Breaking News :

ಕೂತಿ ಗ್ರಾಮದಲ್ಲಿ ಗೌರಿ–ಗಣೇಶ ಮೂರ್ತಿ ವಿಸರ್ಜನೆ

ಜನವಾಹಿನಿ NEWS ಸೋಮವಾರಪೇಟೆ : ಸಮೀಪದ ಕೂತಿ ಗ್ರಾಮದಲ್ಲಿ ಗ್ರಾಮ ಸಮಿತಿಯಿಂದ ಪ್ರತಿಷ್ಠಾಪಿಸಿದ್ದ ಗೌರಿ–ಗಣೇಶ ಮೂರ್ತಿಗಳನ್ನು ಇಂದು ಗ್ರಾಮದಲ್ಲಿ ಮೆರವಣಿಗೆ ನಡೆಸಿ ಗ್ರಾಮದ ದೇವರ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು. ಈ ಸಂದರ್ಭ ಗ್ರಾಮಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಹೆಚ್.ಎಂ. ಜಯರಾಮ್, ಉಪಾಧ್ಯಕ್ಷ ಕೆ.ಡಿ. ಗಿರೀಶ್, ಕಾರ್ಯದರ್ಶಿ ಯಾದವ್ ಕುಮಾರ್,ಖಜಾಂಚಿ ಲಕ್ಷ್ಮಯ್ಯ, ಅರ್ಚಕ ಅನಂತ್ ರಾಮ್, ಕೆ.ಎಂ. ಅಶ್ವತ್, ಸಿ.ಯು. ಭರತ್, ರಾಜೇಶ್, ಬಾನುಪ್ರಸಾದ್ ಹಾಗೂ ಗ್ರಾಮಸ್ಥರು ಇದ್ದರು.

ಸಂಪಾಜೆಯಲ್ಲಿ ಭೀಕರ ರಸ್ತೆ ಅಪಘಾತ : ನೆಲ್ಯಹುದಿಕೇರಿ ಗ್ರಾಮದ ಯುವತಿ ( ಶೋಭಾ) ಸಾವು 

ಜನವಾಹಿನಿ NEWS ಮಡಿಕೇರಿ : ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ಕಾರು ಮತ್ತು ಟ್ಯಾಂಕರ್ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮಹಿಳೆಯೋರ್ವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ನೆಲ್ಯಹುದಿಕೇರಿ ಗ್ರಾಮದ ಶೋಭಾ ಮಹಿಳೆ ಸಾವನ್ನಪ್ಪಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಗಾಯಾಳುಗಳಿಗೆ […]

ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ : ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಠಾಣಾಧಿಕಾರಿ ಮಂಜುನಾಥ್ ಕಿವಿ ಮಾತು 

ಜನವಾಹಿನಿ NEWS ಸಿದ್ದಾಪುರ : ಜೀವನದಲ್ಲಿ ಸಾಧನೆ ಮಾಡಲು ಹೊರಟಿರುವ ನೀವು ದುಶ್ಚಟಕ್ಕೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ & ಜೀವನೋಪಾಯ ಇಲಾಖೆ ಕೊಡಗು ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ವಿರಾಜಪೇಟೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಿದ್ದಾಪುರ ಪಟ್ಟಣದಲ್ಲಿ […]

ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹ ಅಂಗವಾಗಿ ಗರ್ಭಿಣಿಯರಿಗೆ ಸೀಮಂತ : ಅರೋಗ್ಯವಂತ ಮಗು ದೇಶದ ಸಂಪತ್ತು – ತನ್ಮಯಿ ಪ್ರವೀಣ್

  ಜನವಾಹಿನಿ NEWS ಸೋಮವಾರಪೇಟೆ : ಇನ್ನರ್‌ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಅಂಗವಾಗಿ ಹಾನಗಲ್ಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸೀಮಂತ ಹಾಗು ಬಾಣಂತಿಯರಿಗೆ ಪೌಷ್ಠಿಕ ಆಹಾರದ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಇನ್ನರ್‌ವೀಲ್ ಅಧ್ಯಕ್ಷೆ ತನ್ಮಯಿ ಪ್ರವೀಣ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಅರೋಗ್ಯವಂತ ಮಗು ದೇಶದ ಸಂಪತ್ತು. ಗರ್ಭಿಣಿಯರು ಪೌಷ್ಠಿಕಾಂಶಯುಕ್ತ ಆಹಾರ ಸೇವಿಸಬೇಕು. ಒತ್ತಡ ಮುಕ್ತವಾಗಿ ಜೀವನ ಶೈಲಿ ಬೆಳೆಸಿಕೊಳ್ಳುವ ಮೂಲಕ ಅರೋಗ್ಯವಂತ ಮಗು ಜನನಕ್ಕೆ ತಮ್ಮ […]

ಶನಿವಾರಸಂತೆ : ಮಾಧ್ಯಮ ಸಂವಾದದಲ್ಲಿ ಅನಾವರಣಗೊಂಡ ಸಮಸ್ಯೆಗಳ ಸರಮಾಲೆ 

  ಜನವಾಹಿನಿ NEWS ಶನಿವಾರಸಂತೆ : ಶನಿವಾರಸಂತೆ ಪ್ರೆಸ್ ಕ್ಲಬ್ ಭಾಗಿತ್ವದಲ್ಲಿ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿಗೆ ಸೇರಿದ ವಿವಿಧ ಗ್ರಾ.ಪಂ.ಗಳಿಗೆ ಸಂಬಂದಿಸಿದ ಕುಂದು ಕೊರತೆ, ಜಟಿಲವಾದ ಸಮಸ್ಯೆಗಳ ಕುರಿತು ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರೊಂದಿಗೆ ಮಾಧ್ಯಮ ಸಂವಾದ ಕಾರ್ಯಕ್ರಮವನ್ನು ಸೋಮವಾರ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಶನಿವಾರಸಂತೆ, ದುಂಡಳ್ಳಿ, ಹಂಡ್ಲಿ, ಕೊಡ್ಲಿಪೇಟೆ ಬೆಸೂರು ಮತ್ತು ಆಲೂರುಸಿದ್ದಾಪುರ ಗ್ರಾ.ಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು ಪಾಲ್ಗೊಂಡಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷರು ತಮ್ಮ ಗ್ರಾ.ಪಂ.ಯ ಅಭಿವೃದ್ದಿಯ ಬಗ್ಗೆ ಮತ್ತು ಸಮಸ್ಯೆಗಳ ಬಗ್ಗೆಯೂ ಹೇಳಿಕೊಂಡರೆ ಪತ್ರಕರ್ತರು […]

ದೂರು ನೀಡಲು ಬಂದಿದ್ದ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಪೊಲೀಸ್ ಸಿಬ್ಬಂದಿ ಅಮಾನತು

  ಜನವಾಹಿನಿ NEWS ಮೂಡುಬಿದಿರೆ : ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೊಬ್ಬ ಕರೆ ಮಾಡಿ ಅಶ್ಲೀಲ‌ವಾಗಿ ಮಾತನಾಡಿ ಕಿರುಕುಳ ನೀಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಕುಟುಂಬ ಸಮಸ್ಯೆಯ ಕುರಿತು ಆ.23ರಂದು‌ಮೂಡುಬಿದಿರೆ ಪೊಲೀಸ್‌ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ಈ ಬಗ್ಗೆ ಪೊಲೀಸ್ ನಿರೀಕ್ಷಕ ಸಂದೇಶ್ ಅವರು ಪತಿ ಮತ್ತು ಪತ್ನಿಯನ್ನು […]

ಬೇಟೋಳಿ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ – ಶೋಭಾಯಾತ್ರೆಗೆ ಮೆರುಗು ನೀಡಿದ ಗೊಂಬೆ ಕುಣಿತ ಭಜನೆ

  ಜನವಾಹಿನಿ NEWS ವಿರಾಜಪೇಟೆ : ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಗಣಪತಿ ಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಗೌರಿ ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಶ್ರದ್ದಾ ಭಕ್ತಿಯಿಂದ ನೆರವೇರಿತು. ದೇವಸ್ಥಾನವು 43 ನೇ ವರ್ಷದ ಗಣೇಶೋತ್ಸವವನ್ನು ಆಚರಿಸುತ್ತಿದ್ದು ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆಯಿತು. ಶ್ರೀ ಗಣೇಶ ಚತುರ್ಥಿ ಯಂದು ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಒಟ್ಟು ಏಳು ದಿವಸಗಳ ಕಾಲ ದೇವಸ್ಥಾನದಲ್ಲಿ ವಿಶೇಷ ಪೂಜೆಗಳೊಂದಿಗೆ ಆರಾಧಿಸಲಾಯಿತು. ವಿಸರ್ಜನೋತ್ಸವದಂದು ಮದ್ಯಾಹ್ನ […]

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 100 ನೇ ವಾರ್ಷಿಕ ಮಹಾಸಭೆ

    ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ 2024-25 ನೇ ಸಾಲಿನ 100ನೇ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ನಗರದ ಕೇಂದ್ರ ಕಚೇರಿಯ “ಉನ್ನತಿ ಭವನ”ದ ದಿ:ಪಂದ್ಯಂಡ.ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಅವರ ಘನ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಲಾಭದಲ್ಲಿ ಮುಂದುವರೆಯುತ್ತಿರುವ ಬ್ಯಾಂಕ್: ಮಾರ್ಚ್ 31 ರ ಅಂತ್ಯಕ್ಕೆ ಬ್ಯಾಂಕು ರೂ.16.70 ಕೋಟಿ ಲಾಭ ಗಳಿಸಿರುವುದಾಗಿ ತಿಳಿಸಿದರು. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು ನಿ ಮಡಿಕೇರಿ, ಇದು […]

ವಿರಾಜಪೇಟೆ ಪಟ್ಟಣದಲ್ಲಿ ಗೌರಿ ಗಣೇಶ ಮೂರ್ತಿಗಳ ವಿಸರ್ಜನೆ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ 

  ಜನವಾಹಿನಿ NEWS ಮಡಿಕೇರಿ : ವಿರಾಜಪೇಟೆ ನಗರದಲ್ಲಿ ಈಗಾಗಲೆ ಪ್ರತಿಷ್ಟಾಪಿಸಲಾಗಿರುವ ಗಣಪತಿ ಮೂರ್ತಿಗಳ ವಿಸರ್ಜನೆ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989ರ (ತಿದ್ದುಪಡಿ ನಿಯಮಗಳು 1990) ನಿಯಮ 221ಎ(5)ರಲ್ಲಿ ದತ್ತವಾದ ಅಧಿಕಾರದಂತೆ ಸೆಪ್ಟೆಂಬರ್, 06 ರ ಮಧ್ಯಾಹ್ನ ಮಧ್ಯಾಹ್ನ 2 ಗಂಟೆಯಿಂದ ಸೆಪ್ಟೆಂಬರ್, 07 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ಪಟ್ಟಣದಲ್ಲಿ ಸಂಚಾರ […]

ಎಸ್.ಎನ್.ಡಿ.ಪಿ ಯೋಗಂ ನಿಂದ 171ನೇ ಶ್ರೀ ನಾರಾಯಣ ಗುರು ಜಯಂತಿ ಆಚರಣೆಗೆ ಸಿದ್ಧತೆ

ಜನವಾಹಿನಿ NEWS ಸಿದ್ದಾಪುರ : ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ (ಎಸ್.ಎನ್.ಡಿ.ಪಿ). ಕೊಡಗು ಯೂನಿಯನ್, ಜಯಂತಿ ಆಚರಣಾ ಸಮಿತಿ, ಹಾಗೂ ಎಸ್.ಎನ್.ಡಿ.ಪಿ. ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ಸಿದ್ದಾಪುರದಲ್ಲಿ 171ನೇ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಜಯಂತಿಯನ್ನು ಅತೀ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಎಸ್‌ಎನ್‌ಡಿಪಿ ಕೊಡಗು ಯೂನಿಯನ್ ಜಿಲ್ಲಾಧ್ಯಕ್ಷ ವಿ.ಕೆ.ಲೋಕೇಶ್ ತಿಳಿಸಿದ್ದಾರೆ ಎಸ್ ಎನ್ ಡಿ ಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದಲೂ ಶ್ರೀ ನಾರಾಯಣ ಗುರು ಜಯಂತಿಯನ್ನ ಅದ್ದೂರಿಯಾಗಿ ಆಚರಿಸಿಕೊಂಡು […]