Breaking News :

ಕೊಡಗು ಮೂಲದ ಪೊಲೀಸ್  ಅಧಿಕಾರಿ ಕಿಶೋರ್ ರವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ.

  ಜನವಾಹಿನಿ News ಬೆಂಗಳೂರು : ಬೆಂಗಳೂರು ನಗರದ ಸಿದ್ಧಾಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮೂಲತಃ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೋಯಿಕೇರಿ ಗ್ರಾಮದ ಬಿ.ಟಿ. ಕಿಶೋರ್ ಅವರು 2025 ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಬಿ.ಟಿ ಕಿಶೋರ್ ರವರು ಈ ಹಿಂದೆ ಬೆಂಗಳೂರು ನಗರದ ಮಡಿವಾಳ ಪೊಲೀಸ್ ಠಾಣೆ, ಬನಶಂಕರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರಲ್ಲದೆ ಪ್ರಸ್ತುತ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. […]

ಏ.೧ ರಂದು ನಾಪೋಕ್ಲುವಿನಲ್ಲಿ ಬೃಹತ್ ಹಿಂದೂ ಜನಜಾಗೃತಿ ಸಮಾವೇಶ

  ಜನವಾಹಿನಿ News ಮಡಿಕೇರಿ : ಇತ್ತೀಚೆಗೆ ನಾಪೋಕ್ಲು ಪಟ್ಟಣದಲ್ಲಿ ಹಿಂದೂ ಯುವಕನ ಮೇಲಿನ ಹಲ್ಲೆಯನ್ನು ತೀವ್ರವಾಗಿ ಖಂಡಿಸಿ ಬಹುಸಂಖ್ಯಾತ ಹಿಂದೂ ಸಮಾಜವನ್ನು ಸಂಘಟಿಸಿ ಜಾಗೃತಗೊಳಿಸುವ ಉದ್ದೇಶದಿಂದ ಏ.೧ ರಂದು ನಾಪೋಕ್ಲು ಪಟ್ಟಣದಲ್ಲಿ ಹಿಂದೂ ಸುರಕ್ಷಾ ಸಮಿತಿ ವತಿಯಿಂದ ಬೃಹತ್ ಹಿಂದೂ ಜನಜಾಗೃತಿ ಜಾಥಾ ಮತ್ತು ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಮಿತಿ ಸಂಯೋಜಕ ಲವ ನಾಣಯ್ಯ ತಿಳಿಸಿದರು. ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘ ಶತಾಬ್ಧಿ ಹಿನ್ನೆಲೆಯಲ್ಲಿ ದೇಶಾದ್ಯಂತ ಇತ್ತೀಚೆಗೆ ಹಿಂದೂ ಸಮಾಜೋತ್ಸವ ಮತ್ತು ಹಿಂದೂ ಸಂಗಮ ಕಾರ್ಯಕ್ರಮಗಳನ್ನು […]

ಪಾಲಿಬೆಟ್ಟ ಸಮೀಪದ ಎಸ್ಟೇಟ್‌ನಲ್ಲಿ ಹುಲಿ ಪ್ರತ್ಯಕ್ಷ : ಕಾರ್ಮಿಕರಲ್ಲಿ ಆತಂಕ

  ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ಪಾಲಿಬೆಟ್ಟ ಸಮೀಪದ ಕೈಮಕಾಡು ಎಸ್ಟೇಟ್‌ನಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಕಾರ್ಮಿಕರಲ್ಲಿ ತೀವ್ರ ಭೀತಿ ಮೂಡಿಸಿದೆ. ಶನಿವಾರ ಬೆಳಿಗ್ಗೆ ಸೌದೆಗಾಗಿ ಹೋದ ಕಾರ್ಮಿಕರು ಹುಲಿಯ ಘರ್ಜನೆ ಕೇಳಿ ಪರಾರಿಯಾಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯಷ್ಟೇ ಮಡಿಕೇರಿ ಸಮೀಪದ ಇಬ್ಬನಿವಳವಾಡಿಯಲ್ಲಿ ಹುಲಿ ಕಾಣಿಸಿಕೊಂಡಿದ್ದ, ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಇದೀಗ ಪಾಲಿಬೆಟ್ಟ ವ್ಯಾಪ್ತಿಯಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ತೋಟದ ಕೆಲಸಕ್ಕೆ ಹೋಗಲು ಕಾರ್ಮಿಕರು ಆತಂಕ ವ್ಯಕ್ತಪಡಿಸಿದ್ದು, ಅಧಿಕಾರಿಗಳು ಕೂಡಲೇ ಕ್ರಮ […]

ಮೀನುಗಾರಿಕೆ ಇಲಾಖೆಯ ಮಿಲನ ಭರತ್ ಗೆ ಬೆಳ್ಳಿ ಪದಕ

  ಜನವಾಹಿನಿ News ಮಡಿಕೇರಿ : ನವ ದೆಹಲಿಯಲ್ಲಿ ನಡೆದ ಅಖಿಲ ಭಾರತ ನಾಗರೀಕ ಸೇವೆಗಳ ನೌಕರರ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಶಾಸ್ತ್ರೀಯ ನೃತ್ಯ ವಿಭಾಗದಲ್ಲಿ ಸೋಮವಾರ. ಪೇಟೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಮಿಲನ ಕೆ ಭರತ್ ಬೆಳ್ಳಿ ಪದಕ ಪಡೆದಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಇವರಿಗೆ ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ನಿರ್ದೇಶಕರಾದ ನವಪ್ರೀತ್ ಕೌರ್ ಬಹುಮಾನ ವಿತರಿಸಿರು. ವಿರಾಜಪೇಟೆಯ ಗುರು ವಿದ್ವಾನ್ ರಾಜೇಶ್ ಆಚಾರ್ಯರವರ ಮಾರ್ಗದರ್ಶನದಲ್ಲಿ ಮಿಲನರವರು ನೃತ್ಯ ಪ್ರದರ್ಶನ […]

ಕೊಡಗಿನ ವಿವಿಧೆಡೆ ಗುಡುಗು-ಗಾಳಿ ಸಹಿತ ಭಾರಿ ಮಳೆ : ಧರೆಗುರುಳಿದ ಮರಗಳು

    ಜನವಾಹಿನಿ News ಮಡಿಕೇರಿ : ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು ಗಾಳಿ ಸಹಿತ ಭಾರಿ ಮಳೆಯಾಗಿದೆ. ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಚೆಟ್ಟಳ್ಳಿ, ಮೂರ್ನಾಡು, ಭಾಗಮಂಡಲ ಮತ್ತು ದಕ್ಷಿಣ ಕೊಡಗಿನ ಇರ್ಪು, ಶ್ರೀಮಂಗಲ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕುಶಾಲನಗರ ಸೇರಿದಂತೆ ಹಲವೆಡೆ ಆಲಿಕಲ್ಲು ಮಳೆಯೂ ದಾಖಲಾಗಿದೆ. ಮಾರ್ಚ್ 28 ರಿಂದ ಮುಂದಿನ 4-5 ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಲ್ಲಿ […]

ಕತ್ತಲೆಕಾಡುವಿನಲ್ಲಿ ಮನಸೂರೆಗೊಂಡ ಶ್ರೀರಾಮನವಮಿ – ರಾಮ, ಸೀತೆಯಾಗಿ ಕಂಗೊಳಿಸಿದ ಪುಟಾಣಿಗಳು

  ಜನವಾಹಿನಿ News ಮಡಿಕೇರಿ : ಶ್ರೀ ವಿನಾಯಕ ಸೇವಾ ಟ್ರಸ್ಟ್‌ ಕತ್ತಲೆಕಾಡು-ಜೇನುಕೊಲ್ಲಿ ವತಿಯಿಂದ ಶ್ರೀರಾಮನವಮಿ, ದುರ್ಗಾಪೂಜೆ ಹಾಗೂ ಟ್ರಸ್ಟ್‌ನ ವಾರ್ಷಿಕ ಮಹಾಸಭೆ ಸಂಭ್ರಮದಿಂದ ಜರುಗಿತು. ಬ್ರಹ್ಮಶ್ರೀ ವೇದಮೂರ್ತಿ ಗಿರೀಶ್‌ ತಂತ್ರಿಯವರ ನೇತೃತ್ವದಲ್ಲಿ ಗುರುವಾರ ಪೂಜಾ ಕಾರ್ಯಗಳು ನೆರವೇರಿದವು. ಟ್ರಸ್ಟ್‌ನ ನೂತನ ಜಾಗದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಸಭಾಭವನಕ್ಕೆ ದೇವರ ಚಿತ್ರಪಟವನ್ನು ಮೆರವಣಿಗೆಯಲ್ಲಿ ತಂದು ಇರಿಸಲಾಯಿತು. ನೂತನ ಭಜನಾ ಮಂದಿರ ನಿರ್ಮಾಣ ಸಂಬಂಧ ಟ್ರಸ್ಟ್‌ ವತಿಯಿಂದ ಸಾಮೂಹಿಕ ದುರ್ಗಾ ಹೋಮ ಏರ್ಪಡಿಸಲಾಗಿತ್ತು. ಬಳಿಕ ಶ್ರೀರಾಮಚಂದ್ರನ ಚಿತ್ರಪಟಕ್ಕೆ ಆರತಿ ಬೆಳಗಿ ಪ್ರಾರ್ಥಿಸಲಾಯಿತು. […]

ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಭೇಟಿ ; ಪರಿಶೀಲನೆ 

  ಜನವಾಹಿನಿ News ಮಡಿಕೇರಿ : ಪ್ರವಾಸಿಗರ ಕೇಂದ್ರ ಬಿಂದು ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಶುಕ್ರವಾರ ಭೇಟಿ ನೀಡಿ ವೀಕ್ಷಿಸಿದರು. ಹಾಗೆಯೇ ಗ್ರೇಟರ್ ರಾಜಾಸೀಟು, ಪುಟಾಣಿ ರೈಲು ಮಾರ್ಗ ಮತ್ತು ಕೂರ್ಗ್ ವಿಲೇಜ್‍ಗೆ ತೆರಳಿ ಅಭಿವೃದ್ಧಿ ಸಂಬಂಧ ಮಾಹಿತಿ ಪಡೆದರು. ರಾಜಸೀಟು ಉದ್ಯಾನವನ ಬಳಿಯ ಟಿಕೇಟ್ ಕೌಂಟರ್, ಮಾಹಿತಿ ಕೇಂದ್ರ ಹಾಗೂ ಉದ್ಯಾನವನದೊಳಗೆ ಸಿಸಿಟಿವಿ ಹಾಗೂ ಗೇಟ್ ಅನ್ನು ಪರಿಶೀಲಿಸಿದರು. ಉದ್ಯಾನವನ ಸುತ್ತಲೂ ಸಿಸಿಟಿವಿ ವೈರ್ ಹಾಗೂ ವಿದ್ಯುತ್ ತಂತಿಗಳಿಂದ ಕೂಡಿದ್ದು, ಉದ್ಯಾನವನದ ಸೌಂದರ್ಯ ಹಾಳಾಗಿದೆ. […]

ಬಿ.ಎನ್.ಚರಿಷ್ಮಾ ಗೆ 5ನೇ ರ‌್ಯಾಂಕ್

  ಜನವಾಹಿನಿ News ಮಡಿಕೇರಿ :  ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ಇಲ್ಲಿ ನಡೆದ ಜುಲೈ-ಡಿಸೆಂಬರ್-2025ನೇ ರೆಗ್ಯೂಲರ್ ಡಿಸಿಎಂ ಅಧಿವೇಶನದ ಅಂತಿಮ ಪರೀಕ್ಷೆಯಲ್ಲಿ ಸದರಿಯವರು “5ನೇ” ರ‌್ಯಾಂಕ್ ಪಡೆದಿರುತ್ತಾರೆ. ಸಂಸ್ಥೆಯ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಶುಭಕೋರಿದ್ದಾರೆ.

ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮೋತ್ಸವ ಹಾಗೂ ಪುನರ್ ಪ್ರತಿಷ್ಠಾಪನಾ ಮಹೋತ್ಸವ : ಶ್ರೀಕೋದಂಡ ರಾಮೋತ್ಸವ ಸಮಿತಿ ವತಿಯಿಂದ ನಗರದಲ್ಲಿ ಭವ್ಯ ಮೆರವಣಿಗೆ 

  ಜನವಾಹಿನಿ News ಮಡಿಕೇರಿ : ಶ್ರೀಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ೩೭ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ವಿಜೃಂಭಣೆಯಿಂದ ಶುಕ್ರವಾರ ನಡೆಯಿತು. ರಾಮ ರಾಮ ಕೋದಂಡ ರಾಮ, ರಾಮ ರಾಮ ದಶರಥ ಪುತ್ರ, ರಾಮ ರಾಮ ಕೌಸಲ್ಯ ಪುತ್ರ… ಹೀಗೆ ಹಲವು ರಾಮಭಜನೆಗಳು ನಗರದ ಬೀದಿಬೀದಿಗಳಲ್ಲಿ ಗುರುವಾರ ಸಂಜೆ ಅನುರಣಿಸಿದವು. ರಾಮನವಮಿಯ ಬೃಹತ್ ಮೆರವಣಿಗೆಯಲ್ಲಿ ಸಾವಿರಾತು ಮಂದಿ ಹೆಜ್ಜೆ ಹಾಕಿದರು. […]

ಕನ್ನಡ ಭಾಷೆ ಬೆಳವಣಿಗೆ ಹಾಗೂ ಭಾಷೆಯನ್ನು ಮುಂದಿನ ತಲೆಮಾರಿಗೆ ಪರಿಚಯಿಸುವಲ್ಲಿ ದತ್ತಿ ಉಪನ್ಯಾಸ ಗಳ ಪಾತ್ರ ಮಹತ್ವದ್ದು : ಡಾ.ಕೆ.ಜಿ.ವೀಣಾ 

    ಜನವಾಹಿನಿ News ವಿರಾಜಪೇಟೆ : ದತ್ತಿ ಉಪನ್ಯಾಸಗಳು ಕನ್ನಡ ಸಾಹಿತ್ಯ, ಭಾಷೆ , ನಾಡು, ಸಂಸ್ಕೃತಿ , ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ದೃಷ್ಟಿಯಿಂದ ಪ್ರಸ್ತುತ ಕಾಲದಲ್ಲಿ ಬಹಳ ಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ವಿರಾಜಪೇಟೆ ಕಾವೇರಿ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಕೆ.ಜಿ.ವೀಣಾ ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಕಾವೇರಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ದಿ. ಎಂ ಜಿ […]