Breaking News :

ಅರ್ವತ್ತೋಕ್ಕು ಎ.ಕೆ.ಸಿ ವತಿಯಿಂದ ಕೈಲ್ ಪೋಳ್ದ್ ಕ್ರೀಡಾ ಕೂಟ

  ಜನವಾಹಿನಿ News ಮಡಿಕೇರಿ : ಮಡಿಕೇರಿ ತಾಲೂಕಿನ ಅರ್ವತ್ತೋಕ್ಲು ಗ್ರಾಮದ ಎ.ಕೆ.ಸಿ ಸಂಸ್ಥೆಯ ವತಿಯಿಂದ ಕೈಲ್ ಪೋಳ್ದ್ ವಾರ್ಷಿಕ ಕ್ರೀಡಾ ಕೂಟ ಜಬ್ಬಂಡ ವಾಡೆ ಮಂದ್ ನಲ್ಲಿ ಜರುಗಿತು. ಬೆಳಿಗ್ಗೆ ಸಾಂಪ್ರದಾಯಿಕ ಮಂದ್ ಮರಿಯುವ ಕಾರ್ಯಕ್ರಮದೊಂದಿಗೆ ಕ್ರೀಡಾ ಕೂಟಕ್ಕೆ ಚಾಲನೆ ನೀಡಲಾಯಿತು. ಸುಮಾರು 40 ಕ್ಕೂ ಹೆಚ್ಚು ವಿಭಾಗಗಳಲ್ಲಿ ಸ್ಪರ್ಧೆ ಇದ್ದು ಹಿರಿಯರು ಕಿರಿಯರು ಮಹಿಳೆಯರು ಸ್ಪರ್ಧಿಗಳಾಗಿ ಭಾಗವಹಿಸಿ ಸಂಭ್ರಮಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೋಳುಮಾಡಂಡ ರಘು ಪೂವಪ್ಪ ನವರು ಪಾರಂಪರಿಕ […]

ಬೇಂಗೂರು ಕೊಡವ ಸಮಾಜದಿಂದ ಶಾಸಕ ಪೊನ್ನಣ್ಣ ನವರಿಗೆ ಮನವಿ

  ಜನವಾಹಿನಿ News ಮಡಿಕೇರಿ : ಮಡಿಕೇರಿ ತಾಲೂಕಿನ ಬೇಂಗ್ ನಾಡ್( ಚೇರಂಬಾಣೆ) ಕೊಡವ ಸಮಾಜದ ಪದಾಧಿಕಾರಿಗಳು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ನವರನ್ನು ಭೇಟಿ ಮಾಡಿ ಸಮಾಜದ ಕಟ್ಟಡದ ಅನುದಾನಕ್ಕೆ ಬೇಡಿಕೆ ಸಲ್ಲಿಸಿದರು. ಸುಮಾರು 4 ಕೋಟಿ ವೆಚ್ಚದಲ್ಲಿ ಬೇಂಗ್ ನಾಡ್ ಕೊಡವ ಸಮಾಜದ ಕಟ್ಟಡ ನಿರ್ಮಾಣಕ್ಕೆ ಅಂದಾಜು ಪಟ್ಟಿ ತಯಾರಿಸಲಾಗಿದ್ದು ಸುಸಜ್ಜಿತ ಭವನ ನಿರ್ಮಾಣಕ್ಕೆ ಸಿದ್ದತೆ ನಡೆಸಿದ್ದು ಸರ್ಕಾರದಿಂದ ಅನದಾನ ಒದಗಿಸುವಂತೆ ಶಾಸಕರಲ್ಲಿ ಕೋರಲಾಯಿತು. ಶಾಸಕ […]

ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ನಡೆಯಲಿದೆ : ಸಚಿವ ಮಧು ಬಂಗಾರಪ್ಪ

  ಜನವಾಹಿನಿ News ಮಡಿಕೇರಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗೆ 12 ಸಾವಿರ ಹಾಗೂ ಅನುದಾನಿತ ಶಾಲೆಗೆ 6 ಸಾವಿರ ಒಟ್ಟು 18 ಸಾವಿರ ಶಿಕ್ಷಕರ‌ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರ ಶಿಕ್ಷಕರ ನೇಮಕಾತಿ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಸೋಮವಾರ ಪೇಟೆ ಬಳಿಯ ಬೇಳೂರು ಕುಸುಬೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಶಾಲೆಯ ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಸರ್ಕಾರಿ ಶಾಲೆಯನ್ನು ಬಲಪಡಿಸಲು […]

ನಗರ ಸಭೆಯ ಪ್ರಸ್ತುತ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯ ವಾಗಿದೆ : ರಾಜೇಶ್ ಯಲ್ಲಪ್ಪ ಆರೋಪ

ಮಡಿಕೇರಿ : ಮಡಿಕೇರಿ ನಗರ ಸಭೆಯ ಪ್ರಸ್ತುತ ಆಡಳಿತ ವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯ ವಾಗಿದ್ದು ಮಡಿಕೇರಿ ನಗರದ ಇತಿಹಾಸದಲ್ಲಿ ಇಂತಹ ಅವ್ಯವಸ್ಥೆ ಹಿಂದೆಂದೂ ಕಾಣಲಿಲ್ಲ ಎಂದು ಮಡಿಕೇರಿ ನಗರ ಸಭೆಯ ಕಾಂಗ್ರೆಸ್ ಸದಸ್ಯ ಹಾಗೂ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು ತಮ್ಮ ವಿಶೇಷ ಅನುದಾನದಡಿ ಮೂರು ಕೋಟಿ ರೂಗಳನ್ನು ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ನೀಡಿದ್ದು ಅದರಿಂದ ಮಡಿಕೇರಿಯಲ್ಲಿ […]

ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಜನತೆಗೆ ಪ್ರತಕ್ಷಲಾದ ಕಾವೇರಿ ಮಾತೆ

  ಜನವಾಹಿನಿ NEWS ಮಡಿಕೇರಿ : ಕನ್ನಡ ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯ ಪವಿತ್ರ ಬ್ರಹ್ಮ ಕುಂಡಿಕೆಯಲ್ಲಿ ಶುಕ್ರವಾರ ಮಧ್ಯಾಹ್ನ 1.44 ಗಂಟೆಗೆ ಸರಿಯಾಗಿ ತೀರ್ಥರೂಪಿಣಿಯಾಗಿ ಶ್ರೀ ಕಾವೇರಿ ಮಾತೆ ಭಕ್ತಾದಿಗಳಿಗೆ ದರ್ಶನ ನೀಡಿದಳು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತಾದಿಗಳು ಜೈ ಜೈ ಮಾತಾ, ಕಾವೇರಿ ಮತಾ ಜಯಘೋಷದ ನಡುವೆ ಶ್ರೀ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಕಂಡಳು. ಬೆಳಗ್ಗೆಯಿಂದಲೇ ಪೂಜಾ ವಿಧಿವಿಧಾನಗಳು ಆರಂಭವಾಗಿದ್ದವು, ಭಕ್ತರು ತಂಡೋಪ ತಂಡವಾಗಿ ಆಗಿಮಿಸುತ್ತಿದ್ದು ಕಂಡು ಬಂದಿತ್ತು. ಮಧ್ಯಾಹ್ನ 1 ಗಂಟೆ […]

ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಜಿ.ಆರ್.ಪುಷ್ಪಲತಾ ನೇಮಕ

  ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯೆ ಜಿ.ಆರ್.ಪುಷ್ಪಲತಾ ನೇಮಕಗೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಅಲ್ಕಾ ಲಂಬಾ ರವರ ನಿರ್ದೇಶನದ ಮೇರೆಗೆ ಕರ್ನಾಟಕ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಸೌಮ್ಯ ರೆಡ್ಡಿಯವರು ನೇಮಕಾತಿ ಆದೇಶ ಜಾರಿಗೊಳಿಸಿದ್ದಾರೆ. ಪುಷ್ಪಲತಾ ರವರು ಈ ಹಿಂದೆ 2017-18 ರಲ್ಲಿ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು ಈಗ ಎರಡನೇ ಬಾರಿಗೆ ಕೊಡಗು ಮಹಿಳಾ […]

ಮೂರ್ನಾಡು : ಕೈಲ್ ಮುಹೂರ್ತ ಹಬ್ಬದ ಆಟೋಟ

  ಜನವಾಹಿನಿ NEWS ಮೂರ್ನಾಡು : ಇಲ್ಲಿನ ನಂ.೪೩೯ನೇ ಸಹಕಾರ ಸ್ಪೋರ್ಟ್ಸ್ ಕ್ಲಬ್‌ನ ವತಿಯಿಂದ ೧೦೧ನೇ ವಾರ್ಷಿಕ ಕೈಲ್ ಮುಹೂರ್ತ ಹಬ್ಬದ ಆಟೋಟಗಳ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು.  ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕ್ಲಬ್‌ನ ವತಿಯಿಂದ ಆಯೋಜಿಸಲಾಗಿದ್ದ ಆಟೋಟಗಳ ಕಾರ್ಯಕ್ರಮಗಳನ್ನು ತೆಂಗಿನಕಾಯಿಗೆ ಗುಂಡು ಹೊಡೆಯುವುದರ ಮೂಲಕ ಮೂರ್ನಾಡು ಪೊಲೀಸ್ ಉಪಠಾಣೆಯ ಪೊಲೀಸ್ ಅಧಿಕಾರಿ ಪಟ್ರಪಂಡ ಮೊಣ್ಣಪ್ಪ ಉದ್ಘಾಟಿಸಿ ಚಾಲನೆ ನೀಡಿದರು. ನಂತರ ಸಮಾರಂಭವನ್ನುದ್ದೇಶಿಸಿ ಮಾತನಾಡಿ ಕೊಡಗಿನ ಯುವಜನತೆ ಎಲ್ಲರೂ ಕ್ರೀಡಾಪುಟುಗಳಾಗಬೇಕು. ಮೂರ್ನಾಡು ಪಕ್ಕದಲ್ಲಿಯೆ ಅಂತರಾಷ್ಟ್ರೀಯ […]

ಪ್ರವೀಣ್ ಗೆ ಸಾಮಾಜಿಕ ಕಾರ್ಯಕರ್ತ ಪ್ರಶಸ್ತಿ – ಸಿದ್ದಾಪುರದಲ್ಲಿ ಸಂಭ್ರಮ 

ಜನವಾಹಿನಿ NEWS ಸಿದ್ದಾಪುರ : ನ್ಯಾಶನಲ್ ಯೂತ್ ಅವಾರ್ಡ್ಸ್ ಪ್ರಶಸ್ತಿ ವಿಜೇತರಾದ ನಿಫಾ ಇಂಡಿಯಾ ತನ್ನ ಸಿಲ್ವರ್ ಜ್ಯೂಬಿಲಿ ಅಂಗವಾಗಿ ನವದೆಹಲಿಯಲ್ಲಿ ರಾಷ್ಟ್ರಮಟ್ಟದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಏಕತಾ ರಾಲಿಯಲ್ಲಿ ಕರ್ನಾಟಕದ ಕೊಡಗು ಜಿಲ್ಲೆಯ ಸಿದ್ದಾಪುರದ ಪ್ರವೀಣ್ ಸಾಮಾಜಿಕ ಕಾರ್ಯಕರ್ತ ಪ್ರಶಸ್ತಿಗೆ ಭಾಜನರಾಗಿ ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿ ಜಿಲ್ಲೆಗೆ ಕೀರ್ತಿಯನ್ನು ತಂದ ಪ್ರವೀಣ್ ದೆಹಲಿಯಿಂದ ತನ್ನ ಹುಟ್ಟೂರಾದ ಸಿದ್ಧಾಪುರ ನಗರಕ್ಕೆ ಬಂದ ಸಂದರ್ಭ ಚೆಂಡ ಮೇಳದೊಂದಿಗೆ ಬರಮಾಡಿಕೊಂಡು ಪಟಾಕಿ ಸಿಡಿಸಿ ಸಂಭ್ರಮಿಸದರು. ಕೇಸರಿ ಯೂತ್ ಕ್ಲಬ್ ನ […]

ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಅರುಣ್ ಮಾಚಯ್ಯ ಪದಗೃಹಣ 

  ಜನವಾಹಿನಿ NEWS ಬೆಂಗಳೂರು : ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿರುವ ಅಧಿಕೃತ ಕಚೇರಿಯಲ್ಲಿ, ಸನ್ಮಾನ್ಯ  ಚೆಪ್ಪುಡೀರ ಅರುಣ್ ಮಾಚಯ್ಯರವರು ಪದಗ್ರಹಣಗೈದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸ ರಾಜು , ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಶ್ರೀಮತಿ ಕಾಂಚನ್ ಪೊನ್ನಣ್ಣ  ಹಾಗೂ ಜಿಲ್ಲೆಯಿಂದ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಕರಿಸಲು ತೆರಳಿದ ಕಾಂಗ್ರೆಸ್ ಮುಖಂಡರುಗಳು, ಕ್ರೀಡಾ ಇಲಾಖೆಯ ಅಧಿಕಾರಿ ವರ್ಗದವರು […]

ತ್ಯಾಗಕ್ಕೆ ನಿಘಂಟಿನ ಮತ್ತೊಂದು ಸಮನಾರ್ಥಕ ಪದವೇ ಮಹಾತ್ಮ ಗಾಂಧಿ : ತೆನ್ನಿರ ಮೈನಾ ಬಣ್ಣನೆ

  ಜನವಾಹಿನಿ NEWS ಮಡಿಕೇರಿ : ಜಗತ್ತಿನ ಎಲ್ಲಾ ನಿಘಂಟಿನಲ್ಲಿ ತ್ಯಾಗ ಎಂಬ ಪದದ ಸಮನಾರ್ಥಕ ಪದವೇ ಮಹಾತ್ಮ ಗಾಂಧಿ ಆಗಿದೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಬಣ್ಣಿಸಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಕಛೇರಿಯಲ್ಲಿ ಆಯೋಜಿಸಿದ ಮಹಾತ್ಮ ಗಾಂಧಿಯವರ 156 ನೇ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ 121 ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಭಾರತದಿಂದ ಬ್ರಿಟೀಷರನ್ನು ಹೊರಗಟ್ಟಲು ಲಕ್ಷಾಂತರ […]