Breaking News :

ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕಾಯುಕ್ತ ಉಪ ಅಧೀಕ್ಷಕರು

    ಜನವಾಹಿನಿ NEWS ಮಡಿಕೇರಿ : ಕರ್ನಾಟಕ ಲೋಕಾಯುಕ್ತ ಕೊಡಗು ಉಪ ಅಧೀಕ್ಷರಾದ ದಿನಕರ ಶೆಟ್ಟಿ ಮತ್ತು ಪೊಲೀಸ್ ನಿರೀಕ್ಷಕರಾದ ವೀಣಾ ನಾಯ್ಕ್ ಅವರು ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಇಂದು ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರ ಗೈರು, ಗುಣಮಟ್ಟದ ಆಹಾರ ಪೂರೈಸುವುದು, ಶುಚಿತ್ವಕ್ಕೆ ಒತ್ತು ನೀಡುವುದು, ಶುದ್ಧ ಕುಡಿಯುವ ನೀರು ಪೂರೈಸುವುದು ಸೇರಿದಂತೆ ಹಲವು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು. ಮುಂದಿನ‌ ದಿನಗಳಲ್ಲಿ ವಸತಿ ಶಾಲೆಯಲ್ಲಿ ಯಾವುದೇ ರೀತಿಯ ದೂರು […]

ಕೊಡಗಿನಲ್ಲಿ ಮದ್ಯ ಮಾರಾಟ ನಿಷೇಧ

  ಜನವಾಹಿನಿ NEWS ಮಡಿಕೇರಿ : ಮಡಿಕೇರಿ ನಗರದಲ್ಲಿ ಹಾಗೂ ವಿರಾಜಪೇಟೆ ನಗರದಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನಾ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ದತ್ತವಾದ ಅಧಿಕಾರದಂತೆ ಆಗಸ್ಟ್, 29 ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮಡಿಕೇರಿ ನಗರದ ವ್ಯಾಪ್ತಿಯಲ್ಲಿ, ಸೆಪ್ಟೆಂಬರ್, 06 ರಂದು ಬೆಳಗ್ಗೆ 6 ಗಂಟೆಯಿಂದ ಸೆಪ್ಟೆಂಬರ್, 07 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರ […]

ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ – ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ

  ಜನವಾಹಿನಿ NEWS  : ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕ್ರೀಡಾಪಟುಗಳು ಸಮಗ್ರ ಪ್ರಶಸ್ತಿಯನ್ನು […]

ಮುಳಿಯ ಜ್ಯುವೆಲ್ಸ್‌ನ ಶ್ಯಾಮ್ ಭಟ್ ರವರ ಪತ್ನಿ ಸುಲೋಚನಾ ಭಟ್ ನಿಧನ

  ಜನವಾಹಿನಿ NEWS ಪುತ್ತೂರು : ಮುಳಿಯ ಜ್ಯುವೆಲ್ಸ್ ನ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ (71 ) ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ ಶ್ಯಾಮ್ ಭಟ್, ಪುತ್ರರಾದ ಜ್ಯುವೆಲ್ಸ್‌ನ ಸಿಎಂಡಿ ಕೇಶವ ಪ್ರಸಾದ್ ಮುಳಿಯ, ಎಂಡಿ ಕೃಷ್ಣ ನಾರಾಯಣ ಮುಳಿಯ, ಪುತ್ರಿ, ಸೊಸೆಯಂದಿರು, ಅಳಿಯ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರವು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಪಾಂಗಳಾಯಿ ಶ್ಯಾಮ್-ಸುಲೋಚನಾ ಭಟ್ […]

ಆ.30 ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ಜನವಾಹಿನಿ NEWS ಮಡಿಕೇರಿ : 2025-26ನೇ ಸಾಲಿನಲ್ಲಿ ತಾಲ್ಲೂಕು ಮಟ್ಟದಲ್ಲಿ ವಿಜೇತರಾದ ಪುರುಷ ಹಾಗೂ ಮಹಿಳೆಯರಿಗೆ ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏರ್ಪಡಿಸಲಾಗಿದೆ. ಆಗಸ್ಟ್, 30 ರಂದು ಕೊಡಗು ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟವು ಕೂಡಿಗೆ ಕ್ರೀಡಾ ಶಾಲೆ ಮೈದಾನದಲ್ಲಿ ನಡೆಯಲಿದ್ದು, ಅಥ್ಲೇಟಿಕ್ಸ್, ವಾಲಿಬಾಲ್, ಫುಟ್ಬಾಲ್(ಪುರುಷರಿಗೆ ಮಾತ್ರ), ಖೋಖೋ, ಕಬ್ಬಡಿ, ಬಾಸ್ಕೇಟ್ ಬಾಲ್, ಕುಸ್ತಿ, ಹಾಕಿ(ಮಹಿಳೆಯರಿಗೆ ಮಾತ್ರ), ಹ್ಯಾಂಡ್‍ಬಾಲ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ, […]

ನಿಲ್ದಾಣಕ್ಕೆ ಡಿಕ್ಕಿ ಹೊಡೆದ KSRTC ಬಸ್- ಮಗು ಸೇರಿ ಐವರು ಸಾವು, 7 ಮಂದಿಗೆ ಗಾಯ

  ಜನವಾಹಿನಿ NEWS ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ಬ್ರೇಕ್ ವಿಫಲವಾಗಿ ನಿಯಂತ್ರಣ ಕಳೆದುಕೊಂಡು ಬಸ್ ತಂಗುದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಗುರುವಾರ ಮಧ್ಯಾಹ್ನ ತಲಪಾಡಿಯಲ್ಲಿ ಸಂಭವಿಸಿದೆ. ಈ ಘಟನೆ ಮಧ್ಯಾಹ್ನ 1.30 ರ ಸುಮಾರಿಗೆ ನಡೆದಿದೆ. ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸೇರಿದಂತೆ ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ದೃಢಪಡಿಸಿದ್ದಾರೆ. ಇದಲ್ಲದೆ, ಒಂದು ಮಗು […]

ಮೇಕೇರಿ-ಮಡಿಕೇರಿ ನಡುವಿನ ಮುಖ್ಯ ರಸ್ತೆಯಲ್ಲಿ ಮತ್ತೆ ಕುಸಿತ

  ಜನವಾಹಿನಿ NEWS ಮಡಿಕೇರಿ ಮಡಿಕೇರಿ ವಿರಾಜಪೇಟೆ ಮುಖ್ಯ ರಸ್ತೆಯ ಮೇಕೇರಿ ಶಾಂತಿ ಎಸ್ಟೇಟಿನ ಸಮೀಪ ಈ ಹಿಂದೆ ಕುಸಿದು ತಾತ್ಕಾಲಿಕ ಸ್ಯಾಂಡ್ ಬ್ಯಾಗ್ ಅಳವಡಿಸಿದ್ದ ಸ್ಥಳದಲ್ಲಿ ಮತ್ತೆ ರಸ್ತೆ ಕುಸಿದಿದೆ. ಇನ್ನೂ ಮಳೆ ಹೆಚ್ಚಾದಲ್ಲಿ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಸಾರ್ವಜನಿಕರು ಆತಂಕದಲ್ಲೇ ಓಡಾಡಬೇಕಾದ ಸ್ಥಿತಿ ಎದುರಾಗಿದೆ.

ಗಡಿಗ್ರಾಮ ಕರಿಕೆಯಲ್ಲಿ ಅದ್ದೂರಿ ಗೌರಿ ಗಣೇಶೋತ್ಸವ ಆಚರಣೆ

ಜನವಾಹಿನಿ NEWS ಮಡಿಕೇರಿ ಗಡಿ ಗ್ರಾಮ ಕರಿಕೆಯ ಎಳ್ಳುಕೊಚ್ಚಿ ಹಾಗೂ ಚೆತ್ತುಕಾಯದಲ್ಲಿ ಗೌರಿ ಗಣೇಶೋತ್ಸವ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ  ವಿಸರ್ಜನೆ ಕಾರ್ಯ ವಿಜೃಂಭಣೆಯಿಂದ ನಡೆಯಿತು. ಎಳ್ಳುಕೊಚ್ಚಿ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣ ಹಾಗೂ ಚೆತ್ತುಕಾಯದ ನ್ಯೂಪ್ರೆಂಡ್ಸ್ ಕ್ಲಬ್ ವತಿಯಿಂದ ಇಲ್ಲಿನ ಶಾಲಾ ಮೈದಾನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೂಡ ಆಯೋಜನೆ ಮಾಡಲಾಗಿತು. ಗಣೇಶೋತ್ಸವ ಸಂಭ್ರಮದಲ್ಲಿ ಸ್ಥಳೀಯರು ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಘ್ನ ನಿವಾರಕನಿಗೆ ವಿಶೇಷ ಪೂಜೆ ಸಲ್ಲಿಸಿದರು. ಬೆಳಗ್ಗೆ ಗಣಪತಿ, ಮಂಗಳಾರತಿ, […]

ರಾಯಲ್ ಯುವಕ ಸಂಘದಿಂದ 17ನೇ ವರ್ಷದ ಗೌರಿ ಗಣೇಶೋತ್ಸವ ಮೂರ್ತಿಗಳ ಪ್ರತಿಷ್ಠಾಪನೆ

  ಜನವಾಹಿನಿ NEWS ಸಿದ್ದಾಪುರ : ರಾಯಲ್ ಯುವಕ ಸಂಘದ ವತಿಯಿಂದ 17ನೇ ವರ್ಷದ ಗೌರಿ ಗಣೇಶೋತ್ಸವ ಮೂರ್ತಿಗಳನ್ನು ಇಲ್ಲಿನ ಪಾಲಿಬೆಟ್ಟ ರಸ್ತೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಮಹಾಗಣಪತಿ ಹೋಮ, ಮಂಗಳಾರತಿ, ನೈವೇದ್ಯ ನೆರವೇರಿಸಿದ ಬಳಿಕ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಮಹಿಳೆಯರು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಸಮಿತಿ ಪದಾಧಿಕಾರಿಗಳು ಸುತ್ತಮುತ್ತಲ ಪ್ರದೇಶಗಳ ಜನ ಭಾಗಿಯಾಗಿದ್ದೆ      

ಭಗವತಿ ಯುವಕ ಸಂಘದಿಂದ 10ನೇ ವರ್ಷದ ಗೌರಿ ಗಣೇಶೋತ್ಸವ ಮೂರ್ತಿಗಳ ಪ್ರತಿಷ್ಠಾಪನೆ 

  ಜನವಾಹಿನಿ NEWS ಸಿದ್ದಾಪುರ : ಗೌರಿ ಗಣೇಶ ಹಬ್ಬದ ಅಂಗವಾಗಿ ಇಲ್ಲಿಗೆ ಸಮೀಪದ ಇಂಜಿಲಗೆರೆಯಲ್ಲಿ ಭಗವತಿ ಯುವಕ ಸಂಘದ ವತಿಯಿಂದ 10ನೇ ವರ್ಷದ ಗೌರಿ ಗಣೇಶೋತ್ಸವ ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಯಿತು. ಇಂಜಿಲಗೆರೆ ಪೂಮಾಡಪುರ ಮುತ್ತಪ್ಪ ದೇವಾಲಯ ಆವರಣದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ರಾಮ ಮಂದಿರದ ರವಿ ಭಟ್ಟರ ನೇತೃತ್ವದಲ್ಲಿ ವಿಶೇಷ ಪೂಜೆ ಕೈಂಕರ್ಯ ಜರುಗಿತು. ದೇವರಿಗೆ ಹೋಮ ವಿಶೇಷ ಪೂಜೆ, ಮಂಗಳಾರತಿ, ನೈವೇದ್ಯ ನೆರವೇರಿಸಿದ ಬಳಿಕ ಆಗಮಿಸಿದ ಭಕ್ತರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಸುತ್ತಮುತ್ತಲ ಪ್ರದೇಶದ […]