Breaking News :

ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

  ಜನವಾಹಿನಿ NEWS ಮಡಿಕೇರಿ : ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬಿಳಿಗೇರಿ ಸಮೀಪದ ಟಾಟಾ ಕಾಫಿ ತೋಟದಲ್ಲಿ ಬುಧವಾರ ಹೃದಯವಿದ್ರಾವಕ ದುರಂತ ಸಂಭವಿಸಿದೆ. ಕೆಲಸ ಮಾಡುತ್ತಿದ್ದ ವೇಳೆ ವೇಳೆ ಏಕಾಏಕಿ ಮರ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಮೃತಪಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾದಪುರ ಸಮೀಪದ ಬಿಳಿಗೇರಿಯ ಟಾಟಾ ಕಾಫಿ ತೋಟದಲ್ಲಿ ಕಾರ್ಮಿಕರು ಎಂದಿನಂತೆ ಕೆಲಸದಲ್ಲಿ ತೊಡಗಿದ್ದ ವೇಳೆ ಭಾರಿ ಗಾಳಿ ಮಳೆಗೆ ಮರವೊಂದು ಉರುಳಿ ಬಿದ್ದ ಪರಿಣಾಮ ಅಸ್ಸಾಂ […]

ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

  ಜನವಾಹಿನಿ NEWS ಕುಶಾಲನಗರ : ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಶನಿವಾರ ನದಿಗೆ ಹರಿಯ ಬಿಡಲಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು 4 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಹಾರಂಗಿ ಜಲಾಶಯದ ಕ್ರಸ್ಟ್ ಗೇಟ್ ಮೂಲಕ ನದಿಗೆ ಹರಿಯ ಬಿಡಲಾಗಿದೆ. ಹಾರಂಗಿ ಜಲಾಶಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನೀರನ್ನು ನದಿಗೆ ಹರಿಯ ಬಿಡಲಾಗಿದೆ. ಈ ವೇಳೆ ಹಾರಂಗಿ ಜಲಾಶಯದ ಇಇ ಮಹೇಶ್, ಎಇಇ ಪುಟ್ಟಸ್ವಾಮಿ, […]

ಮರ ಕಪಾತ್ ವೇಳೆ ವಿದ್ಯುತ್ ತಂತಿ ತಗುಲಿ ಬೆಳೆಗಾರ ಸಾವು

  ಜನವಾಹಿನಿ NEWS ವಿರಾಜಪೇಟೆ : ಮರ ಕಡಿಯುವ ವೇಳೆ 11 ಕೆವಿ ವಿದ್ಯುತ್‌ ತಂತಿ ಸ್ಪರ್ಶಿಸಿ ಬೆಳೆಗಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಿಟ್ಟಂಗಾಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಎರಡನೇ ರುದ್ರಗುಪ್ಪೆ ಜೋಡು ಭಗವತಿ ದೇವಾಲಯದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬೆಳೆಗಾರ ಕೊಂಗಂಡ ಅರುಣ (52) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ಅರುಣ ಅವರು ಮರ ಕಡಿಯುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಮರವು ಸಮೀಪದ 11 ಕೆವಿ ವಿದ್ಯುತ್ ತಂತಿಯ […]

ಕಾಡಾನೆ ಹಾವಳಿ ತಡೆಗೆ ವಿಫಲ, ರೈತರ ಕಡೆಗಣನೆ ಆರೋಪ : ರಾಜ್ಯ ಸರಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ, ವಾಹನ ಜಾಥಾ

  ಜನವಾಹಿನಿ NEWS ಮಡಿಕೇರಿ : ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಕಾಡಾನೆ ಹಾಗೂ ಮಾನವ ಸಂಘರ್ಷವನ್ನು ತಡೆಯಲು ವಿಫಲವಾದ ಹಾಗೂ ರೈತರನ್ನು ಕಡೆಗಣಿಸಿರುವ ರಾಜ್ಯ ಸರ್ಕಾರದ ದೋರಣೆಯ ವಿರುದ್ಧ ಸೋಮವಾರ ಬೃಹತ್ ಜನಾಕ್ರೋಶ ವಾಹನ ಜಾಥಾ ಹಾಗೂ ಪ್ರತಿಭಟನಾ ಸಭೆ ಮಡಿಕೇರಿ ನಗರದಲ್ಲಿ ನಡೆಯಿತು. ಜಿಲ್ಲೆಯ ಭಾಗಮಂಡಲ, ಸೋಮವಾರಪೇಟೆ, ಕುಟ್ಟ, ಸಿದ್ದಾಪುರ, ತೊರೆನೂರು ವ್ಯಾಪ್ತಿಯಿಂದ ನೂರಾರು ವಾಹನಗಳ ಮೂಲಕ ಕಾರ್ಯಕರ್ತರು, ರೈತರೊಂದಿಗೆ ವಾಹನ ಜಾಥಾ ಮೂಲಕ ಆಗಮಿಸಿ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡರು. ಈ ಸಂದರ್ಭ ಕೊಡಗು ಮತ್ತು […]

ಮೀನುಗಾರಿಕೆ ಇಲಾಖೆಯಿಂದ ಮೀನು ಮರಿ ವಿತರಣೆ

  ಜನವಾಹಿನಿ NEWS ಮಡಿಕೇರಿ : ಪ್ರತಿ ವರ್ಷದಂತೆ 2026-27ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯಿಂದ ಸರ್ಕಾರ ನಿಗಧಿಪಡಿಸಿದ ದರಗಳಲ್ಲಿ ಬಿತ್ತನೆಗೆ ಯೋಗ್ಯವಾದ ಮೀನುಮರಿಗಳನ್ನು ಲಭ್ಯತೆಗೆ ಅನುಗುಣವಾಗಿ ವಿತರಿಸಲಾಗುವುದು. ಆಸಕ್ತ ಕೃಷಿಕರು ತಮ್ಮ ಬೇಡಿಕೆಯನ್ನು ಸಂಬಂಧಪಟ್ಟ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಮಡಿಕೇರಿ ತಾಲ್ಲೂಕು ವಿನಯ್ 9769070850, ಸೋಮವಾರಪೇಟೆ ತಾಲ್ಲೂಕು ನಿರ್ವಾಣಿ 9448918782, 7338218782, ವಿರಾಜಪೇಟೆ ತಾಲ್ಲೂಕಿನ ನಿಶಾಂತ್ ಬಿ.ಕೆ. 9731363143, ಕುಶಾಲನಗರ ತಾಲ್ಲೂಕಿನ ಸಚಿನ್ 9886717626 ಹಾಗೂ ಮಂಜು 8296765595 ನ್ನು […]

ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ 

  ಜನವಾಹಿನಿ NEWS ಮಡಿಕೇರಿ : ಕೃಷಿಕರಿಗೆ ನಕಲಿ ಹಾಗೂ ಅಸಲಿ ರಸಗೊಬ್ಬರದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ಮಾರಾಟಗಾರರು, ವಿತರಕರು ರೈತರಿಗೆ ಮೋಸವಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದರು. ಕಳಪೆ ಹಾಗೂ ನಕಲಿ ಬಿತ್ತನೆ ಬೀಜ ಮತ್ತು ಕೀಟನಾಶಕಗಳ ಮಾರಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಕೆಲವು ಅನಧೀಕೃತ ಮತ್ತು […]

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ನೋಂದಣಿಗೆ ಮನವಿ

  ಜನವಾಹಿನಿ NEWS ಮಡಿಕೇರಿ : ಕರ್ನಾಟಕ ಸರ್ಕಾರವು 2026-27 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು ಅನುಷ್ಠಾಗೊಳಿಸಲು ಅಧಿಸೂಚಿಸಿದೆ. ಕೊಡಗು ಜಿಲ್ಲೆಯಲ್ಲಿ ಕಾಳುಮೆಣಸು ಹಾಗೂ ಅಡಿಕೆ ಬೆಳೆಗೆ ವಿಮಾ ಘಟಕ ಅಧಿಸೂಚಿಸಲಾಗಿದೆ. ಹವಾಮಾನ ಆಧಾರಿತ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಮತ್ತಿತರ ಮಾಹಿತಿಯನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗಿದೆ. 2026-27 ನೇ ಸಾಲಿನಲ್ಲಿ ಮುಂಗಾರು […]

ವಾಟೆಕಾಡು ಸಸ್ಯಕ್ಷೇತ್ರ : ರಿಯಾಯ್ತಿ ದರದಲ್ಲಿ ಸಸಿ-ಗಿಡಗಳ ವಿತರಣೆ 

  ಜನವಾಹಿನಿ NEWS ಮಡಿಕೇರಿ : ಮಡಿಕೇರಿ ಸಾಮಾಜಿಕ ಅರಣ್ಯ ವಲಯದ ಹೊದ್ದೂರು ವಾಟೆಕಾಡು ಸಸ್ಯಕ್ಷೇತ್ರದಲ್ಲಿ 2026-27 ನೇ ಸಾಲಿನ ಮಳೆಗಾಲದಲ್ಲಿ ನೆಡಲು ವಿವಿಧ ಹಣ್ಣಿನ, ಔಷಧೀಯ ಹಾಗೂ ಕಾಡು ಜಾತಿಯ ಸಸಿಗಳನ್ನು ಬೆಳೆಸಲಾಗಿದೆ. ಮಹಾಗನಿ, ನೇರಳೆ, ರಕ್ತಚಂದನ, ನಿಂಬೆ, ನೆಲ್ಲಿ, ಸಂಪಿಗೆ, ಲಾವಂಚ, ಸೀಬೆ, ತೇಗ, ಹೊನ್ನೆ, ಬೀಟೆ, ಹಿಪ್ಪೆ, ಸಿಮಾರೂಬಾ, ಬಿದಿರು ಮುಂತಾದ ಸಸಿಗಳು ಲಭ್ಯವಿದ್ದು ರೈತ ಫಲಾನುಭವಿಗಳಿಗೆ ಸರ್ಕಾರದ ಹೊಸ ಪರಿಷ್ಕøತ ಆದೇಶದಂತೆ 8*12 ಅಳತೆಯ ಗಿಡ ಒಂದಕ್ಕೆ ರೂ. 6 ಮತ್ತು […]

ಕಾಡಾನೆ ದಾಳಿಗೆ ಸಿಲುಕಿ ಕಾರು ಜಖಂ : ಪ್ರಾಣಾಪಾಯದಿಂದ ಪಾರಾದ ಚಾಲಕ 

ಜನವಾಹಿನಿ News ಸಿದ್ದಾಪುರ : ಕಾಡಾನೆ ದಾಳಿಗೆ ಒಳಗಾಗಿ ಕಾರೊಂದು ಜಖಂ ಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದ ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಾಪುರದ ವ್ಯಾಪ್ತಿಯ ಕೆಸನಳ್ಳ ಬಳಿ ಘಟನೆ ನಡೆದಿದ್ದು, ಪುಲಿಯೇರಿ ಗ್ರಾಮದ ನಿವಾಸಿ‌ ಪ್ರಜಿತ್‌ ಎಂಬುವವರಿಗೆ ಸೇರಿದ ಕಾರು ಜಖಂಗೊಂಡಿದೆ. ಕಾರಿನ‌ ಮೇಲೆ ಏಕಾಏಕಿ ದಾಳಿ ನಡೆಸಿದ ಕಾಡಾನೆ ಹಿಂಡು ಕಾರನ್ನು ಜಖಂಗೊಳಿಸಿವೆ. ಸಿದ್ದಾಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಭಯಭೀತರಾಗಿರುವ ಗ್ರಾಮಸ್ಥರು ಕಾಡಾನೆ ಹಾವಳಿ ತಡೆಯಲು […]

ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11 ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆ

ಜನವಾಹಿನಿ News ಮಡಿಕೇರಿ : ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11 ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ 2024-25 ನೇ ಸಾಲಿನ ಬೇಸಿಗೆ ಋತುವಿನ ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಬೆಳೆ ಸಮೀಕ್ಷೆ ಪರಿಶೀಲನೆ ಸಂಬಂಧಿಸಿದಂತೆ ಮಾಹಿತಿ ನೀಡುವುದು, […]