ಎಸ್‌ಐಆರ್ ಅಡಿಯಲ್ಲಿ ಮತದಾರರ ಪಟ್ಟಿ ಅಪ್ಡೇಟ್ ಕಡ್ಡಾಯ : ಇಂದೇ ಮಾಹಿತಿ ಅಪ್ಡೇಟ್ ಮಾಡಿಸಿ ತಪ್ಪಿದಲ್ಲಿ, ಮತದಾನದ ಹಕ್ಕನ್ನೇ ಕಳೆದುಕೊಳ್ಳುವಿರಿ ಹುಷಾರ್…!

ಜನವಾಹಿನಿ News ಮಡಿಕೇರಿ : ಚುನಾವಣಾ ಆಯೋಗವು ನಡೆಸುವ ಈ ಪರಿಷ್ಕರಣೆ ಮತದಾರರ ಪಟ್ಟಿಯನ್ನು ನಿಖರಗೊಳಿಸಲು ಕಡ್ಡಾಯ. ಯಾರಿಗೆ ಅನ್ವಯ: ಅರ್ಹ ಮತದಾರರ ಪಟ್ಟಿಗೆ ಸೇರ್ಪಡೆ, ತಿದ್ದುಪಡಿ ಅಥವಾ ತೆಗೆದುಹಾಕುವಿಕೆಗಾಗಿ ಇದು ಅನ್ವಯಿಸುತ್ತದೆ. ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಗಳಿಗೆ ಭೇಟಿ ನೀಡಿ, ದಾಖಲೆಗಳನ್ನು ಪರಿಶೀಲಿಸಿ ಮತದಾರರ ಪಟ್ಟಿಯನ್ನು ಅಪ್ಡೇಟ್ ಮಾಡುತ್ತಾರೆ. ಎಸ್‌ಐಆರ್ ಅಡಿಯಲ್ಲಿ ಮತದಾರರ ಪಟ್ಟಿ ಅಪ್ಡೇಟ್ ಆಗುವುದರಿಂದ ಪ್ರತಿಯೊಬ್ಬ ಮತದಾರರು ಪರಿಶೀಲನೆಗೆ ಸಹಕರಿಸುವುದು ಮುಖ್ಯ.ಇದು ಮತದಾರರ ಪಟ್ಟಿಯಲ್ಲಿ ಯಾವುದೇ ತಪ್ಪುಗಳಿಲ್ಲದೆ, ಹೊಸ ಮತದಾರರು ಸೇರ್ಪಡೆಗೊಳ್ಳಲು […]
ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆ

ಜನವಾಹಿನಿ News ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿ.ಗೆ ಯಾವುದೇ ರೀತಿಯ ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ. ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 […]
ಫಾಸ್ಟ್ ಪುಡ್(ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಜನವಾಹಿನಿ News ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನಗಳ ಅವಧಿಯ ಉಚಿತ ಫಾಸ್ಟ್ ಫುಡ್ (ಚಾಟ್ಸ್ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏಪ್ರಿಲ್ 4 ರಿಂದ ಪ್ರಾರಂಭಿಸಲಾಗುತ್ತಿದೆ. ಈ ಶಿಬಿರದಲ್ಲಿ ಪಾನಿ ಪೂರಿ, ಬೇಲ್ ಪೂರಿ, ದಹಿ ಪೂರಿ, ಸೇವ್ ಪೂರಿ, ಚಾಟ್ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್ ರೈಸ್, ಸಮೋಸ ಇನ್ನಿತರೆ […]
ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ : ಸಂಸದ ಯದುವೀರ್ ಒಡೆಯರ್ ಖಂಡನೆ – ಕಾನೂನು ಕ್ರಮ ಕೈಗೊಳ್ಳಲು ಸೂಚನೆ

ಜನವಾಹಿನಿ News ಮಡಿಕೇರಿ : ಶನಿವಾರ ಬಲ್ಲಮಾವಟಿಯಲ್ಲಿ ಆಯೋಜಿಸಲಾದ ಹಿಂದೂ ಸಂಗಮ ಕಾರ್ಯಕ್ರಮದ ನಿಮಿತ್ತ ಪ್ರಚಾರ ಕಾರ್ಯ ಕೈಗೊಳ್ಳುತ್ತಿದ್ದ ಹಿಂದೂ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ್ದನ್ನು ಕೊಡಗು ಮೈಸೂರು ಲೋಕಸಭಾ ಸದಸ್ಯರಾದ ಯದುವೀರ್ ಒಡೆಯರ್ ರವರು ಖಂಡಿಸಿದ್ದಾರೆ. ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಘಟನೆಯ ವಿವರವನ್ನು ಪಡೆದಿದ್ದು, ಶನಿವಾರ […]
ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಸಂಸದ ಯದುವೀರ್ ಒಡೆಯರ್ ರಿಂದ ಭೂಮಿಪೂಜೆ

ಜನವಾಹಿನಿ News ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275 ರ ಇಬ್ಬನಿ ರೆಸಾರ್ಟ್ ಬಳಿಯಿಂದ ಸಂಪಾಜೆ ವರೆಗೆ 21 ಕಡೆಗಳಲ್ಲಿ ಸುಮಾರು 94 ಕೋಟಿ ರೂ. ವೆಚ್ಚದ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಮಡಿಕೇರಿ ತಾಲ್ಲೂಕಿನ ಮದೆನಾಡು ಬಳಿಯ ಕರ್ತೋಜಿ ಬಳಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದರು ಸ್ಥಳೀಯರ ಬೇಡಿಕೆಯಂತೆ 21 ಕಡೆಗಳಲ್ಲಿ ರಕ್ಷಣಾ […]
ಫೆನಾಯಿಲ್ ಘಟಕದ ಹೆಸರಲ್ಲಿ ಡ್ರಗ್ಸ್ ತಯಾರಿಕೆ : ಗುಜರಾತ್ ಪೆಡ್ಲರ್‌ನಿಂದ ಸಿಕ್ಕ ಮಾಹಿತಿ – ಕೇಂದ್ರ ಮಾದಕ ದ್ರವ್ಯ ನಿಯಂತ್ರಣ ಅಧಿಕಾರಿಗಳಿಂದ ದಾಳಿ

ಜನವಾಹಿನಿ News ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಡ್ರಗ್ಸ್ ತಯಾರಿಕೆಗೆ ಸೇಫ್ ಜೋನ್ ಆಗ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ. ಇವತ್ತು ಕೇಂದ್ರ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ ಅಧಿಕಾರಿಗಳು ಭಾರೀ ಪ್ರಮಾಣದ ಡ್ರಗ್ಸ್ ತಯಾರಿಕೆಯ ಘಟಕದ ಮೇಲೆ ದಾಳಿ ಮಾಡಿದ್ದಾರೆ. ನಗರದ ಹೆಬ್ಬಾಳದಲ್ಲಿರುವ ಟುಕ್ ಟುಕ್ ಹೌಸ್ ಹೋಲ್ಡ್ ಕೆಮಿಕಲ್ಸ್ ಪ್ರೊಡಕ್ಷನ್ ಸಲ್ಯೂಷನ್ ತಯಾರಿಕಾ ಘಟಕದ ಮೇಲೆ ಈ ದಾಳಿ ನಡೆದಿದೆ. ಈ ಘಟಕ ಬೋರೇಗೌಡ ಎಂಬ ವ್ಯಕ್ತಿಗೆ ಸೇರಿದ್ದು, 1 ವರ್ಷದ ಹಿಂದೆ […]
ಮೈಸೂರು : ಅರಮನೆ ಬಳಿ ಸ್ಪೋಟ : ಓರ್ವ ಸಾವು ಹಲವರ ಸ್ಥಿತಿ ಗಂಭೀರ

ಜನವಾಹಿನಿ News ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ. ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಈ ದುರಂತ ನಡೆದಿದ್ದು, ಅರಮನೆಯ ಜಯಮಾರ್ತಾಂಡ ದ್ವಾರದ ಊಟಿ ರಸ್ತೆಯ ಬದಿಯಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ನೈಟ್ರೋಜನ್ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು […]
ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ

ಜನವಾಹಿನಿ News ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿ ಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 22 ರಿಂದ ನಿರುದ್ಯೋಗಿ ಪುರುಷರಿಗೆ ಫೆÇೀಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರ ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 35 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು […]
ನಗರದ ಕೋಲ್ ಮಂದ್ ಜಾಗದಲ್ಲಿ ಆಲದ ಗಿಡ ನೆಟ್ಟ ಶಾಸಕದ್ವಯರು ಮತ್ತು ಸಂಸದರು

ಜನವಾಹಿನಿ News ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿಯ ಕೋಲ್‍ಮಂದ್ ಜಾಗದಲ್ಲಿ ಮಡಿಕೇರಿ ಕೊಡವ ಸಮಾಜ ವತಿಯಿಂದ ಏರ್ಪಡಿಸಲಾಗಿದ್ದ ‘ಆಲದ ಗಿಡ’ ನೆಡುವ ಕಾರ್ಯಕ್ರಮದಲ್ಲಿ ‘ಆಲದ ಗಿಡ’ ನೆಡುವ ಮೂಲಕ ಶಾಸಕದ್ವಯರು ಹಾಗೂ ಸಂಸದರು ಶುಕ್ರವಾರ ಚಾಲನೆ ನೀಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ವಿಧಾನ ಪರಿಷತ್ ಮಾಜಿ […]
ರಾಷ್ಟ್ರ ಮಟ್ಟದ ಎನ್‌ಸಿಸಿ “ಅಖಿಲ ಭಾರತ ಭೂಸೈನಿಕ ಶಿಬಿರಕ್ಕೆ ನೆಲ್ಯಾಹುದಿಕೇರಿಯ ವಿನಂತಿ ಆಯ್ಕೆ

ಜನವಾಹನಿ NEWS ಸೋಮವಾರಪೇಟೆ : ನವದೆಹಲಿಯಲ್ಲಿ ಸೆಪ್ಟೆಂಬರ್ 2 ರಿಂದ 12 ರವರೆಗೆ ನಡೆಯಲಿರುವ ರಾಷ್ಟ್ರ ಮಟ್ಟದ ಎನ್‌ಸಿಸಿ “ಅಖಿಲ ಭಾರತ ಭೂಸೈನಿಕ ಶಿಬಿರ” (All India Thal Sainik Camp – AITSC)ದಲ್ಲಿ ಭಾಗವಹಿಸಲು ನೆಲ್ಯಾಹುದಿಕೇರಿ ಗ್ರಾಮದ ಟಿ.ಎಸ್.ವಿನಂತಿ ಆಯ್ಕೆಯಾಗಿದ್ದಾರೆ. ಮೈಸೂರು ಸೆಂಟ್ ಜೋಸೆಫ್ ಕಾಲೇಜಿನ ಎನ್‌ಸಿಸಿ ಕೆಡೆಟ್ ಆಗಿರುವ ಇವರು, ತೆರಂಬಳ್ಳಿ ಸುಧೀರ್ ಕುಮಾರ್ ಹಾಗೂ ಪವಿತ್ರ ದಂಪತಿ ಪುತ್ರಿ. ಶಿಬಿರದ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ ಎನ್‌ಸಿಸಿ ಕೆಡೆಟ್‌ಗಳು ಶಿಸ್ತಿನ ತರಬೇತಿ, […]