಾಮದ ಹುಕ್ರಟ್ಟೆಯ ಜನಿತ್ ಶೆಟ್ಟಿ (19) ಮೃತ ವಿದ್ಯಾರ್ಥಿಯಾಗಿದ್ದಾನೆ. ಜನಿತ್ ನಿಟ್ಟೆ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ಬೆಳಿಗ್ಗೆ ಕಾರ್ಕಳದಿಂದ ಮಂಗಳೂರಿಗೆ ಹೋಗುವ ಖಾಸಗಿ ಬಸ್ಸಿನಲ್ಲಿ ಕಾಲೇಜಿಗೆ ಹೋಗುತ್ತಿದ್ದ ಸಂದರ್ಭ ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಎಸೆಯಲ್ಪಟ್ಟಿದ್ದು ಈ ಸಂದರ್ಭ ಆತನ ಮೈ ಮೇಲೆ ಬಸ್ಸಿನ ಹಿಂಬದಿಯ ಚಕ್ರ ಹರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ. […]
ಬಂಟ್ವಾಳ; ನದಿಯಲ್ಲಿ ತೇಲಿಕೊಂಡು ಬಂದ ಮಹಿಳೆಯ ಮೃತದೇಹ!

ಬಂಟ್ವಾಳ: ಮಹಿಳೆಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಶಂಭೂರು ಗ್ರಾಮದಲ್ಲಿರುವ ಎಎಂಆರ್ ಪವರ್ ಡ್ಯಾಮಿನ 6 ನೇ ಗೇಟ್ ಬಳಿ ಸಿಕ್ಕಿದೆ. ಮಹಿಳೆಗೆ ಸುಮಾರು 40-50 ವರ್ಷ ಪ್ರಾಯ ಆಗಿರಬಹುದೆಂದು ಅಂದಾಜಿಸಲಾಗಿದ್ದು, 15 ದಿನಗಳ ಹಿಂದೆ ಈ ಅಪರಿಚಿತ ಮಹಿಳೆ ನೇತ್ರಾವತಿ ನದಿಗೆ ಆಕಸ್ಮಿಕವಾಗಿ ಬಿದ್ದು ಅಥವಾ ನದಿಗೆ ಹಾರಿರುವ ಶಂಕೆ ಇದೆ. ಮೃತದೇಹ ನದಿ ನೀರಿನಲ್ಲಿ ತೇಲಿಕೊಂಡು ಬಂದು ಶಂಭೂರು ಡ್ಯಾಮಿನಲ್ಲಿ ಸಿಕ್ಕಿ ಹಾಕಿಕೊಂಡಿರಬೇಕೆಂದು ಶಂಕಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಠಾಣೆಗೆ ದೂರು

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಬಿಜೆಪಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದೆ. ಆ.19ರಂದು ಬೆಳ್ತಂಗಡಿ ಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರತಿಭಟನೆಯಲ್ಲಿ ಪ್ರಧಾನಿ ಯವರೇ ಒಂದು ವಿಚಾರ ವನ್ನು ತಿಳಿದುಕೊಳ್ಳಿ, ಬಾಂಗ್ಲಾ ದೇಶದಲ್ಲಿ ಹಾಸಿಗೆ ದಿಂಬು ಹಿಡ್ಕೊಂಡು ಹೋದ್ರಲ್ಲ ಆ ಪ್ರಸಂಗ ನಿಮಗೂ ಕೂಡ ಅತೀ ಶೀಘ್ರದಲ್ಲಿ ಬರಲಿದೆ ಎಚ್ಚರವಾಗಿರಿ ಎಂದು ದೇಶದಲ್ಲಿ ಅರಾಜಕತೆ ಸೃಷ್ಟಿಸುವ ರಾಷ್ಟ್ರ ವಿರೋಧಿ […]
ಪುತ್ತೂರು ಇರಿತ ಪ್ರಕರಣ; ಶಿಕ್ಷಕಿ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತ ಬಾಲಕಿ

ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಾಲಕಿಯ ಕೈಗೆ ಇರಿತ ಪ್ರಕರಣಕ್ಕೆ ಸಂಬಂಧಿಸಿ ಶಿಕ್ಷಕಿ ವಿರುದ್ಧ ಸಂತ್ರಸ್ತ ವಿದ್ಯಾರ್ಥಿನಿ ಗಂಭೀರವಾದ ಆರೋಪವನ್ನು ಮಾಡಿದ್ದಾರೆ. ಈ ಕುರಿತು ಬಾಲಕಿಯ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ಆಸ್ಪತ್ರೆಯಲ್ಲಿ ಹೆಸರು ಬದಲಾಯಿಸಿ ಹೇಳುವಂತೆ ಹಾಗೂ ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳಲು ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ಬಾಲಕಿಯು ಗಂಭೀರವಾದ ಆರೋಪ ಮಾಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕಿ ವಿರುದ್ಧ ಕ್ರಮವನ್ನು ಕೈಗೊಳ್ಳುವಂತೆ ವ್ಯಾಪಕವಾದ ಆಗ್ರಹ ವ್ಯಕ್ತವಾಗಿದೆ. ಇದರ ಬೆನ್ನಲ್ಲಿ […]
ಪುತ್ತೂರು; ವಿದ್ಯಾರ್ಥಿನಿಗೆ ಇರಿತ ಪ್ರಕರಣ; ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಪುತ್ತೂರು; ಕೊಂಬೆಟ್ಟು ಕಾಲೇಜು ವಿದ್ಯಾರ್ಥಿನಿಗೆ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಆರೋಪಿ ವಿದ್ಯಾರ್ಥಿಯ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ವಿದ್ಯಾರ್ಥಿನಿ ಕಾಲೇಜಿಗೆ ಹೋಗುವಾಗ ಬಂದ ಪರಿಚಯಸ್ಥ ವಿದ್ಯಾರ್ಥಿ ಆಕೆಗೆ ಪ್ರೇಮ ನಿವೇದನೆ ಮಾಡಿದ್ದಾನೆ. ಇದನ್ನು ನಿರಾಕರಿಸಿದಾಗ ಬಾಲಕಿಗೆ ಆತನ ಕೈಯ್ಯಲ್ಲಿದ್ದ ಹರಿತವಾದ ಆಯುಧದಿಂದ ಇರಿದು ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಉಡುಪಿ; ಕಾಲೇಜು ಪಕ್ಕದ ಬಾವಿಯಲ್ಲಿ ಪಿಯುಸಿ ವಿದ್ಯಾರ್ಥಿಯ ಮೃತದೇಹ ಪತ್ತೆ

ಕ್ಷುಲ್ಲಕ ಕಾರಣಕ್ಕೆ ಮನೆಬಿಟ್ಟು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ನಡೆದಿದೆ. ಹಿರಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯಲ್ಲಿ ಮೃತ ವಿದ್ಯಾರ್ಥಿ ಶವ ಸಿಕ್ಕಿದೆ. ಪ್ರಥಮೇಶ್ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸೋಮವಾರ ಮೊಬೈಲ್ ಕೊಡದಿದ್ದಕ್ಕೆ ಜಗಳವಾಡಿ ಆತ ಮನೆಬಿಟ್ಟು ಹೋಗಿದ್ದನು. ಬಳಿಕ ಮನೆಯವರು ಹಾಗೂ […]
ಪುತ್ತೂರು; ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆಲ್ಲೂರಿನಲ್ಲಿ ನಡೆದಿದೆ. ಕೆಯ್ಯೂರು ಉದ್ಯೋಳೆ ನಿವಾಸಿ ಸಚಿನ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಚಿನ್ ಫಿಲೋಮಿನಾ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮುಗಿಸಿದ್ದು, ಕೆಲಸದ ಹುಡುಕಾಟದಲ್ಲಿದ್ದರು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಚಿ; ಬೀದಿ ದೀಪಗಳನ್ನು ಸರಿಪಡಿಸಲು Sdpiಯಿಂದ ಮನವಿ

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಮಂಚಿ ಕಟ್ಟೆ ಜಂಕ್ಷನ್ ಕುಕ್ಕಾಜೆ ಜಂಕ್ಷನ್ ಹಾಗೂ ನೂಜಿ ಮುಂತಾದ ಕಡೆ ಹಾಕಿದ ಹೈಮಾಸ್ ಲೈಟ್ ಸರಿಪಡಿಸಲು SDPI ಮಂಚಿ ಹಾಗೂ ಕುಕ್ಕಾಜೆ ಬೂತ್ ಸಮಿತಿ ವತಿಯಿಂದ ಮಂಚಿ ಗ್ರಾಮದ ಅಭಿವೃದ್ಧಿ ಅಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಇದಲ್ಲದೆ ಗ್ರಾಮದ ಹಲವಾರು ಸಮಸ್ಯೆಗಳ ಬಗ್ಗೆ ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ GM ಇಬ್ರಾಹಿಂರವರಲ್ಲಿ ಚರ್ಚೆ ನಡೆಸಲಾಗಿದೆ. ಈ ಸಂದರ್ಭದಲ್ಲಿ SDPI ಕುಕ್ಕಾಜೆ ಬೂತ್ ಅಧ್ಯಕ್ಷ ಫೈಝಲ್ ಮಂಚಿ ಹಾಗೂ SDPI ಮಂಚಿ ಬೂತ್ […]
ಬೆಳ್ತಂಗಡಿ; ಮಾರಕಾಸ್ತ್ರದಿಂದ ಕೊಚ್ಚಿ ನಿವೃತ ಶಿಕ್ಷಕನ ಬರ್ಬರ ಹತ್ಯೆ

ನಿವೃತ್ತ ಶಿಕ್ಷಕರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ಘಟನೆ ನಡೆದಿದ್ದು, ಮಾರಕಸ್ತ್ರಗಳಿಂದ ಕೊಚ್ಚಿ ಶಿಕ್ಷಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮನೆ ಆವರಣದಲ್ಲಿ ಎಸ್ ಪಿ ಬಾಲಕೃಷ್ಣ ಭಟ್ (73) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.