ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ

ಜನವಾಹಿನಿ NEWS ಬೆಂಗಳೂರು : ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಸೇವಾ ಆಯೋಗವು 2026ರ ಜುಲೈ 26ರಂದು ತುರ್ತು ಸಭೆ ನಡೆಸಿದೆ. ಸಾರ್ವಜನಿಕರ ವಿಶ್ವಾಸವನ್ನು ಕಾಪಾಡುವ ಉದ್ದೇಶದಿಂದ ಹಾಗೂ ಆರೋಪಗಳ ಗಂಭೀರತೆಯನ್ನು ಮನಗಂಡು ಆಯೋಗವು ಕೆಳಕಂಡ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಆಯೋಗದ ಕಾರ್ಯದರ್ಶಿ ಶ್ರೀಮತಿ ಕೆ. ಜ್ಯೋತಿ ಅವರು […]
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ

ಜನವಾಹಿನಿ NEWS ನವದೆಹಲಿ : ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ ಜೋಶಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ವಿವಾದ ಬೆನ್ನಲ್ಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೆಂದ್ರ ಪ್ರಧಾನ್ ಶನಿವಾರ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಜೋಶಿ ಅವರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಲ್ಹಾದ ಜೋಶಿ, ‘ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡೆನು. ನನ್ನ ಮೇಲೆ ಅಪಾರ ನಂಬಿಕೆಯಿಟ್ಟು […]
ಖ್ಯಾತ ಗಾಯಕಿ ಎಸ್. ಜಾನಕಿ ನಿಧನಕ್ಕೆ ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ಸಂತಾಪ

ಜನವಾಹಿನಿ NEWS ಬೆಂಗಳೂರು : ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹೆಮ್ಮೆಯ ಗಾಯಕಿ, ಗಾನ ಕೋಗಿಲೆ ಎಂದೇ ಪ್ರಸಿದ್ಧರಾಗಿದ್ದ ಶ್ರೀಮತಿ ಎಸ್. ಜಾನಕಿ ಅವರ ನಿಧನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಎಂ.ಎನ್. ಅನುಚೇತ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಎಸ್. ಜಾನಕಿ ಅವರು ಭಾರತೀಯ ಚಿತ್ರರಂಗದ ಅಪರೂಪದ ಗಾನ ಕೋಗಿಲೆ. ದಶಕಗಳ ಕಾಲ ತಮ್ಮ ಸುಮಧುರ ಧ್ವನಿಯ ಮೂಲಕ ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯ ಗೆದ್ದಿದ್ದಾರೆ. ಕೇವಲ ಹಾಡುಗಾರಿಕೆಯಷ್ಟೇ ಅಲ್ಲದೆ, ಪ್ರಾಣಿ-ಪಕ್ಷಿಗಳ ಧ್ವನಿ, […]
ಜೆಡಿಎಸ್ ಅಲ್ಪಸಂಖ್ಯಾತ ಘಟಕ ನಾಯಕರ ಸಭೆ

ಜನವಾಹಿನಿ NEWS ಸಿದ್ದಾಪುರ : ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯದ ಪ್ರಮುಖ ನಾಯಕರ ಸಭೆ ಜೆಡಿಎಸ್ ರಾಜ್ಯಾಧ್ಯಕ್ಷಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಬೆಂಗಳೂರು ಜೆಪಿ ಭವನದಲ್ಲಿರುವ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ಸಮುದಾಯದಲ್ಲಿ ಸಂಘಟನೆಯನ್ನು ಅಲ್ಪಸಂಖ್ಯಾತ ಪಕ್ಷದ ಇನ್ನಷ್ಟು ವಿಸ್ತರಿಸುವುದು ಹಾಗೂ ಮುಂಬರುವ ರಾಜಕೀಯ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಾಸಿರ್‌ಮೂರ್ನಾಡ್, ರಾಜ್ಯಕಾರ್ಯಾಧ್ಯಕ್ಷ ಶರೀಫ್ ಸುಂಟಿಕೊಪ್ಪ, ವಿರಾಜಪೇಟೆ ತಾಲೂಕು ಯುವ ಘಟಕದ […]
‘ಡ್ರಗ್ಸ್ ಬೇಡ, ಕನಸುಗಳನ್ನು ಬೆನ್ನಟ್ಟಿ’: ಬೆಂಗಳೂರಿನಲ್ಲಿ ಕೊಡಗು ಬ್ಯಾಡ್ಮಿಂಟನ್ ಟೂರ್ನಿ ಯಶಸ್ವಿ

ಜನವಾಹಿನಿ NEWS ಮಡಿಕೇರಿ : ಯುವಜನತೆಯಲ್ಲಿ ಮಾದಕ ವ್ಯಸನದ ವಿರುದ್ಧ ಜಾಗೃತಿ ಮೂಡಿಸುವ ಹಾಗೂ ಕ್ರೀಡೆಯ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ‘ಕೊಡಗು ಬ್ಯಾಡ್ಮಿಂಟನ್ ಟೂರ್ನಮೆಂಟ್’ ಬೆಂಗಳೂರಿನಲ್ಲಿ ಯಶಸ್ವಿಯಾಗಿ ಜರುಗಿತು. ‘ಡ್ರಗ್ಸ್ ಬೇಡ, ಕನಸುಗಳನ್ನು ಬೆನ್ನಟ್ಟಿ’ ಎಂಬ ಅರ್ಥಪೂರ್ಣ ಧ್ಯೇಯದೊಂದಿಗೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಗೇಮ್ ಥಿಯರಿ ಕ್ರೀಡಾಂಗಣದಲ್ಲಿ ಈ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿತ್ತು. ಕೊಡಗು ಮೂಲದ ಹಲವಾರು ಉತ್ಸಾಹಿ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿ, ತೀವ್ರ ಪೈಪೋಟಿಯೊಂದಿಗೆ ಪ್ರೇಕ್ಷಕರಿಗೆ ರೋಚಕ ಪಂದ್ಯಗಳ ರಸದೌತಣ […]
ಶಾಸಕ ಪೊನ್ನಣ್ಣನಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಮುಖ್ಯಮಂತ್ರಿ ಹಾಗೂ ಮಾಜಿ ಸಿಎಂಗೆ ಮನವಿ

ಜನವಾಹಿನಿ NEWS ಮಡಿಕೇರಿ : ಸಚಿವ ಸಂಪುಟ ವಿಸ್ತರಣೆ ಸಂದರ್ಭ ವಿರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ ನವರಿಗೆ ಸಚಿವ ಸ್ಥಾನ ನೀಡುವಂತೆ ಕೊಡಗಿನ ನಿವೃತ ಸೇನಾಧಿಕಾರಿಗಳು, ನಿವೃತ ವಾಯುಪಡೆ ಅಧಿಕಾರಿಗಳು , ಮಾಜಿ ಒಲಿಂಪಿಯನ್‌ಗಳು , ಪ್ರಮುಖರಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ಕೊಡಗಿನ ಮಾನವ ಪ್ರಾಣಿ ಸಂಘರ್ಷ, ಪ್ರವಾಸೋದ್ಯಮ, ಭೂ ಪರಿವರ್ತನೆಯಂತಹ ಕೆಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ, ಜಿಲ್ಲೆಯ ಅಭಿವೃದ್ಧಿ ಮತ್ತು ಜನರ ಸಮಸ್ಯೆಗಳನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುವ […]
ಬಂಡೆ ಕುಸಿದು 7 ಮಂದಿ ಕಾರ್ಮಿಕರ ಸಾವು : ಕಲ್ಲು ಕ್ವಾರಿಯಲ್ಲಿ ನಡೆದ ಘೋರ ದುರಂತ

ಜನವಾಹಿನಿ NEWS ಬೆಂಗಳೂರು : ಬೆಂಗಳೂರಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣ ಗ್ರಾಮದ ಬಳಿ ಇರುವ ಕಲ್ಲು ಕ್ವಾರಿಯೊಂದರಲ್ಲಿ ಬಂಡೆ ಕುಸಿದು ಬಿದ್ದ ಪರಿಣಾಮ, ಸ್ಥಳದಲ್ಲೇ ಏಳು ಮಂದಿ ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮಾದಪಟ್ಟಣ ಗ್ರಾಮದ ವ್ಯಾಪ್ತಿಯಲ್ಲಿರುವ ಕಾವೇರಿ ಕ್ರಷರ್ ನಲ್ಲಿ ಎಂದಿನಂತೆ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಹಠಾತ್ ಆಗಿ ಬೃಹತ್ ಗಾತ್ರದ ಕಲ್ಲು ಬಂಡೆಯೊಂದು ಉರುಳಿ ಬಿದ್ದಿದ್ದು, ಅದರಡಿ ಸಿಲುಕಿ ಏಳು ಮಂದಿ ಕಾರ್ಮಿಕರು ಸ್ಥಳದಲ್ಲೇ […]
ಪ್ರಕೃತ್ತಿ ವಿಕೋಪ ನಿರ್ವಹಣೆ ಉಸ್ತುವಾರಿ ಸಚಿವರಾಗಿ ಕೊಡಗಿಗೆ ಯುಟಿ ಖಾದರ್ ನೇಮಕ

ಜನವಾಹಿನಿ NEWS ಮಡಿಕೇರಿ : ಮುಂಗಾರು ಹಿನ್ನಲೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರಕೃತಿ ವಿಕೋಪ ನಿರ್ವಹಣೆಗೆ ಸಚಿವರ ನೇಮಕ ಮಾಡಲಾಗಿದ್ದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿರ್ಗಮಿತ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಮೈಸೂರಿನ ಅಬ್ಬೂರು ಗ್ರಾಮದ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗ ಮೇಳ

ಜನವಾಹಿನಿ NEWS ಮಡಿಕೇರಿ : ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಸಹಕಾರದಲ್ಲಿ ಮೈಸೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಇವರ ವತಿಯಿಂದ ಜೂನ್, 24 ರಂದು ಬೆಳಗ್ಗೆ 9 ಗಂಟೆಗೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕು ಅಬ್ಬೂರು ಗ್ರಾಮದ ಬಿ.ಜಿ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳಕ್ಕೆ, ಮೈಸೂರಿನ ಹೆಸರಾಂತ ಕಂಪನಿಗಳಾದ ಇನ್ಫೋಸಿಸ್, ಜೆ.ಕೆ ಟೈರ್ಸ್, ಟಿ.ವಿ.ಎಸ್, ರಾಣೆ-ಮಡ್ರಾಸ್, ಟ್ರೈಟಾನ್ ವ್ಯಾಲ್ವ್ಸ್, ಆಟೋ ಮೋಟಿವ್ ಎಕ್ಸಲ್ಸ್, ಸುಪ್ರೀಮ್ ಫಾರ್ಮಾs ಸ್ಯುಟಿಕಲ್ಸ್ […]
ಜೂ.27 ರಂದು ನಾಡಪ್ರಭು ಕೆಂಪೇಗೌಡರ ಜಯಂತಿ

ಜನವಾಹಿನಿ NEWS ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡರ ಜಯಂತಿಯು ಜೂನ್, 27 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಶಾಸಕರಾದ ಡಾ.ಮಂತರ್ ಗೌಡ, ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಸ್.ಅರುಣ್ ಮಾಚಯ್ಯ, ನಗರಸಭೆ […]