ಭರತನಾಟ್ಯ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತೀರ್ಥಪ್ರಿಯ

ಜನವಾಹಿನಿ NEWS ಸಿದ್ದಾಪುರ : 2024-25ನೇ ಸಾಲಿನ ಡಾಕ್ಟರ್ ಗಂಗೂಬಾಯಿ ಹಾನಗಲ್ ಸಂಗೀತ ಕಲಾ ವಿಶ್ವವಿದ್ಯಾಲಯ ಮೈಸೂರಿನಲ್ಲಿ ನಡೆದ ಜೂನಿಯರ್ ಭರತನಾಟ್ಯ ಪರೀಕ್ಷೆಯಲ್ಲಿ ಪಿ.ಎಂ.ಶ್ರೀ ನವೋದಯ ವಿದ್ಯಾಲಯದ 9 ನೇ ತರಗತಿಯ ವಿದ್ಯಾರ್ಥಿನಿ ತೀರ್ಥಪ್ರಿಯ. ಎಂ ಬಿ, 94.5% ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ತೀಥಪ್ರಿಯಾ ಅವರು ಕಳೆದ ಆರು ವರ್ಷಗಳಿಂದ ಜಗನ್ಮೋಹನ ನಾಟ್ಯಾಲಯ, ಶಿಕ್ಷಕ ರಾಜೇಶ್ ಆಚಾರ್ಯರವರ ಮಾರ್ಗದರ್ಶನದಲ್ಲಿ ನೃತ್ಯ ಕಲಿಯುತ್ತಿದ್ದಾರೆ. ವಿದ್ಯಾಭ್ಯಾಸದ ಜೊತೆಗೆ ಕಲೆ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತಿರುವುದು ಅವರ ವೈಶಿಷ್ಟ್ಯ. […]
ಸಿದ್ದಾಪುರ ಆಸ್ಪತ್ರೆಗೆ ನುರಿತ ವೈದ್ಯರ ನೇಮಕಕ್ಕೆ ಸಿ.ಪಿ.ಐ.ಎಂ ಪಕ್ಷದ ಸಂಚಾಲನ ಸಮಿತಿ ಒತ್ತಾಯ

ಜನವಾಹಿನಿ NEWS ಸಿದ್ದಾಪುರ : ವೈದ್ಯರ ಕೊರತೆ ಎದುರಿಸುತ್ತಿರುವ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ನುರಿತ ತಜ್ಞ ವೈದ್ಯರುಗಳ ನೇಮಕದ ಜತೆ ಮೂಲಭೂತ ಸೌಕರ್ಯಗಳನ್ನು ಕೂಡಲೇ ಒದಗಿಸಬೇಕೆಂದು ಸಿಪಿಐಎಂ ಪಕ್ಷದ ಸಿದ್ದಾಪುರ ಸಂಚಾಲನ ಸಮಿತಿ ಆಗ್ರಹಿಸಿದೆ. ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಸಮಿತಿಯ ಕಾರ್ಯದರ್ಶಿ ಎನ್.ಡಿ.ಕುಟ್ಟಪ್ಪ, ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸುಮಾರು 30,000 ಕಿಂತಲು ಹೆಚ್ಚು ಜನರು ವಾಸವಿದ್ದು, ಅನಾರೋಗ್ಯ, ತುರ್ತು ಸಂದರ್ಭಗಳಲ್ಲಿ ಇದೇ ಆಸ್ಪತ್ರೆಯನ್ನು ಅವಲಂಬಿತರಾಗಿದ್ದಾರೆ. […]
ಕುಶಾಲನಗರ : ಪ್ರತಿಭಟನಾ ಸಮಾವೇಶಕ್ಕೆ ಆಗಮಿಸಿದ್ದ ಪುನೀತ್ ಕೆರೆಹಳ್ಳಿ ಪೊಲೀಸ್ ವಶಕ್ಕೆ

ಜನವಾಹಿನಿ NEWS ಕುಶಾಲನಗರ : ಧರ್ಮಸ್ಥಳದ ಅಪಪ್ರಚಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನಿತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪುನೀತ್ ಕೆರೆಹಳ್ಳಿ ಆಗಮನದ ಹಿನ್ನೆಲೆ ಕುಶಾಲನಗರಕ್ಕೆ ಹೆಚ್ಚಿನ ಸಂಖ್ಯೆಯ ಹಿಂದುಪರ ಕಾರ್ಯಕರ್ತರು ಆಗಮಿಸಿದ್ದು, ಭಾಷಣಕ್ಕೆ ಅವಕಾಶ ಕಲ್ಪಿಸುವಂತೆ ಕಾರ್ಯಕರ್ತರ ಮನವಿ ಮಾಡಿಕೊಂಡಿದ್ದಾರೆ. ಈ ವೇಳೆ ಕಾರ್ಯಕರ್ತರು ಪುನಿತ್ ರನ್ನು ವಶಕ್ಕೆ ಪಡೆಯಲು ಬಿಡದೆ ರಕ್ಷಣಾ ಕವಚ ರಚಿಸಿದ್ದರಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ಥ ಗೊಂಡ […]
ಸುಳ್ಯದ ಪಿಜಿಯಲ್ಲಿ ಕೊಡಗಿನ ವಿದ್ಯಾರ್ಥಿ ಆತ್ಮಹತ್ಯೆ

ಸುಳ್ಯದ ಪಿಜಿಯಲ್ಲಿ ಕೊಡಗಿನ ವಿದ್ಯಾರ್ಥಿ ಆತ್ಮಹತ್ಯ ಮಡಿಕೇರಿ : ವಿದ್ಯಾರ್ಥಿಯೋರ್ವ ತಾನು ತಂಗಿದ್ದ ಪಿಜಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಗಳ ಪುತ್ರ ಅಭಿ (20) ಯುವಕನೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಪುತ್ರ ಸುಳ್ಯದಲ್ಲಿ ಶಿಕ್ಷಣ ಪಡೆಯುತ್ತಿದ್ದ ಈತ ತಂಗಿದ್ದ PG ಯಲ್ಲಿ ಇಂದು ಬೆಳಗ್ಗೆ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಇನ್ನೂ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸರ ತನಿಖೆಯ […]
ಆಧುನಿಕ ಭಾರತದ ಶಿಲ್ಪಿ ರಾಜೀವ್ ಗಾಂಧಿ : ತೆನ್ನಿರ ಮೈನಾ ಬಣ್ಣನೆ

ಜನವಾಹಿನಿ NEWS ಮಡಿಕೇರಿ : ಮಾಜಿ ಪ್ರಧಾನಿ ಭಾರತ ರತ್ನ ರಾಜೀವ್ ಗಾಂಧಿಯವರು ಆಧುನಿಕ ಭವ್ಯ ಭಾರತದ ಶಿಲ್ಪಿ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಬಣ್ಣಿಸಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ,ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗದ ಘಟಕಗಳ ಆಶ್ರಯದಲ್ಲಿ ನಡೆದ ದಿವಗಂತ ರಾಜೀವ್ ಗಾಂಧಿಯವರ 81 ನೇ ಹಾಗೂ ದಿವಂಗತ ದೇವರಾಜ್ ಅರಸು ರವರ 110 ನೇ ಜನ್ಮ ದಿನಾಚರಣೆ […]
ಅವೈಜ್ಞಾನಿಕವಾಗಿ ರಸಗೊಬ್ಬರ ಮತ್ತು ಕೀಟನಾಶಕದ ಬಳಕೆ ಮಾಡುತ್ತಿರುವುದರಿಂದ ಆಹಾರ ರಾಸಾಯನಿಕ ಯುಕ್ತವಾಗುತ್ತಿದೆ : ಡಾ. ಇ. ತಿಪ್ಪೇಸ್ವಾಮಿ

ಜನವಾಹಿನಿ NEWS ವಿರಾಜಪೇಟೆ : ಕೃಷಿಯಲ್ಲಿ ತ್ವರಿತ ಪ್ರಗತಿ ಸಾಧಿಸಬೇಕು. ಹೆಚ್ಚು ಆದಾಯವನ್ನು ಗಳಿಸುವುದರೊಂದಿಗೆ ಕಡಿಮೆ ಶ್ರಮದ ಬಳಕೆ ಆಗಬೇಕೆಂಬ ಉದ್ದೇಶದಿಂದ ಇತ್ತೀಚಿಗೆ ಕೀಟನಾಶಕ , ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚುತ್ತಿದ್ದು ಇದು ನಮ್ಮ ಆರೋಗ್ಯ , ಸುತ್ತಮುತ್ತಲಿನ ಪರಿಸರ ಹಾಗೂ ಪ್ರಾಣಿ ಸಂಕುಲಗಳು ಕ್ಷೀಣಿಸಿ ಹೋಗಲು ಪ್ರಮುಖ ಕಾರಣವೆಂದು ಎಫ್.ಎಂ. ಕೆ .ಎಂ .ಸಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಇ. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು . ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಐಕ್ಯೂಎಸಿ […]
ಪೊನ್ನಂಪೇಟೆ : ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆ : ಅರಣ್ಯಾಧಿಕಾರಿಗಳಿಂದ ಪರಿಶೀಲನೆ

ಪೊನ್ನಂಪೇಟೆ ಕಾಫಿ : ತೋಟದಲ್ಲಿ ಹುಲಿ ಮೃತದೇಹ ಪತ್ತೆ : ಅರಣ್ಯಾಧಿಕಾರಿಗಳಿಂದ ಪರಿಶೀಲನೆ ಮಡಿಕೇರಿ : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದ ಕಾಫಿ ತೋಟವೊಂದರಲ್ಲಿ ಹುಲಿ ಮೃತ ದೇಹ ಪತ್ತೆಯಾಗಿದೆ. ಮೃತ ಹುಲಿಯು ವಯಸ್ಸಾಗಿದ್ದು ಸಾವನ್ನುಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಮತ್ತು ಅರಣ್ಯ ಆಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸದ್ಭಾವನಾ ದಿನದ ಪ್ರತಿಜ್ಞೆ

ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸದ್ಭಾವನಾ ದಿನದ ಪ್ರತಿಜ್ಞೆ ಮಡಿಕೇರಿ : ದೇಶದ ನಾಗರಿಕರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಆಚರಿಸಲಾಗುವ ಸದ್ಭಾವನಾ ದಿನವನ್ನು ಇಂದು ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಆಚರಿಸಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕೃಷ್ಣಪ್ರಸಾದ್ ನೇಮಕ

ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕೃಷ್ಣಪ್ರಸಾದ್ ನೇಮಕ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಯಾಗಿ ಕೃಷ್ಣಪ್ರಸಾದ್ ರವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ ಸತೀಶರವರ ವರ್ಗಾವಣೆಯಿಂದ ಒಂದು ತಿಂಗಳು ತೆರವಾಗಿದ್ದ ಸ್ಥಾನಕ್ಕೆ ಕೃಷ್ಣಪ್ರಸಾದ್ ರವರನ್ನ ನೇಮಿಸಲಾಗಿದೆ. ಈ ಹಿಂದೆ ಇವರು ವಿರಾಜಪೇಟೆ ಹಾಗೂ ಕುಶಾಲನರ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಯಾಗಿ ಸೇವೆಸಲ್ಲಿಸಿದ್ದಾರೆ
ಕೊಡಗಿನಲ್ಲಿ ಕಾನೂನು ಪದವಿ ಕಾಲೇಜು ಪ್ರಾರಂಭ

ಮಡಿಕೇರಿ : ಗೋಣಿಕೊಪ್ಪಲು ಕಾವೇರಿ ಎಜುಕೇಷನ್‌ಸೊಸೈಟಿ ಆಧೀನದಲ್ಲಿರುವ ವೀರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಕಾನೂನು ಪದವಿ ಕಾಲೇಜನ್ನು ಆರಂಭಿಸಲು ಅನುಮತಿ ದೊರೆತ್ತಿದ್ದು, ಆ.೨೮ರೊಳಗೆ ವಿದ್ಯಾರ್ಥಿಗಳು ನೋಂದಣಿ ಮಾಡಕೊಳ್ಳಬೇಕು ಎಂದು ಗೋಣಿಕೊಪ್ಪ ಕಾವೇರಿ ಎಜುಕೇಷನ್ ಸೊಸೈಟಿ ಅಧ್ಯಕ್ಷ ಸುಗುಣ ಮುತ್ತಣ್ಣ ತಿಳಿಸಿದ್ದಾರೆ. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಕಾನೂನು ಕಾಲೇಜು ಪ್ರಾರಂಭಿಸಬೇಕು ಮತ್ತು ಇಲ್ಲಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕಾನೂನು ಪದವಿ ಶಿಕ್ಷಣವನ್ನು ಕೊಡಿಸುವ ಪ್ರಯತ್ನದಲ್ಲಿ ಸಫಲರಾಗಿದ್ದೇವೆ. ಈ ನಿಟ್ಟಿನಲ್ಲಿ ೨೦೨೫-೨೬ನೇ ಶೈಕ್ಷಣಿಕ ವರ್ಷದಲ್ಲಿ ವೀರಾಜಪೇಟೆಯ ಕಾವೇರಿ […]