Breaking News :

ಕೊಡಗಿನ ಕಾಫಿ ತೋಟವೊಂದರಲ್ಲಿ ಪತ್ತೆಯಾದ ನವಜಾತ ಶಿಶು : ಹೆಣ್ಣು ಶಿಶುವನ್ನು ತೋಟಕ್ಕೆ ಬಿಸಾಡಿರೋ ದುಷ್ಕರ್ಮಿಗಳು

  ಜನವಾಹಿನಿ News ಮಡಿಕೇರಿ : ಜನಿಸಿದ ಕೆಲವೇ ಗಂಟೆಗಳಲ್ಲಿ ಹೆಣ್ಣು ಶಿಶುವನ್ನು ಕಾಫಿ ತೋಟಕ್ಕೆ ಬಿಸಾಡಿರೋ ಅಮಾನವೀಯ ಕೃತ್ಯ ಕೊಡಗಿನ  ಮೂರ್ನಾಡು ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಸ್ಥಳೀಯರೊಬ್ಬರಿಂದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಡಿಕೇರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದು, ಬಟ್ಟೆಯಿಲ್ಲದೆ, ಶೀತದಿಂದ ನಡುಗುತ್ತಿರುವ ಸ್ಥಿತಿಯಲ್ಲಿ ಶಿಶು ಪತ್ತೆಯಾಗಿದೆ. ಮೂರ್ನಾಡು ಸಮೀಪದ ಬೇತ್ರಿ ವ್ಯಾಪ್ತಿಯ ಹೆಮ್ಮಾಡು ಗ್ರಾಮದ ತೋಟವೊಂದರಲ್ಲಿ ಈ ಅಮಾನವೀಯ ದೃಶ್ಯ ಕಂಡುಬಂದಿದೆ. ಮಕ್ಕಳ ವಿಶೇಷ ಪೊಲೀಸ್ ಘಟಕ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ […]

ಜಿಲ್ಲೆಯಲ್ಲಿ ಮುಂದುವರೆದ ಆನೆ ಮಾನವ ಸಂಘರ್ಷ ; ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ : ಪೊನ್ನಂಪೇಟೆಯಲ್ಲಿ ಘಟನೆ

  ಜನವಾಹಿನಿ News ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು ಕಾಯಿಮಾನಿ ನಿವಾಸಿ ರತ್ತು ಎಂದು ಗುರುತಿಸಲಾಗಿದೆ. ಇಂದು (ಏ.8) ಬೆಳ್ಳಂಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ತಮ್ಮ ಕಾಫಿ ತೋಟಕ್ಕೆ ಎಂದಿನಂತೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ದಾಳಿ ನಡೆಸಿ, ತುಳಿದು ಸಾಯಿಸಿದೆ ಎನ್ನಲಾಗಿದೆ. ರತ್ತು ರವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಟ್ಟ ಸರ್ಕಾರಿ ಆಸ್ಪತ್ರೆಗೆ […]

ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಶರಣ್ಯ ಪತ್ತೆ…! ಯುವತಿಯನ್ನು ಪತ್ತೆ ಹಚ್ಚಿದ ಕುಡಿಯ ಸಮುದಾಯದ ಯುವಕರು

  ಕುಡಿಯ ಸಮುದಾಯದ ಯುವಕರ ಕಾರ್ಯಾಚರಣೆ ಯಶಸ್ವಿ ಜನವಾಹಿನಿ News ಮಡಿಕೇರಿ : ಕೊಡಗಿನ ಅತಿ ಎತ್ತರದ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಜಿ.ಎಸ್.ಶರಣ್ಯ(36) ಕೊನೆಗೂ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಸ್ಥಳೀಯ ಕಕ್ಕಬ್ಬೆ ಯವಕಪಾಡಿ ಗ್ರಾಮದ ಕುಡಿಯ ಸಮುದಾಯದ ಯುವಕರ ರಕ್ಷಣಾ ತಂಡ ಶರಣ್ಯ ಅವರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ತಡಿಯಂಡಮೋಳ್ ಬೆಟ್ಟದ ಟ್ರೆಕ್ಕಿಂಗ್ ಪಾಯಿಂಟ್ ನಿಂದ 3.5 ಕಿ.ಮೀ ದೂರದ ಮಲೆ ತಿರಿಕೆ ಎಂಬ ಅರಣ್ಯದೊಳಗೆ ಸುರಕ್ಷಿತವಾಗಿದ್ದ ಶರಣ್ಯ ಅವರನ್ನು ಕುಡಿಯ ಸಮುದಾಯದ […]

ಪೇರೂರು ಗ್ರಾಮದಲ್ಲಿ ಜೀಪ್ ಅಪಘಾತ : ಬೆಳೆಗಾರ ಸಾವು

  ಜನವಾಹಿನಿ News ನಾಪೋಕ್ಲು : ನಿಯಂತ್ರಣ ತಪ್ಪಿದ ಜೀಪೊಂದು ಕಾಫಿ ತೋಟದೊಳಗೆ ಪಲ್ಟಿಯಾಗಿ ಬೆಳೆಗಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಾಪೋಕ್ಲು ಸಮೀಪದ ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಪೇರೂರು ಗ್ರಾಮದ ಕಾಫಿ ಬೆಳೆಗಾರ ಬೊಟ್ಟೋಳಂಡ ಶರಿ ಮೇದಪ್ಪ (54) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೋಟದಿಂದ ಸೌದೆ ತುಂಬಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭ ಇಳಿಜಾರು ರಸ್ತೆಯಲ್ಲಿ  ಶರಿ ಮೇದಪ್ಪ ಚಲಾಯಿಸುತ್ತಿದ್ದ ಜೀಪ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ. ಅವಘಡದಿಂದ ಶರಿಮೇದಪ್ಪ ಅವರ ಹೊಟ್ಟೆಯ ಭಾಗಕ್ಕೆ ತೀವ್ರ ಪಟ್ಟಾಗಿದ್ದು ಅವರು […]

ಜಾಮೀನಿನಲ್ಲಿ ಹೊರಬಂದ ವ್ಯಕ್ತಿಯಿಂದ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ : ಪೊಲೀಸ್ ಇಲಾಖೆಯಿಂದ ಕ್ರಮ 

  ಜನವಾಹಿನಿ News ಮಡಿಕೇರಿ : ಇತ್ತೀಚೆಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಜಾಮೀನು ಪಡೆದು ಹೊರ ಬಂದ ನಾಪೋಕ್ಲು ವ್ಯಾಪ್ತಿಯ ವ್ಯಕ್ತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಪ್ರಚೋಧನಕಾರಿ ಹೇಳಿಕೆ ನೀಡಿರುವ ಆರೋಪ ಕೇಳಿ ಬಂದಿದ್ದ ಹಿನ್ನೆಲೆ ಪರಿಶೀಲನೆ ನಡೆಸಿದ್ದು, ರೀಲ್ಸ್ ವೀಡಿಯೋ ಮತ್ತು ಆಡಿಯೋ ಮೂಲಕ ಪ್ರಚೋಧನಕಾರಿ ಹೇಳಿಕೆ ಪ್ರಸಾರ ಮಾಡಿರುವುದು ಇಲಾಖೆ ಗಮನಕ್ಕೆ ಬಂದಿದೆ. ಈ ಹಿನ್ನೆಲೆ ಸಮಾಜದಲ್ಲಿ ಅಶಾಂತಿ, ಸಾರ್ವಜನಿಕ ಸೌಹಾರ್ಧತೆಗೆ ಧಕ್ಕೆ ತರಲು ಪ್ರಯತ್ನ ಮಾಡಲಾಗಿದೆ ಎಂದು ಪರಿಗಣಿಸಿ ಪ್ರತ್ಯೇಕ ಪ್ರಕರಣ ದಾಖಲು, ಜಾಮೀನು […]

ಗೋಣಿಕೊಪ್ಪಲು : ಕಾರು ಬೈಕ್ ಗಳ ನಡುವೆ ಭೀಕರ ಅಪಘಾತ ; ಸವಾರರು ಸ್ಥಳದಲ್ಲೇ ಸಾವು 

ಜನವಾಹಿನಿ News ಗೋಣಿಕೊಪ್ಪ : ಕಾರು ಮತ್ತು ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ಬೈಕ್ ಗಳ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ತಿತಿಮತಿ ರಸ್ತೆಯಲ್ಲಿ ನಡೆದಿದೆ. ನಂಜನಗೂಡು ನಿವಾಸಿ ಶಿವಕುಮಾರ್(25) ಹಾಗೂ ಕೇರಳ ರಾಜ್ಯದ ಪಾಲಕ್ಕಾಡ್ ನಿವಾಸಿ ಮೊಹಮದ್ ಶಿಹಾಬ್(27) ಮೃತ ಯುವಕರೆಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ಮೂರು ವಾಹನಗಳು ತೀವ್ರ ಜಖಂಗೊಂಡಿದ್ದು,ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮ ಬೀಟೆ ಮರ ಸಾಗಣೆ ಪತ್ತೆ – ₹10 ಲಕ್ಷ ಮೌಲ್ಯದ ನಾಟಾ, ವಾಹನಗಳ ವಶ

ಜನವಾಹಿನಿ News ಸಿದ್ದಾಪುರ : ಅಕ್ರಮವಾಗಿ ಬೀಟೆ ಮರ ನಾಟಾಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿ, ಸುಮಾರು ₹10 ಲಕ್ಷ ಮೌಲ್ಯದ ಬೀಟೆ ನಾಟಾಗಳನ್ನು ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಕದನೂರು ಗ್ರಾಮದ ನವೀನ್ ಸೋಮಣ್ಣ ಅವರಿಗೆ ಸೇರಿದ ಕಾಫಿ ತೋಟದಲ್ಲಿ ಅಕ್ರಮವಾಗಿ ಬೀಟೆ ಮರಗಳನ್ನು ಕಡಿದು ಸಾಗಾಟ ಮಾಡುತ್ತಿರುವುದಾಗಿ ದೊರೆತ ಖಚಿತ ಮಾಹಿತಿಯ ಮೇರೆಗೆ ಅರಣ್ಯಾಧಿಕಾರಿಗಳು ದಿಢೀರ್ ದಾಳಿ ನಡೆಸಿದರು. ಈ ವೇಳೆ 7.108 ಘನ ಮೀಟರ್ ಪ್ರಮಾಣದ ಬೀಟೆ […]

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ಕಿರುಕುಳಕ್ಕೆ ಯತ್ನ : ಆಟೋ ಚಾಲಕ ಅರೆಸ್ಟ್ 

  ಜನವಾಹಿನಿ News ಸಿದ್ದಾಪುರ : ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಿಕ್ಷಾ ಚಾಲಕನೋರ್ವಾನನ್ನು ಪೊಲೀಸರು ಬಂಧಿಸಿರುವ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಸಿದ್ದಾಪುರದ ಪಾಲಿಬೆಟ್ಟ ರಸ್ತೆಯಲ್ಲಿ ವಾಸವಿರುವ ಮೊಹಮ್ಮದ್ ಎಂಬುವವರ ಮಗ ಅನ್ಸಾರ್ ( 34) ಎಂದು ಗುರುತಿಸಲಾಗಿದ್ದು, ಆತ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಮಾಹಿತಿಯ ಪ್ರಕಾರ, ಯುಗಾದಿ ಹಬ್ಬದ ಹಿನ್ನೆಲೆ ಶಾಲೆಗೆ ರಜೆ ಇದ್ದ ಕಾರಣ ಬಾಲಕಿಯೂ ಸ್ಪೆಷಲ್ ಕ್ಲಾಸ್ ಗೆ ತೆರಳಲೆಂದು ನೆಲ್ಯಹುದಿಕೇರಿಯಲ್ಲಿ ನಿಂತಿದ್ದ ಸಂದರ್ಭ […]

ಕಾಡಾನೆ ದಾಳಿಗೆ ಬೆಳೆಗಾರ ಬಲಿ : ಕೊಡಗಿನಲ್ಲಿ ಒಂದೇ ವಾರದಲ್ಲಿ ನಡೆದ ಎರಡನೇ ಘಟನೆ 

      ಜನವಾಹಿನಿ News ಸಿದ್ದಾಪುರ: ಕಾಡಾನೆ ದಾಳಿಗೆ ಬೆಳೆಗಾರ ಬಲಿಯಾಗಿರುವ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಹೈ ಸ್ಕೂಲ್ ಪೈಸಾರಿ ವ್ಯಾಪ್ತಿಯಲ್ಲಿ ನಡೆದಿದೆ. ಚೌರಿರ ಕುಟುಂಬಕ್ಕೆ ಸೇರಿದ ಡಿ ಗಣಪತಿ (ಗಪ್ಪು)49, ಎಂಬುವವರೇ ಆನೆ ದಾಳಿಗೆ ಬಲಿಯಾದ ಬೆಳೆಗಾರ. ಕಾಫಿ ತೋಟ ನೋಡಲು ತೆರಳಿದ ಸಂದರ್ಭ ಕಾಡಾನೆ ದಾಳಿ ಮಾಡಿದ್ದು ಘಟನೆಯಲ್ಲಿ ಗಣಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಡಗಲೇ ಕಾಫಿ ತೋಟದಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿದ್ದರು, ಆನೆಗಳನ್ನು ನಿಯಂತ್ರಣಕ್ಕೆ ತರಲು ಅರಣ್ಯ ಇಲಾಖೆ ವಿಫಲಗೊಂಡಿದೆ ಎಂದು […]

ಕಾಡಾನೆ ದಾಳಿಗೆ ಸಿಲುಕಿ ಗ್ರಾ.ಪಂ ಮಾಜಿ ಸದಸ್ಯೆ ಸಾವು : ಬಾಳೆಗುಂಡಿಯಲ್ಲಿ ಘಟನೆ

ಜನವಾಹಿನಿ News ಮಡಿಕೇರಿ : ಕಾಡಾನೆ ದಾಳಿಗೆ ಸಿಲುಕಿ ಗ್ರಾಮ ಪಂಚಾಯತಿ ಮಾಜಿ ಸದಸ್ಯೆಯೊಬ್ಬರು ಮೃತ ಪಟ್ಟಿರುವ ಘಟನೆ ಕುಶಾಲನಗರ ತಾಲೂಕು ಅರಣ್ಯ ವ್ಯಾಪ್ತಿಗೆ ಒಳಪಡುವ ಬಾಳೆಗುಂಡಿಯಲ್ಲಿ ನಡೆದಿದೆ. ಕೆಳೆದ ಅವಧಿಯಲ್ಲಿ ವಾಲ್ನೂರು ಗ್ರಾಮ ಪಂಚಾಯತಿಯ ಆಡಳಿತ ಮಂಡಳಿ ಸದಸ್ಯರಾಗಿದ್ದ , ಜಲಜಮ್ಮ ಅಲಿಯಾಸ್ ಜಲಜಾಕ್ಷಿ (54) ಎಂಬುವವರೇ ಆನೆ ದಾಳಿಗೆ ಸಿಲುಕಿ ಮೃತಪಟ್ಟ ದುರ್ದೈವಿ. ತೋಟಕ್ಕೆ ಕೆಲಸಕ್ಕೆ ತೆರಳಿ ಹಿಂತಿರುಗುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ಜಲಜಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ […]