ಮರಗೋಡು : ರಸ್ತೆ ತಡೆ ಪ್ರತಿಭಟನೆಗೆ ಪಕ್ಷಾತೀತ ಬೆಂಬಲ – ಅಂಗಡಿ ಮುಂಗಟ್ಟು ಮುಚ್ಚಿ ರಸ್ತೆಗಿಳಿದ ವರ್ತಕರು : ಅಧಿಕಾರಿಗಳ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆದ ಪ್ರತಿಭಟನಾಕಾರರು

ಜನವಾಹಿನಿ News ಮರಗೋಡು : ಕಳೆದ 20 ವರ್ಷಗಳಿಂದ ಡಾಂಬರೀಕರಣವಾಗದೆ ಸಂಚಾರ ಯೋಗ್ಯತೆ ಕಳೆದುಕೊಂಡ ಕಟ್ಟೆಮಾಡು–ಮರಗೋಡು ರಸ್ತೆಯ ದುಸ್ಥಿತಿಯನ್ನು ಖಂಡಿಸಿ ಮರಗೋಡಿನಲ್ಲಿ ಗ್ರಾಮಸ್ಥರು ರಸ್ತೆ ತಡೆ ಪ್ರತಿಭಟನೆ ನಡೆಸಿದರು. ಮರಗೋಡು ಆಟೋ ಚಾಲಕರ ಸಂಘ ಕರೆ ನೀಡಿದ್ದ ಪ್ರತಿಭಟನೆಗೆ ಸಾರ್ವಜನಿಕರಿಂದ ಪಕ್ಷಾತೀತ ಬೆಂಬಲ ದೊರೆಯಿತು. ಪ್ರತಿಭಟನೆಯ ಬೆನ್ನಲ್ಲೇ ಗ್ರಾಮದಲ್ಲಿನ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ರಸ್ತೆಗಿಳಿದು ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದರು. ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸದೆ ನಿರ್ಲಕ್ಷ್ಯ ಧೋರಣೆ ತೋರಿದ ಅಧಿಕಾರಿಗಳು, ಜನಪ್ರತಿನಿಧಿಗಳ […]
ಮೈಸೂರು : ಅರಮನೆ ಬಳಿ ಸ್ಪೋಟ : ಓರ್ವ ಸಾವು ಹಲವರ ಸ್ಥಿತಿ ಗಂಭೀರ

ಜನವಾಹಿನಿ News ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವ ಘಟನೆ ಗುರುವಾರ ನಡೆದಿದೆ. ಮೈಸೂರಿನ ಅಂಬಾವಿಲಾಸ ಅರಮನೆ ಆವರಣದಲ್ಲಿ ಈ ದುರಂತ ನಡೆದಿದ್ದು, ಅರಮನೆಯ ಜಯಮಾರ್ತಾಂಡ ದ್ವಾರದ ಊಟಿ ರಸ್ತೆಯ ಬದಿಯಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯ ಸಿಲಿಂಡರ್ ಸ್ಫೋಟಗೊಂಡಿದೆ. ಈ ವೇಳೆ ಒಟ್ಟು ನಾಲ್ಕು ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ನೈಟ್ರೋಜನ್ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು […]
ಆಂಗ್ಲೋ ವರ್ನಾಕ್ಯುಲರ್ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಗಣ್ಯರ ಮೆಚ್ಚುಗೆ

ಜನವಾಹಿನಿ News ಸಿದ್ದಾಪುರ: ನೆಲ್ಲಿಹುದಿಕೇರಿ ಆಂಗ್ಲೋ ವರ್ನಾಕ್ಯುಲರ್ ಶಾಲೆಯ 34ನೇ ವಾರ್ಷಿಕೋತ್ಸವ ಸಂಭ್ರಮ ವಿವಿಧ ಸಾಂಸ್ಕೃತಿಕ, ಆರೋಗ್ಯ,ಪರಿಸರ ಕಾಳಜಿ,, ಮಾದಕ ವಸ್ತುಗಳ ವಿರುದ್ಧ ಜಾಗೃತಿ ಸೇರಿದಂತೆ ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನೆರವೇರಿತು. ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಜನರಲ್ ಸರ್ಜರಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಸತೀಶ್ ವಿ ಶಿವಮಲ್ಲಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆಚಾರ ವಿಚಾರ ಸಂಸ್ಕೃತಿ ಪರಂಪರೆಯೊಂದಿಗೆ ಭಾವೈಕ್ಯತೆಯ ಸಂದೇಶ ಸಾರುವ ಮೂಲಕ ಸೌಹಾರ್ದ ಸಮಾಜ ನಿರ್ಮಾಣ ಮಾಡಲು […]
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಅರೆಭಾಷೆ ರಸಪ್ರಶ್ನೆ ಸ್ಪರ್ಧೆ : ಲಕ್ಷಣ ಕಾಳೇರಮ್ಮಣ ಪ್ರಥಮ

ಜನವಾಹಿನಿ News ಮಡಿಕೇರಿ : ಇದೊಂದು ವಿಶಿಷ್ಟ ಮತ್ತು ವಿಭಿನ್ನ ಕಾರ್ಯಕ್ರಮ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವ ವೇದಿಕೆಯಂತೆ ಕಂಡು ಬಂದೀತು ಎಂದರೆ ತಪ್ಪಾಗಲಾರದು… ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷೆ ಗೌಡ ವಿಕಾಸ ವೇದಿಕೆ (ಸಾಮಾಜಿಕ ಮಾಧ್ಯಮ ವಿಭಾಗ) ಸಹಕಾರದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಅರೆಭಾಷೆ ‘ರಸಪ್ರಶ್ನೆ ಸ್ಪರ್ಧಾ’ ಕಾರ್ಯಕ್ರಮದಲ್ಲಿ ಈ ವಾತಾವರಣ ಕಂಡು ಬಂದಿತು. ಅರೆಭಾಷೆಯಲ್ಲಿ ಹಲವು ಪ್ರಶ್ನೆ ಕೇಳುವ ಮೂಲಕ […]
ಜಿಲ್ಲಾದ್ಯಂತ ಸಂಭ್ರಮದ ಕ್ರಿಸ್‌ಮಸ್ ಆಚರಣೆ

ಜನವಾಹಿನಿ News ಮಡಿಕೇರಿ: ಜಿಲ್ಲಾಕೇಂದ್ರ ಮಡಿಕೇರಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುರುವಾರ ಕ್ರೈಸ್ತ ಬಾಂಧವರು ಯೇಸುವಿನ ಜನ್ಮದಿನ ಕ್ರಿಸ್‌ಮಸ್ ಹಬ್ಬವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಿದರು. ಜಿಲ್ಲೆಯ ಸೋಮವಾರಪೇಟೆ, ವಿರಾಜಪೇಟೆ, ಕುಶಾಲನಗರ, ಗೋಣಿಕೊಪ್ಪ, ಸಿದ್ದಾಪುರ ಸೇರಿದಂತೆ ವಿವಿಧೆಡೆ ಕ್ರೈಸ್ತ ಬಾಂಧವರು ಚರ್ಚ್‌ಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಗರದ ಸಂತ ಮೈಕಲರ ಚರ್ಚ್, ಸಿಎಸ್‌ಐ ಸೇರಿದಂತೆ ವಿವಿಧ ಚರ್ಚ್‌ಗಳಲ್ಲಿ ಬೆಳಗ್ಗಿನಿಂದಲೇ ಪೂಜೆ, ಬೈಬಲ್ ಪಠಣ, ಸಾಮೂಹಿಕ ಗಾಯನ ನಡೆದವು. ಚರ್ಚ್‌ನ ಒಳಗೆ ಹಾಗೂ ಹೊರಗೆ ವಿದ್ಯುತ್ ದೀಪಗಳಿಂದ ಅಲಂಕಾರ […]
ಮರಗೋಡು : ರಸ್ತೆ ದುರಸ್ತಿಗೆ ಆಗ್ರಹಿಸಿ ನಾಳೆ ರಸ್ತೆ ತಡೆ ಪ್ರತಿಭಟನೆ

ಜನವಾಹಿನಿ News ಮರಗೋಡು : ಹದಗೆಟ್ಟ ರಸ್ತೆಯ ದುಸ್ಥಿತಿಯಿಂದ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೀವ್ರ ತೊಂದರೆಗಳ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿಯನ್ನು ತಕ್ಷಣ ಕೈಗೊಳ್ಳಬೇಕೆಂದು ಆಗ್ರಹಿಸಿ ನಾಳೆ (ದಿನಾಂಕ 26/12/2025) ಬೆಳಿಗ್ಗೆ 9 ಗಂಟೆಯಿಂದ ಮರಗೋಡು ಗ್ರಾಮದಲ್ಲಿ ರಸ್ತೆ ತಡೆ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕತ್ತೆಲೆ ಕಾಡು–ಮರಗೋಡು ಮಾರ್ಗದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಅಸಾಧ್ಯವಾಗುವ ಮಟ್ಟಕ್ಕೆ ರಸ್ತೆ ಕುಸಿದಿದೆ. ಇದರಿಂದ ಶಾಲಾ ಮಕ್ಕಳು, ಕಾರ್ಮಿಕರು, ರೋಗಿಗಳು ಹಾಗೂ ಸಾರ್ವಜನಿಕರು ಪ್ರತಿದಿನ ಅಪಾಯದ ನಡುವೆ ಸಂಚರಿಸುವಂತಾಗಿದೆ. ಸಂಬಂಧಪಟ್ಟ ಇಲಾಖೆ ಹಾಗೂ […]
ವಿದ್ಯಾರ್ಥಿಗಳು ಜೀವನದಲ್ಲಿ ನ್ಯಾಯಯುತವಾದ ಗುರಿಯನ್ನಿಟ್ಟುಕೊಂಡರೆ ಮಾತ್ರ ಸಾಧನೆ ಮಾಡಲು ಸಾಧ್ಯ : ಅಪಾರ ಜಿಲ್ಲಾಧಿಕಾರಿ ಐಶ್ವರ್ಯ

ಜನವಾಹಿನಿ News ಮೂರ್ನಾಡು : ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮವಾದ ನ್ಯಾಯಯುತವಾದ ಗುರಿಯನ್ನು ಇಟ್ಟುಕೊಳ್ಳಬೇಕು. ಹಾಗೆಯೆ ಆ ಗುರಿಯನ್ನು ತಲುಪಲು ಅದಮ್ಯ ಪ್ರಯತ್ನ ಇದ್ದಾಗ ಮಾತ್ರ ಸಾಧನೆಗೈಯುವುದರೊಂದಿಗೆ ಸಮಾಜದಲ್ಲಿ ಮಹತ್ತರವಾದ ಬದಲಾವಣೆಯನ್ನು ತರಲು ಸಾಧ್ಯ ಎಂದು ಅಪಾರ ಜಿಲ್ಲಾಧಿಕಾರಿ ಆರ್. ಐಶ್ಚರ್ಯ ಹೇಳಿದರು. ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿದ್ಯಾಸಂಸ್ಥೆಯ ೨೬ನೇ ವರ್ಷದ ಶಾಲಾವಾರ್ಷಿಕೋತ್ಸವ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹೊರಹೊಮ್ಮಿಸುವ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಪೋಷಕರ ಪಾತ್ರ ಪ್ರಮುಖವಾದುದು. […]
ಕೊಡಗಿನ ಹಿರಿಯ ಹಾಕಿ ತರಬೇತುದಾರ, ಸಮಾಜ ಸೇವಕ ಪುಚ್ಚಿಮಡ ಹರೀಶ್ ಅಸ್ತಂಗತ

ಜನವಾಹಿನಿ News ಪೊನ್ನಂಪೇಟೆ : ಪೊನ್ನಂಪೇಟೆಯ ನಿವಾಸಿ ಕೊಡುಗೈದಾನಿ ಪುಚ್ಚಿಮಡ ದಿವಂಗತ ಬೊಪಯ್ಯ ಅವರ ಜೇಷ್ಠ ಪುತ್ರ ಹಿರಿಯ ಹಾಕಿ ತರಬೇತಿದಾರರು, ಸಮಾಜ ಸೇವಕರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಆದ ಪುಚ್ಚಿಮಡ ಹರೀಶ್ ಅನಾರೋಗ್ಯದಿಂದ ಇಂದು ಮೈಸೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಸೇರಿದಂತೆ ಇಬ್ಬರು ಪುತ್ರಿಯರು ಓರ್ವ ಪುತ್ರ, ಸಹೋದರ ಹಾಗು ಕುಟುಂಬ ವರ್ಗದವರು, ಮೊಮ್ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಪೊನ್ನoಪೇಟೆಯಲ್ಲಿ ಟ್ಯುಟೋರಿಯಲ್ ನಡೆಸುತ್ತಿದ್ದ ಸಂದರ್ಭ ಹಲವರಿಗೆ ವಿದ್ಯಾ ಧಾನವನ್ನು ಮಾಡಿದ್ದಾರೆ. ಸ್ವತಹ ಹಾಕಿ ಪಟ್ಟುವಾದ […]
ಚಿಕಿತ್ಸೆಗೆ ಪ್ರಥಮ ಆದ್ಯತೆ ನೀಡಿ ಬಿಲ್ ಬಗ್ಗೆ ನಂತರ ಗಮನ ಹರಿಸಿ : ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳಿಗೆ ಶಾಸಕ ಪೊನ್ನಣ್ಣ ಖಡಕ್ ಸೂಚನೆ

ಜನವಾಹಿನಿ News ಮಡಿಕೇರಿ : ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ತಕ್ಷಣವೇ ಚಿಕಿತ್ಸೆ ನೀಡಿ. ಬಿ.ಪಿ.ಎಲ್ ಅಥವಾ ಎ.ಪಿ.ಎಲ್ ನವರು ಎಂದು ನಂತರ ಮಾಹಿತಿ ಪಡೆದು ಬಿಲ್ ಬಗ್ಗೆ ನಿರ್ಧರಿಸಿ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ( ಕೊಡಗು ಜಿಲ್ಲಾಸ್ಪತ್ರೆ) ನಿರ್ದೇಶಕರಿಗೆ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಖಡಕ್ ಸೂಚನೆ ನೀಡಿದ್ದಾರೆ. ಆಕಸ್ಮಿಕ ಪಟಾಕಿ ಸಿಡಿತದಿಂದ ಬೆರಳು ಕಳೆದುಕೊಂಡು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಗೋಣಿಕೊಪ್ಪದ ಶಾಲಾ ಬಾಲಕ ಪವನ್ […]
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ : ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ : ಶಾಸಕ ಪೊನ್ನಣ್ಣ ಮನವಿ

ಜನವಾಹಿನಿ News ಗೋಣಿಕೊಪ್ಪ : ಕೊಡಗು ಜಿಲ್ಲೆಯಾದ್ಯಂತ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡುವ ಕಾರ್ಯಕ್ರಮ ಭಾನುವಾರ ನಡೆಯಿತು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಗೋಣಿಕೊಪ್ಪದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಪೋಲಿಯೊ ಲಸಿಕೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಎ.ಎಸ್.ಪೊನ್ನಣ್ಣ ಅವರು ಐದು ವರ್ಷದೊಳಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸುವಂತೆ ಪೋಷಕರಲ್ಲಿ ಮನವಿ ಮಾಡಿದರು. ಜಿಲ್ಲೆಯಲ್ಲಿ ವಲಸಿಗ ಮಕ್ಕಳು ಹೆಚ್ಚಿನ […]