Breaking News :

ಡಿ.23ರಿಂದ ಕಟ್ಟೆಮಾಡು ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ಜಾತ್ರಾ ಮಹೋತ್ಸವ

ಜನವಾಹಿನಿ News ಮಡಿಕೇರಿ : ಕಟ್ಟೆಮಾಡು ಗ್ರಾಮದಲ್ಲಿರುವ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಡಿ.೨೩ರಿಂದ ೨೮ರವರೆಗೆ ನಡೆಯಲಿದೆ ಎಂದು ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ಧನ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೬ ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಸಂದರ್ಭ ಹೋಮಹವನಗಳು ಸೂಸೂತ್ರವಾಗಿ ನಡೆಯಲು ಕೆಲವು ಕಟ್ಟುಪಾಡುಗಳಲ್ಲಿ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ದೇವಸ್ಥಾನ ಗರ್ಭಗುಡಿ ಮತ್ತು ಒಳಭಾಗದಲ್ಲಿ ತಂತ್ರಿಗಳು ಮತ್ತು […]

ಸಿದ್ದಾಪುರ : ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬೃಹತ್ ಅವ್ಯವಹಾರ ಆರೋಪ : ಸೂಕ್ತ ತನಿಖೆಗೆ ಒತ್ತಾಯ 

ಜನವಾಹಿನಿ News ಸಿದ್ದಾಪುರ : ಸಿದ್ದಾಪುರ ಗ್ರಾಮ ಪಂಚಾಯತಿಯಲ್ಲಿ ಬೃಹತ್ ಪ್ರಮಾಣದ ಭ್ರಷ್ಟಾಚಾರ ನಡೆದಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಈಗಾಗಲೇ ಭಾರಿ ಚರ್ಚೆ ನಡೆಯುತ್ತಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ತನಿಖೆ ನಡೆಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಆರೋಪಕ್ಕೆ ಪುಷ್ಟಿ ನೀಡುವಂತೆ ಕೆಲವು ದಾಖಲೆಗಳು ಲಭ್ಯವಾಗಿದ್ದು, ಹಗರಣ ನಡೆದಿರುವ ಬಗ್ಗೆ ಮೇಲ್ನೋಟಕ್ಕೆ ಕಂಡುಬಂದಿದೆ ಡಿಸೆಂಬರ್ 18ರಂದು ಪಂಚಾಯತಿ ಅಡಳಿತ ಮಂಡಳಿ ತರಾತುರಿಯಲ್ಲಿ 15ನೇ ಹಣಕಾಸು ಹಾಗೂ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳ ಲೆಕ್ಕಪರಿಶೋಧನೆ ಸಭೆಯನ್ನು ಗ್ರಾಮಸ್ಥರ ಅನುಪಮಸ್ಥಿತಿಯಲ್ಲಿ […]

ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11 ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆ

ಜನವಾಹಿನಿ News ಮಡಿಕೇರಿ : ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಕೃಷಿ ಅಂಕಿ ಅಂಶಗಳ ಹಾಗೂ 11 ನೇ ಹಂತದ ಕೃಷಿ ಗಣತಿಯ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ 2024-25 ನೇ ಸಾಲಿನ ಬೇಸಿಗೆ ಋತುವಿನ ಬೆಳೆ ಕ್ಷೇತ್ರ ಮರು ಹೊಂದಾಣಿಕೆ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಬೆಳೆ ಸಮೀಕ್ಷೆ ಪರಿಶೀಲನೆ ಸಂಬಂಧಿಸಿದಂತೆ ಮಾಹಿತಿ ನೀಡುವುದು, […]

ಜನನ ಮತ್ತು ಮರಣ ನಾಗರಿಕ ನೋಂದಣಿ ನಿಖರವಾಗಿ ದಾಖಲಿಸಿ: ವೆಂಕಟ್ ರಾಜಾ

ಜನವಾಹಿನಿ News ಮಡಿಕೇರಿ : ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯನ್ನು ನಿಖರವಾಗಿ ದಾಖಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರದ ನಾಗರಿಕ ನೋಂದಣಿ ಜನನ ಮತ್ತು ಮರಣ ಅಧಿನಿಯಮ 1960 ರನ್ವಯ ಕರ್ನಾಟಕ ಜನನ ಮತ್ತು ಮರಣ ನೋಂದಣಿ 1970 ಮತ್ತು ಪುನರ್ […]

ಉರುಳಿಗೆ ಸಿಲುಕಿ ಬೃಹತ್ ಹುಲಿ ಸಾವು

  ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ಚೆಟ್ಟಳ್ಳಿ ಸಮೀಪದ ಶ್ರೀಮಂಗಲ ಗ್ರಾಮದ ಭಗವತಿ ದೇವಾಲಯ ಬಳಿಯ ಕೆಚ್ಚೆಟ್ಟೀರ ಕುಟುಂಬದ ತೋಟದಲ್ಲಿ ಮಧ್ಯವಯಸ್ಸಿನ ಹುಲಿಯೊಂದು ಸಾವಿಗೀಡಾಗಿರುವ ಘಟನೆ ನಡೆದಿದೆ. ತೋಟದಲ್ಲಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರು ಹುಲಿಯ ಮೃತದೇಹ ಕಂಡು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಜಮೀನಿನಲ್ಲಿ ಕಾಡು ಹಂದಿಗಾಗಿ ಹಾಕಿದ್ದ ಉರುಳಿಗೆ ಸಿಲುಕಿದ್ದ ಹುಲಿ ಸಾವನ್ನಪ್ಪಿರುವುದ ಬೆಳಕಿಗೆ ಬಂದಿದೆ. ಮಾಹಿತಿ […]

ಪ್ರಧಾನಿ ಅವಹೇಳನ : ಆರೋಪಿಗಳು ಮಡಿಕೇರಿ ಬಿಜೆಪಿ ಮುಖಂಡರ ಚೇಲಾಗಳು ಕೊಡಗು ಕಾಂಗ್ರೆಸ್ ಆರೋಪ

ಜನವಾಹಿನಿ News ಮಡಿಕೇರಿ : ದೇಶದ ಪ್ರಧಾನ ಮಂತ್ರಿಗಳನ್ನು ಅಪಮಾನಿಸಿ ಬಂಧಿತರಾಗಿರುವ ಕಿಡಿಗೇಡಿ ಆರೋಪಿಗಳು ಮಡಿಕೇರಿ ನಗರ ಬಿಜೆಪಿ ಮುಖಂಡರ ಚೇಲಾಗಳಾಗಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಗಂಭೀರ ಆರೋಪ ಮಾಡಿದ್ದಾರೆ. ಸಂವಿಧಾನ ಬದ್ದ ಹುದ್ದೆಯಲ್ಲಿ ಪರಮ್ಮೋಚ್ಛ ಸ್ಥಾನದಲ್ಲಿರುವ ದೇಶದ ಪ್ರಧಾನ ಮಂತ್ರಿಗಳನ್ನು ಮಡಿಕೇರಿಯ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿ ಅನಧಿಕೃತ ಮಳಿಗೆಗಳನ್ನು ಮಡಿಕೇರಿ ಬಿಜೆಪಿ ಮುಖಂಡರ ಬಹಿರಂಗ ಕುಮ್ಮಕ್ಕಿನಿಂದ ನಡೆಸುತ್ತಿರುವ ವ್ಯಕ್ತಿಯ ಸಿಬ್ಬಂದಿಗಳು ಅತ್ಯಂತ ಕೀಳಾಗಿ ನಿಂದಿಸಿ ವಿಡಿಯೋ ಹರಿಯಬಿಟ್ಟಿದ್ದು ಈ ಹಿನ್ನಲೆಯಲ್ಲಿ ಮಡಿಕೇರಿ […]

ಏ.24ರಿಂದ ಕೊಡವ ಜಮ್ಮಾ ಮುಸ್ಲಿಂ ಕುಟುಂಬಸ್ಥರ ಕ್ರಿಕೆಟ್ ಪಂದ್ಯಾವಳಿ

ಜನವಾಹಿನಿ News ಮಡಿಕೇರಿ : ಪುಡಿಯಂಡ ದೇವಣಗೇರಿ-ಕೊಂಡಂಗೇರಿ ಕುಟುಂಬಸ್ಥರ ವತಿಯಿಂದ ಕೊಡವ ಜಮ್ಮಾ ಮುಸ್ಲಿಂ ಸ್ಫೋರ್ಟ್ಸ್ ಮತ್ತು ಕಲ್ಚರಲ್ ಅಸೋಷಿಯೇಷನ್ ಆಶ್ರಯದಲ್ಲಿ ಕೊಡವ ಜಮ್ಮಾ ಮುಸ್ಲಿಂ ಸಮಾಜಬಾಂದವರಿಗೆ ೩ನೇ ಆವೃತ್ತಿಯ ಕ್ರಿಕೆಟ್ ಪಂದ್ಯಾಟವನ್ನು ೨೦೨೬ರ ಏ.೨೪ರಿಂದ ಮೇ.೧ರವರೆಗೆ ಎಸ್.ಎಂ.ಎಸ್ ಶಾಲಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪುಡಿಯಂಡ ಕುಟುಂಬದ ಅಧ್ಯಕ್ಷ ಉಸ್ಮಾನ್ ತಿಳಿಸಿದರು. ಮೊದಲ ವರ್ಷ ಕುವಲೆರ ಚಾಮಿಯಾಲ ಕುಟುಂಬ ಮತ್ತು ಎರಡನೇ ಪರ್ಷ ಆಲಿರ ಕುಟುಂಬಸ್ಥರು ಕ್ರಿಕೆಟ್ ಕ್ರೀಡಾಕೂಟವನ್ನು ಆಯೋಜಿಸಿದ್ದು, ೭೦ ಕುಟುಂಬಸ್ಥರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಈ […]

ಜ.10, 11ರಂದು ಎಸ್‌ಆರ್‌ವಿ ಕನೆಕ್ಟ್-ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ

ಜನವಾಹಿನಿ News ಮಡಿಕೇರಿ : ಶ್ರೀ ರಾಜೇಶ್ವರಿ ವಿದ್ಯಾಲಯ ಮತ್ತು ವಿದ್ಯಾಲಯದ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ಎಸ್‌ಆರ್‌ವಿ ಕನೆಕ್ಟ್-ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಜ.೧೦,೧೧ ರಂದು ನಗರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ರಾಜೇಶ್ವರಿ ವಿದ್ಯಾಲಯ ಅಧ್ಯಕ್ಷ ಗೋವಿಂದರಾಜ್ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ರಾಜೇಶ್ವರಿ ವಿದ್ಯಾಲಯದಲ್ಲಿ ೧೯೯೧ ಬ್ಯಾಚ್‌ನಿಂದ ೨೦೨೪ರವರೆಗೆ ಸುಮಾರು ೪,೦೦೦ಕ್ಕೂ ಅಧಿಕ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಹಳೆ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸುವ ದೃಷ್ಠಿಯಿಂದ ಎಸ್‌ಆರ್‌ವಿ ಕನೆಕ್ಟ್-ಹಳೆ […]

ಪ್ರಧಾನಿಗೆ ಅವಹೇಳನ ಪ್ರಕರಣ : ಆರೋಪಿಗಳ ಗಡಿಪಾರಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಹೇಳನ ಮಾಡಿದ ಯುವಕರ ಗಡಿಪಾರಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು. ಇಂದಿರಾಗಾಂಧಿ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಅಸಮಾಧಾನ ಹೊರಹಾಕಿದರಲ್ಲದೆ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಅಪ್ಪಚ್ಚು ರಂಜನ್‌, ಭಾರತದ ಪ್ರಧಾನಿ ನರೇಂದ್ರ ಮೋದಿ ಇಡೀ ಪ್ರಪಂಚದಲ್ಲಿಯೇ ವಿಶ್ವಗುರು ಎಂದು […]

ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಕೊಲೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ..!

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯವು ಸಾಮೂಹಿಕ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಒಂದೇ ಕುಟುಂಬದ ನಾಲ್ವರ ಹತ್ಯೆ ಗೈದಿದ್ದ ಆರೋಪಿ :2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನು ನಾಗಿ (35), ಆಕೆಯ ಆರು ವರ್ಷದ ಮಗಳು […]