ಗೌರಿ-ಗಣೇಶ ಹಬ್ಬ ಮುಂಚಿತವಾಗಿ ಅನುಮತಿ ಪಡೆದು ಕಾರ್ಯಕ್ರಮ ಆಯೋಜಿಸಿ : ಪೌರಾಯುಕ್ತ ರಮೇಶ್

ಗೌರಿ-ಗಣೇಶ ಹಬ್ಬ ಮುಂಚಿತವಾಗಿ ಅನುಮತಿ ಪಡೆದು ಕಾರ್ಯಕ್ರಮ ಆಯೋಜಿಸಿ : ಪೌರಾಯುಕ್ತ ರಮೇಶ್ ಮಡಿಕೇರಿ : ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮುಂಚಿತವಾಗಿ ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮೊದಲು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮವನ್ನು ಆಯೋಜಿಸುವಂತೆ ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಕೋರಿದ್ದಾರೆ. ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು […]
ಇಲಾಖೆ ಕಾರ್ಯಚರಣೆ : ಅರಣ್ಯಕ್ಕೆ ಮರಳಿದ 23 ಆನೆಗಳು

ಇಲಾಖೆ ಕಾರ್ಯಚರಣೆ : ಅರಣ್ಯಕ್ಕೆ ಮರಳಿದ 23 ಆನೆಗಳು ಸಿದ್ದಾಪುರ : ತಿತಿಮತಿ ವಲಯದ ಚೆನ್ನಂಗಿ ಶಾಖಾ ವ್ಯಾಪ್ತಿಗೆ ಒಳಪಡುವ ಮಾರ್ಗೋಳ್ಳಿ ಮತ್ತು ಮೈಲಾಪುರ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಮತ್ತೆ ಅರಣ್ಯಕ್ಕೆ ಅಟ್ಟಲಾಗಿದೆ. ಮಂಗಳವಾರ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿಗಳು ಸುಮಾರು 4 ಮರಿ ಸೇರಿದಂತೆ 23 ಕಾಡಾನೆಗಳನ್ನು ಮಾಲ್ದಾರೆ ಮೀಸಲು ಅರಣ್ಯಕ್ಕೆ ಮರಳುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೊಡಗು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಯವರ ಸೂಚನೆ ಮೇರೆಗೆ ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ […]
ಈಶ ಗ್ರಾಮೋತ್ಸವ – ಆ.24ರಂದು ಕುಶಾಲನಗರದಲ್ಲಿ ರೂರಲ್ ಪ್ರೀಮಿಯರ್ ಲೀಗ್ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ

ಈಶ ಗ್ರಾಮೋತ್ಸವ – ಆ.24ರಂದು ಕುಶಾಲನಗರದಲ್ಲಿ ರೂರಲ್ ಪ್ರೀಮಿಯರ್ ಲೀಗ್ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ ಮಡಿಕೇರಿ : ಈಶ ಫೌಂಡೇಶನ್ ವತಿಯಿಂದ 17ನೇ ಆವೃತ್ತಿಯ ಈಶ ಗ್ರಾಮೋತ್ಸವ ಅಂಗವಾಗಿ ರೂರಲ್ ಪ್ರೀಮಿಯರ್ ಲೀಗ್ ಹಮ್ಮಿಕೊಂಡಿದೆ. ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಈಶ ಫೌಂಡೇಶನ್‌ನ ಸ್ವಯಂ ಸೇವಕ ಎಂ.ಎನ್.ಅಖಿಲ್, ಆ.24ರಂದು ಬೆಳಗ್ಗೆ 8 ಗಂಟೆಗೆ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಮೊದಲ ಹಂತದಲ್ಲಿ(ಕ್ಲಸ್ಟರ್ ವಿಭಾಗ) ಪುರುಷರಿಗೆ ವಾಲಿಬಾಲ್, ಮಹಿಳೆಯರಿಗೆ ಥ್ರೋಬಾಲ್ ಪಂದ್ಯಾಟ ಆಯೋಜಿಸಲಾಗಿದೆ. […]
ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹಾಕತೂರು ಪ್ರೌಢಶಾಲಾ ಶಿಕ್ಷಕರಿಗೆ ಸನ್ಮಾನ : ನಾವು ಉತ್ತಮ ನಾಗರಿಕರಾಗಬೇಕೆನ್ನುವ ಗುರಿ ಪ್ರತಿಯೊಬ್ಬರಿಗೆ ಇರಬೇಕು : ಕವನ್ ಭೀಷ್ಮ

ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹಾಕತೂರು ಪ್ರೌಢಶಾಲಾ ಶಿಕ್ಷಕರಿಗೆ ಸನ್ಮಾನ : ನಾವು ಉತ್ತಮ ನಾಗರಿಕರಾಗಬೇಕೆನ್ನುವ ಗುರಿ ಪ್ರತಿಯೊಬ್ಬರಿಗಿರಬೇಕು : ಕವನ್ ಭೀಷ್ಮ ಮಡಿಕೇರಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಎಪ್ಪತ್ತೊಂಭತ್ತನೇ ಸ್ವತಂತ್ರ ದಿನಾಚರಣೆಯ ಪ್ರಯುಕ್ತ ಹಾಕತ್ತೂರು ಪ್ರೌಢಶಾಲೆಯಲ್ಲಿ ಕಳೆದ ಸಾಲಿನ ವಾರ್ಷಿಕ ಪರೀಕ್ಷಾ ಫಲಿತಾಂಶ ಶೇ.ನೂರು ಬರಲು ಕಾರಣಕರ್ತರಾದ ಶಾಲಾ ಶಿಕ್ಷಕರಿಗೆ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ಥಳಿಯ ದಾನಿಗಳಾದ ಕವನ್ ಭೀಷ್ಮ ಮಾತನಾಡಿ, ನಾವು ಉತ್ತಮ ನಾಗರಿಕರಾಗಬೇಕೆನ್ನುವ ಗುರಿ […]
ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಕೊಲೆ ಗೈದಿದ್ದ ಪತಿ : ಆರು ವರ್ಷಗಳ ಬಳಿಕ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನೇ ಕೊಲೆ ಗೈದಿದ್ದ ಪತಿ : ಆರು ವರ್ಷಗಳ ಬಳಿಕ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ ಮಡಿಕೇರಿ : ಕ್ಷುಲ್ಲಕ ಕಾರಣಕ್ಕೆ ಪತಿ ಮತ್ತು ಪತ್ನಿಯರ ನಡುವೆ ಕಲಹ ಏರ್ಪಟ್ಟು ಬಡಿಗೆಯಿಂದ ಹತ್ಯೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಗೆ ವಿರಾಜಪೇಟೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಕಠೀಣ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪೊನ್ನಂಪೇಟೆ ತಾಲೂಕು ಮಾಯಮುಡಿ […]
ಮಡಿಕೇರಿ ಪೊಲೀಸ್ ವಸತಿ ಗೃಹಗಳಲ್ಲೇ ಕೈಚಳಕ ತೋರಿದ ಖದೀಮರು : ಪ್ರಕರಣ ಭೇದಿಸಿದ ಕೊಡಗು ಪೊಲೀಸ್ ಇಬ್ಬರು ಆರೋಪಿಗಳು ಖಾಕಿ ವಶಕ್ಕೆ – ಪಿಎಸ್ಐ ಮಂಜುನಾಥ್ ಮತ್ತು ತಂಡಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತ

ಮಡಿಕೇರಿ ಪೊಲೀಸ್ ವಸತಿ ಗೃಹಗಳಲ್ಲೇ ಕೈಚಳಕ ತೋರಿದ ಖದೀಮರು : ಪ್ರಕರಣ ಭೇದಿಸಿದ ಕೊಡಗು ಪೊಲೀಸ್ ಇಬ್ಬರು ಆರೋಪಿಗಳು ಖಾಕಿ ವಶಕ್ಕೆ – ಪಿಎಸ್ಐ ಮಂಜುನಾಥ್ ಮತ್ತು ತಂಡಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತ ಮಡಿಕೇರಿ : ಪೊಲೀಸರ ವಸತಿ ಗೃಹದಲ್ಲೇ ಕಳ್ಳತನ,ರಕ್ಷಣೆ ನೀಡುವ ಆರಕ್ಷಕರಿಗೆ ರಕ್ಷಣೆ ಇಲ್ಲವೇ?…..ಎಂದು ಇತ್ಯಾದಿಯಾಗಿ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದ, ಜಿಲ್ಲಾಕೇಂದ್ರ ಮಡಿಕೇರಿಯಲ್ಲಿರುವ ಪೊಲೀಸ್ ಗೃಹಗಳಲ್ಲಿ ಜೂನ್ 17ರಂದು ನಡೆದಿದ್ದ, ಪೊಲೀಸ್ ವಸತಿ ಗೃಹಗಳಲ್ಲಿನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು […]
ವಿವಿಧ ಹುದ್ದೆಗಳಿಗೆ ಟೆಂಡರ್ ಆಹ್ವಾನ

ವಿವಿಧ ಹುದ್ದೆಗಳಿಗೆ ಟೆಂಡರ್ ಆಹ್ವಾನ ಮಡಿಕೇರಿ : ಕೊಡಗು ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಬೆರಳಚ್ಚುಗಾರರು(ಕಂಪ್ಯೂಟರ್ ಆಪರೇಟರ್), ವಾಹನ ಚಾಲಕರು ಮತ್ತು ಡಿ ಗ್ರೂಪ್ ಹುದ್ದೆಗೆ ಸೇವೆಯನ್ನು ಬಾಹ್ಯ ಮೂಲಕ ಪಡೆಯಲು ಇ-ಪ್ರೊಕ್ಯೂರ್ ಮೆಂಟ್ ಮುಖಾಂತರ ಟೆಂಡರ್ ಆಹ್ವಾನಿಸಲಾಗಿದೆ. ಸಾರ್ವಜನಿಕ ಹಾಗೂ ಆಡಳಿತ ಹಿತದೃಷ್ಟಿಯಿಂದ ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ವಾಹನ ಚಾಲಕರು, ಗ್ರೂಪ್ ‘ಡಿ’ ಮತ್ತು ಸ್ವೀಪರ್ ಹುದ್ದೆಗಳ ಪೈಕಿ ಕೆಲವು ಹುದ್ದೆಗಳಿಗೆ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ಒಂದು […]
ಆ.20 ರಂದು ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ

ಆ.20 ರಂದು ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಮಡಿಕೇರಿ : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ಹಾಗೂ ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಕಾರ್ಯಕ್ರಮವು ಆಗಸ್ಟ್, 20 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ […]
ಆ.20 ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ

ಆ.20 ರಂದು ತಲಕಾವೇರಿ ದೇವಾಲಯದಲ್ಲಿ ಸ್ವಚ್ಛತಾ ಕಾರ್ಯ ಮಡಿಕೇರಿ : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯದಲ್ಲಿ ಆಗಸ್ಟ್, 20 ರಂದು ಮಧ್ಯಾಹ್ನ 2 ಗಂಟೆಯ ನಂತರ ಸ್ವಚ್ಛತಾ ಕಾರ್ಯದ ಪ್ರಯುಕ್ತ ಶ್ರೀ ತಲಕಾವೇರಿ ದೇವಾಲಯಕ್ಕೆ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಎನ್.ಜಿ.ಚಂದ್ರಶೇಖರ್ ಅವರು ತಿಳಿಸಿದ್ದಾರೆ.
ಹೊದ್ದೂರು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ

ಹೊದ್ದೂರು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ಮಡಿಕೇರಿ : ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂರ್ನಾಡು ಶಾಖೆ ಇವರ ಸಹಯೋಗದೊಂದಿಗೆ ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮದಲ್ಲಿ, ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಕೇಂದ್ರ ಸರಕಾರದ ಆದೇಶದಂತೆ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ನಡೆಸುತ್ತಿರುವ ಅವಾರ್ಡ್ ಸಂಸ್ಥೆಯ ಜಿಲ್ಲಾ ಸಂಯೋಜಕರಾಗಿರುವ ಕೆ.ಎ.ಆಸೀಫ್ ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ […]