ವಾಹನ ಅಪಘಾತ: ಗುತ್ತಿಗೆದಾರ ದುರ್ಮರಣ

ವಾಹನ ಅಪಘಾತ: ಗುತ್ತಿಗೆದಾರ ದುರ್ಮರಣ ಕುಶಾಲನಗರ : ಪಿರಿಯಾಪಟ್ಟಣ ತಾಲೂಕಿನ ಮಂತನಹಳ್ಳಿ ಬಳಿ ನಡೆದ ವಾಹನ ಅಪಘಾತದಲ್ಲಿ ಗುತ್ತಿಗೆದಾರ ಬೈಲುಕೊಪ್ಪದ ಅರುಣ (45) ಮೃತಪಟ್ಟಿದ್ದಾರೆ. ರಾತ್ರಿ ಸ್ನೇಹಿತರೊಂದಿಗೆ ಬೈಲುಕೊಪ್ಪದತ್ತ ತಮ್ಮ ಕಾರಿನಲ್ಲಿ ಆಗಮಿಸುತ್ತಿದ್ದ ಸಂದರ್ಭ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಅರುಣ ಸ್ಥಳದಲ್ಲಿ ಮೃತರಾದರು. ಕಾರಿನಲ್ಲಿದ್ದ ಮತ್ತೋರ್ವ ಅರುಣ ಹಾಗೂ ರವಿ ಎಂಬವರಿಗೆ ಗಾಯಗಳಾಗಿದೆ.
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಹೆಗ್ಗಡದೇವನಕೋಟೆ ಬಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಈ ಸಂದರ್ಭ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ : ಸಿಎಂ ಸಿದ್ದರಾಮಯ್ಯ

ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ : ಮೈಸೂರಿನಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮೈಸೂರು : ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ₹2,578 ಕೋಟಿಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಸಮಾರಂಭ ಹಾಗೂ ರಾಜ್ಯ ಸರ್ಕಾರದ ಎರಡು […]
ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ ಮೈಸೂರು : ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ. ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ […]