ಅಯ್ಯಂಗೇರಿ ಗ್ರಾ.ಪಂ.ನೂತನ ಕಟ್ಡಡ ಉದ್ಘಾಟನೆ

ಜನವಾಹಿನಿ News ಮಡಿಕೇರಿ : ಅಯ್ಯಂಗೇರಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಮತ್ತು ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶುಕ್ರವಾರ ನೆರವೇರಿಸಿದರು. ಈ ಹಿಂದೆ ಅಯ್ಯಂಗೇರಿ ಗ್ರಾಮ ಪಂಚಾಯತ್ ಸ್ವಂತ ಕಟ್ಟಡ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದು, ಗಮನಿಸಿದ ಶಾಸಕರು, ನೂತನ ಕಟ್ಟಡಕ್ಕೆ ಮಂಜೂರಾತಿ ಒದಗಿಸಿದ್ದರು. ಸುಸಜ್ಜಿತವಾಗಿ ನಿರ್ಮಾಣಗೊಂಡ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶಾಸಕರು, ಗ್ರಾಮ ಪಂಚಾಯತ್ ಜವಾಬ್ದಾರಿ ಸಂವಿಧಾನದ ಅಡಿಯಲ್ಲಿ ಅತ್ಯಂತ […]
ನಗರದ ಕೋಲ್ ಮಂದ್ ಜಾಗದಲ್ಲಿ ಆಲದ ಗಿಡ ನೆಟ್ಟ ಶಾಸಕದ್ವಯರು ಮತ್ತು ಸಂಸದರು

ಜನವಾಹಿನಿ News ಮಡಿಕೇರಿ : ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಬಳಿಯ ಕೋಲ್‍ಮಂದ್ ಜಾಗದಲ್ಲಿ ಮಡಿಕೇರಿ ಕೊಡವ ಸಮಾಜ ವತಿಯಿಂದ ಏರ್ಪಡಿಸಲಾಗಿದ್ದ ‘ಆಲದ ಗಿಡ’ ನೆಡುವ ಕಾರ್ಯಕ್ರಮದಲ್ಲಿ ‘ಆಲದ ಗಿಡ’ ನೆಡುವ ಮೂಲಕ ಶಾಸಕದ್ವಯರು ಹಾಗೂ ಸಂಸದರು ಶುಕ್ರವಾರ ಚಾಲನೆ ನೀಡಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ವಿಧಾನ ಪರಿಷತ್ ಮಾಜಿ […]
ಕೊಡಗು : ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಜನವಾಹಿನಿ News ನಾಪೋಕ್ಲು : ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಚೆರಿಯಪರಂಬು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ನಾಪೋಕ್ಲು ಬಳಿಯ ಚೆರಿಯಪರಂಬು ಗ್ರಾಮದ ಪೈಸಾರಿ ನಿವಾಸಿ ಗಣೇಶ್ ಹಾಗೂ ಜಾನಕಿ ದಂಪತಿಗಳ ಪುತ್ರಿ ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಚಿತ್ರ (17) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಕಳೆದ ಒಂದು ತಿಂಗಳಿಂದ ಚಿತ್ರ ಕಾಲೇಜಿಗೆ ಹೋಗದೆ ಮನೆಯಲ್ಲೇ ಇದ್ದಳು ಎಂದು ತಿಳಿದುಬಂದಿದೆ. ಶುಕ್ರವಾರ ಬೆಳಿಗ್ಗೆ […]
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅನುಗ್ರಹ ಕಾಲೇಜು ವಿದ್ಯಾರ್ಥಿ

ಜನವಾಹಿನಿ News ಕುಶಾಲನಗರ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್ ಎಸ್ ಜೀವನ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾನೆ. ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ […]
ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಸಹಾಯಧನ

ಜನವಾಹಿನಿ News ಮಡಿಕೇರಿ : 2024-25ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನ ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನ ನೀಡಲಾಗುತ್ತದೆ. ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್‍ಪುಸ್ತಕ ಪ್ರತಿ ಹಾಗೂ ಎರಡು ಸ್ಟ್ಯಾಂಪ್ ಅಳತೆಯ […]
ಡಿ.01 ರಂದು ವಿಶ್ವ ಏಡ್ಸ್ ದಿನಾಚರಣೆ

ಜನವಾಹಿನಿ News ಮಡಿಕೇರಿ : ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಡಿಸೆಂಬರ್, 01 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಜಾಥಾ ಪ್ರಾರಂಭವಾಗಲಿದೆ. ಜಾಥವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಿಂದ ಪ್ರಾರಂಭವಾಗಿ ಚೌಕಿ ವೃತ್ತದ ಮುಖಾಂತರ ಸರ್ಕಾರಿ ಪದವಿ ಪೂರ್ವ ಕಾಲೇಜು ವರೆಗೆ ತಲುಪುವುದು. ನಂತರ ಬೆಳಗ್ಗೆ 11 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಮಾರಂಭ ನಡೆಯಲಿದೆ ಎಂದು ಜಿಲ್ಲಾ […]
ಸಂವಿಧಾನ ತತ್ವಗಳೇ ಕಾಂಗ್ರೆಸ್ ಪಕ್ಷದ ಸಿದ್ಧಾಂತ: ಎ.ಎಸ್ ಪೊನ್ನಣ್ಣ

ಜನವಾಹಿನಿ News ಬೆಂಗಳೂರು : ಸಮಾಜ, ಧರ್ಮ ನಿರಪೇಕ್ಷತೆ, ಜಾತ್ಯತೀತತೆ…ಇವೇ ನಮ್ಮ ಸಂವಿಧಾನದ ತತ್ವಗಳು. ಇವೇ ಸಂವಿಧಾನದ ಸಿದ್ಧಾಂತಗಳು. ಇದೇ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳು ಕೂಡ ಎಂದು ಮಾನ್ಯ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ತಿಳಿಸಿದರು. ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ, ಕಾನೂನು-ಮಾನವ ಹಕ್ಕು-ಆರ್‌ಟಿಐ ವಿಭಾಗವು, ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಚುನಾವಣೆ ಪ್ರಕ್ರಿಯೆಯಲ್ಲಿ ಸುಧಾರಣೆ” ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು. ಇಡೀ ಪ್ರಪಂಚದಲ್ಲಿರುವ […]
ನ.28 ರಂದು ಆಲದ ಗಿಡ ನೆಡುವ ಕಾರ್ಯಕ್ರಮ

ಜನವಾಹಿನಿ News ಮಡಿಕೇರಿ : ಕೊಡವ ಸಮಾಜ ವತಿಯಿಂದ ನವೆಂಬರ್, 28 ರಂದು ಬೆಳಗ್ಗೆ 8 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದ ಬಳಿ ಆಲದ ಗಿಡ ನೆಡುವ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ, ಮಾಜಿ ಕಾನೂನು ಮಂತ್ರಿ ಮೇರಿಯಂಡ ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, […]
ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ನಗರದ ಡಿ.ಎ.ಆರ್.ಕವಾಯತು ಮೈದಾನದಲ್ಲಿ ಗುರುವಾರ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಬಿ.ಪಿ.ದಿನೇಶ್ ಕುಮಾರ್ ಇತರರು ಇದ್ದರು. ನವೆಂಬರ್, 29 ರಂದು ಸಂಜೆ 4 ಗಂಟೆಗೆ ನಗರದ ಡಿಎಆರ್ ಕವಾಯತು ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಮೈಸೂರು ದಕ್ಷಿಣ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾದ ಡಾ.ಎಂ.ಬಿ.ಬೋರಲಿಂಗಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ರಕ್ತದಾನ ಅತ್ಯಗತ್ಯ : ವಿಜು ಸುಬ್ರಮಣಿ

ಜನವಾಹಿನಿ News ಸಿದ್ದಾಪುರ : ತುರ್ತು ಸಂದರ್ಭದಲ್ಲಿ ಅತ್ಯವಶ್ಯಕವಾಗಿರುವ ರಕ್ತದಾನಕ್ಕೆ ಬೆಲೆ ಕಟ್ಟಲಾಗದು ಮನುಷ್ಯನ ಪ್ರಾಣ ಉಳಿಸಲು ನೀಡುವ ರಕ್ತದಾನವೇ ಶ್ರೇಷ್ಠವಾಗಿದ್ದು, ಅಮೂಲ್ಯ ಜೀವಗಳನ್ನು ಉಳಿಸಲು ಯುವ ಸಮೂಹ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕೆಂದು ಜಿಲ್ಲಾ ಪಂಚಾಯತಿ ಸಾಮಾಜಿಕ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೂಕೊಂಡ ವಿಜು ಸುಬ್ರಮಣಿ ಕರೆ ನೀಡಿದರು. ಅಕ್ಷಯ ಚಾರಿಟೇಬಲ್ ಟ್ರಸ್ಟ್ ಮತ್ತು ಸಂಜೀವಿನಿ ಒಕ್ಕೂಟ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಹಕಾರದೊಂದಿಗೆ ಸಿದ್ದಾಪುರ ಗುಹ್ಯ ಅಗಸ್ಥೇಶ್ವರ ಸಹಕಾರ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಾಕ್ರಮ […]