Breaking News :

ಪರಮಾಣು ಬೆದರಿಕೆಯನ್ನು ಭಾರತ ಎಂದಿಗೂ ಸಹಿಸಲ್ಲ : ಪಾಕಿಸ್ತಾನಕ್ಕೆ ಪ್ರಧಾನಿ ಎಚ್ಚರಿಕೆ – 12ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮೋದಿ ಸಂದೇಶ

    ಪರಮಾಣು ಬೆದರಿಕೆಯನ್ನು ಭಾರತ ಎಂದಿಗೂ ಸಹಿಸಲ್ಲ : ಪಾಕಿಸ್ತಾನಕ್ಕೆ ಪ್ರಧಾನಿ ಎಚ್ಚರಿಕೆ – 12ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮೋದಿ ಸಂದೇಶ ನವದೆಹಲಿ : 79ನೇಯ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಲ್ಲಿ ಸತತ 12ನೇ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿದರು. ಬಳಿಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ನಡೆಸಿದ ಆಪರೇಷನ್ ಸಿಂಧೂರ್‌ನಲ್ಲಿ ಸಾಹಸ ತೋರಿಸಿದ ದೇಶದ ಧೈರ್ಯಶಾಲಿ ಸೈನಿಕರಿಗೆ ಅವರು ನಮಸ್ಕರಿಸಿದರು. […]

ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ

ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಮಡಿಕೇರಿ : ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಮಳೆಯ ನಡುವೆ ಶುಕ್ರವಾರ ಅರ್ಥಪೂರ್ಣ ನಡೆಯಿತು. ‌ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದರು, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ […]

ಗ್ರಂಥಪಾಲಕರ ದಿನಾಚರಣೆ – ಅಕ್ಷರ ಜ್ಞಾನ ಸಂಪಾದನೆ ಮೂಲಕ ಬದಲಾವಣೆ; ಸುಬ್ರಾಯ ಸಂಪಾಜೆ

  ಮಡಿಕೇರಿ : ಭಾರತದ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ.ಎಸ್.ಆರ್.ರಂಗನಾಥನ್ ಅವರ ಜನ್ಮ ದಿನವನ್ನು ಗ್ರಂಥಪಾಲಕರ ದಿನವನ್ನಾಗಿ ಇತ್ತೀಚೆಗೆ ಆಚರಿಸಲಾಯಿತು. ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ, ಮಡಿಕೇರಿ ಕಚೇರಿ ಹಾಗೂ ಇದರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ , ಕುಶಾಲನಗರ ಶಾಖಾ ಗ್ರಂಥಾಲಯಗಳು, ಮೇಲ್ಜರ್ಜೆಗೇರಿದ ಮುಳ್ಳುಸೋಗೆ ಗ್ರಂಥಾಲಯ, ಸಮುದಾಯ ಮಕ್ಕಳ ಕೇಂದ್ರ ಗ್ರಂಥಾಲಯ, ಅಲೆಮಾರಿ ಸಮುದಾಯ ಗ್ರಂಥಾಲಯ, ಜಿಲ್ಲಾ ಕಾರಾಗೃಹ ವಾಚನಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಪುಸ್ತಕ ಪ್ರದರ್ಶನ ಏರ್ಪಡಿಸುವ ಮೂಲಕ ಆಚರಿಸಲಾಯಿತು. ಕೊಡಗು ಜಿಲ್ಲಾ ಕೇಂದ್ರ […]

ಜೋಡುಪಾಲ : ಹೆದ್ದಾರಿಗೆ ಜರಿದ ಮಣ್ಣು  ಜಿಲ್ಲಾಧಿಕಾರಿಗಳಿಂದ ಪರಿಶೀಲನೆ 

ಜೋಡುಪಾಲ : ಹೆದ್ದಾರಿಗೆ ಜರಿದ ಮಣ್ಣು  ಜಿಲ್ಲಾಧಿಕಾರಿಗಳಿಂದ ಪರಿಶೀಲನೆ ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ ಜೋಡುಪಾಲ ಬಳಿ ರಸ್ತೆ ಬದಿ ಮಣ್ಣು ಜರಿಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿಗಳಾದ ಎಂ.ಎಸ್.ರಾಹುಲ್, ರೋಜಾ, ಲಾಯಲ್ ಮೀರಾಂಡ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವ್ ಇತರರು ಇದ್ದರು.

ಬ್ಯಾಂಕ್ ಆಫ್ ಬರೋಡದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮೇಟುಂಪುರತ್ ಸೋಜನ್ ರಿಗೆ ಗೌರವ ಸನ್ಮಾನ 

  ಬ್ಯಾಂಕ್ ಆಫ್ ಬರೋಡದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮೇಟುಂಪುರತ್ ಸೋಜನ್ ರಿಗೆ ಗೌರವ ಸನ್ಮಾನ ಸಿದ್ದಾಪುರ : ಬ್ಯಾಂಕ್ ಆಫ್ ಬರೋಡ ಸಂಸ್ಥೆಯಲ್ಲಿ ಸುದೀರ್ಘ 37 ವರ್ಷ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿ ಇದೀಗ ವಯೋ ನಿವೃತ್ತಿ ಹೊಂದಿದ ಬ್ಯಾಂಕ್ ಆಫ್ ಬರೋಡ ಸಿಬ್ಬಂದಿ ಮೇಟುಂಪುರತ್ ಸೋಜನ್ ರವರನ್ನು ಸಿದ್ದಾಪುರ ಶಾಖೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ‌ಸಂಧರ್ಭದಲ್ಲಿ ಬ್ಯಾಂಕ್ ಮ್ಯಾನೇಜರ್ ಮೋಹನ್ ಸೇರಿದಂತೆ ‌ಸಿಬ್ಬಂದಿಗಳು ಹಾಜರಿದ್ದರು.

ತಾಲೂಕು ಕೇಂದ್ರಗಳಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭವಾಗಲಿ: ವಿಜು ಸುಬ್ರಮಣಿ

ತಾಲೂಕು ಕೇಂದ್ರಗಳಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭವಾಗಲಿ: ವಿಜು ಸುಬ್ರಮಣಿ ಮಡಿಕೇರಿ: ಪರಿಸರ ಸಂರಕ್ಷಣೆಯೊಂದಿಗೆ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ತಾಲೂಕು ಕೇಂದ್ರಗಳಲ್ಲಿ ಶಾಶ್ವತ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭಿಸಬೇಕೆಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಜಿಲ್ಲಾಡಾಳಿತವನ್ನ ಒತ್ತಾಯಿಸಿದ್ದಾರೆ. ಪಾಲಿಬೆಟ್ಟ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಸ್ವಚ್ಛತೆ ಹಾಗೂ ಪರಿಸರ ಕಾಳಜಿಯ ಸ್ವಚ್ಛ ಗ್ರಾಮ. ಸುಂದರ ಪರಿಸರ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿ […]

ಅಲೆಮಾರಿ ಸಮುದಾಯದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಅಲೆಮಾರಿ ಸಮುದಾಯದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ ಮಡಿಕೇರಿ : 2025-26ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿ ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಅಥವಾ ಸಮಾಜ ಕಲ್ಯಾಣ ಇಲಾಖಾ ವೆಬ್‍ಸೈಟ್ (https://swd.karnataka.gov.in/) ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ […]

ಸಿದ್ದಾಪುರ ಉದ್ಯಮಿ ಗಣೇಶ್ ಬಾಲಪ್ಪ ನಿಧನ 

ಸಿದ್ದಾಪುರ ಉದ್ಯಮಿ ಗಣೇಶ ಬಾಲಪ್ಪ ನಿಧನ ಸಿದ್ದಾಪುರ : ಸಿದ್ದಾಪುರ ಪಟ್ಟಣದ ಪ್ರಮುಖ ಉದ್ಯಮಿಗಳಲೊಬ್ಬರಾದ, ಮಂಗಳೂರು ಫುಟ್ ವೇರ್ ಮಾಲಿಕ ಗಣೇಶ್ ಬಾಲಪ್ಪ ಅವರು ಇಂದು ಸಂಜೆ 6.45ರ ಸುಮಾರಿಗೆ ಮೃತಪಟ್ಟಿದ್ದಾರೆ. ಸಿದ್ದಾಪುರದ ಹಲವು ಗಣ್ಯರು, ವರ್ತಕರು ಬಾಲಪ್ಪನವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.  

ನಾಳೆ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ

ನಾಳೆ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಮಡಿಕೇರಿ : ಕೊಡಗು ಜಿಲ್ಲಾಡಳಿತ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯು ಆಗಸ್ಟ್, 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, […]

ಆ.18 ರಂದು ಉದ್ಯೋಗ ಮೇಳ

ಆ.18 ರಂದು ಉದ್ಯೋಗ ಮೇಳ ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್, 18 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ವುಡ್‍ಸ್ಟಾಕ್ ರೆಸಾರ್ಟ್ ಮಡಿಕೇರಿ, ತಾಜ್ ರೆಸಾಟ್ರ್ಸ್, ಮಡಿಕೇರಿ, ಎಚ್‍ಡಿಎಫ್‍ಸಿ ಲೈಪ್ ಇನ್ಸೂರೆನ್ಸ್, ಮಡಿಕೇರಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಪ್ಯಾಲೇಶ್ ಟೊಯೋಟ ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. […]