ಪ್ರಪಂಚಕ್ಕೆ ಸತ್ಯ ಹಾಗೂ ಅಹಿಂಸಾ ಮಾರ್ಗ ಪ್ರತಿಪಾದಿಸಿದ ಮಹಾನ್ ಚೇತನ ಮಹಾತ್ಮ ಗಾಂಧೀಜಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅಭಿಮತ

ಜನವಾಹಿನಿ NEWS ಮಡಿಕೇರಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಸತ್ಯ ಹಾಗೂ ಅಹಿಂಸೆಯ ಮೂಲಕ ಇಡೀ ವಿಶ್ವಕ್ಕೆ ಬೆಳಕು ತೊರಿಸಿದ ಮಾಹಾನ್ ಚೇತನ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಪ್ರತಿಪಾದಿಸಿದ್ದಾರೆ. ಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕತೆಗೆ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರು ಮಾದರಿಯಾಗಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ […]
ಕಾಫಿ ಬೆಳೆಗಾರರಿಗೆ ಮಳೆ ಹಾನಿ ಪರಿಹಾರ ಒದಗಿಸಲು ಕ್ರಮ : ಸಚಿವ ಭೋಸರಾಜು

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಬೆಳೆಗಾರರಿಗೂ ಮಳೆ ಹಾನಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಪ್ರತಿಕ್ರಿಯಿಸಿದ್ದಾರೆ. ಮಡಿಕೇರಿಯಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಉಂಟಾಗಿದೆ ಈ ಹಿನ್ನೆಲೆ ಉತ್ತರ ಭಾಗಕ್ಕೆ ಈಗಾಗಲೇ ಸಿಎಂ ಭೇಟಿ ನೀಡಿದ್ದಾರೆ. ಎರಡೂವರೆ ಸಾವಿರ ಕೋಟಿ ಮಳೆಯಿಂದ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಪರಿಹಾರಕ್ಕಾಗಿ ಮೌಲ್ಯಮಾಪನ ಮಾಡಲಾಗಿದೆ. ಕೊಡಗು ಜಿಲ್ಲೆಯಲ್ಲೂ ಕಾಫಿ ಬೆಳೆಗಾರರಿಗೆ ಮಳೆಯಿಂದ […]
ಪತ್ರಕರ್ತ ಮೋಹನ್ ರಾಜ್ ರವರ ತಂದೆ ನಿಧನ

ಪತ್ರಕರ್ತ ಹಾಗೂ ಕೊಡಗು ತಮಿಳು ಸಂಘದ ಪ್ರಮುಖ ಮೋಹನ್ ರಾಜ್ ಅವರ ತಂದೆ ಕರುಪಯ್ಯ (76) ಪಳ್ಳಕೆರೆ ಟಾಟಾ ಕಾಫಿಯಲ್ಲಿ ಇಂದು ಮೃತಪಟ್ಟಿದ್ದಾರೆ. ಅವರ ಅಂತ್ಯಕ್ರಿಯೆ ನಾಳೆ ಪಳ್ಳಕೆರೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತೋಳುರುಶೆಟ್ಟಳ್ಳಿಯಲ್ಲಿ ಅದ್ದೂರಿ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ

ಜನವಾಹಿನಿ NEWS ಸೋಮವಾರಪೇಟೆ : ಸಮೀಪದ ತೋಳುರುಶೆಟ್ಟಳ್ಳಿಯ ಶುಭಾಸ್ ನಗರದಲ್ಲಿ ಶ್ರೀ ವಿನಾಯಕ ಯುವಕ ಸಂಘದ ವತಿಯಿಂದ 9ನೇ ವರ್ಷದ ಗೌರಿ ಗಣೇಶ ಮೂರ್ತಿಯನ್ನು ಅದ್ದೂರಿಯಾಗಿ ವಿಸರ್ಜಿಸಲಾಯಿತು. ಡಿಜೆ ಸೌಂಡ್ ಹಾಗೂ ಗೊಂಬೆ ಕುಣಿತದೊಂದಿಗೆ ವಿದ್ಯುತ್ ದೀಪಾಲಂಕಾರಗೊಂಡ ವಾಹನದಲ್ಲಿ ಗೌರಿ ಗಣೇಶ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆ ನಡೆಸಿ, ತೋಳುರುಶೆಟ್ಟಲ್ಲಿಯ ಬಸವೇಶ್ವರ ದೇವಸ್ಥಾನದ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು. ಈ ಸಂದರ್ಭ ಯುವಕ ಸಂಘದ ಅಧ್ಯಕ್ಷ ಟಿ.ಏನ್.ಬಸವರಾಜು, ಕಾರ್ಯದರ್ಶಿ ಕೆ.ಎಸ್.ನಂದೀಶ್, ಖಜಾಂಚಿ ಸತೀಶ್ (ದಾಮು), ಟಿ.ವಿ.ಅಭಿಜಿತ್, […]
ವಾರ್ಷಿಕ ಸಭೆ : ಒಕ್ಕಲಿಗರ ಸೌಹಾರ್ಧ ಸಹಕಾರಿ ಸಂಘಕ್ಕೆ 4,19,119 ರೂ ಲಾಭ

ಜನವಾಹಿನಿ NEWS ಸೋಮವಾರಪೇಟೆ : ಇಲ್ಲಿನ ಒಕ್ಕಲಿಗರ ಸೌಹಾರ್ಧ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಸಮೀಪದ ಒಕ್ಕಲಿಗರ ಸಮುದಾಯ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ಜೆ.ದೀಪಕ್ ಅವರ ನೇತೃತ್ವದ ಶನಿವಾರ ನಡೆಯಿತು. ದೀಪಕ್ ಮಾತನಾಡಿ, ಸಹಕಾರಿ ಸಂಘದಲ್ಲಿ ಇವರೆಗೆ ಒಟ್ಟು ೩೩೯ ಸದಸ್ಯರಿದ್ದಾರೆ. ೨೦೨೪-೨೫ನೇ ಸಾಲಿನಲ್ಲಿ ಸಂಘವು ಒಟ್ಟು ೪,೧೯,೧೧೯ ರೂ ಲಾಭಗಳಿಸಿದೆ ಎಂದರು. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಗಳಿಗೆ ತೆರಳಿ ಸದಸ್ಯತ್ವ ಅಭಿಯಾನ ನಡೆಸಲಾಗುವುದರೊಂದಿಗೆ ಸದಸ್ಯರನ್ನ ಹೆಚ್ಚಿಸುವ ಕೆಲಸ ಮಾಡಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಮುಖ್ಯ […]
ಕೊಳವೆ ಬಾವಿ ನಿರ್ಮಿಸಿಕೊಡಲು ಲಂಚದ ಬೇಡಿಕೆ : ಪಂಚಾಯತಿ ಅಧ್ಯಕ್ಷೆ ಹಾಗೂ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಜನವಾಹಿನಿ NEWS ಕರಾವಳಿ: ಕೃಷಿ ಜಮೀನಿಗೆ ಕೊಳವೆ ಬಾವಿ ನಿರ್ಮಿಸಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಬಂಟ್ವಾಳ ತಾಲ್ಲೂಕು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಫೀಸಾ, ಬಿಲ್ ಕಲೆಕ್ಟರ್ ವಿಲಿಯಂ ಅವರನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ. ‘ನಮ್ಮ ಮಾವನಿಗೆ ಪೆರುವಾಯಿ ಗ್ರಾಮದಲ್ಲಿ ಒಂದು ಎಕರೆ ಕೃಷಿ ಜಮೀನು ಇದ್ದು, ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಕೊಳವೆ ಬಾವಿ ಮಂಜೂರು ಮಾಡಲು ಅರ್ಜಿ ಸಲ್ಲಿಸಿದ್ದರು. ಮಾವನಿಗೆ […]
ಹೃದಯಘಾತದಿಂದ ಕಾರಿನಲೇ ಕೊನೆಯುಸಿರೆಳೆದ ಯೋಜನಾಧಿಕಾರಿ

ಜನವಾಹಿನಿ NEWS ಮಡಿಕೇರಿ : ತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ಆಲ್ಟೋ ಕಾರಿನಲ್ಲಿ ಇಂದು ಸಂಜೆ 4ರ ಸಮಯಕ್ಕೆ ಒಬ್ಬರೇ ಪ್ರಯಾಣಿಸುತ್ತಿದ್ದಾಗ ಬೂದಿತಿಟ್ಟು ಬಳಿ ಹೃದಯಘಾತದಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಪ್ರಭಾರ ಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಮೂಲತಃ ಬೆಂಗಳೂರಿನವರಾದ, ತಿತಿಮಿತಿಯಲ್ಲಿ ಕುಟುಂಬ ಸಹಿತ ವಾಸಿಸುತ್ತಿದ್ದ ಮನಮೋಹನ್ (46) ನಿಧನ ಹೊಂದಿದ್ದಾರೆ. ಪೊನ್ನಪ್ಪ ಸಂತೆ, ನಿಟ್ಟೂರು ಬಾಳಲೆ,ಸೋಮವಾರ ಪೇಟೆ ಸಿದ್ದಾಪುರದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದರು. ಕಳೆದ ಒಂದುವರೆ ತಿಂಗಳಿನಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮೂರ್ನಾಡುವಿನಲ್ಲಿ ಗಮನ ಸೆಳೆದ ಗೌರಿ ಗಣೇಶ ಮೂರ್ತಿಗಳ ಶೋಭಾಯಾತ್ರೆ

ಜನವಾಹಿನಿ NEWS ಮೂರ್ನಾಡು : ಗೌರಿ ಗಣೇಶ ಹಬ್ಬದ ಅಂಗವಾಗಿ ಮೂರ್ನಾಡು ಪಟ್ಟಣದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಪ್ರತಿಷ್ಠಾಪಿಸಲಾಗಿದ್ದ ಗೌರಿ-ಗಣೇಶ ಉತ್ಸವ ಮೂರ್ತಿಗಳಿಗೆ ಶ್ರದ್ಧಾಭಕ್ತಿಯಿಂದ ೭ ದಿನಗಳವರೆಗೆ ಪೂಜಾ ಕಾರ್ಯಗಳನ್ನು ನಡೆಸಿ ಬಲಮುರಿ ಕಾವೇರಿ ನದಿಯಲ್ಲಿ ವಿಸರ್ಜಿಸಲಾಯಿತು. ಮೂರ್ನಾಡಿನ ವೆಂಕಟೇಶ್ವರ ಕಾಲೋನಿಯ ವಿನಾಯಕ ಯುವಕ ಮಂಡಳಿಯ ವತಿಯಿಂದ ೩೪ನೇ ವರ್ಷದ ಗೌರಿ-ಗಣೇಶೋತ್ಸವದ ಗಣೇಶ ಉತ್ಸವ ಮೂರ್ತಿ, ಮೂರ್ನಾಡು ಗಾಂಧಿನಗರದ ಶ್ರೀರಾಮ ಮಂದಿರ ಸೇವಾ ಸಮಿತಿಯ ವತಿಯಿಂದ ೩೩ನೇ ವರ್ಷದ ಗೌರಿ-ಗಣೇಶೋತ್ಸವದ ಉತ್ಸವ ಗಣೇಶ ಮೂರ್ತಿ, […]
ರಣ ಭೀಕರ ಮಳೆಗೆ ಉತ್ತರ ಭಾರತ ತತ್ತರ : 30ಕ್ಕೂ ಅಧಿಕ ಮಂದಿ ಸಾವು

ಜನವಾಹಿನಿ NEWS ನವದೆಹಲಿ : ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ರಾಜಧಾನಿಯ ತಗ್ಗು ಪ್ರದೇಶಗಳಿಗೆ ಪ್ರವಾಹದ ನೀರು ನುಗ್ಗಿದೆ. ಯಮುನಾ ನದಿ ನೀರಿನ ಮಟ್ಟವು 206.83 ಮೀಟರ್ ದಾಖಲಾಗಿದೆ. ನಿವಾಸಿಗಳ ಪರದಾಟ ಬುಧವಾರವೂ ಮುಂದುವರಿದಿದೆ. ಬೀದಿಗಳು ಹೊಳೆಯಂತಾಗಿದ್ದು, ಮಾರುಕಟ್ಟೆ ಪ್ರದೇಶಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶದ ನಿವಾಸಿಗಳನ್ನು ರಕ್ಷಿಸಲಾಗಿದ್ದರೂ ಕೆಲವು ಕಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ವಜೀರಾಬಾದ್ ಮತ್ತು ಹತ್ನಿಕುಂಡ್ ಬ್ಯಾರೇಜ್‌ಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ನದಿ ನೀರಿನ ಮಟ್ಟ […]
ತೋಟಂ ಕೊಚ್ಚಿ ಕಾಲೋನಿಯಲ್ಲಿ ಮನೆಗೋಡೆ ಕುಸಿದು ಹಾನಿ

ಜನವಾಹಿನಿ NEWS ಮಡಿಕೇರಿ : ಕಳೆದೆರಡು ದಿನಗಳಿಂದ ಸುರಿದ ಗಾಳಿ ಮಳೆಗೆ ಗಡಿ ಗ್ರಾಮ ಕರಿಕೆಯ ತೋಟಂ ಕೊಚ್ಚಿ ಕಾಲೋನಿ ನಿವಾಸಿ ಬೆಳ್ಳಚ್ಚಿ ಎಂಬುವವರ ಮನೆ ಮೇಲ್ಚಾವಣಿ ಬಿದ್ದು ಅಡಿಗೆ ಕೋಣೆ ಸಂಪೂರ್ಣ ಹಾನಿಯಾಗಿದೆ. ಮಕ್ಕಳು ಸೇರಿದಂತೆ ಏಳು ಮಂದಿ ವಾಸವಿದ್ದು , ಎಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ಬಡತನದಲ್ಲಿರುವ ತಮ್ಮ ಮನೆ ದುರಸ್ತಿ ಪಡಿಸುವಂತೆ ಒತ್ತಾಯಿಸಿ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದರು ಮನೆ ಮಂಜೂರು ಮಾಡಲಿಲ್ಲ ಎಂದು ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಕರಿಕೆ ಹೆಲ್ಪ್ […]