ಗಿಡದಿಂದ ಕಾಫಿ ಹಣ್ಣು ಕಳವು : ಆರೋಪಿಗಳ ಬಂಧನ – ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ

ಜನವಾಹಿನಿ News ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣಂಗಾಲದ ಎಲ್ಕಿನ್ ಎಸ್ಟೇಟ್ ನಲ್ಲಿ ಗಿಡದಿಂದಲೆ ಕಾಫಿ ಕಳವು ಮಾಡಿರುವುದಾಗಿ ವ್ಯವಸ್ಥಾಪಕ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ಷಿಪ್ರ ಕಾರ್ಯಾಚ ರಣೆ ನಡೆಸಿ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾ ಗಿದ್ದಾರೆ. ತೋಟದ ವ್ಯವಸ್ಥಾಪಕ ಕಾವೇರಪ್ಪ ಸಿಬ್ಬಂದಿಯ ಜತೆ ಡಿ. 27ರ ಮಧ್ಯಾಹ್ನ 2.30ರ ಸುಮಾರಿಗೆ ತೋಟದಲ್ಲಿ ಗಸ್ತು ನಡೆಸುವ ಸಂದರ್ಭದಲ್ಲಿ ಆರ್ಗನಿಕ್ಟಿಬಿ ಬ್ಲಾಕ್ ಬಳಿಯ ರಸ್ತೆಯ ಬದಿ ಸ್ಕೂಟಿಯೊಂದು ನಿಂತಿರುವುದನ್ನು […]
ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಕೊಲೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ..!

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಿರಾಜಪೇಟೆ ಸೆಷನ್ಸ್ ನ್ಯಾಯಾಲಯವು ಸಾಮೂಹಿಕ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಒಂದೇ ಕುಟುಂಬದ ನಾಲ್ವರ ಹತ್ಯೆ ಗೈದಿದ್ದ ಆರೋಪಿ :2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನು ನಾಗಿ (35), ಆಕೆಯ ಆರು ವರ್ಷದ ಮಗಳು […]
ಬ್ಯಾನರ್ ತೆರವು ವಿಚಾರಕ್ಕೆ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಜನವಾಹಿನಿ News ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಸಂಘರ್ಷ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. ಗಣೇಶ್ ಗೌಡ (38) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಸಖರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಗಣೇಶ್ ಗೌಡ (38) ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ಬಜರಂಗದಳ ಕಾರ್ಯಕರ್ತರು ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ. ಗಣೇಶ್ ಮೇಲೆ ಸಂಜಯ್, […]
ಕೊಡಗು : ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಜನವಾಹಿನಿ News ನಾಪೋಕ್ಲು : ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಚೆರಿಯಪರಂಬು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ನಾಪೋಕ್ಲು ಬಳಿಯ ಚೆರಿಯಪರಂಬು ಗ್ರಾಮದ ಪೈಸಾರಿ ನಿವಾಸಿ ಗಣೇಶ್ ಹಾಗೂ ಜಾನಕಿ ದಂಪತಿಗಳ ಪುತ್ರಿ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಚಿತ್ರ (17) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕಳೆದ ಒಂದು ತಿಂಗಳಿಂದ ಚಿತ್ರ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದಳು ಎಂದು ತಿಳಿದುಬಂದಿದೆ. ಶುಕ್ರವಾರ ಬೆಳಿಗ್ಗೆ […]
ಹಿಟ್ ಅಂಡ್ ರನ್ : ಗೋಣಿಕೊಪ್ಪ – ಕೈಕೇರಿ ಬಳಿ ಅಪರಿಚಿತ ವ್ಯಕ್ತಿ ಸಾವು

ಜನವಾಹಿನಿ News ಗೋಣಿಕೊಪ್ಪ : ಗೋಣಿಕೊಪ್ಪಲು ವಿರಾಜಪೇಟೆಯ ಮುಖ್ಯ ರಸ್ತೆ ಕೈಕೇರಿ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ಪಾದಚಾರಿಗೆ ವಾಹನ ಡಿಕ್ಕಿಪಡಿಸಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ತಲೆ ಹಾಗೂ ಎದೆ ಭಾಗಕ್ಕೆ ತೀವ್ರ ಸ್ವರೂಪದ ಗಾಯಗಳು ಉಂಟಾಗಿ ಮೃತಪಟ್ಟಿದ್ದಾರೆ ಎಂದು ಗೋಣಿಕೊಪ್ಪಲು ಆಸ್ಪತ್ರೆಯ ವೈದ್ಯಧಿಕಾರಿಗಳು ದೃಢಪಡಿಸಿದ್ದಾರೆ. ಅಂದಾಜು 55 ವರ್ಷಪ್ರಾಯದ ಕೂಲಿ ಕಾರ್ಮಿಕ ಎಂದು ಗುರುತಿಸಲಾಗಿದ್ದು ಇವರ ಪರಿಚಯ ಇರುವವರು, ಹಾಗೂ ಕುಟುಂಬಸ್ಥರು ಗೋಣಿಕೊಪ್ಪಲು ಪೊಲೀಸ್ ಠಾಣೆ ಅಥವಾ […]
ಮಹಿಳೆಯ ಮೊಬೈಲ್ ಕದ್ದು ಪರಾರಿಯಾಗಿದ್ದ ಆರೋಪಿಗಳು ಅಂದರ್

ಜನವಾಹಿನಿ News ಸಿದ್ದಾಪುರ : ಬಸ್ ತಂಗುದಾಣದಲ್ಲಿ ನಿಂತಿದ್ದ ಮಹಿಳೆಯ ಕೈಯಲ್ಲಿದ್ದ ಮೊಬೈಲ್ ಅನ್ನು ಕಸಿದು ಪರಾರಿ ಆಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟ್ಟದಹಳ್ಳ ಪಂಜರಿ ಎರವರ ಸಿದ್ದಯ್ಯ (20) ಮತ್ತು ಪಂಜರಿ ಎರವರ ಮಾದಪ್ಪ (26) ಬಂಧಿತ ಆರೋಪಿಗಳಾಗಿದ್ದಾರೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಪುಲಿಯೇರಿ ಗ್ರಾಮದ ಶೈನಿ ಡಿ. ಎಂಬುವವರು ನ. 15 ರಂದು ಸಂಜೆ ಅಂದಾಜು 5 ಗಂಟೆ ಸಮಯದಲ್ಲಿ ಬಾಡಗ ಬಾಣಂಗಾಲ ಗ್ರಾಮದ ಮಾರ್ಗೋಲ್ಲಿ ಟಾಟಾ ಕಾಫಿ ಎಸ್ಟೇಟ್ ಸಮೀಪದ […]
ಕಾಡಾನೆ ದಾಳಿ: ತೋಟ ಕಾರ್ಮಿಕನ ದುರ್ಮರಣ : ಆಸ್ಪತ್ರೆ ಎದುರು ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಜನವಾಹಿನಿ News ಸಿದ್ದಾಪುರ : ಎಮ್ಮೆಗುಂಡಿ ತೋಟದಲ್ಲಿ ಕಾಡಾನೆ ದಾಳಿಗೆ ಕಾರ್ಮಿಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಮೃತರನ್ನು ಹನುಮಂತ ಎಚ್.ಡಿ (56) ಎಂದು ಗುರುತಿಸಲಾಗಿದೆ. ಟಾಟಾ ಸಂಸ್ಥೆಯ ಎಮ್ಮೆಗುಂಡಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದೀಡರ್ ದಾಳಿ ನಡೆಸಿದ್ದು, ಕಾಡಾನೆ ಅವರ ಹೊಟ್ಟೆ ಭಾಗಕ್ಕೆ ದಂತದಿಂದ ತಿವಿದ ಪರಿಣಾಮ ಅವರ ಹೊಟ್ಟೆಯೊಳಗಿನ ಭಾಗಗಳು ಹೊರಗಡೆ ಬಂದಿದ್ದು ಹನುಮಂತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಮೃತದೇಹವನ್ನು ಸಿದ್ದಾಪುರ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ತಂದ ಸಂಧರ್ಭ […]
ಕೊಳವೆ ಬಾವಿ ನಿರ್ಮಿಸಿಕೊಡಲು ಲಂಚದ ಬೇಡಿಕೆ : ಪಂಚಾಯತಿ ಅಧ್ಯಕ್ಷೆ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಜನವಾಹಿನಿ NEWS ಕರಾವಳಿ: ಕೃಷಿ ಜಮೀನಿಗೆ ಕೊಳವೆ ಬಾವಿ ನಿರ್ಮಿಸಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಬಂಟ್ವಾಳ ತಾಲ್ಲೂಕು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸಾ, ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ. ‘ನಮ್ಮ ಮಾವನಿಗೆ ಪೆರುವಾಯಿ ಗ್ರಾಮದಲ್ಲಿ ಒಂದು ಎಕರೆ ಕೃಷಿ ಜಮೀನು ಇದ್ದು, ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕೊಳವೆ ಬಾವಿ ಮಂಜೂರು ಮಾಡಲು ಅರ್ಜಿ ಸಲ್ಲಿಸಿದ್ದರು. ಮಾವನಿಗೆ […]
ಸಂಪಾಜೆಯಲ್ಲಿ ಭೀಕರ ರಸ್ತೆ ಅಪಘಾತ : ನೆಲ್ಯಹುದಿಕೇರಿ ಗ್ರಾಮದ ಯುವತಿ ( ಶೋಭಾ) ಸಾವು

ಜನವಾಹಿನಿ NEWS ಮಡಿಕೇರಿ : ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನೆಲ್ಯಹುದಿಕೇರಿ ಗ್ರಾಮದ ಶೋಭಾ ಮಹಿಳೆ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಗಾಯಾಳುಗಳಿಗೆ […]
ದೂರು ನೀಡಲು ಬಂದಿದ್ದ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿ ಅಮಾನತು

ಜನವಾಹಿನಿ NEWS ಮೂಡುಬಿದಿರೆ : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೊಬ್ಬ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ ಕಿರುಕುಳ ನೀಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಕುರಿತು ಆ.23ರಂದುಮೂಡುಬಿದಿರೆ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಮತ್ತು ಪತ್ನಿಯನ್ನು […]