ಹಿಂದೂ ಸಮಾವೇಶ ಪ್ರಚಾರ ವೇಳೆ ವ್ಯಕ್ತಿ ಮೇಲೆ ಹಲ್ಲೆ : ಆರೋಪಿ ಬಂಧನಕ್ಕೆ ಆಗ್ರಹಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಬಲ್ಲಮಾವಟಿಯಲ್ಲಿ ನಾಳೆ ನಡೆಯಲಿರುವ ಹಿಂದು ಸಮಾವೇಶ ಹಿನ್ನೆಲೆ ಪ್ರಚಾರ ನಡೆಸುತ್ತಿದ್ದ ಸಂದರ್ಭ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಅನ್ಯ ಕೋಮಿನ ವ್ಯಕ್ತಿಯೋರ್ವನಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ನಾಪೋಕ್ಲುವಿನಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಪ್ರಚಾರ ವೇಳೆ ಮಾತಿನ ಚಕಮಕಿ ಉಂಟಾಗಿ ಸಿದ್ದೀಕ್ ಎಂಬಾತ ಹಲ್ಲೆ ಮಾಡಿದ್ದಾನೆ ಎನ್ನಲಾಗಿದ್ದು, ಹಲ್ಲೆಗೊಳಗಾದ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ನೀಡಲಾಗಿದೆ. ಹಲ್ಲೆ ಘಟನೆ ಹಿನ್ನೆಲೆ ನಾಪೋಕ್ಲುವಿನಲ್ಲಿ ಹಿಂದೂ […]
ಭೀಕರ ರಸ್ತೆ ಅಪಘಾತ – ಓರ್ವ ಸ್ಥಳದಲ್ಲೇ ಸಾವು – ಮತ್ತೋರ್ವ ಗಂಭೀರ

ಜನವಾಹಿನಿ News ಸಿದ್ದಾಪುರ ಭೀಕರ ರಸ್ತೆ ಅಪಘಾತ ಓರ್ವ ಸ್ಥಳದಲ್ಲೇ ಸಾವು ಮತ್ತೋರ್ವ ಗಂಭೀರ ಅಮ್ಮತ್ತಿ ಸಮೀಪದ ಆನಂದಪುರದಲ್ಲಿ ನಡೆದ ಘಟನೆ ಅಮ್ಮ ತ್ತಿ ಕಡೆಯಿಂದ ಕಾಲ್ನಡಿಗೆಯಲ್ಲಿ ಬರುತ್ತಿದ್ದ ವ್ಯಕ್ತಿಗೆ ಸ್ಕೂಟಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ವ್ಯಕ್ತಿ ರಸ್ತೆಗೆ ಬಿದ್ದಿದ್ದಾನೆ. ರಸ್ತೆಗೆ ಬಿದ್ದ ಆತನ ಮೇಲೆ ಹಿಂಬದಿಯಿಂದ ಬಂದ ಕಾರೊಂದು ಹರಿದಿದೆ. ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆನಂದಪುರ ನಿವಾಸಿ ಏನೋಸ್ ಮನೋಹರ್ (ಮನು) 43 ಎಂಬಾತನೇ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿದ್ದ […]
ಫೆ.28ರಂದು ಚೆಟ್ಟಿಮಾನಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ

ಜನವಾಹಿನಿ News ಮಡಿಕೇರಿ : ಹಿಂದೂ ಸಂಗಮ ಆಯೋಜನಾ ಸಮಿತಿಯ ಚೆಟ್ಟಿಮಾನಿ ಮಂಡಲ ವತಿಯಿಂದ ಫೆ.೨೮ರಂದು ಪದಕಲ್ಲು ಗ್ರಾಮದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಸಂಯೋಜಕರಾದ ವಿವೇಕ್ ಕೆದಂಬಾಡಿ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂಬಾಂಧವರು ಒಗ್ಗಟ್ಟಾಗಿ ಹಿಂದು ಸಂಸ್ಕೃತಿ, ಆಚಾರ, ವಿಚಾರ ರಕ್ಷಿಸಿಸುವುದರ ಜತೆಗೆ ಸಮಾಜಿಕ ಬದ್ಧತೆಯನ್ನು ಪ್ರದರ್ಶಸಬೇಕಾಗಿದೆ. ಅಲ್ಲದೇ, ಮಾತೃಭೂಮಿ, ಹಿಂದೂಧರ್ಮ ಮತ್ತು ಸಂಸ್ಕೃತಿ ರಕ್ಷಣೆ ಹಾಗೂ ಸಂವರ್ಧನೆ ಪ್ರತಿಯೊಬ್ಬ ಹಿಂದೂವಿನ ಕರ್ತವ್ಯವಾಗಿದೆ. ಹಿಂದೂ ಸಂಘಟಿತನಾದಾಗ ಮಾತ್ರ ಧರ್ಮ ಬಲಿಷ್ಠವಾಗುತ್ತದೆ. […]
ಮಾ.11ರಿಂದ ಸರಕಾರಿ ವೈದ್ಯಾಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರ

ಜನವಾಹಿನಿ News ಮಡಿಕೇರಿ : ಖಾಲಿ ಹುದ್ದೆಗಳ ಭರ್ತಿ, ಔಷಧಿ ಸರಬರಾಜು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ.ಎಂ.ಆನಂದ್ ಎಚ್ಚರಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಸೇರಿದಂತೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಇಲಾಖೆಯಿಂದ ಔಷಧಿಗಳನ್ನು ಸರಬರಾಜು ಮಾಡಬೇಕು. ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಮಾಡಬೇಕು. ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ಕಾಲಕಾಲಕ್ಕೆ ಪ್ರಕಟಿಸಬೇಕು. ಎಲ್ಲಾ ವೃಂದದ ಅಧಿಕಾರಿ, […]
ಮಡಿಕೇರಿ ಹೈಟೆಕ್ ಬಸ್ ನಿಲ್ದಾಣಕ್ಕೆ ಡಾ ಮಂತರ್ ಗೌಡ ರವರಿಂದ 15 ಲಕ್ಷ ರೂಗಳ ಅನುದಾನ

ಜನವಾಹಿನಿ News ಮಡಿಕೇರಿ : ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದ ಬಳಿ ಮೈಸೂರು ರಸ್ತೆಯಲ್ಲಿ ಹೈಟೆಕ್ ಬಸ್ ನಿಲ್ದಾಣ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು 15 ಲಕ್ಷ ರೂಗಳ ಅನುದಾನವನ್ನು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿಯಿಂದ ಒದಗಿಸಿದ್ದು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಮಡಿಕೇರಿ ರವರಿಂದ ಕಾಮಗಾರಿ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ತೆನ್ನಿರ ಮೈನಾ ಮಾಹಿತಿ ನೀಡಿದ್ದಾರೆ. ಸುಸಜ್ಜಿತ ಆಸನದ ವ್ಯವಸ್ಥೆ […]
ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಸಂಸದ ಯದುವೀರ್ ಒಡೆಯರ್ ರಿಂದ ಭೂಮಿಪೂಜೆ

ಜನವಾಹಿನಿ News ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275 ರ ಇಬ್ಬನಿ ರೆಸಾರ್ಟ್ ಬಳಿಯಿಂದ ಸಂಪಾಜೆ ವರೆಗೆ 21 ಕಡೆಗಳಲ್ಲಿ ಸುಮಾರು 94 ಕೋಟಿ ರೂ. ವೆಚ್ಚದ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಬುಧವಾರ ಭೂಮಿ ಪೂಜೆ ನೆರವೇರಿಸಿದರು. ಮಡಿಕೇರಿ ತಾಲ್ಲೂಕಿನ ಮದೆನಾಡು ಬಳಿಯ ಕರ್ತೋಜಿ ಬಳಿ ರಕ್ಷಣಾ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಸಂಸದರು ಸ್ಥಳೀಯರ ಬೇಡಿಕೆಯಂತೆ 21 ಕಡೆಗಳಲ್ಲಿ ರಕ್ಷಣಾ […]
ಮಾ.1 ರಂದು ಕಡಗದಾಳುವಿನಲ್ಲಿ ಹಿಂದು ಸಂಗಮ ಶೋಭಾಯಾತ್ರೆ

ಜನವಾಹಿನಿ News ಮಡಿಕೇರಿ : ಹಿಂದೂ ಸಂಗಮ ಆಯೋಜನಾ ಸಮಿತಿ ಕಡಗದಾಳು ವತಿಯಿಂದ ಮಾರ್ಚ್ 1 ರಂದು ಭಾನುವಾರ ಹಿಂದೂ ಸಂಗಮ ಕಾರ್ಯಕ್ರಮ ಮತ್ತು ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಮಾತೃಭೂಮಿ, ಹಿಂದೂ ಸಂಸ್ಕೃತಿ, ಆಚಾರ, ವಿಚಾರ, ಪರಂಪರೆ, ಸಂಪ್ರದಾಯವನ್ನು ರಕ್ಷಣೆ ಮಾಡುವುದರ ಜೊತೆಗೆ ಉಳಿಸಿ ಬೆಳೆಸುವ ಮೂಲಕ ಸುಭದ್ರವಾದ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ. ಪ್ರತಿಯೊಬ್ಬ ಹಿಂದೂ ಕೂಡ ಸಂಘಟಿತವಾಗುವ […]
ಚೊಕಂಡಳ್ಳಿ ನಲ್ವತೋಕ್ಲು ಮೋಹಿದೀನ್ ಜುಮಾ ಮಸೀದಿಗೆ ಅನುದಾನ ನೀಡಲು ಸಂಸದರಿಗೆ ಮನವಿ

ಜನವಾಹಿನಿ News ಸಿದ್ದಾಪುರ : ಚೊಕಂಡಳ್ಳಿ ನಲ್ವತೋಕ್ಲು ಮೋಹಿದೀನ್ ಜುಮಾ ಮಸೀದಿಗೆ ಅನುದಾನ ಒದಗಿಸಲು ಸಂಸದ ಯದುವೀರ್ ಒಡೆಯರ್ ಅವರಿಗೆ ವಿರಾಜಪೇಟೆ ತಾಲೂಕು ಜೆಡಿಎಸ್ ಅಲ್ಪಾಸಖ್ಯಾತರ ಘಟಕ ಮನವಿ ಪತ್ರ ಸಲ್ಲಿಸಿದೆ ಸಿದ್ದಾಪುರದ ಎಸ್ .ಎನ್. ಡಿ .ಪಿ (ಶ್ರೀ ನಾರಾಯಣ ಗುರು ಪರಿಪಾಲನ ಯೋಗಂ) ಸಭಾಂಗಣದಲ್ಲಿ ನಡೆದ ಎಸ್. ಎನ್. ಡಿ. ಪಿ .ವನಿತಾ ಮಹಿಳಾ ಸಮಾವೇಶ ಕಾರ್ಯಕ್ರಮಕ್ಕೆ ಆಗಮಿಸಿದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಯದುವೀರ್ ಚಾಮರಾಜ ದತ್ತ […]
ನಿರ್ಲಕ್ಷ್ಯ ಆರೋಪ : ಮಡಿಕೇರಿ ನಗರ ಸಭೆ ಎದುರು SDPI ಪ್ರತಿಭಟನೆ

ಜನವಾಹಿನಿ News ಮಡಿಕೇರಿ : ಮಡಿಕೇರಿ ನಗರದಲ್ಲಿ ವಿವಿಧ ಕಾಮಗಾರಿಗಳು ನಗರಸಭೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಆರೋಪಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ನಗರಸಭೆ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಲಾಯಿತು. ನಗರಸಭೆ ಮುಂಭಾಗ ಜಮಾಯಿಸಿದ ಪ್ರತಿಭಟನಾ ನಿರತರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭ ಹಿಲ್ ರಸ್ತೆ, ತೆನಲ್ ಆಶ್ರಮ ದಾರಿ, ತ್ಯಾಗರಾಜ ಕಾಲನಿ, ಉಕ್ಕುಡರಸ್ತೆ, ಖಾಸಗಿ ಬಸ್ ನಿಲ್ದಾಣ ರಸ್ತೆ, ಕಾವೇರಿ ಕಲಾಕ್ಷೇತ್ರ […]
ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ರಜೆ ನೀಡಲು ಸೂಚನೆ

ಜನವಾಹಿನಿ News ಮಡಿಕೇರಿ : ಕರ್ನಾಟಕ ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು)ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಅವರ ಆರೋಗ್ಯ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ […]