ಕಾಡಾನೆ ದಾಳಿಗೆ ಸಿಲುಕಿ ಕಾರು ಜಖಂ : ಪ್ರಾಣಾಪಾಯದಿಂದ ಪಾರಾದ ಚಾಲಕ

ಜನವಾಹಿನಿ News ಸಿದ್ದಾಪುರ : ಕಾಡಾನೆ ದಾಳಿಗೆ ಒಳಗಾಗಿ ಕಾರೊಂದು ಜಖಂ ಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಾಪುರದ ವ್ಯಾಪ್ತಿಯ ಕೆಸನಳ್ಳ ಬಳಿ ಘಟನೆ ನಡೆದಿದ್ದು, ಪುಲಿಯೇರಿ ಗ್ರಾಮದ ನಿವಾಸಿ ಪ್ರಜಿತ್ ಎಂಬುವವರಿಗೆ ಸೇರಿದ ಕಾರು ಜಖಂಗೊಂಡಿದೆ. ಕಾರಿನ ಮೇಲೆ ಏಕಾಏಕಿ ದಾಳಿ ನಡೆಸಿದ ಕಾಡಾನೆ ಹಿಂಡು ಕಾರನ್ನು ಜಖಂಗೊಳಿಸಿವೆ. ಸಿದ್ದಾಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಭಯಭೀತರಾಗಿರುವ ಗ್ರಾಮಸ್ಥರು ಕಾಡಾನೆ ಹಾವಳಿ ತಡೆಯಲು […]
ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11 ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆ

ಜನವಾಹಿನಿ News ಮಡಿಕೇರಿ : ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11 ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ 2024-25 ನೇ ಸಾಲಿನ ಬೇಸಿಗೆ ಋತುವಿನ ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಬೆಳೆ ಸಮೀಕ್ಷೆ ಪರಿಶೀಲನೆ ಸಂಬಂಧಿಸಿದಂತೆ ಮಾಹಿತಿ ನೀಡುವುದು, […]
ನಾಳೆಯಿಂದ ಮಂಡ್ಯದಲ್ಲಿ ಕೃಷಿ ಮೇಳ

ಜನವಾಹಿನಿ News ಮಡಿಕೇರಿ : ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪಣೆ ಮತ್ತು ಪಶು ವೈದ್ಯಕೀಯ ಸೇವೆಗಳು, ಜಲಾನಯನ ಅಭಿವೃದ್ಧಿ, ರೇಷ್ಮೆ, ಅರಣ್ಯ, ಮೀನುಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್, 05 ರಿಂದ ನಾಳೆಯಿಂದ 7 ವರೆಗೆ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಮಗ್ರ ಕೃಷಿಯಿಂದ ಸುಸ್ಥಿರತೆ ಎಂಬ ವಿಷಯದಡಿ ಕೃಷಿ ಮೇಳ-2025 ನಡೆಯಲಿದೆ. […]
ಬೆಳೆಗಾರರಿಗೆ ಪರಿಹಾರ ನೀಡದ ಸರ್ಕಾರ : ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಯನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಮ್ಮುಣಿಚಂಡ ರಂಜಿ ಪೂಣಚ್ಚ ಮಾತನಾಡಿ, ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆಯ ರೂ.೬,೦೦೦ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಬಿ.ಜೆ.ಪಿ ಸರ್ಕಾರ ರೂ.೪,೦೦೦ ಒಟ್ಟು ೧೦.೦೦೦ ರೂಪಾಯಿಗಳನ್ನು ನೀಡುತ್ತಿತ್ತು. ಕಾಂಗ್ರೆಸ್ ಆಡಳಿತಕ್ಕೆ […]
ಕೃಷಿ ಸಚಿವ ಚೆಲುವರಾಯಸ್ವಾಮಿ ಜತೆ ಶಾಸಕ ಪೊನ್ನಣ್ಣ ಚರ್ಚೆ

ಜನವಾಹಿನಿ News ಬೆಂಗಳೂರು : ಕರ್ನಾಟಕ ಬರಪಿಡಿತ ಜಿಲ್ಲೆಗಳಲ್ಲಿ, ಪರ ಮತ್ತು ಉಷ್ಣತಾಳುವ ಮೆಕ್ಕೆಜೋಳ ಮತ್ತು ಸುಧಾರಿತ ಕೃಷಿ ಪದ್ಧತಿಗಳ ವಿಸ್ತರಣೆ ಕುರಿತು ಮಾನ್ಯ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರನ್ನು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹಾಗೂ ತಜ್ಞರ ತಂಡ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು. ಇದೆ ಸಂದರ್ಭದಲ್ಲಿ ಮಾನ್ಯ ಸಚಿವರೊಂದಿಗೆ ಕ್ಷೇತ್ರಕ್ಕೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಸಹಾಯಧನ

ಜನವಾಹಿನಿ News ಮಡಿಕೇರಿ : 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್‍ಪುಸ್ತಕ ಪ್ರತಿ ಹಾಗೂ ಎರಡು ಸ್ಟ್ಯಾಂಪ್ ಅಳತೆಯ […]
ಕಾಫಿ ಬೆಳೆಗಾರರಿಗೆ ಮಳೆ ಹಾನಿ ಪರಿಹಾರ ಒದಗಿಸಲು ಕ್ರಮ : ಸಚಿವ ಭೋಸರಾಜು

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಬೆಳೆಗಾರರಿಗೂ ಮಳೆ ಹಾನಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಪ್ರತಿಕ್ರಿಯಿಸಿದ್ದಾರೆ. ಮಡಿಕೇರಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಉಂಟಾಗಿದೆ ಈ ಹಿನ್ನೆಲೆ ಉತ್ತರ ಭಾಗಕ್ಕೆ ಈಗಾಗಲೇ ಸಿಎಂ ಭೇಟಿ ನೀಡಿದ್ದಾರೆ. ಎರಡೂವರೆ ಸಾವಿರ ಕೋಟಿ ಮಳೆಯಿಂದ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಪರಿಹಾರಕ್ಕಾಗಿ ಮೌಲ್ಯಮಾಪನ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಕಾಫಿ ಬೆಳೆಗಾರರಿಗೆ ಮಳೆಯಿಂದ […]
ಕೃಷಿ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ

ಕೃಷಿ ಪ್ರಶಸ್ತಿಗೆ ರೈತ ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನ ಮಡಿಕೇರಿ : ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ-ಕೃಷಿ ಉತ್ಪಾದನಾ ಬಹುಮಾನ ಯೋಜನೆಯನ್ನು ಕೃಷಿ ಇಲಾಖಾ ವತಿಯಿಂದ ಅನುಷ್ಠಾನ ಗೊಳಿಸಲಾಗುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ (2025-26) ಸಹ ರೈತ/ ರೈತ ಮಹಿಳೆಯರಿಂದ ಪ್ರತ್ಯೇಕವಾಗಿ (ಭತ್ತ ಮಳೆಯಾಶ್ರಿತ)) ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. 2025-26 ನೇ ಸಾಲಿನಿಂದ ಅನ್ವಯಿಸುವಂತೆ ಕೃಷಿ ಪ್ರಶಸ್ತಿಗೆ ನಿಗದಿ ಪಡಿಸಲಾಗಿರುವ ಪ್ರವೇಶ […]
ಕೃಷಿ ಬಳಕೆ ಯೂರಿಯಾ ಅಕ್ರಮ ದಾಸ್ತಾನು ಇದ್ದಲ್ಲಿ ಮಾಹಿತಿ ನೀಡಲು ಮನವಿ

ಕೃಷಿ ಬಳಕೆ ಯೂರಿಯಾ ಅಕ್ರಮ ದಾಸ್ತಾನು ಇದ್ದಲ್ಲಿ ಮಾಹಿತಿ ನೀಡಲು ಮನವಿ ಮಡಿಕೇರಿ : ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರವನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಕೆ ಮಾಡದಂತೆ ತಡೆಯಲು ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲ್ಲೂಕುಗಳ ಕೈಗಾರಿಕ ಪ್ರದೇಶಗಳಲ್ಲಿ ರಿಯಾಯಿತಿ ದರದ ಬೇವು ಲೇಪಿತ ಯೂರಿಯಾ ರಸಗೊಬ್ಬರ ಬಳಸುತ್ತಿರುವ ಕಾರ್ಖಾನೆ/ ಕೈಗಾರಿಕೆಗಳನ್ನು ಪತ್ತೆ ಹಚ್ಚಿ, ಬಳಸುತ್ತಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ಹಾಗೂ ರಸಗೊಬ್ಬರ (ನಿಯಂತ್ರಣ) ಆದೇಶ 1985ರ ಅನ್ವಯ […]
ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ – ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ

ತಿತಿಮತಿಯಲ್ಲಿ ರೈತ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ – ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಎಚ್ಚರಿಕೆ ಮಡಿಕೇರಿ : ಜಿಲ್ಲೆಯಲ್ಲಿ ಮುಂದುವರೆದಿರುವ ಕಾಡು ಪ್ರಾಣಿಗಳ ಹಾವಳಿಯಿಂದ ರೈತರು, ಕಾರ್ಮಿಕರು, ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದಂತಹ ಸ್ಥಿತಿ ಎದುರಾಗಿದೆ. ಕೂಡಲೇ ಕಾಡು ಪ್ರಾಣಿಗಳ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟದಿದ್ದಲ್ಲಿ ಕೊಡಗು ಬಂದ್ ಗೆ ಕರೆ ನೀಡುವ ಮೂಲಕ ತೀವ್ರ ಸ್ವರೂಪದ ಹೋರಾಟವನ್ನು ರೂಪಿಸಲಾಗುತ್ತದೆ ಎಂದು ಕೊಡಗು ರೈತ ಸಂಘದ ಎಚ್ಚರಿಸಿದೆ. […]