ಕೊಡಗು ಪತ್ರಿಕಾಭವನ ಟ್ರಸ್ಟ್ ನಿಂದ 47 ವಿದ್ಯಾಥಿ೯ಗಳಿಗೆ ವಿದ್ಯಾನಿಧಿ ನೀಡಿಕೆ : ಅಂಕಗಳಿಕೆಗಿಂತ ಮಾನವೀಯ ಮೌಲ್ಯಗಳ ಕಲಿಕೆ ಮುಖ್ಯವಾಗಬೇಕು – ಎಂ.ಎ.ನಿರಂಜನ್

ಕೊಡಗು ಪತ್ರಿಕಾಭವನ ಟ್ರಸ್ಟ್ ನಿಂದ 47 ವಿದ್ಯಾಥಿ೯ಗಳಿಗೆ ವಿದ್ಯಾನಿಧಿ ನೀಡಿಕೆ : ಅಂಕಗಳಿಕೆಗಿಂತ ಮಾನವೀಯ ಮೌಲ್ಯಗಳ ಕಲಿಕೆ ಮುಖ್ಯವಾಗಬೇಕು – ಎಂ.ಎ.ನಿರಂಜನ್ ಮಡಿಕೇರಿ : ಪಠ್ಯದಲ್ಲಿನ ಅಂಕಗಳಿಕೆಯೇ ವಿದ್ಯಾಥಿ೯ಗಳ ಸಾಧನೆಗೆ ಪ್ರಮುಖ ಮಾನದಂಡವಾಗದೇ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ರೂಡಿಸಿಕೊಳ್ಳುವುದೂ ವಿದ್ಯಾಥಿ೯ಗಳ ಜೀವನದಲ್ಲಿ ಪ್ರಮುಖವಾಗಿರಲಿ ಎಂದು ಹಿರಿಯ ವಕೀಲ, ಮಡಿಕೇರಿ ವಕೀಲರ ಸಂಘದ ನಿಕಟಪೂವ೯ ಅಧ್ಯಕ್ಷ ಎಂ.ಎ.ನಿರಂಜನ್ ಕರೆ ನೀಡಿದ್ದಾರೆ. ನಗರದ ಕೊಡಗು ಪತ್ರಿಕಾಭವನ ಟ್ರಸ್ಟ್ ವತಿಯಿಂದ ಜಿಲ್ಲೆಯ ಪತ್ರಕತ೯ರ 47 ವಿದ್ಯಾಥಿ೯ಗಳಿಗೆ 2.19ಲಕ್ಷ ರು. ವೆಚ್ಚದಲ್ಲಿ ವಿದ್ಯಾನಿಧಿ […]
ಕೊಡಗು ಜಿಲ್ಲಾ ಎನ್ ಎಸ್ ಎಸ್ ಅಧಿಕಾರಯಾಗಿ ನೇಮಕ

ಕೊಡಗು ಜಿಲ್ಲಾ ಎನ್ ಎಸ್ ಎಸ್ ಅಧಿಕಾರಯಾಗಿ ನೇಮಕ ಮಡಿಕೇರಿ : ಕೊಡಗು ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಜಿಲ್ಲಾ ನೋಡಲ್ ಅಧಿಕಾರಿಯಾಗಿ ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ ದಯಾನಂದ.ಕೆ.ಸಿ ಯವರನ್ನು ನೇಮಿಸಲಾಗಿದೆ.
ಕರಿಕೆ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ

ಕರಿಕೆ ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭ ಮಡಿಕೇರಿ : ಕರಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಸಾಲಿನಿಂದ ಆಂಗ್ಲ ಮಾಧ್ಯಮ ಒಂದನೇ ತರಗತಿ ಆರಂಭಕ್ಕೆ ಚಾಲನೆ ನೀಡಲಾಯಿತು. ಇತ್ತೀಚೆಗೆ ನಡೆದ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲಚಂದ್ರ ನಾಯರ್ ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಮತ್ತು ಗ್ರಾಮಾಂತರ ಪ್ರದೇಶದ ಮಕ್ಕಳಲ್ಲಿ ಆಂಗ್ಲಭಾಷಾ ಜ್ಞಾನ ಬೆಳೆಸುವ […]
ಕಾಡಾನೆ ಹಾವಳಿಯಿಂದ ಕಂಗೆಟ್ಟ ಕರಿಕೆ ಗ್ರಾಮಸ್ಥರು : ಶಾಶ್ವತ ಪರಿಹಾರ ಕಲ್ಪಿಸಲು ಒತ್ತಾಯ

ಕಾಡಾನೆ ಹಾವಳಿಯಿಂದ ಕಂಗೆಟ್ಟ ಕರಿಕೆ ಗ್ರಾಮಸ್ಥರು : ಶಾಶ್ವತ ಪರಿಹಾರ ಕಲ್ಪಿಸಲು ಒತ್ತಾಯ ಮಡಿಕೇರಿ : ಗಡಿಗ್ರಾಮ ಕರಿಕೆ ವ್ಯಾಪ್ತಿಯಲ್ಲಿ ಬೀಡುಬಿಟ್ಟಿರುವ ಕಾಡಾನೆ ಹಿಂಡು ರೈತರು ಬೆಳೆದಿದ್ದ ಕೃಷಿ ಫಸಲನ್ನು ನಾಶಪಡಿಸಿವೆ. ಇದರಿಂದ ಬೇಸತ್ತಿರುವ ಇಲ್ಲಿನ ಕೃಷಿಕರು ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಸಿದ್ದಾರೆ. ಗ್ರಾಮದ ಪಚ್ಚೆ ಪಿಲಾವು ಎಚ್.ಎಂ.ನಂಜುಂಡ ರವರ ತೋಟ ಸೇರಿದಂತೆ ಸುತ್ತಮುತ್ತಲ ರೈತರ ಕೃಷಿ ಫಸಲನ್ನು ನಾಶ ಇದರಿಂದಮಾಡಿದೆ. ಸಮೀಪದ ಹೊಳೆಯನ್ನು ದಾಟಿ ಬಂದಿರುವ ಕಾಡಾನೆಗಳು ಅಡಿಕೆ ಮರ ಮತ್ತು ಬಾಳೆ […]
ಶಾಲಾ ಆವರಣ ಸ್ವಚ್ಛಗೊಳಿಸಿ ರಸ್ತೆ ಗುಂಡಿ ಮುಚ್ಚಿದ ನೇತಾಜಿ ಯುವಕ ಸಂಘ : ಹಲವರಿಂದ ಪ್ರಶಂಸೆ

ಶಾಲಾ ಆವರಣ ಸ್ವಚ್ಛಗೊಳಿಸಿ ರಸ್ತೆ ಗುಂಡಿ ಮುಚ್ಚಿದ ನೇತಾಜಿ ಯುವಕ ಸಂಘ : ಹಲವರಿಂದ ಪ್ರಶಂಸೆ ಸಿದ್ದಾಪುರ : ನೇತಾಜಿ ಯುವಕ ಸಂಘ ವತಿಯಿಂದ ಗುಹ್ಯ ಶಾಲೆಯ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಶ್ರಮದಾನದ ಮೂಲಕ ಶಾಲೆಯ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿದ ಸಂಘದ ಸದಸ್ಯರು ಇದೇ ಸಂದರ್ಭ ಸಮೀಪದ ರಸ್ತೆಯಲ್ಲಿದ್ದ ಗುಂಡಿಗಳನ್ನು ಮಣ್ಣು ಹಾಕಿ ಮುಚ್ಚಿದ್ದಾರೆ. ಸಂಘದ ಕಾರ್ಯಕ್ಕೆ ಹಲವರು ಶ್ಲಾಘನೆ ವ್ಯಕ್ತಪಡಿಸಿದ್ದು, ಸಾಮಾಜಿಕ ಕಾರ್ಯ ಹೀಗೆ ಮುಂದುವರೆಯಲಿ ಎಂದು ಹಾರೈಸಿದ್ದಾರೆ.
ಸಮಾಜದ ಅಭಿವೃದ್ಧಿಗೆ ಬಿಲ್ಲವ ಸಮಾಜದವರ ಕೊಡುಗೆ ವಿಶಿಷ್ಟ : ಎ. ಎಸ್.ಪೊನ್ನಣ್ಣ

ಸಮಾಜದ ಅಭಿವೃದ್ಧಿಗೆ ಬಿಲ್ಲವ ಸಮಾಜದವರ ಕೊಡುಗೆ ವಿಶಿಷ್ಟ : ಎ. ಎಸ್.ಪೊನ್ನಣ್ಣ ನಾಪೋಕ್ಲು : ಬಿಲ್ಲವ ಸಮಾಜದವರು ಅವರದೇ ಆದ ವಿಶಿಷ್ಟ ರೀತಿಯಲ್ಲಿ ಸಮಾಜದ ಅಭಿವೃದ್ಧಿಗೆ ಕೊಡುಗೆಯನ್ನು ನೀಡುತ್ತಾ ಬಂದಿದ್ದಾರೆ ಎಂದು ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ತಿಳಿಸಿದ್ದಾರೆ. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ನಾಪೋಕ್ಲು ಕೊಡವ ಸಮಾಜದಲ್ಲಿ ಬಿಲ್ಲವ ಸಮಾಜದ ವಾರ್ಷಿಕೋತ್ಸವ ಅಂಗವಾಗಿ ಆಯೋಜನೆಗೊಂಡಿದ್ದ ಬೃಹತ್ ರಕ್ತದಾನ ಶಿಬಿರ, ಸಮಾಜದ ಮಹಾಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೊಳಗೊಂಡ ಆಟಿಡೊಂಜಿ […]
ಬೆಂಗಳೂರಿನಲ್ಲಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ

ಬೆಂಗಳೂರಿನಲ್ಲಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಬೆಂಗಳೂರಿನ ಕೆಎಸ್ಆರ್ ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿದರು. ಬೆಂಗಳೂರಿನಿಂದ ಬೆಳಗಾವಿ, ಅಮೃತಸರದಿಂದ ಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗ್ಪುರ (ಅಜ್ನಿ) ದಿಂದ ಪುಣೆ ಹೋಗುವ ಮೂರು ವಂದೇ ಭಾರತ್ಗೆ ಹಸಿರು ನಿಶಾನೆ ತೋರಿದರು. ಈ ಹೈಸ್ಪೀಡ್ ರೈಲುಗಳು ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸಲಿದೆ. ಬಹುನಿರೀಕ್ಷಿತ ಬೆಂಗಳೂರು-ಬೆಳಗಾವಿ ವಂದೇ ಭಾರತ್ […]
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ ಕೋರಿದ ಸಿಎಂ ಬೆಂಗಳೂರು : ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಮತ್ತು ವಂದೇ ಭಾರತ್ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ, ಗಂಧದ ಹಾರ ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಚೆಂಬೆಬೆಳ್ಳೂರಿನಲ್ಲಿ ಜನ ಸುರಕ್ಷಾ ಅಭಿಯಾನ

ಚೆಂಬೆಬೆಳ್ಳೂರಿನಲ್ಲಿ ಜನ ಸುರಕ್ಷಾ ಅಭಿಯಾನ ವಿರಾಜಪೇಟೆ : ಸಮೀಪದ ಚೆಂಬೆಬೆಳ್ಳೂರು ಗ್ರಾಮದಲ್ಲಿ ಇತ್ತೀಚಿಗೆ ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಹಾಗೂ ಯೂನಿಯನ್ ಬ್ಯಾಂಕ್ ನ ವಿರಾಜಪೇಟೆ ಶಾಖೆ ಹಾಗೂ ಕರ್ನಾಟಕ ಗ್ರಾಮೀಣ ಬ್ಯಾಂಕ್ ನ ಸಂಯುಕ್ತ ಆಶ್ರಯದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೇಂದ್ರ ಸರ್ಕಾರದ ಆದೇಶದಂತೆ ಚೆಂಬೆಬೆಳ್ಳೂರು ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಿತು. ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ವಿರಾಜಪೇಟೆ ಶಾಖೆಯ ವ್ಯಾವಸ್ಥಾಪಕ ಗುರುರಾಜ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜನಸಾಮಾನ್ಯರು […]
ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮಾಳೇಟಿರ ತೃಪ್ತಿ ಬೋಪಣ್ಣ ನೇಮಕ

ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮಾಳೇಟಿರ ತೃಪ್ತಿ ಬೋಪಣ್ಣ ನೇಮಕ ವಿರಾಜಪೇಟೆ: ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಮಾಳೇಟಿರ ತೃಪ್ತಿ ಬೋಪಣ್ಣ ರವರು ನೇಮಕಗೊಂಡಿರುತ್ತಾರೆ. ಇವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಒಂದು ವರ್ಷದ ಅವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಕೊಡಗು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯವು ಆದೇಶಿಸಿರುತ್ತದೆ. ತೃಪ್ತಿ ಬೋಪಣ್ಣ ರವರು 22 ವರ್ಷಗಳ ಬೋಧನಾ ಅನುಭವವನ್ನು ಹೊಂದಿದ್ದು , ಕಳೆದ […]