ಚೆಯ್ಯಂಡಾಣೆಯಲ್ಲಿ ರಾಜ್ಯೋತ್ಸವ ಕ್ರೀಡಾ ಸಂಭ್ರಮಕ್ಕೆ ಅದ್ಧೂರಿ ಚಾಲನೆ – ಹಾಕಿಯಲ್ಲಿ ಕೊಕೇರಿ ತಂಡ ಫೈನಲ್ ಪ್ರವೇಶ

ಜನವಾಹಿನಿ ನ್ಯೂಸ್ ಚೆಯ್ಯಂಡಾಣೆ : ಕನ್ನಡ ರಾಜ್ಯೋತ್ಸವದ ಅಂಗವಾಗಿ ಚೆಯ್ಯಂಡಾಣೆ ರಾಜ್ಯೋತ್ಸವ ಕ್ರೀಡಾ ಸಮಿತಿಯ ವತಿಯಿಂದ ಚೆಯ್ಯಂಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿರುವ ರಾಜ್ಯೋತ್ಸವ ಕ್ರೀಡಾ ಸಂಭ್ರಮಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ನ. 8ರವರೆಗೆ ನಡೆಯಲಿರುವ ಕ್ರೀಡಾಕೂಟದಲ್ಲಿ ನರಿಯಂದಡ, ಕೊಕೇರಿ ಹಾಗೂ ಚೇಲಾವರ ಗ್ರಾಮಗಳ ತಂಡಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದು, ಗ್ರಾಮದಲ್ಲಿ ಕ್ರೀಡಾ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಚೆಯ್ಯಂಡಾಣೆ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಂಚು ಗೌತಮಿ […]
ಮಡಿಕೇರಿಯಲ್ಲಿ ಗಮನ ಸೆಳೆದ ಕಲಾ ಪ್ರತಿಭೋತ್ಸವ ; ಸಾಂಸ್ಕೃತಿಕ ಶ್ರೀಮಂತಿಕೆ ಕೊಡಗಿನ ಹೆಗ್ಗಳಿಕೆ: ಟಿ.ಪಿ.ರಮೇಶ್

ಜನವಾಹಿನಿ ನ್ಯೂಸ್ ಮಡಿಕೇರಿ : ಕೊಡಗು ಸಾಂಸ್ಕøತಿಕ ವೈವಿಧ್ಯತೆಯನ್ನು ಹೊಂದಿರುವ ಜಿಲ್ಲೆಯಾಗಿದ್ದು, ಇಲ್ಲಿನ ಜನರ ಸಂಸ್ಕøತಿ, ಜೀವನಶೈಲಿ ಹಾಗೂ ಆಚಾರ-ವಿಚಾರಗಳು ವಿಶಿಷ್ಟವಾಗಿವೆ. ಸಾಹಿತ್ಯ, ಸಂಸ್ಕøತಿ ಮತ್ತು ಪರಂಪರೆ ಇಂದಿಗೂ ಜೀವಂತವಾಗಿದ್ದು, ಜನರ ಸ್ನೇಹಪರ ಬದುಕು ಜಿಲ್ಲೆಯ ಸಾಂಸ್ಕøತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ, ಕರ್ನಾಟಕ ಅರೆಭಾμÉ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, […]
ಪೊನ್ನಪ್ಪ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಕೊಲೆ ಆರೋಪದಲ್ಲಿ ಮೂವರ ಬಂಧನ

ಜನವಾಹಿನಿ ನ್ಯೂಸ್ ವಿರಾಜಪೇಟೆ : ಹೂತು ಹಾಕಿದ್ದ ಸ್ಥಿತಿಯಲ್ಲಿ ಮೃತದೇಹ ಪತ್ತೆ; ಕೊಲೆ ಮಾಡಿ ಸಾಕ್ಷ್ಯ ನಾಶಕ್ಕೆ ಯತ್ನಿಸಿರುವ ಶಂಕೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲಂಗಾಲ ಗ್ರಾಮದ 41 ವರ್ಷದ ಪೊನ್ನಪ್ಪ ಕೆ.ಪಿ. ಅಲಿಯಾಸ್ ವಿನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಕ್ಟೋಬರ್ 21ರಂದು ಪೊನ್ನಪ್ಪ ನಾಪತ್ತೆಯಾಗಿದ್ದು, ಅಕ್ಟೋಬರ್ 26ರಂದು ಅವರ ತಾಯಿ ರೇಣು ಅವರು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ನಾಪತ್ತೆ ಪ್ರಕರಣ ದಾಖಲಿಸಿಕೊಂಡು […]
ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ನ.9ರಂದು ಅಮಾವಾಸ್ಯೆಯ ಪ್ರಯುಕ್ತ ದೀಪಾವಳಿ ದೀಪೋತ್ಸವ

ಜನವಾಹಿನಿ ನ್ಯೂಸ್ ಮಡಿಕೇರಿ : ನಗರದ ಕರ್ಣಂಗೇರಿ ಕ್ಷೇತ್ರದಲ್ಲಿರುವ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ನ.9ರಂದು ಅಮಾವಾಸ್ಯೆಯ ಪ್ರಯುಕ್ತ ದೀಪಾವಳಿ ದೀಪೋತ್ಸವವನ್ನು ಭಕ್ತಿಭಾವದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ದೇವಾಲಯದ ಧರ್ಮದರ್ಶಿ ಹೆಚ್.ಎಸ್. ಗೋವಿಂದ ಸ್ವಾಮಿ ಅವರು, ದೀಪೋತ್ಸವದ ಅಂಗವಾಗಿ ಅಂದು ರಾತ್ರಿ 7 ಗಂಟೆಗೆ ಕಳಸ ಪೂಜೆ ನಡೆಯಲಿದೆ. ರಾತ್ರಿ 8 ಗಂಟೆಗೆ ಅನ್ನದಾನ ಹಾಗೂ ಪ್ರಸಾದ ವಿನಿಯೋಗ, ರಾತ್ರಿ 9 ಗಂಟೆಗೆ ತಾಯಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. […]
ಕಕ್ಕಬೆ ಕೇಂದ್ರ ವಿದ್ಯಾಸಂಸ್ಥೆಗೆ ಅನುದಾನ ಕೋರಿ ಶಾಸಕ ಪೊನ್ನಣ್ಣಗೆ ಮನವಿ

ಜನವಾಹಿನಿ ನ್ಯೂಸ್ ಕಕ್ಕಬೆ : ಕಕ್ಕಬೆ ಕೇಂದ್ರ ವಿದ್ಯಾಸಂಸ್ಥೆಯ ಶಾಲಾ ರಸ್ತೆಯ ಅಭಿವೃದ್ಧಿ ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸಂಸ್ಥೆಯ ಪದಾಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಉಪಾಧ್ಯಕ್ಷ ಸುರೇಶ್ ಬೆಳ್ಳಿಯಪ್ಪ, ಕರೆಸ್ಪಾಂಡೆಂಟ್ ರೇಖಾ ಉಲ್ಲಾಸ್, ಕಾರ್ಯದರ್ಶಿ ಬಬಿತ […]
ಪ್ರಿಯಾಂಕ ಖರ್ಗೆ ಅವರ ಹೇಳಿಕೆ ಖಂಡನೀಯ: ಜೆಡಿಎಸ್ನ ಶಿಯಾಬುದ್ದೀನ್

ಜನವಾಹಿನಿ ನ್ಯೂಸ್ ನೆಲ್ಯಹುದಿಕೇರಿ : ಸಚಿವ ಪ್ರಿಯಾಂಕ ಖರ್ಗೆ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಬಳಸಿದ “ಹಳ್ಳಿ ಗುಗ್ಗು” ಎಂಬ ಪದವನ್ನು ಕೊಡಗು ಜೆಡಿಎಸ್ ಸಾಮಾಜಿಕ ಜಾಲತಾಣ ಉಪಾಧ್ಯಕ್ಷ ಶಿಯಾಬುದ್ದೀನ್ ವಿಪಿಎಸ್ ತೀವ್ರವಾಗಿ ಖಂಡಿಸಿದ್ದಾರೆ. ಗೃಹ ಸಚಿವರಂತಹ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಕನ್ನಡಿಗರ ಪ್ರೀತಿಯ ನಾಯಕರು, ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರ ವಿರುದ್ಧ ಅತ್ಯಂತ ಕೀಳು ಹಾಗೂ ಅಸಂಸ್ಕೃತ ಪದ ಬಳಸಿರುವುದು ಅವರ ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗೃಹ […]
ಮಡಿಕೇರಿ ಲಯನ್ಸ್ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ – ಅಮೃತ ಮಹೋತ್ಸವ : ಕೃತಕ ಬುದ್ಧಿ ಮತ್ತೆಯ ವ್ಯವಸ್ಥೆ ನಮಗೇ ಬುದ್ದಿ ಕಲಿಸುವಂತಾಗಿದೆ.- ಅನಿಲ್ ಹೆಚ್. ಟಿ ಆತಂಕ

ಜನವಾಹಿನಿ ನ್ಯೂಸ್ ಮಡಿಕೇರಿ : ಕೃತಕ ಬುದ್ಧಿ ಮತ್ತೆ ಆಧೀನಕ್ಕೆ ನಮ್ಮ ಬುದ್ದಿಯನ್ನು ಕೊಟ್ಟು ಆ ಬುದ್ದಿ ಮತ್ತೆ ಸೃಷ್ಟಿಸುವ ಪದಗಳನ್ನು ನೈಜ ಭಾಷೆಯೆಂದು ಭಾವಿಸಿ ಮೂಲ ಭಾಷೆಯನ್ನು ಇಂದಿನ ಯುವ ಪೀಳಿಗೆ ಮರೆಯುತ್ತಿದೆ ಎಂದು ಮಡಿಕೇರಿ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಅನಿಲ್ ಹೆಚ್.ಟಿ. ಆತಂಕ ವ್ಯಕ್ತಪಡಿಸಿದ್ದಾರೆ.. ಮಡಿಕೇರಿಯ ಲಯನ್ಸ್ ಸಂಸ್ಥೆ ವತಿಯಿಂದ ಜರುಗಿದ ಕನ್ನಡ ರಾಜ್ಯೋತ್ಸವ ಮತ್ತು ಹಿರಿಯ ನಾಗರಿಕರಿಗೆ ಸನ್ಮಾನದ ಅಮೃತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಈಗಿನ ಪರಿಸ್ಥಿತಿಯಲ್ಲಿ ಕೃತಕ […]
ಶಾಸಕ ಎ.ಎಸ್. ಪೊನ್ನಣ್ಣ ವಿರುದ್ಧದ ಪ್ರಕರಣ: ಆರೋಪಗಳಿಂದ ಅಡ್ಡಂಡ ಕಾರ್ಯಪ್ಪ ಬಿಡುಗಡೆ

ಜನವಾಹಿನಿ ನ್ಯೂಸ್ ಸಿದ್ದಾಪುರ : ಚುನಾವಣಾ ಪ್ರಚಾರದ ವೇಳೆ ಎ.ಎಸ್. ಪೊನ್ನಣ್ಣ ಅವರ ವಿರುದ್ಧ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಅಡ್ಡಂಡ ಕಾರ್ಯಪ್ಪ ಅವರನ್ನು ವಿರಾಜಪೇಟೆ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ನ್ಯಾಯಾಲಯ ಆರೋಪಗಳಿಂದ ಬಿಡುಗಡೆಗೊಳಿಸಿ ಆದೇಶಿಸಿದೆ. 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಏಪ್ರಿಲ್ 30ರಂದು ಮಾಲ್ದಾರೆ ಗ್ರಾಮದಲ್ಲಿ ನಡೆದ ಪ್ರಚಾರದ ವೇಳೆ, ಸ್ಪರ್ಧಾ ಅಭ್ಯರ್ಥಿಯಾಗಿದ್ದ ಎ.ಎಸ್. ಪೊನ್ನಣ್ಣ ಅವರು ಪಿಎಫ್ಐ ಸದಸ್ಯರ ಪರ ವಕಾಲತ್ತು ವಹಿಸುವುದರ ಜೊತೆಗೆ […]
ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ : ಕೊಡಗು ಅರೇಬಿಕಾ–ಮಂಡ್ಯ ಜಂಟಿ ಚಾಂಪಿಯನ್

ಬಾಗಲಕೋಟೆ ತೃತೀಯ – ಚಿಕ್ಕಬಳ್ಳಾಪುರ ಚತುರ್ಥ ಜನವಾಹಿನಿ ನ್ಯೂಸ್ ಮಡಿಕೇರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಎರಡು ದಿನಗಳ ಕಾಲ ನಡೆದ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗು ಅರೇಬಿಕಾ ಹಾಗೂ ಮಂಡ್ಯ ತಂಡಗಳು ಜಂಟಿ ಚಾಂಪಿಯನ್ ಪ್ರಶಸ್ತಿಯನ್ನು ಹಂಚಿಕೊಂಡವು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾವಳಿಯ ಅಂತಿಮ ಹಂತದಲ್ಲಿ ಸಂಜೆ ಸುರಿದ ಭಾರಿ ಮಳೆ ಆಟಕ್ಕೆ ಅಡ್ಡಿಯುಂಟುಮಾಡಿತು. ಪ್ಲೇ […]
ಬೆಲೆ ಏರಿಕೆ ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ – ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಆಗ್ರಹ

ಜನವಾಹಿನಿ ನ್ಯೂಸ್ ಮಡಿಕೇರಿ : ಬೆಲೆ ಏರಿಕೆ ವಿರುದ್ಧ ಕೊಡಗು ಜಿಲ್ಲಾ ಬಿಜೆಪಿ ಘಟಕದ ಮುಖಂಡರು, ಕಾರ್ಯಕರ್ತರು ಇಲ್ಲಿನ ಕೊಡಗು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಕೊಡಗು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ರವಿ ಕಾಳಪ್ಪ, ‘ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದು ಮಾತ್ರವಲ್ಲ ಎಲ್ಲ ಕ್ಷೇತ್ರಗಳಲ್ಲಿಯೂ ಸಂಪೂರ್ಣ ವಿಫಲವಾಗಿದೆ. ಹೀಗಾಗಿ, ರಾಜ್ಯಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಹೇರಬೇಕು’ ಎಂದು ಒತ್ತಾಯಿಸಿದರು. ‘ರಾಜ್ಯಸರ್ಕಾರ ನಿತ್ಯವೂ ಬಳಸುವ ಹಾಲಿನ ದರ ಹೆಚ್ಚಿಸುವ ಮೂಲಕ ಬಡವರ […]