Breaking News :

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ವಾರ್ಷಿಕ ಮಹಾಸಭೆ 

  ಜನವಾಹಿನಿ News ಮಡಿಕೇರಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ವಾರ್ಷಿಕ ಮಹಾಸಭೆಯು ಸೋಮವಾರ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್ ಮತ್ತು ಗೈಡ್ಸ್ ಭವನ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ಉಪ ವಿಭಾಗಧಿಕಾರಿ ನಿತಿನ್ ಚಕ್ಕಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೊದಲಿಗೆ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಆಗಮಿಸಿದ ಸರ್ವರನ್ನು ಸ್ವಾಗತಿಸಿದ್ದರು. ಸ್ವಪರಿಚಯ ಮಾಡಲಾಯಿತು. 2024-2025 ನೇ ಸಾಲಿನಲ್ಲಿ ನಿಧನರಾದ ಸೋಮವಾರಪೇಟೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್, ಸಾವಿತ್ರಿ, […]

ನಿವೇಶನ ರಹಿತರಿಗೆ ನಿವೇಶನಕ್ಕಾಗಿ ಆಗ್ರಹಿಸಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ 

  ಜನವಾಹಿನಿ News ಸಿದ್ದಾಪುರ: ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗೋಡು ಹಾಗೂ ಗುಹ್ಯ ಗ್ರಾಮದ ಸುತ್ತಮುತ್ತಲಿರುವ ನಿರಾಶ್ರಿತರು ಹಾಗೂ ಲೈನ್ ಮನೆಗಳಲ್ಲಿರುವ ನಿವೇಶನ ರಹಿತರಿಗೆ ಶಾಶ್ವತ ನಿವೇಶನ ಒದಗಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿದರು. ಮಾರುಕಟ್ಟೆ ಬಳಿಯಿರುವ ಪಕ್ಷದ ಕಚೇರಿಯಿಂದ ಬಸ್ ನಿಲ್ದಾಣದ ಮೂಲಕ ಪಂಚಾಯತಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಳಿಕ ಗ್ರಾಮ ಪಂಚಾಯತಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಲು ವಿಫಲವಾಗಿರುವ ಜಿಲ್ಲಾಡಳಿತ ಹಾಗೂ ಗ್ರಾಮ […]

ಸಿದ್ದಾಪುರ : ಚುರುಕುಗೊಂಡ ರಸ್ತೆ ಕಾಮಗಾರಿ – ಭರದಿಂದ ಸಾಗುತ್ತಿರುವ ಡಾಂಬರೀಕರಣ :  ನಿಟ್ಟುಸಿರುಬಿಟ್ಟ ಜನತೆ

  ಜನವಾಹಿನಿ News ಸಿದ್ದಾಪುರ : ವರ್ಷದ ಹಿಂದೆ ಪ್ರಾರಂಭವಾದ ಸಿದ್ದಾಪುರ – ವಿರಾಜಪೇಟೆ ನಡುವಿನ ಕೊಣನೂರು ಮಾಕುಟ್ಟ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿಯೂ ಹಲವು ದಿನಗಳಿಂದ ಮಳೆ ಮತ್ತು ಇನ್ನಿತರ ಕಾರಣಗಳಿಂದ ಆಮೆ ಗತಿಯಲ್ಲಿ ಸಾಗುತ್ತಿತ್ತು. ಆದರೆ ವರ್ಷದ ಬಳಿಕ ಇದೀಗ ರಸ್ತೆ ಕಾಮಗಾರಿ ಚುರುಕುಗೊಂಡಿದ್ದು, ಡಾಂಬರೀಕರಣ ಭರದಿಂದ ಸಾಗುತ್ತಿದೆ. ಇದರಿಂದಾಗಿ ಕೆಸರು , ವಿಪರೀತ ಧೂಳು, ಸಂಚಾರ ದಟ್ಟಣೆ ಹೀಗೆ ಹಲವು ರೀತಿಯ ತೊಂದರೆ ಅನುಭವಿಸುತ್ತಿದ್ದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಾಹನ ಸವಾರರು ನಿಟ್ಟುಸಿರು […]

ಜಿಲ್ಲಾಡಳಿತದಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ : ಜಿಲ್ಲೆಯಿಂದ ಹೆಚ್ಚಿನ ಯುವಕರು ಸೇನೆಗೆ ಸೇರುವಂತಾಗಬೇಕು : ಮೇ.ಜ.,ಕೆ.ಸಿ.ಕಾರ್ಯಪ್ಪ

  ಜನವಾಹಿನಿ News ಮಡಿಕೇರಿ : ಜಿಲ್ಲಾಡಳಿತ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯು ಭಾನುವಾರ ಜರುಗಿತು.    ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣದಲ್ಲಿನ ಯುದ್ಧ ಸ್ಮಾರಕಕ್ಕೆ ಮೇಜರ್ ಜನರಲ್ ಕಾಳೆಂಗಡ ಸಿ. ಕಾರ್ಯಪ್ಪ (ನಿವೃತ್ತ), ಏರ್ ಮಾರ್ಷಲ್ ನಂದಾ ಕಾರ್ಯಪ್ಪ(ನಿ), ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್ ಕುಮಾರ್, ಗ್ರೂಪ್ ಕ್ಯಾಪ್ಟನ್ ಮನು ಭೀಮಯ್ಯ(ನಿ), ಏರ್ ಕಮಾಂಡರ್ ದೇವಯ್ಯ(ನಿ), ಲೆ.ಕರ್ನಲ್ […]

ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಲೀಗ್ ಗೆ ಶಾಸಕ ಪೊನ್ನಣ್ಣರಿಂದ ಚಾಲನೆ 

  ಜನವಾಹಿನಿ News ಮಡಿಕೇರಿ : ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಾದ ಎ.ಕೆ.ಎಸ್ ಲೀಗಲ್ ಹಾಗೂ ರೇ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ, “ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಪಂದ್ಯಾಟ” ಬೆಂಗಳೂರಿನಲ್ಲಿ ಜರಗಿತು. ಈ ಪಂದ್ಯಾಟವನ್ನು ಉದ್ಘಾಟಿಸಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಸ್ಟಿಸ್ ಅರವಿಂದ್ ಕುಮಾರ್ ರವರು ಆಗಮಿಸಿದ್ದು ನಮಗೆಲ್ಲ ಹೆಮ್ಮೆಯ ಸಂಗತಿ. ಸುಮಾರು 40ಕ್ಕೂ ಅಧಿಕ ಕಾನೂನು ಸಂಸ್ಥೆಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಸರ್ವೋತ್ತಮ ತಂಡವು ಜಯಗಳಿಸಲಿ ಎಂಬ ಶುಭಾಶಯಗಳು ಕೋರುತ್ತೇನೆ. ಈ ಪಂದ್ಯಾಟವು ವಕೀಲರಿಗೆ ಹಬ್ಬದ […]

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ 

  ಜನವಾಹಿನಿ News ಮಡಿಕೇರಿ : 2024-25 ನೇ ಸಾಲಿಗೆ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸಿರುವ (ಕನಿಷ್ಠ 5 ವರ್ಷಗಳ ಸೇವೆ ಸಲ್ಲಿಸಿರಬೇಕು) ವ್ಯಕ್ತಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 2025-26ನೇ ಸಾಲಿಗೆ ಮಹಿಳಾ ಅಭಿವೃದ್ಧಿ, ಕ್ರೀಡೆ, ಶಿಕ್ಷಣ, ಕಲೆ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಜನವರಿ 1, 2025 ರಿಂದ ಡಿಸೆಂಬರ್ 31, 2025ರ ಅವಧಿಯಲ್ಲಿ […]

ಡಿ.08 ರಂದು ಪಿಂಚಣಿ ಅದಾಲತ್

  ಜನವಾಹಿನಿ News ಮಡಿಕೇರಿ : ಪಿಂಚಣಿ ಅದಾಲತ್‍ನ ಮುಂದಿನ ಸಭೆಯು ಡಿಸೆಂಬರ್, 08 ರಂದು ಮಧ್ಯಾಹ್ನ 4 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ ಸಿದ್ದಾಪುರ ರಸ್ತೆ ಅಶೋಕಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಪೋಸ್ಟಲ್ ಪಿಂಚಣಿ ಸಂಬಂಧಿಸಿದ ಎಲ್ಲಾ ತರಹದ ಅಹವಾಲುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ಅಹವಾಲುಗಳಿದ್ದಲ್ಲಿ ‘ಪಿಂಚಣಿ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಡಿಸೆಂಬರ್, 08 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಡಿಸೆಂಬರ್, […]

ಡಾ.ಬಿ.ಆರ್.ಅಂಬೇಡ್ಕರ್ ಅವರ 69 ನೇ ಮಹಾ ಪರಿನಿರ್ವಾಣ ದಿನ

  ಜನವಾಹಿನಿ News ಮಡಿಕೇರಿ : ಡಾ.ಬಿ.ಆರ್.ಅಂಬೇಡ್ಕರ್ ಅವರ ಮೌಲ್ಯ, ಜೀವನ ಸಾಧನೆಗಳನ್ನು ಅಧ್ಯಯನ ಮಾಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ‘ಪರಿನಿರ್ವಾಣ ದಿನ’ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶ ವಿದೇಶಗಳಲ್ಲಿ ಹಲವು ಸ್ನಾತಕೋತ್ತರ ಪದವಿ […]

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ : ಕೇಂದ್ರ ಸರ್ಕಾರದ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಒಡೆಯರ್ ಸೂಚನೆ 

  ಜನವಾಹಿನಿ News ಮಡಿಕೇರಿ : ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಅಧಿಕಾರಿಗಳಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನಮಂತ್ರಿಯವರ ಗ್ರಾಮ ಸಡಕ್ ಯೋಜನೆ, ಜಲಜೀವನ್ ಮಿಷನ್, ರಾಷ್ಟ್ರೀಯ ತೋಟಗಾರಿಕಾ ಮಿಷನ್, […]

ಮಡಿಕೇರಿ : ಸಾಮಾಜಿಕ ಕಾರ್ಯಕರ್ತ ಕಾವೇರಪ್ಪ ಕಾಂಗ್ರೆಸ್ ಗೆ ಸೇರ್ಪಡೆ 

  ಜನವಾಹಿನಿ News ಮಡಿಕೇರಿ : ಸಾಮಾಜಿಕ ಕಾರ್ಯಕರ್ತ ಹಾಗೂ ನಗರಸಭೆಯ ಬಿಜೆಪಿ ಸದಸ್ಯೆ ಉಷಾ ಕಾವೇರಪ್ಪ ಅವರ ಪತಿ ಎಂ.ಕೆ.ಕಾವೇರಪ್ಪ ಅವರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ ಗೌಡ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶಾಸಕರ ಅಭಿವೃದ್ಧಿ ಕಾರ್ಯ, ಜನಪರ ಕಾಳಜಿ, ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಇಚ್ಛಾಶಕ್ತಿ ಮತ್ತು ಜನಸ್ನೇಹಿ ಗುಣವನ್ನು ಮೆಚ್ಚಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಕಾವೇರಪ್ಪ ತಿಳಿಸಿದರು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ಮೂಲಕ ಶಾಸಕರಿಗೆ ಶಕ್ತಿ ತುಂಬುವುದಾಗಿ ಹೇಳಿದರು. ಈ ಸಂದರ್ಭ […]