Breaking News :

ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ : ಒಳ್ಳೆಯ ಜೀವನ ರೂಪಿಸಿಕೊಳ್ಳುವತ್ತ ಗಮನಹರಿಸಿ: ಪಿ.ಎ.ಸೂರಜ್

ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ : ಒಳ್ಳೆಯ ಜೀವನ ರೂಪಿಸಿಕೊಳ್ಳುವತ್ತ ಗಮನಹರಿಸಿ: ಪಿ.ಎ.ಸೂರಜ್ ಮಡಿಕೇರಿ : ಯುವ ಜನರು ದುಶ್ಚಟಗಳಿಗೆ ತುತ್ತಾಗದೆ, ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎ.ಸೂರಜ್ ಅವರು ಕರೆ ನೀಡಿದ್ದಾರೆ. ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಶಾಲಾ ಶಿಕ್ಷಣ, ಪದವಿ ಪೂರ್ವ […]

ಬೇತ್ರಿ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ 

ಬೇತ್ರಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ  ವಿರಾಜಪೇಟೆ : ವಿರಾಜಪೇಟೆ ವ್ಯಾಪ್ತಿಯ ಬೇತ್ರಿ ಹೊಳೆಯಲ್ಲಿ ಅಪರಿಚಿತ ಪುರುಷನ ಮೃತದೇಹವೊಂದು ಪತ್ತೆಯಾಗಿದೆ. ನದಿ ದಡದ ಬಿದಿರು ಮರಗಳ ನಡುವೆ ಸಿಕ್ಕಿಕೊಂಡಿದ್ದು, ನದಿ ನೀರಿನಲ್ಲಿ ಕೊಚ್ಚಿಕೊಂಡು ಬಂದಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ. ಕೂಡಲೇ ಸ್ಥಳೀಯ ನಿವಾಸಿಗಳು ವಿರಾಜಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದು, ಇತ್ತೀಚೆಗೆ ನಾಪತ್ತೆಯಾಗಿರುವ,ಅಥವಾ ಮನೆಯಿಂದ ಕಾಣೆಯಾಗಿದವರ ಮಾಹಿತಿ ಇದ್ದರೆ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಿದ್ದಾರೆ.

ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕುಶಾಲನಗರ : ಶಿರಂಗಾಲ ಶ್ರೀ ಮಂಟಿಗಮ್ಮ ದೇವಾಲಯ ಪ್ರವೇಶದ್ವಾರದ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕು ಕಣಗಾಲು ಹೋಬಳಿಯ ಚಾಮರಾಯನಕೋಟೆ ಗ್ರಾಮದ ನಿವಾಸಿ ಅಶೋಕ್(36) ಮೃತ ದುರ್ದೈವಿಯಾಗಿದ್ದಾನೆ. ಕೊಣನೂರು ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಶಿರಂಗಾಲದಿಂದ ಕೊಣನೂರು ಕಡೆಗೆ ಹೋಗುತ್ತಿದ್ದ ಬೈಕ್ ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ತೀವ್ರವಾಗಿ […]

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ 

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆ..! ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ ನವದೆಹಲಿ : ಶ್ರೀನಗರದ ನಗರದ ಹೊರವಲಯದ ಮಹಾದೇವ ಬೆಟ್ಟ ಶ್ರೇಣಿಯ ದಾಚೀಗಾಮ್‌ನಲ್ಲಿ ‘ಆಪರೇಷನ್‌ ಮಹಾದೇವ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿಗಳು, ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ. ಮೃತ ಉಗ್ರರನ್ನು ಹಸೀಮ್ ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್ […]

ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ ಪ್ರಕರಣ : ಸರ್ಕಾರ ಹಾಗೂ ಶಾಸಕರ ವಿರುದ್ಧ ಸುನೀಲ್ ಕುಮಾರ್ ಆಕ್ರೋಶ : ಬೃಹತ್ ಹೋರಾಟಕ್ಕೆ ಚಿಂತನೆ 

ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ ಪ್ರಕರಣ : ಸರ್ಕಾರ ಹಾಗೂ ಶಾಸಕರ ವಿರುದ್ಧ ಸುನೀಲ್ ಕುಮಾರ್ ಆಕ್ರೋಶ : ಬೃಹತ್ ಹೋರಾಟಕ್ಕೆ ಚಿಂತನೆ  ಸಿದ್ದಾಪುರ : ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರು ಬಲಿಯಾಗುತ್ತಿರುವುದರ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (CPI) ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲರಾದ ಸುನೀಲ್ ಕುಮಾರ್ ಕುಮಾರ್ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಆಡಿಯೋ ಒಂದನ್ನು ಹಂಚಿಕೊಂಡಿರುವ ಅವರು ಬಿಜೆಪಿ […]

ಗೋಮಾಂಸ ಮಾಂಸ ಮಾರಾಟಕ್ಕೆ ಯತ್ನ : ಅಸ್ಸಾಂ ಕಾರ್ಮಿಕನ ಬಂಧನ

ಗೋಮಾಂಸ ಮಾಂಸ ಮಾರಾಟಕ್ಕೆ ಯತ್ನ : ಅಸ್ಸಾಂ ಕಾರ್ಮಿಕನ ಬಂಧನ ಮಡಿಕೇರಿ : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಪೋಲೀಸ್ ಉಪಠಾಣಾ ವ್ಯಾಪ್ತಿಯ ಕುಂಬೂರು ಎಸ್ಟೇಟ್ ನಲ್ಲಿ ಕಾರ್ಮಿಕನಾಗಿರುವ ಅಸ್ಸಾಂ ಮೂಲದ ಕಾರ್ಮಿಕ ಉಲಾಲ್ ಬಿಲ್ (28) ಎಂಬಾತ ಗೋಮಾಂಸವನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಪೋಲೀಸರಿಗೆ ಮಾಹಿತಿ ನೀಡಿದರು ಸ್ಥಳಕ್ಸಕೆ ಆಗಮಿಸಿದ ಪೊಲೀಸರು 15 ಕೆ.ಜಿ.ಯಷ್ಟು ಗೋಮಾಂಸದ ಸಮೇತ ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು […]

ಒತ್ತಡ ನಡುವೆ ಕೆಸರುಗದ್ದೆಯಲ್ಲಿ ಕಾದಾಡಲಿರುವ ಖಾಕಿ ಪಡೆ : ನಾಳೆ ಗೋಣಿಕೊಪ್ಪಲುವಿನಲ್ಲಿ ಜಿಲ್ಲಾ ಪೊಲೀಸರ ಕೆಸರುಗದ್ದೆ ಕ್ರೀಡಾಕೂಟ

ಒತ್ತಡ ನಡುವೆ ಕೆಸರುಗದ್ದೆಯಲ್ಲಿ ಕಾದಾಡಲಿರುವ ಜಿಲ್ಲಾ ಖಾಕಿ ಪಡೆ : ನಾಳೆ ಗೋಣಿಕೊಪ್ಪಲುವಿನಲ್ಲಿ ಪೊಲೀಸರ ಕೆಸರುಗದ್ದೆ ಕ್ರೀಡಾಕೂಟ –  ಮಡಿಕೇರಿ : ಸದಾ ಒತ್ತಡಲ್ಲೇ ಕಾರ್ಯ ನಿರ್ವಹಿಸುವ ಜಿಲ್ಲೆಯ ಆರಕ್ಷಕರಿಗೆ ರಿಲಿಪ್ ನೀಡುವ ಸಲುವಾಗಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ವಿರಾಜಪೇಟೆ ಉಪ ವಿಭಾಗದ ವತಿಯಿಂದ ಪೊಲೀಸ್ ಸಿಬ್ಬಂದಿಗಳು ಹಾಗೂ ಕುಟುಂಬಸ್ಥರಿಗಾಗಿ ಇದೆ ಮೊದಲ ಬಾರಿಗೆ ಕೆಸರು ಗದ್ದೆ ಕ್ರೀಡಾಕೂಟವನ್ನು ಆಯೋಜನೆ ಮಾಡಿದೆ. ಗೋಣಿಕೊಪ್ಪಲು ಕಾವೇರಿ ಕಾಲೇಜು ಹಿಂಭಾಗದ ಗದ್ದೆಯಲ್ಲಿ ನಾಳೆ (ಜುಲೈ […]

ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ದುರ್ಮರಣ

ಮನೆಯ ಗೋಡೆ ಕುಸಿದು ಕಾರ್ಮಿಕ‌ ಮಹಿಳೆ ದುರ್ಮರಣ ಮಡಿಕೇರಿ : ಮನೆಯ ಗೋಡೆ ಕುಸಿದು ಬಿದ್ದು ಕಾರ್ಮಿಕ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಅಫ್ಜಲ್ ಪುರದ ರವಿ ಎಂಬುವವರ ಪತ್ನಿ ಸುಷ್ಮಾ(29) ಮೃತ ಮಹಿಳೆ. ಮೃತ ಮಹಿಳೆ, ಸಹೋದರ ಹಾಗೂ ಮಕ್ಕಳು ಕಳೆದ ಎರಡು ವರ್ಷಗಳ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದು, ಹಾನಗಲ್ಲು ಗ್ರಾಮದ ಸಚಿನ್ ಎ.ಎನ್ ಎಂಬುವವರ ವಾಸದ ಮನೆಯಲ್ಲಿ ಬಾಡಿಗೆ ಇದ್ದರು. ಇಂದು ಬೆಳಿಗ್ಗೆ 5.30 […]

ದೇವರಕೊಲ್ಲಿ ಬಳಿ ಭೀಕರ ಅಪಘಾತ ನಾಲ್ವರು ದಾರುಣ ಸಾವು 

ದೇವರಕೊಲ್ಲಿ ಬಳಿ ಭೀಕರ ಅಪಘಾತ ನಾಲ್ವರು ದಾರುಣ ಸಾವು  ಮಡಿಕೇರಿ : ಮಡಿಕೇರಿ ಸಮೀಪದ ದೇವರ ಕೊಲ್ಲಿ ಬಳಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಮತ್ತಿಬ್ಬರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ ಮೂಲದ್ದೆಂದು ತಿಳಿದು ಬಂದಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. […]

ಕೊಂಡಂಗೇರಿ ಸರ ಕಳ್ಳತನಕ್ಕೆ ಬಿಗ್ ಟ್ವಿಸ್ಟ್ : ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಬಂಧನ 

ಕೊಂಡಂಗೇರಿ ಸರ ಕಳ್ಳತನಕ್ಕೆ ಬಿಗ್ ಟ್ವಿಸ್ಟ್ : ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಬಂಧನ ಮಡಿಕೇರಿ : ಸಿದ್ದಾಪುರ ಠಾಣಾ ವ್ಯಾಪ್ತಿಯ ಕೊಂಡಂಗೇರಿ ಗ್ರಾಮ ಪೆರಂಬು ಎಂಬಲ್ಲಿ ವಾಸವಿರುವ ಶ್ರೀಮತಿ ಸಫಾನ ಮತ್ತು ಶ್ರೀಮತಿ ಸಾರಮ್ಮ ಎಂಬುವವರು ಮನೆಯಲ್ಲಿದ್ದ ಸಂದರ್ಭ ದಿನಾಂಕ: 21-07-2025 ರಂದು ಮಧ್ಯಾಹ್ನ ಸುಮಾರು 01.30 ಘಂಟೆ ಸಮಯದಲ್ಲಿ ಅಪರಿಚಿತ ವ್ಯಕ್ತಿಯು ನೀರು ಕೇಳುವ ನೆಪದಲ್ಲಿ ಮನೆಯ ಬಳಿ ಬಂದು ಮಹಿಳೆಯರ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಗಾಯಗೊಳಿಸಿ ಕುತ್ತಿಗೆಯಲ್ಲಿದ ಚಿನ್ನದ ಸರವನ್ನು ಕಿತ್ತುಕೊಂಡು […]