ಮತ್ತೆ ಹುಲಿ ಹೆಜ್ಜೆ ಪತ್ತೆ : ಹೆಚ್ಚಾದ ಆತಂಕ, ಕ್ಯಾಮರ ಅಳವಡಿಕೆಗೆ ಸ್ಥಳೀಯರ ಒತ್ತಾಯ

ಮತ್ತೆ ಹುಲಿ ಹೆಜ್ಜೆ ಪತ್ತೆ : ಹೆಚ್ಚಾದ ಆತಂಕ, ಕ್ಯಾಮರ ಅಳವಡಿಕೆಗೆ ಸ್ಥಳೀಯರ ಒತ್ತಾಯ ಸಿದ್ದಾಪುರ: ನೆನ್ನೆ ಗುಹ್ಯ ವ್ಯಾಪ್ತಿಯ ಕೋಟನ್ ಎಸ್ಟೇಟ್ ಬಳಿ ಹುಲಿ ಹೆಜ್ಜೆ ಗುರುತು ಪತ್ತೆಯಾಗುವ ಮೂಲಕ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿತ್ತು. ಆದರೆ ಇಂದು ಸಮೀಪದ ವಾರ್ನಾಂಡಿ ಎಸ್ಟೇಟ್ ಕಡೆಗೆ ಹೋಗಿರುವ ಗುರು ಪತ್ತೆಯಾಗಿದ್ದು ಜನ ಜಾಗೃತೆ ವಹಿಸುವಂತೆ ತೋಟದ ವ್ಯವಸ್ಥಾಪಕ ದಾಸನ್ ಮಾಹಿತಿ ನೀಡಿದ್ದು, ಆತಂಕ ಗೊಂಡಿರುವ ಸ್ಥಳೀಯರು ಇಲಾಖೆಯಿಂದ ಹುಲಿ ಚಲನವಲನ ಪತ್ತೆ ಹಚ್ಚುವ ನಿಟ್ಟಿನಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಕ್ಯಾಮರ […]
ಶ್ರೀಮಂಗಲ ಸಮೀಪದ ತಾವಳಗೆರೆಯ ಹೆದ್ದಾರಿಯಲ್ಲಿ ಪಾದಚಾರಿಗೆ ವಾಹನ ಡಿಕ್ಕಿ : ಅಪರಿಚ ವ್ಯಕ್ತಿ ಸ್ಥಳದಲ್ಲೇ ಸಾವು

ಶ್ರೀಮಂಗಲ ಸಮೀಪದ ತಾವಳಗೆರೆಯ ಹೆದ್ದಾರಿಯಲ್ಲಿ ಪಾದಚಾರಿಗೆ ವಾಹನ ಡಿಕ್ಕಿ : ಅಪರಿಚ ವ್ಯಕ್ತಿ ಸ್ಥಳದಲ್ಲೇ ಸಾವು ಮಡಿಕೇರಿ : ಪೊನ್ನಂಪೇಟೆ ಶ್ರೀಮಂಗಲ ಮುಖ್ಯ ರಸ್ತೆಯಲ್ಲಿ ತಾವಳಗೆರೆ ಗ್ರಾಮದ ಆಂಡಮಾಡಾ ಅರುಣ ರವರ ಮನೆ ಮುಂಭಾಗದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದ ಚಾರಿಗೆ ವಾಹನವೊಂದು ಡಿಕ್ಕಿ ಪಡಿಸಿ ಹೋಗಿದ್ದು, ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆನ್ನೆ ತಡರಾತ್ರಿ ನಡೆದಿದೆ. ಸ್ಥಳಕ್ಕೆ ಶ್ರೀಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಪರಿಚಿತ ವ್ಯಕ್ತಿ,ಅಂದಾಜು […]
ಕಟ್ಟೆಮಾಡು ಗ್ರಾಮದಲ್ಲಿ ಕಾಫಿ, ಕರಿಮೆಣಸು ಕಳವು : ಇಬ್ಬರ ಬಂಧನ

ಕಟ್ಟೆಮಾಡು ಗ್ರಾಮದಲ್ಲಿ ಕಾಫಿ, ಕರಿಮೆಣಸು ಕಳವು : ಇಬ್ಬರ ಬಂಧನ ಮಡಿಕೇರಿ : ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಮಾಡು ಗ್ರಾಮದ ನಿವಾಸಿಯಾದ ಬೊಟ್ಟೋಳಂಡ ಉತ್ತಮ್ ಮುತ್ತಪ್ಪ ರವರ ದಾಸ್ತಾನು ಕೊಠಡಿಯಲ್ಲಿ ಇಟ್ಟಿದ್ದ ಅಂದಾಜು 10 ಚೀಲ ಒಣಗಿದ ಕರಿಮೆಣಸು ಅಂದಾಜು 01 ಚೀಲ ಕಾಫಿಯನ್ನು 09-06-2025 ರಂದು ಕಳ್ಳತನವಾಗಿರುವ ಕುರಿತು ದೂರು ಸ್ವೀಕರಿಸಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ: 306 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿ […]
ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ : ಒಳ್ಳೆಯ ಜೀವನ ರೂಪಿಸಿಕೊಳ್ಳುವತ್ತ ಗಮನಹರಿಸಿ: ಪಿ.ಎ.ಸೂರಜ್

ಡಾ.ಮಹಾಂತ ಶಿವಯೋಗಿ ಅವರ ಜನ್ಮ ದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ : ಒಳ್ಳೆಯ ಜೀವನ ರೂಪಿಸಿಕೊಳ್ಳುವತ್ತ ಗಮನಹರಿಸಿ: ಪಿ.ಎ.ಸೂರಜ್ ಮಡಿಕೇರಿ : ಯುವ ಜನರು ದುಶ್ಚಟಗಳಿಗೆ ತುತ್ತಾಗದೆ, ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪಿ.ಎ.ಸೂರಜ್ ಅವರು ಕರೆ ನೀಡಿದ್ದಾರೆ. ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಶಾಲಾ ಶಿಕ್ಷಣ, ಪದವಿ ಪೂರ್ವ […]
ಬೇತ್ರಿ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬೇತ್ರಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ವಿರಾಜಪೇಟೆ : ವಿರಾಜಪೇಟೆ ವ್ಯಾಪ್ತಿಯ ಬೇತ್ರಿ ಹೊಳೆಯಲ್ಲಿ ಅಪರಿಚಿತ ಪುರುಷನ ಮೃತದೇಹವೊಂದು ಪತ್ತೆಯಾಗಿದೆ. ನದಿ ದಡದ ಬಿದಿರು ಮರಗಳ ನಡುವೆ ಸಿಕ್ಕಿಕೊಂಡಿದ್ದು, ನದಿ ನೀರಿನಲ್ಲಿ ಕೊಚ್ಚಿಕೊಂಡು ಬಂದಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ. ಕೂಡಲೇ ಸ್ಥಳೀಯ ನಿವಾಸಿಗಳು ವಿರಾಜಪೇಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದು, ಇತ್ತೀಚೆಗೆ ನಾಪತ್ತೆಯಾಗಿರುವ,ಅಥವಾ ಮನೆಯಿಂದ ಕಾಣೆಯಾಗಿದವರ ಮಾಹಿತಿ ಇದ್ದರೆ ಗ್ರಾಮಾಂತರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಿದ್ದಾರೆ.
ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕುಶಾಲನಗರ : ಶಿರಂಗಾಲ ಶ್ರೀ ಮಂಟಿಗಮ್ಮ ದೇವಾಲಯ ಪ್ರವೇಶದ್ವಾರದ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕು ಕಣಗಾಲು ಹೋಬಳಿಯ ಚಾಮರಾಯನಕೋಟೆ ಗ್ರಾಮದ ನಿವಾಸಿ ಅಶೋಕ್(36) ಮೃತ ದುರ್ದೈವಿಯಾಗಿದ್ದಾನೆ. ಕೊಣನೂರು ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಶಿರಂಗಾಲದಿಂದ ಕೊಣನೂರು ಕಡೆಗೆ ಹೋಗುತ್ತಿದ್ದ ಬೈಕ್ ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ತೀವ್ರವಾಗಿ […]
ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ

ಪಹಲ್ಗಾಮ್ ದಾಳಿಯ ರೂವಾರಿ ಸೇರಿ ಮೂವರು ಉಗ್ರರರನ್ನು ಬೇಟೆಯಾಡಿದ ಭದ್ರತಾ ಪಡೆ..! ಭದ್ರತಾ ಪಡೆಗೆ ಉಗರರ ಸುಳಿವು ಹೇಗೆ ಸಿಕ್ತು.?..ಕಾರ್ಯಾಚರಣೆಗೆ ಆಪರೇಷನ್ ಮಹಾದೇವ ಹೆಸರಿಡಲು ಕಾರಣವೇನು..? ಇಲ್ಲಿದೆ ಕಂಪ್ಲೀಟ್ ಮಾಹಿತಿ ನವದೆಹಲಿ : ಶ್ರೀನಗರದ ನಗರದ ಹೊರವಲಯದ ಮಹಾದೇವ ಬೆಟ್ಟ ಶ್ರೇಣಿಯ ದಾಚೀಗಾಮ್‌ನಲ್ಲಿ ‘ಆಪರೇಷನ್ ಮಹಾದೇವ’ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಯ ಸಿಬ್ಬಂದಿಗಳು, ಪಹಲ್ಗಾಮ್ ದಾಳಿಯ ರೂವಾರಿ ಸೇರಿದಂತೆ ಪಾಕಿಸ್ತಾನದ ಮೂವರು ಉಗ್ರರನ್ನು ಬೇಟೆಯಾಡಿದ್ದಾರೆ. ಮೃತ ಉಗ್ರರನ್ನು ಹಸೀಮ್ ಮುಸಾ ಅಲಿಯಾಸ್ ಸುಲೇಮಾನ್, ಪಾಕಿಸ್ತಾನದ ಯಾಸಿರ್ […]
ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ ಪ್ರಕರಣ : ಸರ್ಕಾರ ಹಾಗೂ ಶಾಸಕರ ವಿರುದ್ಧ ಸುನೀಲ್ ಕುಮಾರ್ ಆಕ್ರೋಶ : ಬೃಹತ್ ಹೋರಾಟಕ್ಕೆ ಚಿಂತನೆ

ಕೊಡಗಿನಲ್ಲಿ ಮುಂದುವರೆದ ಕಾಡಾನೆ ದಾಳಿ ಪ್ರಕರಣ : ಸರ್ಕಾರ ಹಾಗೂ ಶಾಸಕರ ವಿರುದ್ಧ ಸುನೀಲ್ ಕುಮಾರ್ ಆಕ್ರೋಶ : ಬೃಹತ್ ಹೋರಾಟಕ್ಕೆ ಚಿಂತನೆ ಸಿದ್ದಾಪುರ : ಜಿಲ್ಲೆಯಲ್ಲಿ ಕಾಡಾನೆ ದಾಳಿಗೆ ಕಾರ್ಮಿಕರು ಬಲಿಯಾಗುತ್ತಿರುವುದರ ವಿರುದ್ಧ ತೀವ್ರ ಅಸಮಧಾನ ವ್ಯಕ್ತಪಡಿಸಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (CPI) ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲರಾದ ಸುನೀಲ್ ಕುಮಾರ್ ಕುಮಾರ್ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಆಡಿಯೋ ಒಂದನ್ನು ಹಂಚಿಕೊಂಡಿರುವ ಅವರು ಬಿಜೆಪಿ […]
ಗೋಮಾಂಸ ಮಾಂಸ ಮಾರಾಟಕ್ಕೆ ಯತ್ನ : ಅಸ್ಸಾಂ ಕಾರ್ಮಿಕನ ಬಂಧನ

ಗೋಮಾಂಸ ಮಾಂಸ ಮಾರಾಟಕ್ಕೆ ಯತ್ನ : ಅಸ್ಸಾಂ ಕಾರ್ಮಿಕನ ಬಂಧನ ಮಡಿಕೇರಿ : ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಪೋಲೀಸ್ ಉಪಠಾಣಾ ವ್ಯಾಪ್ತಿಯ ಕುಂಬೂರು ಎಸ್ಟೇಟ್ ನಲ್ಲಿ ಕಾರ್ಮಿಕನಾಗಿರುವ ಅಸ್ಸಾಂ ಮೂಲದ ಕಾರ್ಮಿಕ ಉಲಾಲ್ ಬಿಲ್ (28) ಎಂಬಾತ ಗೋಮಾಂಸವನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಪೋಲೀಸರಿಗೆ ಮಾಹಿತಿ ನೀಡಿದರು ಸ್ಥಳಕ್ಸಕೆ ಆಗಮಿಸಿದ ಪೊಲೀಸರು 15 ಕೆ.ಜಿ.ಯಷ್ಟು ಗೋಮಾಂಸದ ಸಮೇತ ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು […]
ಒತ್ತಡ ನಡುವೆ ಕೆಸರುಗದ್ದೆಯಲ್ಲಿ ಕಾದಾಡಲಿರುವ ಖಾಕಿ ಪಡೆ : ನಾಳೆ ಗೋಣಿಕೊಪ್ಪಲುವಿನಲ್ಲಿ ಜಿಲ್ಲಾ ಪೊಲೀಸರ ಕೆಸರುಗದ್ದೆ ಕ್ರೀಡಾಕೂಟ

ಒತ್ತಡ ನಡುವೆ ಕೆಸರುಗದ್ದೆಯಲ್ಲಿ ಕಾದಾಡಲಿರುವ ಜಿಲ್ಲಾ ಖಾಕಿ ಪಡೆ : ನಾಳೆ ಗೋಣಿಕೊಪ್ಪಲುವಿನಲ್ಲಿ ಪೊಲೀಸರ ಕೆಸರುಗದ್ದೆ ಕ್ರೀಡಾಕೂಟ – ಮಡಿಕೇರಿ : ಸದಾ ಒತ್ತಡಲ್ಲೇ ಕಾರ್ಯ ನಿರ್ವಹಿಸುವ ಜಿಲ್ಲೆಯ ಆರಕ್ಷಕರಿಗೆ ರಿಲಿಪ್ ನೀಡುವ ಸಲುವಾಗಿ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ವಿರಾಜಪೇಟೆ ಉಪ ವಿಭಾಗದ ವತಿಯಿಂದ ಪೊಲೀಸ್ ಸಿಬ್ಬಂದಿಗಳು ಹಾಗೂ ಕುಟುಂಬಸ್ಥರಿಗಾಗಿ ಇದೆ ಮೊದಲ ಬಾರಿಗೆ ಕೆಸರು ಗದ್ದೆ ಕ್ರೀಡಾಕೂಟವನ್ನು ಆಯೋಜನೆ ಮಾಡಿದೆ. ಗೋಣಿಕೊಪ್ಪಲು ಕಾವೇರಿ ಕಾಲೇಜು ಹಿಂಭಾಗದ ಗದ್ದೆಯಲ್ಲಿ ನಾಳೆ (ಜುಲೈ […]