ಆನೆ ಕಾವಾಡಿಗ ಹುದ್ದೆಗಳ ನೇರ ನೇಮಕಾತಿ

ಜನವಾಹಿನಿ NEWS ಮಡಿಕೇರಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಕೊಡಗು ವೃತ್ತಕ್ಕೆ ಸಂಬಂಧಿಸಿದಂತೆ (10 ಹುದ್ದೆಗಳು+1 ಬ್ಯಾಕ್ಲಾಗ್ ಹುದ್ದೆ) ಒಟ್ಟು 11 ಆನೆ ಕಾವಾಡಿಗ ಹುದ್ದೆಗಳಿಗೆ ಆಗಸ್ಟ್, 05 ರಿಂದ ಸೆಪ್ಟೆಂಬರ್, 03 ರವರೆಗೆ ಒಳಗೆ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣ ಮಾಹಿತಿಯು ಇಲಾಖಾ ವೆಬ್ಸೈಟ್ http://aranya.gov.in ನಲ್ಲಿ ಲಭ್ಯವಿರುತ್ತದೆ ಎಂದು ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.
ಅರೆಭಾಷೆ ಅಕಾಡೆಮಿಯಿಂದ ವಿಟ್ಲದಲ್ಲಿ ವಿಜೃಂಭಿಸಿದ ಆಟಿಲೊಂದು ದಿನ

ಜನವಾಹಿನಿ NEWS ಮಡಿಕೇರಿ : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ವಿಟ್ಲದ ಗೌಡರ ಯಾನೆ ಒಕ್ಕಲಿಗರ ಸಂಘ, ಗೌಡ ಮಹಿಳಾ ಘಟಕ ಮತ್ತು ಗೌಡ ಯುವ ವೇದಿಕೆಗಳ ಜಂಟಿ ಆಶ್ರಯದಲ್ಲಿ ‘ಆಟಿಲೊಂದು ದಿನ’ ಕಾರ್ಯಕ್ರಮವು ವಿಟ್ಲದ ‘ಅಕ್ಷಯ ಭವನ’ದಲ್ಲಿ ನಡೆಯಿತು. ಕಾರ್ಯಕ್ರಮವು ಅರೆಭಾಷೆ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಬಳಿಕ ಮಾತನಾಡಿದ ಸಂಸ್ಕೃತಿ ಮತ್ತು ಸಾಹಿತ್ಯಗಳ ಪೋಷಣೆಯೊಂದಿಗೆ ಅರೆಭಾಷೆಯನ್ನು ಪುಷ್ಟೀಕರಿಸುವ ಕಾರ್ಯಗಳನ್ನು ಅಕಾಡೆಮಿಯು ನಿರಂತರವಾಗಿ ಮಾಡುತ್ತಿದ್ದು ವಿಟ್ಲ ಜನರಿಗೆ […]
ಮಡಿಕೇರಿಯಲ್ಲಿ ರೋಟರಿ ಮಿಸ್ಟಿ ಹಿಲ್ಸ್ – ಕೊಡಗು ಪತ್ರಕತ೯ರ ಸಂಘದಿಂದ ಕಾಗಿ೯ಲ್ ದಿನಾಚರಣೆ ಯೋಧರಿಗೆ ಗೌರವಾಪ೯ಣೆ

143 ಸಂಘಸಂಸ್ಥೆಗಳಿಂದ ಪುಪ್ಪ ನಮನ- ಗಾನ ನಮನ – ಗೌರವ ನಮನ ಸಲ್ಲಿಕೆ. ಜನವಾಹಿನಿ NEWS ಮಡಿಕೇರಿ : ಕಾರ್ಗಿಲ್ ಯುದ್ಧದಲ್ಲಿ ಮಡಿದ ಹುತಾತ್ಮ ಯೋಧರಿಗೆ “ಪುಷ್ಪ ನಮನ-ಗಾನ ನಮನ- ಗೌರವ ನಮನ” ಸಲ್ಲಿಸುವ ಹೃದಯಸ್ಪರ್ಶಿಯಾದ “ಕಾರ್ಗಿಲ್ ವಿಜಯ್ ದಿವಸ್” ಕಾರ್ಯಕ್ರಮವು ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಜಿಲ್ಲೆಯಾದ್ಯಂತಲಿನ 143 ಸಂಘಸಂಸ್ಥೆಗಳ ಒಗ್ಗೂಡುವಿಕಯೊಂದಿಗೆ ಭಾವನಾತ್ಮಕವಾಗಿ ಜರುಗಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ದೇಶಪ್ರೇಮಿಗಳು ಈ ವಿನೂತನ ಕಾಯ೯ಕ್ರಮದ ಮೂಲಕ ರಾಷ್ಟ್ರಪ್ರೇಮ ಅಭಿವೖಕ್ತಿಗೊಳಿಸಿದರು. ಕೊಡಗು ಪತ್ರಕರ್ತರ ಸಂಘ ಮತ್ತು ಮಡಿಕೇರಿ […]
ಮೂರ್ನಾಡು ಪಿ.ಯು. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಜನವಾಹಿನಿ NEWS ಮೂರ್ನಾಡು : ಇಲ್ಲಿನ ಪಿ.ಯು. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ್ ದಿವಸ್ ಅನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ, ಲಯನ್ಸ್ ಕ್ಲಬ್ ಮುರ್ನಾಡ್ನ ಅಧ್ಯಕ್ಷರಾದ ಲಯನ್ ಮುಲ್ಲೇರ ಪಾಪ್ಪ ಕಾವೇರಿಯಪ್ಪ ಅವರು ಕಾಲೇಜಿನ ಅಗತ್ಯವಿರುವ ವಿದ್ಯಾರ್ಥಿಗಳಿಗೆ ₹25,000/- ಮೌಲ್ಯದ ಕಾಲೇಜು ಸಮವಸ್ತ್ರಗಳನ್ನು ಉದಾರವಾಗಿ ದಾನ ಮಾಡಿದರು. ಈ ಕಾರ್ಯಕ್ರಮದಲ್ಲಿ ಮುರ್ನಾಡ್ ಶಿಕ್ಷಣ ಸಂಸ್ಥೆಯ ಖಜಾಂಚಿ ಶ್ರೀ ನೆರವಂಡ ಜಯ ಮುತ್ತಪ್ಪ , ನಿರ್ದೇಶಕರಾದ ಶ್ರೀ ಮಾಲೇಟಿರ ದಿನು ಮೇದಪ್ಪ, ಪ್ರಾಂಶುಪಾಲೆ ಶ್ರೀಮತಿ ದೇವಕಿ ಪಿ.ಎಂ, […]
ಗದ್ದುಗೆಬೆಟ್ಟ ದೇವಾಲಯದ ಬಳಿ ಅಕ್ರಮ ಕಬರ್ ಆರೋಪ: ರಸ್ತೆ ತಡೆ ಪ್ರತಿಭಟನೆ

ಜನವಾಹಿನಿ NEWS ಸಿದ್ದಾಪುರ : ಮಾಲ್ದಾರೆ ಸಮೀಪದ ಗದ್ದುಗೆಬೆಟ್ಟದ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಅನ್ಯಕೋಮಿನವರು ಅಕ್ರಮವಾಗಿ ಕಬರ್ ನಿರ್ಮಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ದೇವಾಲಯದ ಸಮೀಪ ನಿರ್ಮಿಸಲಾಗಿದ್ದ ಕಬರ್ನ್ನು ತೆರವುಗೊಳಿಸಿ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದರು. ಆರ್ಎಸ್ಎಸ್ ಪ್ರಮುಖ ಚಕ್ಕೆರ ಮನು ಮಾತನಾಡಿ, 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿ ಅರಣ್ಯ ಇಲಾಖೆ ಅಧಿಕಾರಿಗಳ ಪಾತ್ರದ […]
ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಿಸಿ ಪಾವಿತ್ರ್ಯತೆಗೆ ಧಕ್ಕೆ : ಕೃತ್ಯ ಖಂಡಿಸಿ ನಾಳೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಜನವಾಹಿನಿ NEWS ಸಿದ್ದಾಪುರ : ವೀರಾಜಪೇಟೆ ತಾಲೂಕು ವ್ಯಾಪ್ತಿಯ ಮಾಲ್ದಾರೆ ಸಮೀಪದ ಮತ್ತೂರು ಬಳಿಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ಕೆಲ ದುಷ್ಕರ್ಮಿಗಳು ಸೇರಿಕೊಂಡು ಅನಧಿಕೃತವಾಗಿ ಸಮಾಧಿ (ಗೋರಿ) ನಿರ್ಮಾಣ ಮಾಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಕೃತ್ಯ ಎಸಗಿರುವ ವಿಚಾರ ಬೆಳಕಿಗೆ ಬಂದಿದ್ದು, ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನೆಗೆ ಕರೆ : ದೇವಾಲಯ ಆವರಣದಲ್ಲಿ ಸಮಾಧಿ ನಿರ್ಮಾಣ ಮಾಡುವ ಮುಖಾಂತರ ಹಿಂದೂಗಳ ಭಾವನೆಗಳಿಗೆ ಹಾಗೂ ಪಾವಿತ್ರ್ಯತೆಗೆ ಧಕ್ಕೆ ತರಲಾಗಿದೆ ಎಂದು […]
ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ

ಜನವಾಹಿನಿ NEWS ಬೆಂಗಳೂರು : ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ 2026ರ ಜುಲೈ 24ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳು ಮತ್ತು ವಿವಿಧ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವರದಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಸೇವಾ ಆಯೋಗವು 2026ರ ಜುಲೈ 26ರಂದು ತುರ್ತು ಸಭೆ ನಡೆಸಿದೆ. ಸಾರ್ವಜನಿಕರ ವಿಶ್ವಾಸವನ್ನು ಕಾಪಾಡುವ ಉದ್ದೇಶದಿಂದ ಹಾಗೂ ಆರೋಪಗಳ ಗಂಭೀರತೆಯನ್ನು ಮನಗಂಡು ಆಯೋಗವು ಕೆಳಕಂಡ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ ಎಂದು ಆಯೋಗದ ಕಾರ್ಯದರ್ಶಿ ಶ್ರೀಮತಿ ಕೆ. ಜ್ಯೋತಿ ಅವರು […]
ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕಾರ

ಜನವಾಹಿನಿ NEWS ನವದೆಹಲಿ : ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ ಜೋಶಿ ಅವರು ಅಧಿಕಾರ ಸ್ವೀಕರಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ವಿವಾದ ಬೆನ್ನಲ್ಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೆಂದ್ರ ಪ್ರಧಾನ್ ಶನಿವಾರ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಜೋಶಿ ಅವರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಲ್ಹಾದ ಜೋಶಿ, ‘ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡೆನು. ನನ್ನ ಮೇಲೆ ಅಪಾರ ನಂಬಿಕೆಯಿಟ್ಟು […]
ಗುಂಡಿಕೆರೆಯಲ್ಲಿ ಜಿಲ್ಲಾಮಟ್ಟದ ಸಾಹಿತ್ಯೋತ್ಸವಕ್ಕೆ ವರ್ಣ ರಂಜಿತಾ ಚಾಲನೆ – ಸಾಹಿತ್ಯಕ್ಕೆ ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಇದೆ :ಕೇಶವ ಕಾಮತ್

ಜನವಾಹಿನಿ NEWS ಮಡಿಕೇರಿ ; ವಿದ್ಯಾರ್ಥಿಗಳ ಪ್ರತಿಭೆಗಳನ್ನು ಗುರುತಿಸಿ ಶಾಖಾ ಮಟ್ಟದಿಂದ ಆರಂಭಗೊಂಡು ವಲಯಮಟ್ಟ, ಜಿಲ್ಲಾಮಟ್ಟ ಹಾಗೂ ರಾಜ್ಯ ಮಟ್ಟ, ರಾಷ್ಟ್ರಿಯ ಮಟ್ಟದವರೆಗೆ ನಡೆಯುವ ಸಾಹಿತ್ಯೋತ್ಸವದ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವಕ್ಕೆ ಗುಂಡಿಕೆರೆಯಲ್ಲಿ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ರಾಜ್ಯದ ನಾನಾ ಡಿವಿಷನ್ ನಿಂದ ಆಯ್ಕೆಯಾದ ವಿದ್ಯಾರ್ಥಿಗಳು 7 ಸುಪ್ರಸಿದ್ದ ವೇದಿಕೆಯಲ್ಲಿ 160 ಕ್ಕೂ ಅಧಿಕ ಸ್ವರ್ದೆಗಳಲ್ಲಿ 600 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸುವ ಸಾಹಿತ್ಯೋತ್ಸವದಲ್ಲಿ 10 ತೀರ್ಪುಗಾರರು ಕಾರ್ಯನಿರ್ವಹಿಸುತ್ತಿದ್ದಾರೆ . ಗುಂಡಿಕೆರೆಯಲ್ಲಿ ನಡೆಯುತ್ತಿರುವ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ […]
ಕಾಫಿ ತೋಟದ ಮಧ್ಯೆ ಹೆಣ್ಣಾನೆ ಸಾವು : ಅಮ್ಮನಿಲ್ಲದೆ ಮರಿಯಾನೆ ಕಣ್ಣೀರು

ಜನವಾಹಿನಿ NEWS ಮಡಿಕೇರಿ : ಕಾಫಿ ತೋಟದ ಮಧ್ಯೆ ಹೆಣ್ಣಾನೆಯೊಂದ ಸಂಶಯಾಸ್ಪದ ರೀತಿಯಲ್ಲಿ ಸತ್ತು ಬಿದ್ದಿರೋ ಘಟನೆ ವಿರಾಜಪೇಟೆ ತಾಲೂಕಿನ ಆನಂದಪುರ ಸಮೀಪದ ಕೌರಿಕಾಡು ಎಸ್ಟೇಟಿನಲ್ಲಿ ನಡೆದಿದೆ. ತಾಯಿಯನ್ನು ಕಳೆದುಕೊಂಡಿರೋ ಮರಿಯಾನೆ ಜಾಗ ಬಿಟ್ಟು ಕದಲದೆ ಕಣ್ಣೀರು ಹಾಕುತ್ತಾ ಸೊಂಡಿಲಿನಿಂದ ಮೃತ ದೇಹವನ್ನು ಸ್ಪರ್ಶಿಸುತ್ತಿದ್ದು, ಮುಕರೋಧನೆ ಅನುಭವಿಸುತ್ತಿರುವುದು ಎಲ್ಲರ ಮನಕಲಕುವಂತೆ ಮಾಡಿದೆ. ಇನ್ನೂ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿರೋ ಆನೆ ಗುಂಡು ತಗಲಿ ಸತ್ತಿದೆಯೋ ಅಥವಾ ಅನಾರೋಗ್ಯದ ಕಾರಣದಿಂದ ಮೃತ ಪಟ್ಟಿರಬಹುದೇ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ […]