ರಾಷ್ಟ್ರ ಮಟ್ಟದ ಎನ್‌ಸಿಸಿ “ಅಖಿಲ ಭಾರತ ಭೂಸೈನಿಕ ಶಿಬಿರಕ್ಕೆ ನೆಲ್ಯಾಹುದಿಕೇರಿಯ ವಿನಂತಿ ಆಯ್ಕೆ

ಜನವಾಹನಿ NEWS ಸೋಮವಾರಪೇಟೆ : ನವದೆಹಲಿಯಲ್ಲಿ ಸೆಪ್ಟೆಂಬರ್ 2 ರಿಂದ 12 ರವರೆಗೆ ನಡೆಯಲಿರುವ ರಾಷ್ಟ್ರ ಮಟ್ಟದ ಎನ್‌ಸಿಸಿ “ಅಖಿಲ ಭಾರತ ಭೂಸೈನಿಕ ಶಿಬಿರ” (All India Thal Sainik Camp – AITSC)ದಲ್ಲಿ ಭಾಗವಹಿಸಲು ನೆಲ್ಯಾಹುದಿಕೇರಿ ಗ್ರಾಮದ ಟಿ.ಎಸ್.ವಿನಂತಿ ಆಯ್ಕೆಯಾಗಿದ್ದಾರೆ. ಮೈಸೂರು ಸೆಂಟ್ ಜೋಸೆಫ್ ಕಾಲೇಜಿನ ಎನ್‌ಸಿಸಿ ಕೆಡೆಟ್ ಆಗಿರುವ ಇವರು, ತೆರಂಬಳ್ಳಿ ಸುಧೀರ್ ಕುಮಾರ್ ಹಾಗೂ ಪವಿತ್ರ ದಂಪತಿ ಪುತ್ರಿ. ಶಿಬಿರದ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ ಎನ್‌ಸಿಸಿ ಕೆಡೆಟ್‌ಗಳು ಶಿಸ್ತಿನ ತರಬೇತಿ, […]
ಧರ್ಮಸ್ಥಳ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ : ಮಾಸ್ಕ್ ಮ್ಯಾನ್ ಮುಖವಾಡ ಕಳಚಿದ SIT – 10 ದಿನಗಳ ಕಾಲ ಕಸ್ಟಡಿಗೆ

ಬೆಳ್ತಂಗಡಿ : ಕಳೆದೆರಡು ತಿಂಗಳಿನಿಂದ ದೇಶದೆಲ್ಲೆಡೆ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತ ಪ್ರಕರಣ ಇದೀಗ ಮಹತ್ವದ ತಿರುವು ಪಡೆದಿದೆ. ಬುರುಡೆ ಹಿಡಿದುಕೊಂಡು ಬಂದು ದೂರು ನೀಡಿದ್ದ ಅನಾಮಿಕ ದೂರುದಾರನನ್ನೇ ಇದೀಗ ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಶನಿವಾರ (ಆ.23) ದೂರುದಾರ ಮಾಸ್ಕ್‌ಮ್ಯಾನ್ (ಸಿ.ಎನ್.ಚಿನ್ನಯ್ಯ) ನನ್ನು ಎಸ್‌ಐಟಿ ಅಧಿಕಾರಿಗಳು ಬಂಧನಕ್ಕೆ ಒಳಪಡಿಸಿದ್ದಾರೆ. ಬೆಳಗ್ಗೆ ವೈದ್ಯಕೀಯ ತಪಾಸಣೆಯ ಬಳಿಕ ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಜೆಎಂಎಫ್‌ಎಸ್ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಅಲ್ಲಿ ಆತನನ್ನು 10 ದಿನಗಳ ಕಾಲ […]
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ.

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ : SIT ಎದುರು ಸತ್ಯ ಬಾಯಿಬಿಟ್ಟ ಅನಾಮಿಕ…! ಮಾಸ್ಕ್ ಮ್ಯಾನ್ ಹೇಳಿದ್ದೇನು ಗೊತ್ತಾ…? ಇಲ್ಲಿದೆ ನೋಡಿ ಮಾಹಿತಿ. ಧರ್ಮಸ್ಥಳ: ರಾಜ್ಯ ಹಾಗೂ ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಧರ್ಮಸ್ಥಳ ‘ಬುರುಡೆ’ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದೆ. ನೇತ್ರಾವತಿ ನದಿ ದಡದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿ ಕಳೆದ 15 ದಿನಗಳಿಂದ ಶೋಧ ಕಾರ್ಯಕ್ಕೆ ಕಾರಣನಾಗಿದ್ದ ಸಾಕ್ಷಿದಾರ ಎಸ್ ಟಿಐ ವಿಚಾರಣೆ […]
ಸ್ವಾತಂತ್ರ್ಯಕ್ಕಾಗಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು : ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯಕ್ಕಾಗಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು : ಸಿಎಂ ಸಿದ್ದರಾಮಯ್ಯ ಬೆಂಗಳೂರು : ಬ್ರಿಟಿಷರ ದಾಸ್ಯದಿಂದ ಸ್ವಾತಂತ್ರ್ಯ ಪಡೆಯಲು ದೇಶವು ಒಗ್ಗೂಡಿ ಹೋರಾಡುವಲ್ಲಿ ತೋರಿದ ಸ್ಫೂರ್ತಿಯನ್ನೇ ಸಂವಿಧಾನವನ್ನು ಎತ್ತಿಹಿಡಿಯುವ ವಿಚಾರದಲ್ಲಿಯೂ ನಾವೆಲ್ಲರೂ ತೋರಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ೭೯ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳವಳಿಯು ನಮ್ಮನ್ನು ಹೇಗೆ […]
ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ

ರಾಜ್ಯದಾದ್ಯಂತ ಆ.೧೨ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಹೋರಾಟ : ಜಿಲ್ಲೆಯಲ್ಲೂ ನಡೆಯಲಿದೆ ಪ್ರತಿಭಟನಾ – ಸಮಾವೇಶ ಮಡಿಕೇರಿ : ಮಾಸಿಕ ಕನಿಷ್ಠ ರೂ.೧೦ ಸಾವಿರ ಗೌರವಧನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಆ.೧೨ರಿಂದ ೧೪ರವರೆಗೆ ರಾಜ್ಯದಾದ್ಯಂತ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಉಪಾಧ್ಯಕ್ಷೆ ಎಂ.ಉಮಾದೇವಿ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರವ ಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಜನವರಿ ತಿಂಗಳಲ್ಲಿ ಪ್ರತಿಭಟನೆ ನಡೆಸಲಾಗಿತ್ತು. […]
ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡಾಕೂಟ ಆಯೋಜನೆಗೆ ಸರಕಾರದಿಂದ ಧನಸಹಾಯ : ಆಸಕ್ತ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು

ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡಾಕೂಟ ಆಯೋಜನೆಗೆ ಸರಕಾರದಿಂದ ಧನಸಹಾಯ : ಆಸಕ್ತ ಸಂಘ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು ಮಡಿಕೇರಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ತಮ್ಮ 2025-26 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ‘ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಗಳಿಗೆ ಉತ್ತೇಜನ ನೀಡಲಾಗುವುದು ಎಂದು ಘೋಷಿಸಿರುತ್ತಾರೆ. ಅದರಂತೆ ಗ್ರಾಮೀಣ ಕ್ರೀಡೆಗಳಾದ ಕಂಬಳ, ಎತ್ತಿನಬಂಡಿ ಓಟ ಮತ್ತು ಮಲ್ಲಕಂಬ ಕ್ರೀಡೆಯನ್ನು ಆಯೋಜಿಸಲು […]
ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ

ನಾಳೆ ರಾಜ್ಯಾದ್ಯಂತ ಬಸ್ ಮುಷ್ಕರ ಫಿಕ್ಸ್ : ಹೈಕೋರ್ಟ್ ಆದೇಶದ ನಡುವೆಯೂ ಬಂದ್ ನಡೆಸಲು ಸಾರಿಗೆ ನೌಕರರ ತೀರ್ಮಾನ ಬೆಂಗಳೂರು : ನಾಳೆ (ಮಂಗಳವಾರ ಆ.5) ರಾಜ್ಯಾದ್ಯಂತ ಸರಕಾರಿ ಬಸ್‌ಗಳೂ ಸ್ನಾಚರಿಸುವುದಿಲ್ಲ ಎಂದು ಸಾರಿಗೆ ನೌಕರರ ಮುಖಂಡರು ಹೇಳಿದ್ದಾರೆ . ನಾಳೆ ಒಂದು ದಿನದ ಮಟ್ಟಿಗೆ ಮುಷ್ಕರ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ, ಹೈಕೋರ್ಟ್ ಆದೇಶ ಪ್ರತಿ ಕೈಸೇರದ ಹಿನ್ನೆಲೆಯಲ್ಲಿ ನಾಳೆ(ಆ.5)ಮುಷ್ಕರ ನಡೆಯಲಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಬಸ್‌ಗಳು ಸಂಚಾರ ನಿಲ್ಲಿಸಲಿವೆ ಎಂದು ತಿಳಿಸಿದ್ದಾರೆ. ಅರಿಯರ್ಸ್ ಸೇರಿದಂತೆ […]
ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್ : ಹೆದ್ದಾರಿ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಇಂಜಿನಿಯರ್ ಗಳಿಗೆ ಸೂಚನೆ

ಬಿರುಕು ಬಿಟ್ಟಿರುವ ತಡೆಗೋಡೆ ವೀಕ್ಷಿಸಿದ ಸಂಸದ ಯದುವೀರ್ ಒಡೆಯರ್ : ಹೆದ್ದಾರಿ ಸುರಕ್ಷತೆ ಬಗ್ಗೆ ಕಾಳಜಿ ವಹಿಸಲು ಇಂಜಿನಿಯರ್ ಗಳಿಗೆ ಸೂಚನೆ ಮಡಿಕೇರಿ : ನಗರ ಸಮೀಪದ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಬಿರುಕು ಬಿಟ್ಟಿರುವ ತಡೆಗೋಡೆಯನ್ನು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶನಿವಾರ ಭೇಟಿ ನೀಡಿ ವೀಕ್ಷಿಸಿದರು. ಹೆದ್ದಾರಿ ಸುರಕ್ಷತೆ ಸಂಬಂಧ ಜಿಲ್ಲಾಡಳಿತ ಕ್ರಮ ವಹಿಸಿದ್ದು, ಎಂಜಿನಿಯರ್ ಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಂಸದರು ನಿರ್ದೇಶನ ನೀಡಿದರು. ಹೆದ್ದಾರಿ ಸುರಕ್ಷತೆಗೆ ಒತ್ತು […]
ಮೊದಲ ದಿನವೇ ಪ್ರೇಕ್ಷಕರ ಮನಗೆದ್ದ ಎಲ್ಟು ಮುತ್ತಾ : ಪುಟ್ಟ ಬಾಲಕಿಯ ನಟನೆಗೆ ಪ್ರೇಕ್ಷರು ಫಿದಾ

ಮೊದಲ ದಿನವೇ ಪ್ರೇಕ್ಷಕರ ಮನಗೆದ್ದ ಎಲ್ಟು ಮುತ್ತಾ : ಬಾಲಕಿಯ ನಟನೆಗೆ ಪ್ರೇಕ್ಷರು ಫಿದಾ ಮಡಿಕೇರಿ : ಕೊಡಗಿನಲ್ಲಿ ಚಿತ್ರೀಕರಣಗೊಂಡು ಇಂದು ಬೆಳ್ಳಿ ತೆರೆ ಕಂಡಿರುವ ಕನ್ನಡದ ಎಲ್ಟು ಮುತ್ತಾ ಸಿನಿಮಾ ಮೊದಲ ದಿನವೇ ಪ್ರೇಕ್ಷಕರ ಮನಗೆದಿದ್ದು, ಉತ್ತಮ ಸ್ಪಂದನೆ ದೊರೆತಿದೆ. ರಾಜ್ಯದ ವಿವಿಧ ಚಿತ್ರಮಂದಿರಗಳಲ್ಲಿ ತೆರೆ ಕಂಡಿರುವ ಕೊಡಗಿನ ಎಲ್ಟು ಮುತ್ತಾ ಸಿನಿಮಾ ಕೊಡಗಿನ ಕಲಾವಿದರ ಪಾಲಿಗೆ ಹೊಸ ಅಧ್ಯಾಯವನ್ನೇ ಸೃಷ್ಟಿಸಿದೆ. ಪ್ರೇಕ್ಷಕರು ಕೂಡ ಉತ್ತಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಕೊಡಗಿನ ಸಂಸ್ಕೃತಿ ಹಾಗೂ ಇಲ್ಲಿನ […]
ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಅಪಘಾತ : ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕುಶಾಲನಗರ : ಶಿರಂಗಾಲ ಶ್ರೀ ಮಂಟಿಗಮ್ಮ ದೇವಾಲಯ ಪ್ರವೇಶದ್ವಾರದ ತಿರುವಿನಲ್ಲಿ ಬುಧವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕು ಕಣಗಾಲು ಹೋಬಳಿಯ ಚಾಮರಾಯನಕೋಟೆ ಗ್ರಾಮದ ನಿವಾಸಿ ಅಶೋಕ್(36) ಮೃತ ದುರ್ದೈವಿಯಾಗಿದ್ದಾನೆ. ಕೊಣನೂರು ಕಡೆಯಿಂದ ಕುಶಾಲನಗರ ಕಡೆಗೆ ಬರುತ್ತಿದ್ದ ಲಾರಿ ಹಾಗೂ ಶಿರಂಗಾಲದಿಂದ ಕೊಣನೂರು ಕಡೆಗೆ ಹೋಗುತ್ತಿದ್ದ ಬೈಕ್ ಸ್ಕೂಟಿ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ತೀವ್ರವಾಗಿ […]