ಸೋಮವಾರಪೇಟೆ186ನೇ ವಿಶ್ವ ಛಾಯಾಗ್ರಹಣ ದಿನಾಚರಣೆ

ಜನವಾಹಿನಿ NEWS ಸೋಮವಾರಪೇಟೆ: ತಾಲೂಕಿನ ಪುಷ್ಪಗಿರಿ ಛಾಯಾಗ್ರಾಹಕರ ಸಂಘದ ವತಿಯಿಂದ ಇಂದು 186ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಸಮೀಪದ ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಾಲೊಮನ್ ಡೇವಿಡ್ ಮಾತನಾಡಿ ಪ್ರತಿ ವರ್ಷದಂತೆ ಇ ಬಾರಿಯು ಸರ್ಕಾರಿ ಶಾಲಾ ಮಕ್ಕಳೊಂದಿಗೆ ವಿಶ್ವ ಛಾಯಾಗ್ರಹಣ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದೇವೆ. ಮಕ್ಕಳಿಗೆ ಅಗತ್ಯವಾಗುವ ವಸ್ತುಗಳನ್ನು ನೀಡುವುದರ ಜೊತೆಗೆ, ಈ ದಿನದ ಮಹತ್ವ ಮತ್ತು ಉದ್ದೇಶವನ್ನು ತಿಳಿಸುವ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚು ಜ್ಞಾನವನ್ನ […]
ರಾಷ್ಟ್ರ ಮಟ್ಟದ ಎನ್‌ಸಿಸಿ “ಅಖಿಲ ಭಾರತ ಭೂಸೈನಿಕ ಶಿಬಿರಕ್ಕೆ ನೆಲ್ಯಾಹುದಿಕೇರಿಯ ವಿನಂತಿ ಆಯ್ಕೆ

ಜನವಾಹನಿ NEWS ಸೋಮವಾರಪೇಟೆ : ನವದೆಹಲಿಯಲ್ಲಿ ಸೆಪ್ಟೆಂಬರ್ 2 ರಿಂದ 12 ರವರೆಗೆ ನಡೆಯಲಿರುವ ರಾಷ್ಟ್ರ ಮಟ್ಟದ ಎನ್‌ಸಿಸಿ “ಅಖಿಲ ಭಾರತ ಭೂಸೈನಿಕ ಶಿಬಿರ” (All India Thal Sainik Camp – AITSC)ದಲ್ಲಿ ಭಾಗವಹಿಸಲು ನೆಲ್ಯಾಹುದಿಕೇರಿ ಗ್ರಾಮದ ಟಿ.ಎಸ್.ವಿನಂತಿ ಆಯ್ಕೆಯಾಗಿದ್ದಾರೆ. ಮೈಸೂರು ಸೆಂಟ್ ಜೋಸೆಫ್ ಕಾಲೇಜಿನ ಎನ್‌ಸಿಸಿ ಕೆಡೆಟ್ ಆಗಿರುವ ಇವರು, ತೆರಂಬಳ್ಳಿ ಸುಧೀರ್ ಕುಮಾರ್ ಹಾಗೂ ಪವಿತ್ರ ದಂಪತಿ ಪುತ್ರಿ. ಶಿಬಿರದ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ ಎನ್‌ಸಿಸಿ ಕೆಡೆಟ್‌ಗಳು ಶಿಸ್ತಿನ ತರಬೇತಿ, […]
ಕರಿಕೆ ಗ್ರಾಮದಲ್ಲಿ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ : ನೂರಾರು ಜನರು ಭಾಗಿ – 50 ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆ

ಜನವಾಹಿನಿ NEWS ಮಡಿಕೇರಿ : ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ತಾಲ್ಲೂಕಿನ ಭಾಗಮಂಡಲ ಹೋಬಳಿಯ ಕರಿಕೆ ಗ್ರಾಮದಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯಲ್ಲಿ ನೂರಾರು ಜನರು ಪಾಲ್ಗೊಂಡು 50 ಕ್ಕೂ ಹೆಚ್ಚು ಅಹವಾಲುಗಳು ಸಲ್ಲಿಕೆಯಾದವು. ಕರಿಕೆ ಗ್ರಾಮದ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಅಲ್ಲಿನ ಸ್ಥಳೀಯರು ಸಾಲಾಗಿ ನಿಂತು ಭೂಮಿ ದುರಸ್ತಿ, ಆರ್‍ಟಿಸಿ ಸರಿಪಡಿಸುವುದು, ರಸ್ತೆ ನಿರ್ಮಾಣ ಮಾಡುವುದು, ಬಸ್ ಸೌಕರ್ಯ […]
ನೂತನ ಡಿಡಿಪಿಐ ಆಗಿ ಬಸವರಾಜು ಅಧಿಕಾರ ಸ್ವೀಕಾರ : ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಪ್ರಯತ್ನ : ಬಸವರಾಜು

ಜನವಾಹಿನಿ NEWS ಮಡಿಕೇರಿ : ಕೊಡಗು ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಆಡಳಿತ ) ರಾಗಿ (ಡಿಡಿಪಿಐ ಆಗಿ) ಬಸವರಾಜು ಸೋಮವಾರ (ಸೆ.1 ರಂದು) ಅಧಿಕಾರ ಸ್ವೀಕರಿಸಿದರು. ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ಇದೀಗ ಬೇರೆಡೆಗೆ ವರ್ಗಾವಣೆಗೊಂಡಿರುವ ಡಿಡಿಪಿಐ ಸಿ.ರಂಗಧಾಮಪ್ಪ ಅವರಿಂದ ನೂತನ ಡಿಡಿಪಿಐ ಬಸವರಾಜು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಡಿಡಿಪಿಐ ಬಸವರಾಜು,ಕೊಡಗಿನಲ್ಲಿ ಶೈಕ್ಷಣಿಕ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆಯುವ ಶೈಕ್ಷಣಿಕ […]
ಮಾದರಿ ಆಚರಣೆ ಮೂಲಕ ಗಮನ ಸೆಳೆದ ಕತ್ತಲೆಕಾಡು ವಿನಾಯಕ ಸೇವಾ ಟ್ರಸ್ಟ್ ಗಣೇಶೋತ್ಸವ

ಜನವಾಹಿನಿ NEWS ಮಡಿಕೇರಿ : ಕತ್ತಲೆಕಾಡು ಗ್ರಾಮದ ಶ್ರೀ ವಿನಾಯಕ ಸೇವಾ ಟ್ರಸ್ಟ್ ವತಿಯಿಂದ ಜರುಗಿದ 19ನೇ ವರ್ಷದ ಗೌರಿ ಗಣೇಶೋತ್ಸವ ಹಲವು ವಿಶೇಷತೆಗಳ ಮೂಲಕ ಗಮನ ಸೆಳೆಯಿತು. ಸಾಂಪ್ರದಾಯಿಕ ಆಚರಣೆಗೆ ಒತ್ತು ನೀಡಿದ ಟ್ರಸ್ಟ್, ಮೂರು ದಿನ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಆ.27ರಂದು ವಿನಾಯಕನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಬಳಿಕ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆಗಳು ಜರುಗಿದವು. ಜೋರು ಮಳೆಯ ನಡುವೆಯೂ ಗ್ರಾಮಸ್ಥರು ಉತ್ಸಾಹದಿಂದ ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಅದೇ ದಿನ ಸಂಜೆ ಸಂಗೀತ ರಜಮಂಜರಿ […]
ಮೇಕೇರಿಯಲ್ಲಿ ಬೃಹತ್ ಗಾತ್ರದ ನಾಗರ ಹಾವು ರಕ್ಷಣೆ

ಜನವಾಹಿನಿ NEWS ಮಡಿಕೇರಿ : ಸಮೀಪದ ಮೇಕೇರಿಯಲ್ಲಿ ಬೃಹತ್ ಗಾತ್ರದ ನಾಗರ ಹಾವು ರಕ್ಷಣೆ ಮಾಡುವಲ್ಲಿ ಕಗ್ಗೋಡ್ಲುವಿನ ಉರಗ ರಕ್ಷಕ ಪಿಯೂಷ್ ಪೆರೇರಾ ಯಶಸ್ವಿಯಾಗಿದ್ದಾರೆ. ಮೇಕೇರಿ ಗ್ರಾಮದ ದೀಪಕ್ ಎಂಬುವವರ ಮನೆಯ ಪಕ್ಕದಲ್ಲಿರುವ ಕಾರ್ ಶೆಡ್ ನಲ್ಲಿ ಬೃಹತ್ ಗಾತ್ರದ ನಾಗರ ಹಾವೊಂದು ಕಾಣಿಸಿಕೊಂಡಿದೆ ಕೂಡಲೇ ದೀಪಕ್ ಉರಗ ರಕ್ಷಕ ಪಿಯೂಷ್ ಪೆರೇರಾ ಅವರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೆರೇರಾ ಸುಮಾರು 6 ಅಡಿ ಉದ್ದದ ಬೃಹತ್ ನಾಗರ ಹಾವನ್ನು ಸುರಕ್ಷಿತವಾಗಿ […]
ವಿದ್ಯಾರ್ಥಿಗಳಲ್ಲಿ ಶಿಸ್ತೂ ಸಂಸ್ಕಾರವನ್ನು ಬೆಳೆಸುವಲ್ಲಿ ಸ್ಕೌಟ್-ಗೈಡ್ಸ್ ನ ಪಾತ್ರ ಮಹತ್ತರವಾದದ್ದು : ರೆ.ಫಾ.ಅವಿನಾಶ್

ಜನವಾಹಿನಿ NEWS ಸೋಮವಾರಪೇಟೆ : ವಿದ್ಯಾರ್ಥಿಗಳಲ್ಲಿ ಶಿಸ್ತೂ ಸಂಸ್ಕಾರವನ್ನು ಬೆಳೆಸುವಲ್ಲಿ ಸ್ಕೌಟ್-ಗೈಡ್ಸ್ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಸಂತ ಜೋಸೆಫರ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ರೆ.ಫಾ.ಅವಿನಾಶ್ ಅಭಿಪ್ರಾಯಪಟ್ಟಿದ್ದಾರೆ ಪಟ್ಟಣದ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ಸ್ಕೌಟ್ ಮತ್ತು ಗೈಡ್ಸ್ ವಾರ್ಷಿಕ ಮಹಾಸಭೆ ಹಾಗೂ ದೇಶಭಕ್ತಿ ಗೀತಾ ಗಾಯನ ಸ್ಪರ್ಧೆಯ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಿದ್ದರು, ಜಿಲ್ಲಾ ಗೈಡ್ ಆಯುಕ್ತರಾದ ಪದ್ಮಶ್ರೀ ಪ್ರಶಸ್ತಿ ವಿಜೇತೆ ರಾಣಿ ಮಾಚಯ್ಯ, ಜಿಲ್ಲಾ […]
ಪತ್ನಿ ಜತೆ ಅಕ್ರಮ ಸಂಬಂಧ ಶಂಕೆ : ಕುಶಾಲನಗರದಲ್ಲಿ ಶುಂಠಿ ಕಾವಲುಗಾರನ ಹತ್ಯೆ

ಜನವಾಹಿನಿ NEWS ಕುಶಾಲನಗರ : ಪತ್ನಿ ಜತೆ ಅಕ್ರಮ ಸಂಬಂಧ ಹೊಂದಿರುವ ಅನುಮಾನದಲ್ಲಿ ಹೊಲದಲ್ಲಿ ಕಾವಲಿಗಿದ್ದ ಕೇರಳ ಮೂಲದ ವ್ಯಕ್ತಿಯನ್ನು ಹತ್ಯೆಮಾಡಿರುವ ಘಟನೆ ಕುಶಾಲನಗರದ ಗುಡ್ಡೆಹೊಸೂರು ಬಳಿಯ ಬಸವನಹಳ್ಳಿಯಲ್ಲಿ ನಡೆದಿದೆ. ಶುಂಠಿ ಹೊಲದಲ್ಲಿ ಕಾವಲುಗಾರ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಮುರಳಿ (45) ಎಂಬಾತನೇ ಕೊಲೆಯಾದ ವ್ಯಕ್ತಿ. ಬಸವನಹಳ್ಳಿ ಗ್ರಾಮದ ತೀರ್ಥ ಎಂಬಾತನಿಂದ ಕೃತ್ಯ ನಡೆದಿದೆ. ತೀರ್ಥನ ಮನೆಯ ಹಿಂದೆ ಕಳೆದ ಒಂದು ವರ್ಷದ ಹಿಂದೆ ಮಣಿಕಂಠ ಎಂಬುವರು ಬೆಳೆದಿದ್ದ ಶುಂಠಿ ಬೆಳೆ ನೋಡಿಕೊಳ್ಳಲು ಕೇರಳ ಮೂಲದ […]
ಧರ್ಮಸ್ಥಳ ವಿರುದ್ಧ ನಡೆಯುತ್ತಿರೋ ಷಡ್ಯಂತ್ರ ಖಂಡಿಸಿ ಬೃಹತ್ ವಾಹನ ಜಾಥಾ : ಸೋಮವಾರಪೇಟೆಯಿಂದ ನೂರಾರು ವಾಹನಗಳಲ್ಲಿ ಧರ್ಮಸ್ಥಳಕ್ಕೆ ತೆರಳಿದ ಭಕ್ತರು

ಜನವಾಹಿನಿ NEWS ಸೋಮವಾರಪೇಟೆ : ತಾಲೂಕಿನ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಶುಕ್ರವಾರ ಸೋಮವಾರಪೇಟೆ ಯಿಂದ ಶ್ರೀಕ್ಷೇತ್ರ ಧರ್ಮಸ್ಥಳದವರೆಗೆ ಬೃಹತ್ ವಾಹನ ಜಾಥಾ ನಡೆಸಲಾಯಿತು. ಪಟ್ಟಣದ ಶ್ರೀ ಮುತ್ತಪ್ಪಸ್ವಾಮಿ ದೇವಾಲಯದಲ್ಲಿ ಜಾಥಗೆ ಚಾಲನೆ ದೊರೆತು, ಶನಿವಾರಸಂತೆ, ಕೊಡ್ಲಿಪೇಟೆ, ಶುಕ್ರವಾರಸಂತೆ, ದೋಣಿಗಲ್ಲು, ಗುಂಡ್ಯ ರಾಷ್ಟ್ರಿಯ ಹೆದ್ದಾರಿ ಮಾರ್ಗವಾಗಿ ಧರ್ಮಸ್ಥಳ ತಲುಪಿತು. ಸುಮಾರು150 ವಾಹನಗಳಲ್ಲಿ 500ಕ್ಕೂ ಹೆಚ್ಚು ಭಕ್ತರು ವಾಹನ ಜಾಥದಲ್ಲಿ ಪಾಲ್ಗೊಂಡು, ಬಳಿಕ ಧರ್ಮಸ್ಥಳದ ದೇವಾಲಯ ಆವರಣಕ್ಕೆ ಮೆರವಣಿಗೆ ಮೂಲಕ ಪ್ರವೇಶಿಸಿ ದೇವರ ದರ್ಶನ ಪಡೆದರು.ನಂತರ ಧರ್ಮಸ್ಥಳದ ಧರ್ಮಾಧಿಕಾರಿ […]
ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸಿ : ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಸೂಚನೆ

ಜನವಾಹಿನಿ NEWS ಮಡಿಕೇರಿ : ಸಮಾಜದ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿ.ಪಂ.ಕಚೇರಿಯಲ್ಲಿ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರೆಂಟಿ ಯೋಜನೆಗಳು ಜನರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಹೆಚ್ಚಿನ ಶಕ್ತಿ ತುಂಬಿದೆ ಎಂದರು. ಗ್ಯಾರೆಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳೂ […]