Breaking News :

ಕೊಳವೆ ಬಾವಿ ನಿರ್ಮಿಸಿಕೊಡಲು ಲಂಚದ ಬೇಡಿಕೆ : ಪಂಚಾಯತಿ ಅಧ್ಯಕ್ಷೆ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

  ಜನವಾಹಿನಿ NEWS ಕರಾವಳಿ: ಕೃಷಿ ಜಮೀನಿಗೆ ಕೊಳವೆ ಬಾವಿ ನಿರ್ಮಿಸಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಬಂಟ್ವಾಳ ತಾಲ್ಲೂಕು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸಾ, ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ. ‘ನಮ್ಮ ಮಾವನಿಗೆ ಪೆರುವಾಯಿ ಗ್ರಾಮದಲ್ಲಿ ಒಂದು ಎಕರೆ ಕೃಷಿ ಜಮೀನು ಇದ್ದು, ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕೊಳವೆ ಬಾವಿ ಮಂಜೂರು ಮಾಡಲು ಅರ್ಜಿ ಸಲ್ಲಿಸಿದ್ದರು. ಮಾವನಿಗೆ […]

ಸಂಪಾಜೆಯಲ್ಲಿ ಭೀಕರ ರಸ್ತೆ ಅಪಘಾತ : ನೆಲ್ಯಹುದಿಕೇರಿ ಗ್ರಾಮದ ಯುವತಿ ( ಶೋಭಾ) ಸಾವು 

ಜನವಾಹಿನಿ NEWS ಮಡಿಕೇರಿ : ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನೆಲ್ಯಹುದಿಕೇರಿ ಗ್ರಾಮದ ಶೋಭಾ ಮಹಿಳೆ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಗಾಯಾಳುಗಳಿಗೆ […]

ದೂರು ನೀಡಲು ಬಂದಿದ್ದ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿ ಅಮಾನತು

  ಜನವಾಹಿನಿ NEWS ಮೂಡುಬಿದಿರೆ : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೊಬ್ಬ ಕರೆ ಮಾಡಿ ಅಶ್ಲೀಲ‌ವಾಗಿ ಮಾತನಾಡಿ ಕಿರುಕುಳ ನೀಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಕುರಿತು ಆ.23ರಂದು‌ಮೂಡುಬಿದಿರೆ ಪೊಲೀಸ್‌ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಮತ್ತು ಪತ್ನಿಯನ್ನು […]

ಪತ್ನಿ ಜತೆ ಅಕ್ರಮ ಸಂಬಂಧ ಶಂಕೆ : ಕುಶಾಲನಗರದಲ್ಲಿ ಶುಂಠಿ ಕಾವಲುಗಾರನ ಹತ್ಯೆ 

  ಜನವಾಹಿನಿ NEWS ಕುಶಾಲನಗರ : ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದಲ್ಲಿ ಹೊಲದಲ್ಲಿ ಕಾವಲಿಗಿದ್ದ ಕೇರಳ ಮೂಲದ ವ್ಯಕ್ತಿಯನ್ನು ಹತ್ಯೆಮಾಡಿರುವ ಘಟನೆ ಕುಶಾಲನಗರದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಲ್ಲಿ ನಡೆದಿದೆ. ಶುಂಠಿ ಹೊಲದಲ್ಲಿ ಕಾವಲುಗಾರ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಮುರಳಿ (45) ಎಂಬಾತನೇ ಕೊಲೆಯಾದ ವ್ಯಕ್ತಿ. ಬಸವನಹಳ್ಳಿ ಗ್ರಾಮದ ತೀರ್ಥ ಎಂಬಾತನಿಂದ ಕೃತ್ಯ ನಡೆದಿದೆ. ತೀರ್ಥನ ಮನೆಯ ಹಿಂದೆ ಕಳೆದ ಒಂದು ವರ್ಷದ ಹಿಂದೆ ಮಣಿಕಂಠ ಎಂಬುವರು ಬೆಳೆದಿದ್ದ ಶುಂಠಿ ಬೆಳೆ ನೋಡಿಕೊಳ್ಳಲು ಕೇರಳ ಮೂಲದ […]

ಮಡಿಕೇರಿಯಲ್ಲಿ ಹುಡುಗಿಯರ ಡೇಟಿಂಗ್ ಮಾಡಲು ಕಾಲ್ ಮಾಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಆರೋಪಿ ಅರೆಸ್ಟ್

  ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಮಡಿಕೇರಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವಿಡಿಯೋ ಬಳಸಿಕೊಂಡು ಡೇಟಿಂಗ್ ಮಾಡಲು ಯುವತಿಯರು ಹಾಗೂ ಆಂಟಿಯರು ಸಿಗುತ್ತಾರೆ, ಸರ್ವಿಸ್ ಬೇಕಾದರೆ ಕರೆ ಮಾಡಿ ಎಂದು ಮೊಬೈಲ್ ಸಂಖ್ಯೆಯೊಂದನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ರಚಾರ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ ನಿವಾಸಿ ನಾಗಪ್ಪ ಹನುಮಂತ ಲಮಾಣಿ (26) ಬಂಧಿತ ಆರೋಪಿಯಾಗಿದ್ದಾನೆ. ಸಮಾಜಿಕ ಜಾಲತಾಣದಲ್ಲಿ ಕೊಡಗು ಜಿಲ್ಲೆಯ ಗೌರವಕ್ಕೆ […]

ಗಾಂಜಾ ಮಾರಾಟ : ಮಾಲು ಸಮೇತ ಆರೋಪಿ ಬಂಧನ

  ಜನವಾಹಿನಿ NEWS  ಸೋಮವಾರಪೇಟೆ : ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಾಲು ಸಮೇತ ಸೋಮವಾರ ಪೇಟೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಅಲೆಕಟ್ಟೆ ಚೌಡ್ಲು ಗ್ರಾಮದ ನಿವಾಸಿ ರಮೀಜ್ ಬಂಧಿತ ಆರೋಪಿ. ಹಾನಗಲ್ಲು ರಸ್ತೆಯಲ್ಲಿ ಟಾಟಾ ಏಸ್ ವಾಹನದಲ್ಲಿ ಗಾಂಜಾ ಇಟ್ಟುಕೊಂಡು ಮಾರಟಕ್ಕೆ ತಯಾರಿ ನಡೆಸಿದ್ದ ಸಂದರ್ಭ ಇನ್ಸಪೆಕ್ಟರ್ ಮುದ್ದು ಮಹಾದೇವ ನೇತೃತ್ವ ದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ 600 ಗ್ರಾಂ ಗಾಂಜಾ ಹಾಗೂ ವಾಹನವನ್ನು ವಶಪಡಿಸಿಕೊಂಡಿದ್ದು , ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. […]

ಮೊಬೈಲ್ ಶಾಪ್ ದರೋಡೆ ಮಾಡಿದ್ದ ಆರೋಪಿ ಅರೆಸ್ಟ್ 

  ಜನವಾಹಿನಿ NEWS ಮಡಿಕೇರಿ : ಆ.24ರಂದು ರಾತ್ರಿ ವೇಳೆ ಗೋಣಿಕೊಪ್ಪಲು ಮುಖ್ಯರಸ್ತೆಯಲ್ಲಿರುವ ಫಲೀಲ್ ಎಂಬುವವರಿಗೆ ಸೇರಿದ Harmony Phones ಅಂಗಡಿಯ ರೋಲಿಂಗ್ ಶೆಟರ್ಸ್ ಮುರಿದು ವಿವಿಧ ಕಂಪೆನಿಗಳ ಹೊಸ 32 ಮೊಬೈಲ್ ಫೋನ್ ಗಳು ಮತ್ತು ರೂ. 3 ಸಾವಿರ ನಗದು ಹಣ ದರೋಡೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತೇಗೂರು ಗ್ರಾಮದ ನಿವಾಸಿ, ಅಸ್ಸಾಂ ಮೂಲದ ಜೋಹುರ್ ಆಲಿ (28) ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನಿಂದ 32 ಮೊಬೈಲ್ […]

ಧರ್ಮಸ್ಥಳ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ : ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ SIT – 10 ದಿನಗಳ ಕಾಲ ಕಸ್ಟಡಿಗೆ 

  ಬೆಳ್ತಂಗಡಿ : ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನೇ ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್‌ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ […]

ಪ್ರೀತಿಸಿದ ಯುವತಿಯನ್ನೇ ಸುಟ್ಟು ಹಾಕಿದ ಭೂಪ : ಕೊಲೆಯಾದ ಯುವತಿ 8 ತಿಂಗಳ ಗರ್ಭಿಣಿ 

  ಚಿತ್ರದುರ್ಗ : ತಾಲ್ಲೂಕಿನ ಗೋನೂರು ಬಳಿ ಕೊಲೆಯಾದ ಪದವಿ ವಿದ್ಯಾರ್ಥಿನಿ ವರ್ಷಿತಾ ಕೊಲೆ ಕೇಸ್ಗೆ ಸ್ಪೋಟಕ ತಿರುವು ಸಿಕ್ಕಿದೆ. ಪೊಲೀಸರ ಮುಂದೆ ಕೊಲೆ ರಹಸ್ಯ ಆರೋಪಿ ಚೇತನ್ ಬಾಯ್ಬಿಟ್ಟಿದ್ದಾನೆ. ಯುವತಿಯನ್ನ ಗರ್ಭಿಣಿ ಮಾಡಿ ಮೋಸ ಮಾಡಲು ಆರೋಪಿ ಮುಂದಾಗಿದ್ದ. ನಿನ್ನಿಂದ ಗರ್ಭಿಣಿ ಆಗಿದ್ದೇನೆ, ಈಗ ಮದುವೆ ಆಗು ಎಂದು ಯುವತಿ ಪಟ್ಟು ಹಿಡಿದಿದ್ದಾಳೆ. ಈ ಸಂದರ್ಭ ರಾಷ್ಟ್ರೀಯ ಹೆದ್ದಾರಿ 48ರ ಬಳಿಯ ನಿರ್ಜನ ಪ್ರದೇಶಕ್ಕೆ ಯುವತಿಯನ್ನು ಕರೆದೊಯ್ದ  ಚೇತನ್ ಮದುವೆ ಆಗಲು ಆರೋಪಿ ನಿರಾಕರಿಸಿದ್ದಾನೆ. ಇದೇ […]

ಸುಳ್ಯದ ಪಿಜಿಯಲ್ಲಿ ಕೊಡಗಿನ ವಿದ್ಯಾರ್ಥಿ ಆತ್ಮಹತ್ಯೆ

  ಸುಳ್ಯದ ಪಿಜಿಯಲ್ಲಿ ಕೊಡಗಿನ ವಿದ್ಯಾರ್ಥಿ ಆತ್ಮಹತ್ಯ ಮಡಿಕೇರಿ : ವಿದ್ಯಾರ್ಥಿಯೋರ್ವ ತಾನು ತಂಗಿದ್ದ ಪಿಜಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಗಳ ಪುತ್ರ ಅಭಿ (20) ಯುವಕನೇ  ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಪುತ್ರ ಸುಳ್ಯದಲ್ಲಿ ಶಿಕ್ಷಣ ಪಡೆಯುತ್ತಿದ್ದ ಈತ ತಂಗಿದ್ದ PG ಯಲ್ಲಿ ಇಂದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಇನ್ನೂ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯ […]