Breaking News :

ಮಾಲ್ದಾರೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ನೆರವೇರಿಸಿದ ಶಾಸಕ ಪೊನ್ನಣ್ಣ 

  ಜನವಾಹಿನಿ News ಸಿದ್ದಾಪುರ : ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಸಿದ್ದಾಪುರ ಗ್ರಾಮದ ಮಾಲ್ದಾರೆ ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ರವರು ವಿವಿಧ ಅಭಿವೃದ್ಧಿ ಕಾರ್ಯಕ್ರಮ ಪ್ರಯುಕ್ತ ಭೇಟಿ ನೀಡಿದರು. ಬಾಡಗ ಬಾಣಂಗಾಲ ಮಠಕ್ಕೆ, ರೂ.20 ಲಕ್ಷ ಅನುದಾನದಲ್ಲಿ, ವಿದ್ಯುತ್ ಸಂಪರ್ಕ ಕಲ್ಪಿಸುವ ನೂತನ ವಿದ್ಯುತ್ ಮಾರ್ಗವನ್ನು ಉದ್ಘಾಟಿಸಿ ಶುಭ ಕೋರಿದ ಶಾಸಕರು ಈ ವ್ಯಾಪ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ” ಲೈನ್ ಮ್ಯಾನ್ ಪರಶುರಾಮ್ ” […]

ಬ್ಯಾನರ್ ತೆರವು ವಿಚಾರಕ್ಕೆ ಗಲಾಟೆ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

  ಜನವಾಹಿನಿ News ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದಲ್ಲಿ ಬ್ಯಾನ‌ರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ಮಧ್ಯೆ ಸಂಘರ್ಷ ನಡೆದಿದ್ದು, ಕಾಂಗ್ರೆಸ್‌ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ. ಗಣೇಶ್ ಗೌಡ (38) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್‌ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಸಖರಾಯಪಟ್ಟಣ ಗ್ರಾಮ ಪಂಚಾಯತಿ ಸದಸ್ಯನಾಗಿರುವ ಗಣೇಶ್ ಗೌಡ (38) ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ಬಜರಂಗದಳ ಕಾರ್ಯಕರ್ತರು ಕೃತ್ಯವೆಸಗಿರುವ ಆರೋಪ ಕೇಳಿಬಂದಿದೆ. ಗಣೇಶ್ ಮೇಲೆ ಸಂಜಯ್, […]

ಹಕ್ಕು ಪಡೆಯದ ಬ್ಯಾಂಕ್ ಠೇವಣಿಗಳನ್ನು ಕಾನೂನು ಬದ್ಧ ವಾರಸುದಾರರಿಗೆ ಹಸ್ತಾಂತರಿಸುವ ಶಿಬಿರ

  ಜನವಾಹಿನಿ News ಮಡಿಕೇರಿ : ದೀರ್ಘಕಾಲದಿಂದ ಹಕ್ಕು ಪಡೆಯದೆ ಉಳಿದಿರುವ ಬ್ಯಾಂಕ್ ಠೇವಣಿಗಳು, ವಿಮಾ ಕಂತುಗಳನ್ನು ಅವುಗಳ ಮಾಲೀಕರು ಅಥವಾ ಕಾನೂನುಬದ್ಧ ವಾರಸುದಾರರಿಗೆ ಹಸ್ತಾಂತರಿಸುವ “ನಿಮ್ಮ ಹಣ ನಿಮ್ಮ ಹಕ್ಕು” ಶಿಬಿರ ಸೋಮವಾರ (ಡಿಸೆಂಬರ್ 8) ಜಿಲ್ಲಾ ಪಂಚಾಯತ್ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಮ್ಯಾನೇಜರ್ ಗಂಗಾಧರ್ ನಾಯಕ್ ಪಿ ವರು ತಿಳಿಸಿದ್ದಾರೆ. ಈ ಶಿಬಿರವು ಭಾರತದ ಹಣಕಾಸು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಬ್ಯಾಂಕ್ ವಿಮಾ ಮತ್ತು ಇತರ ಇಲಾಖಾ ಶಾಖೆಗಳಲ್ಲಿ […]

ಮಡಿಕೇರಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಶಾಸಕರಾದ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು 

  ಜನವಾಹಿನಿ News ಮಡಿಕೇರಿ  : ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿಯ ನಗರಸಭಾ ಉದ್ಯಾನವನದ ಜಾಗದಲ್ಲಿ ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪಾಧ್ಯಕ್ಷರಾದ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ನಗರಸಭೆ ಸದಸ್ಯರಾದ ಅನಿತಾ ಪೂವಯ್ಯ, ಕೆ.ಎಸ್.ರಮೇಶ್, ಎಸ್.ಸಿ.ಸತೀಶ್, ಚಿತ್ರಾವತಿ, ಉಮೇಶ್ ಸುಬ್ರಮಣಿ, […]

ಇಂಜಲಗೆರೆ ಮುತ್ತಪ್ಪ ದೇಗುಲದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಪುತ್ತರಿ ವೆಳ್ಳಾಟಂ

  ಜನವಾಹಿನಿ News ಸಿದ್ದಾಪುರ :: ಇಲ್ಲಿಗೆ ಸಮೀಪದ ಇಂಜಲಗೆರೆ ಶ್ರೀ ಪೂಮಡಪುರ ಮುತ್ತಪ್ಪ ಸ್ವಾಮಿ ದೇವಾಲಯದಲ್ಲಿ ಗುರುವಾರ ಸಂಜೆ ಪುತ್ತರಿ ವೆಳ್ಳಾಟಂ ಶ್ರದ್ದಾಭಕ್ತಿಯಿಂದ ನಡೆಯಿತು. ಶ್ರೀ ಮುತ್ತಪ್ಪ ಸ್ವಾಮಿ ದೇವಾಲಯ ಸಮಿತಿ ವತಿಯಿಂದ ಹುತ್ತರಿ ಹಬ್ಬದ ಪ್ರಯುಕ್ತ ಇದೇ ಮೊದಲ ಬಾರಿಗೆ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಇಂಜಲಗೆರೆ, ಪುಲಿಯೇರಿ ಸಿದ್ದಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ಮುತ್ತಪ್ಪ ಸ್ವಾಮಿ, ವಸೂರಿಮಾಲ ಹಾಗೂ ಗುಳಿಗ ದೈವಗಳ ವೆಳ್ಳಾಟಂ ಕಣ್ತುಂಬಿಸಿಕೊಂಡರು. ವೆಳ್ಳಾಟಂ ನಂತರ ಭಕ್ತರು ಮುತ್ತಪ್ಪ ಸ್ವಾಮಿ, ಗುಳಿಗ ದೈವಗಳ […]

ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ

  ಜನವಾಹಿನಿ News ಮಡಿಕೇರಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿ ಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿಸೆಂಬರ್ 22 ರಿಂದ ನಿರುದ್ಯೋಗಿ ಪುರುಷರಿಗೆ ಫೆÇೀಟೋಗ್ರಫಿ ಮತ್ತು ವಿಡಿಯೋಗ್ರಫಿ ಉಚಿತ ತರಬೇತಿ ಶಿಬಿರ ಏರ್ಪಡಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 35 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು […]

ನಾಳೆಯಿಂದ ಮಂಡ್ಯದಲ್ಲಿ ಕೃಷಿ ಮೇಳ

  ಜನವಾಹಿನಿ News ಮಡಿಕೇರಿ : ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪಣೆ ಮತ್ತು ಪಶು ವೈದ್ಯಕೀಯ ಸೇವೆಗಳು, ಜಲಾನಯನ ಅಭಿವೃದ್ಧಿ, ರೇಷ್ಮೆ, ಅರಣ್ಯ, ಮೀನುಗಾರಿಕೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತ ಆಶ್ರಯದಲ್ಲಿ  ಡಿಸೆಂಬರ್, 05 ರಿಂದ ನಾಳೆಯಿಂದ 7 ವರೆಗೆ ಮಂಡ್ಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಮಗ್ರ ಕೃಷಿಯಿಂದ ಸುಸ್ಥಿರತೆ ಎಂಬ ವಿಷಯದಡಿ ಕೃಷಿ ಮೇಳ-2025 ನಡೆಯಲಿದೆ. […]

ಡಿ.10 ರಂದು ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ

  ಜನವಾಹಿನಿ News ಮಡಿಕೇರಿ : ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಡಿಸೆಂಬರ್, 10 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಗೆಯವರೆಗೆ ಪೊನ್ನಂಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. […]

ಚತುಷ್ಪಥ ರಸ್ತೆ ನಿರ್ಮಾಣ ನಂತರ ವಾಹನ ದಟ್ಟಣೆ ಹೆಚ್ಚಳ ಸಾಧ್ಯತೆ :  ಈಗಿನಿಂದಲೇ ರಸ್ತೆ ಸುರಕ್ಷತೆಗೆ ಒತ್ತು ನೀಡಿ: ವೆಂಕಟ್ ರಾಜಾ

  ಜನವಾಹಿನಿ News ಮಡಿಕೇರಿ : ಶ್ರೀರಂಗಪಟ್ಟಣದಿಂದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿ ವರೆಗೆ ನಾಲ್ಕು ಪಥದ ರಸ್ತೆ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ಬಸವನಹಳ್ಳಿಯಿಂದ ಸಂಪಾಜೆವರೆಗೆ ವಾಹನ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಸುಗಮ ಸಾರಿಗೆ ಸಂಚಾರಕ್ಕೆ ಅಗತ್ಯ ಮುನ್ನೆಚ್ಚರ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಅವರ ಸಭಾಂಗಣದಲ್ಲಿ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ’ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಶಾಲನಗರದ ಗುಡ್ಡೆಹೊಸೂರು […]

ವಿಶ್ವ ವಿಶೇಷಚೇತನರ ದಿನಾಚರಣೆ : ವಿಶೇಷಚೇತನರ ಸಾಂಸ್ಕøತಿಕ ಕಾರ್ಯಕ್ರಮ ವೀಕ್ಷಿಸಿ ಖುಷಿಪಟ್ಟ ಶಾಸಕ ಮಂತರ್ ಗೌಡ 

ಜನವಾಹಿನಿ News ಮಡಿಕೇರಿ : ವಿಶೇಷಚೇತನರಿಗೆ ಅನುಕಂಪ ಬದಲು ಅವಕಾಶಗಳನ್ನು ಕಲ್ಪಿಸಿದ್ದಲ್ಲಿ ಇತರರಂತೆ ಜೀವನ ನಡೆಸಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ವಿಶೇಷ ಚೇತನರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಕೊಡಗು ಶಾಖೆ […]