ಬೆಳೆಗಾರರಿಗೆ ಪರಿಹಾರ ನೀಡದ ಸರ್ಕಾರ : ಖಂಡಿಸಿ ಮಡಿಕೇರಿಯಲ್ಲಿ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಯನ್ನು ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಮ್ಮುಣಿಚಂಡ ರಂಜಿ ಪೂಣಚ್ಚ ಮಾತನಾಡಿ, ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆಯ ರೂ.೬,೦೦೦ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಬಿ.ಜೆ.ಪಿ ಸರ್ಕಾರ ರೂ.೪,೦೦೦ ಒಟ್ಟು ೧೦.೦೦೦ ರೂಪಾಯಿಗಳನ್ನು ನೀಡುತ್ತಿತ್ತು. ಕಾಂಗ್ರೆಸ್ ಆಡಳಿತಕ್ಕೆ […]
ಸರ್ವ ಸಹಾಯಿ ಮಿತ್ರ ಮಂಡಳಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ : ಕನ್ನಡಾಭಿಮಾನವನ್ನು ಮೈಗೂಡಿಸಿಕೊಳ್ಳಲು ಗಣ್ಯರ ಕರೆ

ಜನವಾಹಿನಿ News ಮಡಿಕೇರಿ : ಕನ್ನಡ ನಾಡು ನುಡಿ ಸಂಸ್ಕೃತಿ ಪರಂಪರೆಯೊಂದಿಗೆ ಪ್ರತಿಯೊಬ್ಬರು ಕನ್ನಡಾಭಿಮಾನವನ್ನು ಮೈಗೂಡಿಸಿಕೊಂಡು ಮುನ್ನಡೆಯುವ ಮೂಲಕ ಕನ್ನಡ ಪರ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕೆಂದು ಗಣ್ಯರು ಕರೆ ನೀಡಿದರು. ಸರ್ವ ಸಹಾಯಿ ಮಿತ್ರ ಮಂಡಳಿ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತ ಅಶ್ರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸರ್ಕಾರಿ ಶಾಲಾ ಆವರಣದಲ್ಲಿ ವಿವಿಧ ಅರೋಗ್ಯ ಶಿಬಿರ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನೆರವೇರಿತು. ಆಚರಣೆ ಅಂಗವಾಗಿ ಆರೋಗ್ಯ,ಕಣ್ಣು , ದಂತ ತಪಾಸಣಾ ಶಿಬಿರ ಸೇರಿದಂತೆ ಮಕ್ಕಳ […]
ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಯಿಂದ ವಿಪ್ರ ಕ್ರೀಡೋತ್ಸವ

ಜನವಾಹಿನಿ News ಮಡಿಕೇರಿ: ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಮಡಿಕೇರಿ ಇವರ ನೇತೃತ್ವದಲ್ಲಿ ಕುಶಾಲನಗರ, ಸೋಮವಾರಪೇಟೆ, ಪೊನ್ನಂಪೇಟೆ, ವಿರಾಜಪೇಟೆ ತಾಲೂಕು ಬ್ರಾಹ್ಮಣ ಸಮಾಜಗಳ ಸಂಯುಕ್ತಾಶ್ರಯದಲ್ಲಿ ಡಿ.೭ ಮತ್ತು ಡಿ.೧೪ರಂದು ೪ನೇ ವರ್ಷದ ವಿಪ್ರ ಕ್ರೀಡೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಅಧ್ಯಕ್ಷ ಮೂಗೂರು ರಾಮಚಂದ್ರ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.೭ರಂದು ಜಿಲ್ಲಾಮಟ್ಟದ ಶೆಟಲ್ ಹಾಗೂ ಟೇಬಲ್ ಟೆನಿಸ್ ಪಂದ್ಯಾಟ ನಗರದ ಮ್ಯಾನ್ಸ್ ಕಾಂಪೌಂಡ್‌ನಲ್ಲಿರುವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ ೯ ಗಂಟೆಗೆ ಪಂದ್ಯಾಟ ಆರಂಭಗೊಳ್ಳಲಿದ್ದು, ಪುರುಷರ […]
ಜನವರಿಯಲ್ಲಿ ದಲಿತರ ಸ್ವಾಭಿಮಾನಿ ಸಮಾವೇಶ : ಸಚಿವರಿಗೆ ಶಾಸಕರಿಗೆ ಪ್ರಶಸ್ತಿ ಪ್ರದಾನ

ಜನವಾಹಿನಿ News ಮಡಿಕೇರಿ : ದಲಿತ ಸಂಘರ್ಷ ಸಮಿತಿ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜನ್ಮದಿನಾಚರಣೆ ಪ್ರಯುಕ್ತ ಬಾಬಾಸಾಹೇಬ್ ಅನುಯಾಯಿಗಳೊಂದಿಗೆ ಸ್ವಾಭಿಮಾನಿ ಸಮಾವೇಶವನ್ನು ಜನವರಿ ತಿಂಗಳಲ್ಲಿ ಮಡಿಕೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಮಡಿಕೇರಿ ತಾಲೂಕು ಅಧ್ಯಕ್ಷ ದೀಪಕ್ ಪೊನ್ನಪ್ಪ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೧೦ ಗಂಟೆಗೆ ಅಶೋಕ್‌ಪುರದಿಂದ ಬುದ್ಧ, ಬಸವ, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾರ್ಲಾಪಣೆ ಮಾಡಲಾಗುವುದು. ನಂತರ ನಡೆಯುವ ಮೆರವಣಿಗೆಯಲ್ಲಿ ೧೦೦ ಬೈಕ್‌ಗಳು, ೫೦ ಮಹಿಳೆಯರ ಕಳಸ, ಪೂರ್ವಿಕರ ಸ್ತಬ್ಧಚಿತ್ರ, […]
ವಿಶ್ವ ಏಡ್ಸ್ ದಿನ : ಎಚ್‍ಐವಿ ಹರಡುವಿಕೆ ನಿಯಂತ್ರಣಕ್ಕೆ ಮುಂದಾಗಿ : ಪ್ರೊ.ಮೇ. ರಾಘವ

ಜನವಾಹಿನಿ News ಮಡಿಕೇರಿ : ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಲಯನ್ಸ್ ಸಂಸ್ಥೆ, ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿ, ಎಫ್‍ಎಂಕೆಎಂಸಿ ಕಾಲೇಜು, ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಮಹಿಳಾ ಕಾಲೇಜು ಮಡಿಕೇರಿ, ಓಡಿಪಿ-ಸ್ನೇಹಾಶ್ರಯ ಸಮಿತಿ, ಚೈತನ್ಯ ನೆಟ್‍ವರ್ಕ್ ಕೊಡಗು ಹಾಗೂ ಆಶೋದಯ ಸಮಿತಿ ಇವರ […]
ಕೃಷಿ ಸಚಿವ ಚೆಲುವರಾಯಸ್ವಾಮಿ ಜತೆ ಶಾಸಕ ಪೊನ್ನಣ್ಣ ಚರ್ಚೆ

ಜನವಾಹಿನಿ News ಬೆಂಗಳೂರು : ಕರ್ನಾಟಕ ಬರಪಿಡಿತ ಜಿಲ್ಲೆಗಳಲ್ಲಿ, ಪರ ಮತ್ತು ಉಷ್ಣತಾಳುವ ಮೆಕ್ಕೆಜೋಳ ಮತ್ತು ಸುಧಾರಿತ ಕೃಷಿ ಪದ್ಧತಿಗಳ ವಿಸ್ತರಣೆ ಕುರಿತು ಮಾನ್ಯ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರನ್ನು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಹಾಗೂ ತಜ್ಞರ ತಂಡ ಸಚಿವರ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು. ಇದೆ ಸಂದರ್ಭದಲ್ಲಿ ಮಾನ್ಯ ಸಚಿವರೊಂದಿಗೆ ಕ್ಷೇತ್ರಕ್ಕೆ ಸಂಬಂಧಿಸಿದ ಇತರ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಏ.೨ರಿಂದ ಮುಕ್ಕಾಟಿರ ಕಪ್ ಕ್ರಿಕೆಟ್ ಉತ್ಸವ

ಜನವಾಹಿನಿ News ಮಡಿಕೇರಿ : ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಕೊಡವ ಕುಟುಂಬಗಳ ನಡುವಿನ ೨೪ನೇ ವರ್ಷದ ಕೌಟುಂಬಿಕ ಕ್ರಿಕೆಟ್ ಉತ್ಸವಕ್ಕೆ ಬೇತ್ರಿ ಮುಕ್ಕಾಟಿರ ಕುಟುಂಬಸ್ಥರು ಸಿದ್ಧತೆಗೆ ಮುಂದಾಗಿದ್ದು, .ಏ೨ರಿಂದ ಪಂದ್ಯಾಟ ಆರಂಭವಾಗಲಿದೆ ಎಂದು ಮುಕ್ಕಾಟಿರ ಕಪ್ ಕ್ರಿಕೆಟ್ ಉತ್ಸವ ಸಮಿತಿ ಅಧ್ಯಕ್ಷ ಎಂ.ಸುರೇಶ್ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೨೬ರ ಕ್ರಿಕೆಟ್ ಉತ್ಸವದ ಜವಾಬ್ದಾರಿಯನ್ನು ಬೇತ್ರಿ ಮುಕ್ಕಾಟಿರ ಕುಟುಂಬಸ್ಥರು ಹೊತ್ತಿದ್ದು, ಏ.೨ರಿಂದ ೨೮ ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಉತ್ಸವ ಸಮಿತಿಯನ್ನು ರಚಿಸಿದ್ದು, […]
ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನವಾಹಿನಿ News ಬೆಂಗಳೂರು : ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. *ಅರೆಭಾಷಿಕರದ್ದು ವಿಭಿನ್ನ ಸಂಸ್ಕೃತಿ* ದಕ್ಷಿಣ ಕನ್ನಡ […]
ಗೋವಾದಲ್ಲಿ ವಿಶ್ವದ ಅತ್ಯಂತ ಎತ್ತರದ ಶ್ರೀ ರಾಮನ ಪ್ರತಿಮೆ ಅನಾವರಣ

ಜನವಾಹಿನಿ News ಗೋವಾ : ದಕ್ಷಿಣ ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಜೀವೋತ್ತಮ ಮಠದಲ್ಲಿರುವ ವಿಶ್ವದ ಅತಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದರು. 77 ಅಡಿ ಎತ್ತರ ಹೊಂದಿರುವ ಈ ಭವ್ಯ ಮೂರ್ತಿ ದೇಶದ ಸಾಂಸ್ಕೃತಿಕ ಪರಂಪರೆ, ಭಕ್ತಿ ಮತ್ತು ಶಿಲ್ಪಕಲೆಯ ಅದ್ಭುತ ಸಂಯೋಗವಾಗಿ ಗೋವಾದ ಹೊಸ ಗುರುತಾಗಲಿದೆ. ಈ ಮೂರ್ತಿಯನ್ನು ಖ್ಯಾತ ಶಿಲ್ಪಿ ರಾಮ್ ಸುತಾರ್ ಮತ್ತು ಅವರ ತಂಡ ನಿರ್ಮಿಸಿದ್ದಾರೆ. ಅಧಿಕ ಚರ್ಚೆಗೆ ಕಾರಣವಾದ ಸರ್ದಾರ್ […]
ಉನ್ನತ ಮಟ್ಟದ, ಅತ್ಯಂತ ಪ್ರಾಮುಖ್ಯತೆಯ ಉಪಹಾರ ಭೇಟಿ : ಶಾಸಕ ಪೊನ್ನಣ್ಣ ಭಾಗಿ

ಜನವಾಹಿನಿ News ಬೆಂಗಳೂರು : ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮತ್ತು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಎ ಎಸ್ ಪೂನ್ನಣ್ಣನವರು ಉನ್ನತ ಮಟ್ಟದ ಸಭೆಯಲ್ಲಿ ಭಾಗಿ.